Breaking News

Daily Archives: ಜುಲೈ 10, 2024

ವಾಲ್ಮೀಕಿ ನಿಗಮ ಹಗರಣ: ಶಾಸಕ ಬಿ. ನಾಗೇಂದ್ರ ಆಪ್ತ ಸಹಾಯಕರು ಇ.ಡಿ ವಶಕ್ಕೆ

ಬಳ್ಳಾರಿ: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರ ಬಳ್ಳಾರಿ ನಿವಾಸದ ಮೇಲೆ ಬುಧವಾರ ಮುಂಜಾನೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ವಿಜಯಕುಮಾರ್ ಮತ್ತು ಚೇತನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಈ ಇಬ್ಬರೂ ನಾಗೇಂದ್ರ ಅವರ ಆಪ್ತ ಸಹಾಯಕರಾಗಿದ್ದರು‌. ಬುಧವಾರ ಮುಂಜಾನೆ, ಸಿಆರ್ಪಿಎಫ್ ಭದ್ರತೆಯೊಂದಿಗೆ ಮೂರು ತಂಡಗಳಾಗಿ ಬಳ್ಳಾರಿಗೆ ಆಗಮಿಸಿದ ಇ.ಡಿ, ದಾಳಿ ನಡೆಸಿತು. ನಾಗೇಂದ್ರ ಅವರ ಬೆಂಗಳೂರಿನ ನಿವಾಸದಲ್ಲೂ ಶೋಧ ನಡೆಯುತ್ತಿದೆ. ಸ್ಥಳೀಯ ಪೊಲೀಸರಿಗೂ …

Read More »

ಬಸನಗೌಡ ದದ್ದಲ್‌ ನಿವಾಸದ ಮೇಲೆ ಇಡಿ ದಾಳಿ

ರಾಯಚೂರು ಜುಲೈ 10: ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸದ ಮೇಲೆ ಬೆಳಿಗ್ಗೆ 7 ಗಂಟೆಗೆ ದಾಳಿ ಮಾಡಿದ್ದು, ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಮಂಗಳವಾರ ಎಸ್ ಐಟಿ ಅಧಿಕಾರಿಗಳು ದದ್ದಲ್‌ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಇವತ್ತು ಮತ್ತೆ ವಿಚಾರಣೆಗೆ ಕರೆದಿದ್ದಾರೆ. ಇದೇ ಅವಧಿಯಲ್ಲೇ 18 ದಾಳಿ ನಡೆಸಿರುವ ಮಾಹಿತಿ ಇದೆ. ಜೊತೆಗೆ …

Read More »

ಸತತ ಏಳು ಬಾರಿ ಸಂಸದರಾಗಿ ಆಯ್ಕೆಸಂಪುಟದಲ್ಲಿ ಸಿಗದ ಸಚಿವ ಸ್ಥಾನಜಿಗಜಿಣಗಿ ತೀವ್ರ ಅಸಮಾಧಾನ

ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಹೆಗ್ಗಳಿಕೆ ಹೊಂದಿರುವ ರಮೇಶ್ ಜಿಗಜಿಣಗಿ, ಈ ಬಾರಿಯ ಕೇಂದ್ರ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಂಗಳವಾರದಂದು ನಡೆದ ಸಂಸದರ ಕಚೇರಿಯ ಪೂಜಾ ಕಾರ್ಯಕ್ರಮದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆಯಾಗುವ ಸಂದರ್ಭದಲ್ಲಿಯೇ ನನ್ನ ಅನೇಕ ಸ್ನೇಹಿತರು ಆ ಪಕ್ಷ ದಲಿತ ವಿರೋಧಿ. ಸೇರ್ಪಡೆಯಾಗುವುದು ಬೇಡ ಎಂದು ಹೇಳಿದ್ದರು. ಇಷ್ಟಾದರೂ ನಾನು ಆ …

Read More »

ರಾಜ್ಯದಲ್ಲಿ ಮತ್ತೆ ಮೂರು ವೈದ್ಯ ಕಾಲೇಜು ಆರಂಭಕ್ಕೆ ‘ಗ್ರೀನ್ ಸಿಗ್ನಲ್’

ರಾಜ್ಯದಲ್ಲಿ ಮತ್ತೆ ಮೂರು ಹೊಸ ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಇದರಿಂದಾಗಿ ವೈದ್ಯಕೀಯ ಕಾಲೇಜುಗಳ ಒಟ್ಟು ಸಂಖ್ಯೆ 73ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಎಲೆಕ್ಟ್ರಾನಿಕ್ ಸಿಟಿಯ ಪಿಇಎಸ್ ವಿಶ್ವವಿದ್ಯಾಲಯ ಮತ್ತು ಬಾಗಲಕೋಟೆ ಎಸ್‌ಆರ್ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಿಗೆ ಕಾಲೇಜು ಆರಂಭಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ ಎಂ ಸಿ) ಅನುಮತಿ ನೀಡಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಈ ಮೂರೂ ಕಾಲೇಜುಗಳು ಆರಂಭವಾಗಲಿವೆ. …

Read More »

ಬೆಳೆ ವಿಮಾ‌ ಯೋಜನೆಗೆ ಅರ್ಜಿ‌ ಆಹ್ವಾನ

ಹೊಸಕೋಟೆ: 2024-25ನೇ ಸಾಲಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಅಡಿಯಲ್ಲಿ ಹೊಸಕೋಟೆ ತಾಲ್ಲೂಕಿಗೆ ಮಾವು ಮತ್ತು ದ್ರಾಕ್ಷಿ ಬೆಳೆಗಳನ್ನು ವಿಮಾ ವ್ಯಾಪ್ತಿಗೆ ಒಳಪಡಿಸಲಾಗಿದೆ. ರೈತ ಬಾಂಧವರು‌ ಸ್ವಇಚ್ಛೆಯಿಂದ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ತೋಟಗಾರಿಕಾ ಇಲಾಖೆ ತಿಳಿಸಿದೆ. ಪ್ರತಿ ಹೆಕ್ಟೇರ್ ಮಾವಿಗೆ ₹80 ಸಾವಿರ, ದ್ರಾಕ್ಷಿಗೆ ₹2.80 ಲಕ್ಷ ವಿಮಾ ಮೊತ್ತವಾಗಿದ್ದು, ಅದರಲ್ಲಿ ಶೇ 5ರಷ್ಟು ರೈತರು ವಂತಿಗೆ ಪಾವತಿಸಬೇಕಿದ್ದು, ಅದರಂತೆ ಮಾವಿಗೆ ₹5 ಸಾವಿರ, ದ್ರಾಕ್ಷಿಗೆ ₹ 14 …

Read More »

ರಾಯಚೂರು: ಸರ್ಕಾರಿ ಶಾಲಾ ಕಟ್ಟಡಗಳ ದುರಸ್ತಿಗೆ ಆಗ್ರಹ

ರಾಯಚೂರು: ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲೆ ಕಟ್ಟಡಗಳನ್ನು ತಕ್ಷಣ ದುರಸ್ತಿ ಮಾಡಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟುಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್‌ಒ) ಜಿಲ್ಲಾ ಘಟಕದ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಲಿಂಗಸುಗೂರು ತಾಲ್ಲೂಕಿನ ಅನ್ವರಿ ಗ್ರಾಮದಲ್ಲಿ ಎರಡು ವರ್ಷಗಳ ಹಿಂದೆಯಷ್ಟೇ ನಿರ್ಮಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿದು ವಿದ್ಯಾರ್ಥಿ ತಲೆಗೆ ಪೆಟ್ಟಾಗಿದೆ. ರಾಯಚೂರಿನ ಅರಸಿಗೇರ ಶಾಲೆಯ ಚಾವಣಿಯ ಸಿಮೆಂಟ್‌ ಕಳಚಿ ಬಿದ್ದು …

Read More »

ಗ್ಯಾರಂಟಿ’ ನಿಲ್ಲಿಸುವ ಪ್ರಶ್ನೇಯೇ ಇಲ್ಲ: ರಾಜು ಕಾಗೆ

ಕಾಗವಾಡ: ‘ರಾಜ್ಯದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ವಿರೋಧ ಪಕ್ಷದವರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದ್ದು’ ಎಂದು ಕಾಗವಾಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಶಾಸಕ ರಾಜು ಕಾಗೆ ಹೇಳಿದರು. ಕಾಗವಾಡ ಪಟ್ಟಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ನೂತನ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು. ‘ಐದು ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆವರೆಗೆ ಮಾತ್ರ …

Read More »

ಬೆಳಗಾವಿ | ಬಿಟ್ ಕಾಯಿನ್ ಪ್ರಕರಣ: ದೂರುದಾರ ಕೈದಿಯ ಹೇಳಿಕೆ ದಾಖಲು

ಬೆಳಗಾವಿ: ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನ ಹೇಳಿಕೆ ಪಡೆಯಲು, ಎಸ್.ಐ.ಟಿ‌ ತಂಡವು ಇಲ್ಲಿ‌ನ ಕೇಂದ್ರ ಕಾರಾಗೃಹಕ್ಕೆ ಭೇಟಿ‌ ನೀಡಿತು ಎಂದು ಮೂಲಗಳು ಖಚಿತಪಡಿಸಿವೆ. ‘ಈ ಹಗರಣದಲ್ಲಿ ಬಂದಿಖಾನೆ ಇಲಾಖೆ ಡಿಐಜಿ ಟಿ.ಪಿ. ಶೇಷ ಭಾಗಿಯಾದ ಬಗ್ಗೆ ನಾಗೇಂದ್ರ ಅಲಿಯಾಸ್ ನಾಗ ಎಂಬ ಕೈದಿ ಎಡಿಜಿಪಿ ಅವರಿಗೆ ಜೂನ್ 26ರಂದು ದೂರು ನೀಡಿದ್ದ.‌ ಈ ಕೈದಿ ಈಗ ಇಲ್ಲಿನ‌ ಹಿಂಡಲಗಾ ಜೈಲಿನಲ್ಲಿದ್ದ ಕಾರಣ ತನಿಖಾಧಿಕಾರಿಗಳು ವಿಚಾರಣೆ ನಡೆಸಿದರು. ದೂರಿನ ಅರ್ಜಿ ಇಟ್ಟುಕೊಂಡು …

Read More »

ರಾಮದುರ್ಗ: ತಾಲ್ಲೂಕಿನ ಕಡೇ ಗ್ರಾಮ ನಂದಿಹಾಳಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯೇ ಹದಗೆಟ್ಟಿದೆ.

ರಾಮದುರ್ಗ: ತಾಲ್ಲೂಕಿನ ಕಡೇ ಗ್ರಾಮ ನಂದಿಹಾಳಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯೇ ಹದಗೆಟ್ಟಿದೆ. ಇಲ್ಲಿನ ಜನರು ಪಕ್ಕದ ಕಲಾದಗಿ, ಕಾಡರಕೊಪ್ಪ, ಲೋಕಾಪುರಕ್ಕೆ ತೆರಳಲು ನಿತ್ಯ ಯಾತನೆ ಅನುಭವಿಸುವಂತಾಗಿದೆ. ನಂದಿಹಾಳದಿಂದ ಅಕ್ಕಪಕ್ಕದ ಗ್ರಾಮಗಳು ಮತ್ತು ಹೊಲಗಳಿಗೆ ತೆರಳಲು ಇರುವುದು ಇದೊಂದೇ ರಸ್ತೆ. ಆದರೆ, ಜಿಟಿಜಿಟಿ ಮಳೆಯಾದರೂ ಅದು ಕೆಸರುಮಯವಾಗಿ ಮಾರ್ಪಡುತ್ತದೆ. ಅಪಾರ ಪ್ರಮಾಣದಲ್ಲಿ ಮಳೆನೀರು ರಸ್ತೆ ಮೇಲೆಯೇ ಸಂಗ್ರಹವಾಗುತ್ತದೆ. ಇದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಹೈರಾಣಾಗಿದ್ದಾರೆ. ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಒಳಪಡದ …

Read More »