Breaking News

Daily Archives: ಜುಲೈ 15, 2024

ಗಾಯಗೊಂಡ ನವಿಲಿಗೆ ಚಿಕಿತ್ಸೆ

ಯಮಕನಮರಡಿ: ಹುಕ್ಕೇರಿ ತಾಲ್ಲೂಕಿನ ಸಲಾಮವಾಡಿ ಗ್ರಾಮದ ಜಮೀನಿನಲ್ಲಿ ಗಾಯಗೊಂಡು ಹಾರಲಾರದೆ ಒದ್ದಾಡುತ್ತಿದ್ದ ನವಿಲನ್ನು ರೈತ ಉತ್ತಮ ಪಾಟೀಲ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಎಂದಿನಂತೆ ಕೆಲಸಕ್ಕಾಗಿ ಉದಯ ಹೊಲಕ್ಕೆ ಬಂದರು. ಆಗ ಕಾಲಿಗೆ ಪೆಟ್ಟಾಗಿದ್ದರಿಂದ ನವಿಲು ಹಾರಲಾಗದೆ ಒದ್ದಾಡುತ್ತಿರುವುದು ಕಂಡುಬಂತು. ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ದಡ್ಡಿ ಗ್ರಾಮದ ಪಶು ಚಿಕಿತ್ಸಾಲಯಕ್ಕೆ ನವಿಲು ತೆಗೆದುಕೊಂಡು ಹೋಗಿ, ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು. ನಂತರ ಅರಣ್ಯ ಇಲಾಖೆ ಅಧಿಕಾರಿಗಳಾದ ಪ್ರಸನ್ನ …

Read More »

ನೀಟ್ ಹಗರಣದ ಮತ್ತೊಂದು ಪ್ರಕರಣ ಬೆಳಕಿಗೆ

ಬೆಳಗಾವಿ: ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ ನೀಟ್ ಹಗರಣ ಈಗ ಬೆಳಗಾವಿಗೂ ಅಂಟಿಕೊಂಡಿದೆ. ಬೆಳಗಾವಿ ಮಾರ್ಕೆಟ್ ಪೊಲೀಸರು ಯಶಸ್ವೀ ಕಾರ್ಯಾಚರಣೆ ನಡೆಸಿ ತೆಲಂಗಾಣ ಮೂಲದ ಆರೋಪಿ ಅರಗೊಂಡ ಅರವಿಂದ ಉರ್ಫ್ ಅರುಣಕುಮಾರ (43)ನನ್ನು ಮುಂಬೈನಲ್ಲಿ ಬಂಧಿಸಿ ನೀಟ್ ಹಗರಣದ ಮತ್ತೊಂದು ಪ್ರಕರಣವನ್ನು ಬೆಳಕಿಗೆ ತಂದಿದ್ದಾರೆ. ಆರೋಪಿಯಿಂದ ಒಟ್ಟು 1,30, 41,884 ರೂ. ಮೌಲ್ಯದ ನಗದು ಕಂಪ್ಯೂಟರ್, ಲ್ಯಾಪ್‌ಟಾಪ್, ನಗದು ಹಣ ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ ಬೆಳಗಾವಿ ಮಾರ್ಕೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …

Read More »

ಡೆಂಘೀ ಚಿಕಿತ್ಸೆಗೆ ಹೆಚ್ಚಿನ ದರ ಪಡೆದರೆ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಗುಂಡೂರಾವ್

ಬೆಂಗಳೂರು,ಜು.15- ಡೆಂಘೀ ಪ್ರಕರಣಗಳಿಗೆ ಖಾಸಗಿ ಆಸ್ಪತ್ರೆಯವರು ಹೆಚ್ಚಿನ ದರ ತೆಗೆದುಕೊಂಡರೆ ಅಂಥವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಸದಸ್ಯ ಧನಂಜಯ್ಯ ಸರ್ಜಿ ಪರವಾಗಿ ಡಿ.ಎಸ್.ಅರುಣ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ದರ ನಿಗದಿಪಡಿಸಿ ಸುತ್ತೋಲೆ ಹೊರಡಿಸಿದೆ. ಇದನ್ನು ಮೀರಿ ಸಾರ್ವಜನಿಕರಿಂದ ಹೆಚ್ಚಿನ ಹಣ ತೆಗೆದುಕೊಂಡರೆ ಕಾನೂನು ಕ್ರಮ ಖಚಿತ ಎಂದು …

Read More »

ಜುಲೈ 22 ರಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ LKG, UKG ಆರಂಭ

ಬೆಂಗಳೂರು : ಜು. 22 ರಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿLKG , UKG ಆರಂಭಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ರಾಜ್ಯದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಜುಲೈ 22 ರಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (ಎಲ್ಕೆಜಿ, ಯುಕೆಜಿ) ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ಜುಲೈ 22ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ …

Read More »

ಸಾರಿಗೆ ಬಸ್ ಟಿಕೆಟ್ ದರ ಏರಿಕೆಯಿಲ್ಲ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು,ಜು.15- ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ತಮ್ಮ ಮುಂದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶಾನ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿರುವ ರಾಜು ಕಾಗೆ ಅವರು, ಪೆಟ್ರೋಲ್, ಡೀಸೆಲ್ ದರದ ಏರಿಕೆ ನಂತರ ಸಾರಿಗೆ ಸಂಸ್ಥೆಗಳಿಗೆ ನಷ್ಟವಾಗುತ್ತಿದೆ. ಈಗ ಈ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಬೇಕೆಂಬ ಹೇಳಿಕೆಗೆ ಸಚಿವರು ಅಸಮತಿ ಸೂಚಿಸಿದರು.ಅಧ್ಯಕ್ಷರಾಗಿ ಅವರು ತಮ್ಮ ಅಭಿಪ್ರಾಯವನ್ನು ಹೇಳಿಕೊಂಡಿದ್ದಾರೆ. ಆದರೆ ಸಚಿವನಾಗಿ ನನ್ನ ಮುಂದೆ ಯಾವುದೇ …

Read More »

ತಮಿಳುನಾಡಿಗೆ ಹರಿಯುತ್ತಿದೆ ಬೇಡಿಕೆಗಿಂತ ಹೆಚ್ಚು ಕಾವೇರಿ ನೀರು

ಬೆಂಗಳೂರು,ಜು.15- ಕಾನೂನು ಸಂಕಷ್ಟದಿಂದ ಪಾರಾಗಲು ರಾಜ್ಯ ಸರ್ಕಾರ ತಮಿಳುನಾಡಿಗೆ ಪ್ರಸ್ತುತ ಬೇಡಿಕೆಗಿಂತ ಹೆಚ್ಚು ನೀರನ್ನು ಬಿಡುತ್ತಿದೆ. ನಮ್ಮಲ್ಲೇ ನೀರಿಲ್ಲ, ನೀರು ಬಿಡಲುಸಾಧ್ಯವೇ ಇಲ್ಲ ಎಂದು ಒಂದೆಡೆ ಸರ್ವಪಕ್ಷಗಳ ಸಭೆ ಕರೆದು ನಿರ್ಣಯ ಕೈಗೊಳ್ಳುವ ನಾಟಕ ಆಡುವುದರ ಜೊತೆಗೆ ನೀರನ್ನು ಸಹ ತಮಿಳುನಾಡಿಗೆ ಹರಿಯಬಿಡುತ್ತಿದೆ.   ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಒಂದು ಟಿಎಂಸಿ ನೀರನ್ನು ಜುಲೈ 25ರವರೆಗೆ ಹರಿಸುವಂತೆ ಆದೇಶಿಸಿದೆ. ಒಂದು ಹೆಜ್ಜೆ ಮುಂದೆ ಹೋಗಿರುವ ರಾಜ್ಯ ಸರ್ಕಾರ, ಪ್ರತಿದಿನ …

Read More »

ಡಿಸಿಎಂ ಡಿಕೆಶಿಗೆ “ಸುಪ್ರೀಂ” ಹಿನ್ನಡೆ, ಸಿಬಿಐ ತನಿಖೆ ರದ್ದು ಕೋರಿದ್ದ ಅರ್ಜಿ ವಜಾ

ಬೆಂಗಳೂರು,ಜು.15-ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತಮ್ಮ ವಿರುದ್ಧ ದಾಖಲಿಸಿರುವ ದೂರನ್ನು ರದ್ದುಗೊಳಿಸಬೇಕೆಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಮೇಲನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ನ್ಯಾಯಾಲಯದ ಈ ಆದೇಶದಿಂದಾಗಿ ಕಾನೂನು ಹೋರಾಟದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಭಾರೀ ಹಿನ್ನಡೆ ಉಂಟಾಗಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಸ್ಸಿ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠವು ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ಕ್ಷಮಿಸಿ ನಿಮ ಅರ್ಜಿಯನ್ನು ವಜಾಗೊಳಿಸುತ್ತೇವೆ ಎಂದು …

Read More »

ಗುಮ್ಮಟ ನಗರದಲ್ಲಿ ಜೆಸಿಬಿ ಘರ್ಜನೆ,

ವಿಜಯಪುರ: ವಿಜಯಪುರ ನಗರದಲ್ಲಿ ಸೋಮವಾರ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ ಆರಂಭಗೊಂಡಿದೆ. ವಿಜಯಪುರ ಮಹಾನಗರ ಪಾಲಿಕೆ ನಗರದ ಮಹಾತ್ಮಾ ಗಾಂಧೀಜಿ ವೃತ್ತದಿಂದ ಸರಾಫ ಬಜಾರ ಮಾರ್ಗದಲ್ಲಿ ಸರ್ಕಾರಿ ಸ್ಥಳ ಒತ್ತುವರಿ ತೆರವು ಹಾಗೂ ರಸ್ತೆ ಅತಿಕ್ರಮಣ ತೆರವು ಕಾರ್ಯಾಚರಣೆ ಆರಂಭಿಸಿದೆ. ಜಿಲ್ಲಾಧಿಕಾರಿ ಭೂಬಾಲನ್, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸಾರಥ್ಯದಲ್ಲಿ ಒತ್ತುವರಿ ತೆರವಿಗಾಗಿ ಜೆಸಿಬಿ ಬಳಸಿದ್ದು, ಒತ್ತುವರಿ ಮಾಡಿ ನಿರ್ಮಿಸಿದ್ದಾರೆ ಎನ್ನಲಾದ ದೊಡ್ಡ ದೊಡ್ಡ ಕಟ್ಟಡಗಳು ನೆಲಸಮವಾಗಿವೆ. ಕಾರ್ಯಾಚರಣೆ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ …

Read More »

ದೇವೇಗೌಡರ ಕುಟುಂಬಕ್ಕೆ ಮುಡಾದಿಂದ 48 ಸೈಟು ಹಂಚಿಕೆ : ಶಾಸಕ ಪ್ರದೀಪ್‌ ಈಶ್ವರ್

ಬೆಂಗಳೂರು: ಮುಡಾದಿಂದ ಹೆಚ್ ಡಿ ದೇವೇಗೌಡರ ಕುಟುಂಬಕ್ಕೆ 48 ಸೈಟುಗಳು ಹಂಚಿಕೆಯಾಗಿವೆ ಎಂದು ಯಡಿಯೂರಪ್ಪನವರು ಹೇಳಿದ್ದರು ಎಂದು ಶಾಸಕ ಪ್ರದೀಪ್‌ ಈಶ್ವರ್‌ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2011ಮಾರ್ಚ್ 17ರಂದು ವಿಧಾನಸಭೆಯಲ್ಲಿ ಆಗಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಮ್ಮ ಭಾಷಣದಲ್ಲಿ ಮುಡಾದಿಂದ ಹೆಚ್ ಡಿ ದೇವೇಗೌಡರ ಕುಟುಂಬಕ್ಕೆ 48ಸೈಟುಗಳು ಮತ್ತು ಈಗ ಕೇಂದ್ರ ಸಚಿವರಾಗಿರುವ ಹೆಚ್ ಡಿ ಕುಮಾರಸ್ವಾಮಿಯವರಿಗೆ 300 X 200ಚದರ ಅಡಿ ಸೈಟು ಹಂಚಿಕೆಯಾಗಿರುವ ಸಂಗತಿಯನ್ನು …

Read More »

ಮೆಡಿಕಲ್ ಸೀಟು ಕೊಡಿಸುವುದಾಗಿ ಕೋಟಿ ರೂ. ವಂಚನೆ ; ವಂಚಕನ ಹೆಡೆಮುರಿ ಕಟ್ಟಿದ ಬೆಳಗಾವಿ ಪೊಲೀಸ್

ದೇಶದಲ್ಲೇ ಸದ್ದು ಮಾಡಿದ ನೀಟ್ ಪರೀಕ್ಷೆ ಅಕ್ರಮ ಒಂದು ಕಡೆಯಾದರೆ, ಇದನ್ನೇ ಬಂಡವಾಳ ಮಾಡಿಕೊಂಡ ಐನಾತಿ ಓರ್ವ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ, ಕೋಟ್ಯಾಂತರ ರೂಪಾಯಿ ಎಗರಿಸಿ ಪರಾರಿಯಾಗಿದ್ದ ಅಂತರಾಜ್ಯ ಖದೀಮನನ್ನು ಬೆಳಗಾವಿಯ ಮಾರ್ಕೆಟ್ ಪೊಲೀಸರು ಹೆಡೆಮೂರಿ ಕಟ್ಟಿದ್ದಾರೆ.‌     ನೀಟ್ ಪರೀಕ್ಷೆಯಲ್ಲಿ ಪಾಸ್ ಮಾಡಿಸಿ, ಎಂಬಿಬಿಎಸ್ ಸೀಟ್ ಕೊಡಿಸುವದಾಗಿ ನಂಬಿಸಿ ಸುಮಾರು 10 ಕ್ಕೂ ಹೆಚ್ಚು ಜನರಿಗೆ ಮೋಸ ಮಾಡಿದ್ದಾನೆ. ಅವರಿಂದ …

Read More »