ಪಣಜಿ: ಭಾರಿ ಮಳೆಯಿಂದಾಗಿ ಗುರುವಾರ ನಸುಕಿ ಜಾವ ಗೋವಾದ ಘಾಟ್ ವಿಭಾಗದಲ್ಲಿ ಗುಡ್ಡ ಕುಸಿದಿದ್ದು, ಬೃಹತ್ ಮಣ್ಣಿನ ರಾಶಿ ರಸ್ತೆಗೆ ಬಿದ್ದಿದೆ. ಪರಿಣಾಮ ಗೋವಾ-ಕರ್ನಾಟಕ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಗೋವಾದ ದಕ್ಷಿಣ ಗಡಿಯಲ್ಲಿರುವ ಅನಮೋಡ್ ಘಾಟ್ ಪ್ರದೇಶದ ಶ್ರೀ ದೂಧ್‌ಸಾಗರ್ ದೇವಸ್ಥಾನದ ಬಳಿ ಗುಡ್ಡ ಕುಸಿದಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಯಿಂದ ಅದನ್ನು ತೆರವುಗೊಳಿಸುವ ಕಾರ್ಯ ಮುಂದುವರಿಯುತ್ತಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. …
Read More »Daily Archives: ಜುಲೈ 18, 2024
ನಟ ದರ್ಶನ್‌ಗೆ ಮತ್ತೆ ನ್ಯಾಯಾಂಗ ಬಂಧನ
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತ ನಟ ದರ್ಶನ್, ಸ್ನೇಹಿತೆ ಪವಿತ್ರಾ ಗೌಡ ಸೇರಿ ಇತರ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಗುರುವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದಲೇ ದರ್ಶನ್ ಮತ್ತು ಇತರ ಆರೋಪಿಗಳನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಂಗ, ಆಗಸ್ಟ್ 1ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
Read More »ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ವಿರುದ್ಧವೂ ದೂರು
ಬೆಳಗಾವಿ: ಪತಿ ಹಾಗೂ ಅವರ ಕುಟುಂಬದವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ ವಿರುದ್ಧವೇ ಪ್ರತಿ ದೂರು ದಾಖಲಾಗಿದೆ. ಇಲ್ಲಿನ ಗಣೇಶಪುರದ ನಿವಾಸಿ ಕನ್ವಿಕಾ ಗಣೇಶ ಗುಡ್ಯಾಗೋಳ (22) ಮಂಗಳವಾರ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಪತಿ ಹಾಗೂ ಅವರ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. ಪತಿ ಗಣೇಶ ಅವರ ತಂದೆ ಹಾಗೂ ಸೋದರಮಾವ ಇಲ್ಲಿನ ಕ್ಯಾಂಪ್ ಠಾಣೆಗೆ ಪ್ರತಿ ದೂರು ನೀಡಿದ್ದಾರೆ. ‘ಕನ್ವಿಕಾ …
Read More »ಚಿಕ್ಕೋಡಿ | ಸಮಸ್ಯೆಗಳ ಆಗರದಲ್ಲಿ ಸರ್ಕಾರಿ ಪಾಲಿಟೆಕ್ನಿಕ್: ವಿದ್ಯಾರ್ಥಿಗಳ ಪರದಾಟ
ಚಿಕ್ಕೋಡಿ: ₹8 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ಆದರೆ, ಆವರಣ ಗೋಡೆಯೇ ಇಲ್ಲ. ಬೋಧನೆಗೆ ಕಾಯಂ ಉಪನ್ಯಾಸಕರಿಲ್ಲ. ಕೊಳವೆಬಾವಿ ಇದ್ದರೂ, ಶುದ್ಧ ಕುಡಿಯುವ ನೀರಿನ ಘಟಕವಿಲ್ಲ. ಕಾಲೇಜಿಗೆ ಬರಲು ಸರಿಯಾಗಿ ಬಸ್ ವ್ಯವಸ್ಥೆಯೂ ಇಲ್ಲ. ಹೀಗೆ ಸಾಲು ಸಾಲು ಸಮಸ್ಯೆಗಳಿಂದ ತಾಲ್ಲೂಕಿನ ಸದಲಗಾ ಹೊರವಲಯದ ಸರ್ಕಾರಿ ಪಾಲಿಟೆಕ್ನಿಕ್ ಬಳಲುತ್ತಿದೆ. ಸ್ಥಳೀಯ ಶಾಸಕ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಪ್ರಯತ್ನದಿಂದ ಇಲ್ಲಿ ಸುಸಜ್ಜಿತ ಕಟ್ಟಡ ತಲೆ ಎತ್ತಿ, …
Read More »ರಾಹುಲ್ ಗಾಂಧಿ ಕ್ಷಮೆ ಕೇಳಲಿ: ಕುಮಾರ ಹೀರೆಮಠ
ಬೆಳಗಾವಿ: ‘ಅಗ್ನಿಪಥ ಯೋಜನೆ ಕುರಿತಾಗಿ ಅವಹೇಳನಾಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಕ್ಷಣವೇ ಕ್ಷಮೆಯಾಚಿಸಬೇಕು’ ಎಂದು ಬಿಜೆಪಿ ಪೂರ್ವ ಸೈನಿಕರ ಪ್ರಕೋಷ್ಠದ ರಾಜ್ಯ ಸಂಚಾಲಕ ಕುಮಾರ ಹೀರೆಮಠ ಒತ್ತಾಯಿಸಿದರು. ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಜಾರಿಗೆ ತಂದ ಈ ಯೋಜನೆ ಆದರ್ಶ ಸೈನಿಕನನ್ನು ರೂಪಿಸುತ್ತದೆ. ಬಹಳಷ್ಟು ಯುವಕ-ಯುವತಿಯರು ಇದರ ಲಾಭ ಪಡೆದಿದ್ದಾರೆ. ಆದರೆ, ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ರಾಹುಲ್ ಗಾಂಧಿ ಈ ಯೋಜನೆ ವಿರೋಧಿಸಬಾರದು. ಇದರ …
Read More »ವಸತಿ ಶಾಲೆಯಲ್ಲಿ ಅವಕಾಶ ಮೀರಿ ಪ್ರವೇಶ: ಅಧಿಕಾರಿಗಳ ಅಮಾನತಿಗೆ ಭೀಮಪ್ಪ ಗಡಾದ ಆಗ್ರಹ
ಬೆಳಗಾವಿ: ‘ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ 39 ವಸತಿ ಶಾಲೆಗಳಲ್ಲಿ 2023-24ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 141 ವಿದ್ಯಾರ್ಥಿಗಳಿಗೆ ನಿಯಮ ಉಲ್ಲಂಘಿಸಿ ಪ್ರವೇಶ ಕಲ್ಪಿಸಿದ ಇಬ್ಬರು ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಸಮಾಜ ಕಲ್ಯಾಣ ಸಚಿವರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ’ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಆಗ್ರಹಿಸಿದರು. ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾಗಿದ್ದ ಲಕ್ಷ್ಮಣ ಬಬಲಿ ಮತ್ತು …
Read More »
Laxmi News 24×7