Breaking News

Daily Archives: ಜುಲೈ 17, 2024

ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಅಂಜಲಿ ಕುಟುಂಬಕ್ಕೆ ಆಶ್ರಯ ಮನೆ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಅಂಜಲಿ ಮೋಹನ ಅಂಬಿಗೇರ ಅವರ ಕುಟುಂಬಕ್ಕೆ ಮಾನವೀಯತೆ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಆಶ್ರಯ ಮನೆ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರು ವಿಷಯ ಪ್ರಸ್ತಾಪಿಸಿದ್ದು, ಇದಕ್ಕೆ ಉತ್ತರ ನೀಡಿದ ಸಚಿವರು ಆದಷ್ಟು ಶೀಘ್ರವೇ ಅಂಜಲಿ ಅಂಬಿಗೇರ ಕುಟುಂಬದವರಿಗೆ ಮನೆ ಆಶ್ರಯ ಮನೆ ಕೊಡಲಾಗುವುದು ಎಂದು ಹೇಳಿದ್ದಾರೆ. ಇದೇ ವೇಳೆ ಬಿಜೆಪಿ ಸದಸ್ಯರಾದ ಸಿ.ಟಿ. ರವಿ, …

Read More »

ಬಣ್ಣ ಮಿಶ್ರಿತ ಆಹಾರ ಸೇವಿಸಿದ್ರೆ ಈ ಅಪಾಯಕಾರಿ ಕಾಯಿಲೆಗಳು ಬರಬಹುದು?

ಬೆಂಗಳೂರು : ಆಹಾರವನ್ನ ಆಕರ್ಷಕವಾಗಿ ಕಾಣುವಂತೆ ಮಾಡಲು ಕೃತಕ ಆಹಾರ ಬಣ್ಣಗಳನ್ನ ಹೆಚ್ಚಾಗಿ ಬಳಸಲಾಗುತ್ತದೆ. ರಾಸಾಯನಿಕಗಳಿಂದ ತಯಾರಿಸಿದ ಈ ಕೃತಕ ಆಹಾರ ಬಣ್ಣಗಳನ್ನ ಹೆಚ್ಚಾಗಿ ಮದುವೆ, ಸಮಾರಂಭಗಳಲ್ಲಿ ಹಾಗೂ ಬೀದಿ ಆಹಾರ ಅಥವಾ ಜಂಕ್ ಫುಡ್ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಇದು ಆಹಾರಕ್ಕೆ ಅದ್ಭುತವಾದ ರುಚಿಯನ್ನ ನೀಡುತ್ತದೆ. ಆದ್ರೆ, ಇದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಹಾನಿಕಾರಕ.  ಆಹಾರವು ಆಕರ್ಷಕವಾಗಿ ಕಾಣುವುದರಿಂದ ಮತ್ತು ಕಣ್ಣಿಗೆ ಚೆಂದ ಎನ್ನಿಸುವುದ್ರಿಂದ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಎಲ್ಲರೂ …

Read More »

ರಾಜ್ಯದಲ್ಲಿ 591 ಯೋಜನೆಗಳಿಗೆ 84 ಸಾವಿರ ಕೋಟಿ ರೂ. ʻಬಂಡವಾಳ ಹೂಡಿಕೆ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 591 ಯೋಜನೆಗಳಿಗೆ 84,231 ಕೋಟಿ ರೂ. ಬಂಡವಾಳ ಹೂಡಿಕೆ ಆಗಲಿದ್ದು, 1,56,989 ಉದ್ಯೋಗವಕಾಶ ಸೃಷ್ಟಿಯಾಗಲಿವೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ವಿಧಾನಪರಿಷತ್‌ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಎಂ.ಬಿ.ಪಾಟೀಲ್‌, 2023-24ನೇ ಸಾಲಿನಲ್ಲಿ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿಗಳಲ್ಲಿ 591 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ 84,231 ಕೋಟಿ ರೂ. ಬಂಡವಾಳ ಹೂಡಿಕೆ …

Read More »

ಶಾಲೆಯಲ್ಲೇ ಹೆಡ್‌ ಮಾಸ್ಟರ್‌-ಶಿಕ್ಷಕಿಯ ಕಾಮದಾಟ!

ವಿದ್ಯೆ ಕಲಿಸುವ ಶಾಲೆಯನ್ನು ದೇಗುಲ ಅಂತಾನೂ ಕರೀತಾರೆ. ನಮ್ಮ ತಲೆಯಲ್ಲಿ ಜ್ಞಾನದ ಬೀಜ ಬಿತ್ತಿ, ಅಕ್ಷರ ಕಲಿಸುವ ಶಿಕ್ಷಕರು ಗುರು ಸಮಾನರು. ಅಂತಹ ಶಿಕ್ಷಣವನ್ನು ಬೋಧಿಸಲು ಇರುವ ಗೂಡು ಅಂದರೆ ಶಾಲೆ ದೇಗುಲಕ್ಕೆ ಸಮಾನ ಅನ್ನೋ ಮಾತಿದೆ. ಆದರೆ ಗುರು ಸಮಾನರಾದ ಶಿಕ್ಷಕರು ದೇವಾಲಯಕ್ಕೆ ಸಮಾನವಾದ ಶಾಲೆಯಲ್ಲೇ ಮಾಡಬಾರದ ಕೆಲಸ ಮಾಡಿ ತಗ್ಲಾಕ್ಕೊಂಡಿರುವ ಘಟನೆ ನಡೆದಿದೆ. . ವಿದ್ಯೆ ಬೋಧಿಸುವ ಶಿಕ್ಷಕರು ಶಾಲಾ ಕೊಠಡಿಯಲ್ಲೇ ಪ್ರಣಯದಲ್ಲಿ ಮುಳುಗಿರುವ ವಿಡಿಯೋ ಸಾಮಾಜಿಕ …

Read More »

7ನೇ ವೇತನ ಆಯೋಗ ವರದಿ ಜಾರಿ : ಸರಕಾರಿ ನೌಕರರ ವೇತನದಲ್ಲಿ ಎಷ್ಟು ಹೆಚ್ಚಳ ?

ಬೆಂಗಳೂರು : ಕರ್ನಾಟಕ ಸರಕಾರ ಕೊನೆಗೂ ಸರಕಾರಿ ನೌಕರರ ಬೇಡಿಕೆಯನ್ನು ಈಡೇರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗ (7th Pay Commission) ದ ವರದಿ ಜಾರಿಗೆ ಸಚಿವ ಸಂಪುಟ ಅಸ್ತು ಎಂದಿದೆ. ಹಾಗಾದ್ರೆ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಯಿಂದ ಸರಕಾರಿ ನೌಕರರ ವೇತನದಲ್ಲಿ ಎಷ್ಟು ಹೆಚ್ಚಳವಾಗಲಿದೆ ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ. ಕೆ.ಸುಧಾಕರ್‌ ರಾವ್‌ ನೇತೃತ್ವದ 7ನೇ ವೇತನ ಆಯೋಗವು ತನ್ನ …

Read More »

ರಾಜ್ಯದಲ್ಲಿ ಇಂದು ಭಾರೀ ಮಳೆ

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಇಂದೂ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂದಿನ ಒಂದು ವಾರ ಮಳೆ ಮುಂದುವರೆಯಲಿದೆ. …

Read More »