Breaking News

Daily Archives: ಜುಲೈ 13, 2024

ಜುಲೈ 15 ರಿಂದ ವಿಧಾನ ಮಂಡಲ ಅಧಿವೇಶನ ಆರಂಭ

ಬೆಂಗಳೂರು : ಇದೆ ಜುಲೈ 15 ರಂದು ಸೋಮವಾರದಂದು ವಿಧಾನ ಮಂಡಲ ಅಧಿವೇಶನ ಆರಂಭಗೊಳ್ಳುತ್ತಿದ್ದು ಈ ವಿಚಾರವಾಗಿ ಕಾಂಗ್ರೆಸ್ ಅನ್ನು ಕಟ್ಟಿಹಾಕಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಈಗಾಗಲೇ ಬಿಗ್ ಪ್ಲಾನ್ ಮಾಡಿಕೊಂಡಿದ್ದು, ಅಧಿವೇಶನ ಆರಂಭದಲ್ಲಿ ಯಾವುದೇ ಪ್ರತಿಭಟನೆ ಧರಣಿ ನಡೆಸಿದಂತೆ ಕೇಂದ್ರ ಸಚಿವರು ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.   ಸದನದಲ್ಲಿ ಮೂಡ ಸೈಟ್ ಪ್ರಕರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳು ಎರಡು …

Read More »

ಸಿದ್ದರಾಮಯ್ಯ ಸರ್ಕಾರ ಪರಮ ಕಡು ಭ್ರಷ್ಟ ಸರ್ಕಾರ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಒಂದೂವರೆ ವರ್ಷದಲ್ಲಿ ಸರ್ಕಾರ ಹಾಗೂ ರಾಹುಲ್ ಗಾಂಧಿ, ಇನ್ನಿತರ ನಾಯಕರಿಂದ ಭಯಂಕರ ಭ್ರಷ್ಟಾಚಾರ ಶುರುವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ‌ ಸಾವಿರಾರು ಕೋಟಿ ರೂ. ಸಂಗ್ರಹ ಮಾಡಿ ತೆಲಂಗಾಣಕ್ಕೆ ಕೊಟ್ಟಿದೆ ಎಂದಾಗ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ನೂರಾರು ಜನರಿಗೆ ವರ್ಗಾವಣೆ ಮಾಡಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಕೆಲ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ,ಮಾಲದಿನ್ನಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಮಾಲದಿನ್ನಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮೀ …

Read More »

ಅಪಹರಣ: ಸಮಯಪ್ರಜ್ಞೆ ಮೆರೆದ ಬಾಲಕ

ಖಾನಾಪುರ: ಪಟ್ಟಣದಲ್ಲಿ ಶಾಲೆಗೆ ಹೋಗುವಾಗ ಬುಧವಾರ ಅಪಹರಣವಾಗಿದ್ದ 8ನೇ ತರಗತಿ ವಿದ್ಯಾರ್ಥಿಯೊಬ್ಬ ಅಪಹರಣಕಾರರ ಕೈಯಿಂದ ತಪ್ಪಿಸಿಕೊಂಡು ಮನೆಗೆ ಬಂದು ಸೇರಿದ್ದು, ಪ್ರಕರಣ ಸುಖಾಂತ್ಯ ಕಂಡಿದೆ. ಪಟ್ಟಣದ ಅಸೋಗಾ ರಸ್ತೆಯ ರೈಲು ನಿಲ್ದಾಣದ ಪೂರ್ವ ದಿಕ್ಕಿನ ಬಡಾವಣೆಯಲ್ಲಿ ವಾಸವಿದ್ದ ಆದಿತ್ಯ ಮಿಲಿಂದ ಶಿಂಧೆ (13) ಶಾಲೆಗೆ ಹೋಗಲು ರೈಲು ನಿಲ್ದಾಣದ ಬಳಿ ಬಂದಾಗ ಆತನ ಮೂಗಿಗೆ ಅಪರಿಚಿತರು ಹಿಂದಿನಿಂದ ಪ್ರಜ್ಞೆ ತಪ್ಪಿಸುವ ಔಷಧವಿರುವ ಕರವಸ್ತ್ರವನ್ನು ಹಿಡಿದು ಪ್ರಜ್ಞೆ ತಪ್ಪಿಸಿದ್ದಾರೆ. ಬಳಿಕ ಬಾಲಕನನ್ನು …

Read More »

ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಠಾಚಾರ ಸಹಿಸಲ್ಲ: ಶಾಸಕ ರಮೇಶ ಜಾರಕಿಹೊಳಿ

ಗೋಕಾಕ: ‘ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ನಡೆದರೆ ಸಹಿಸಲ್ಲ, ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ರಮೇಶ ಜಾರಕಿಹೊಳಿ ಗುಡುಗಿದರು. ಇಲ್ಲಿನ ನಗರಸಭೆ ಸಮುದಾಯ ಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ತಾಲ್ಲೂಕು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಹಾಗೂ ಗೋಕಾಕ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ …

Read More »

ಜಿಎಸ್‌ಟಿ ವಂಚನೆ: ಉದ್ಯಮಿಗಳಿಗೂ ಕಂಟಕ

ಬೆಳಗಾವಿ: ಬೆಳಗಾವಿ ಕೇಂದ್ರಿತವಾಗಿ ನಡೆದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಂಚನೆ ಪ್ರಕರಣದಲ್ಲಿ ರಾಜ್ಯದ ದೊಡ್ಡ ಉದ್ಯಮಿಗಳು, ಪ್ರಭಾವಿಗಳು ಸಿಕ್ಕಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಪ್ರಕರಣದ ಆರೋಪಿ ಒಬ್ಬನೇ ಇದ್ದರೂ ಆತ ಹಲವು ಪ್ರಭಾವಿಗಳ ಹೆಸರು, ಜಿಎಸ್‌ಟಿ ಸಂಖ್ಯೆಗಳನ್ನು ಅಕ್ರಮಕ್ಕೆ ಬಳಸಿದ್ದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ನಕೀಬ್ ನಜೀಬ್ ಮುಲ್ಲಾ (24) ಎಂಬ ಆರೋಪಿಯನ್ನು ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ₹132 ಕೋಟಿಯ ನಕಲಿ ವ್ಯವಹಾರದ …

Read More »

ಮೊದಲ ದಿನವೇ ನೆಲಕಚ್ಚಿದ ‘ಇಂಡಿಯನ್ 2’ ಚಿತ್ರ

ಕಮಲ್ ಹಾಸನ್ ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಮಾಡಿದ ಪಾತ್ರ ಗಮನ ಸೆಳೆದಿತ್ತು. ಈ ಬೆನ್ನಲ್ಲೇ ಅವರ ನಟನೆಯ ‘ಇಂಡಿಯನ್ 2’ ಸಿನಿಮಾ ರಿಲೀಸ್ ಆಗಿದೆ. ಆದರೆ, ಈ ಚಿತ್ರ ಹೀನಾಯ ಸೋಲು ಕಾಣುವ ಸೂಚನೆ ಸಿಕ್ಕಿದೆ.1996ರಲ್ಲಿ ರಿಲೀಸ್ ಆದ ‘ಇಂಡಿಯನ್’ ಸಿನಿಮಾ ಭರ್ಜರಿ ಮೆಚ್ಚುಗೆ ಪಡೆದಿತ್ತು. ಈ ಚಿತ್ರಕ್ಕೆ 28 ವರ್ಷಗಳ ಬಳಿಕ ಸೀಕ್ವೆಲ್ ರಿಲೀಸ್ ಆಗಿದೆ. ಸೂಪರ್ ಹಿಟ್ ಸಿನಿಮಾದ ಸೀಕ್ವೆಲ್ ಎಂದಾಗ ಸಹಜವಾಗಿಯೇ ನಿರೀಕ್ಷೆ …

Read More »

ಕಮ್ಮಿ ಬೆಲೆಗೆ ಹೊಸ ರಿಚಾರ್ಜ್ ಪ್ಲಾನ್! BSNL ನಿಂದ ಭರ್ಜರಿ ಆಫರ್ ಬಿಡುಗಡೆ‌ -ʼʼJio, Airtelʼʼನಿಂದ BSNLಗೆ ಸಿಮ್ ಪೋರ್ಟ್!

ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ JioBoycott ಅಭಿಯಾನ ಆರಂಭವಾಗಿದ್ದು, BSNLkigharwapsi (ಬಿಎಸ್‌ಎನ್‌ಎಲ್‌ ಘರ್ ವಾಪಸಿ) ಅಂತ ಬರೆದುಕೊಂಡಿದ್ದಾರೆ. ಯಾವಾಗ ಅಭಿಯಾನ ಆರಂಭವಾಯ್ತೋ ಎಚ್ಚೆತ್ತುಕೊಂಡ ಬಿಎಸ್‌ಎನ್‌ಎಲ್‌ ಟ್ವೀಟ್ ಮಾಡಿ ತನ್ನ ಹೊಸ ಆಫರ್ ಘೋಷಿಸಿದೆ. ಇದರ ಜೊತೆಗೆ ಅಮರನಾಥ ಯಾತ್ರಿಕರಿಗೆ ವಿಶೇಷವಾಗಿ 196 ರೂಗಳಿಗೆ ಹೊಸ ಸಿಮ್ ನೀಡುವ ಘೋಷಣೆ ಮಾಡಿದೆ. ಹೌದು ಪ್ರಮುಖ ಟೆಲಿಕಾಂ ಆಪರೇಟರ್‌ಗಳಾದ Jio, Airtel ಮತ್ತು Vi ತಮ್ಮ ರೀಚಾರ್ಜ್ ಯೋಜನೆಗಳ ಬೆಲೆಗಳನ್ನು ಸರಾಸರಿ 15 ಪ್ರತಿಶತದಷ್ಟು …

Read More »

ವರ್ಗಾವಣೆ ನಿಯಮ ಬದಲು ಸರ್ಕಾರದ ವಿರುದ್ಧ ಖಾಕಿ ಕೆಂಡ!

ಬೆಂಗಳೂರು ;ಪೊಲೀಸ್ ಕಾನ್​ಸ್ಟೆಬಲ್​ಗಳ ಅಂತರ ಜಿಲ್ಲಾ ವರ್ಗಾವಣೆ ನಿಯಮ ತಿದ್ದುಪಡಿಗೆ ರಾಜ್ಯ ಸರ್ಕಾರ ಮುಂದಾಗಿದೆ. ವರ್ಗಾವಣೆ ಬಯಸುವವರಿಗೆ ಈಗಿರುವ 7 ವರ್ಷ ಸೇವಾವಧಿ ಪೂರ್ಣಗೊಳಿಸಬೇಕೆಂಬ ನಿಯಮವನ್ನು 10 ವರ್ಷ ಅವಧಿಗೆ ಹೆಚ್ಚಳ ಮಾಡುವ ಸಿದ್ಧತೆ ನಡೆಸಿರುವ ಮಾಹಿತಿ ಹಿನ್ನೆಲೆಯಲ್ಲಿ ನಾಲ್ಕು ವರ್ಷದಿಂದ ವರ್ಗಾವಣೆಗಾಗಿ ಕಾಯುತ್ತಿರುವ ಪೊಲೀಸ್ ಕಾನ್​ಸ್ಟೆಬಲ್​ಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕುಟುಂಬ ಸಮೇತ ಪ್ರತಿಭಟನೆಗಿಳಿಯುವ ಎಚ್ಚರಿಕೆ ಕೊಟ್ಟಿದ್ದಾರೆ. ಮೊದಲಿಗೆ ಎರಡೂವರೆ ವರ್ಷ ಪ್ರೊಬೆಷನರಿ ಅವಧಿ ಪೂರ್ಣಗೊಳಿಸಿದರೆ ಕಾನ್​ಸ್ಟೆಬಲ್​ಗಳನ್ನು …

Read More »

ಧಾರಾಕಾರ ಮಳೆ-148 ಅಡಿ ಎತ್ತರದ ಮಂದಿರ ಮುಳುಗಡೆ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಘಟಪ್ರಭಾ ನದಿ ಮೂಲಕ ಹಿಡಕಲ್‌ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹಿಡಕಲ್‌ ಜಲಾಶಯದಲ್ಲಿರುವ 148 ಅಡಿ ಎತ್ತರದ ಶ್ರೀ ವಿಠಲ ಮಂದಿರ ಸಂಪೂರ್ಣ ಮುಳುಗಡೆಯಾಗಿದೆ. ಸಾವಂತವಾಡಿ, ಅಂಬೋಲಿ ಅರಣ್ಯ ಪ್ರದೇಶದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿರುವುದರಿಂದ ಘಟಪ್ರಭಾ ನದಿ ಮೂಲಕ ಹಿಡಕಲ್‌ ಜಲಾಶಯಕ್ಕೆ 25 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿರುವ ಶ್ರೀ ವಿಠಲ ಮಂದಿರ ಸಂಪೂರ್ಣ ಜಲಾವೃತಗೊಂಡಿದ್ದು, ಕಳೆದ 15 …

Read More »