Breaking News

Daily Archives: ಜುಲೈ 19, 2024

FASTAG ಮುಂಭಾಗದಲ್ಲಿಇಲ್ಲದಿದ್ದರೆ ಡಬಲ್‌ ಟೋಲ್‌!

ಹೊಸದಿಲ್ಲಿ: ಉದ್ದೇಶಪೂರ್ವಕವಾಗಿ ವಾಹನದ ಮುಂದಿನ ಗಾಜಿಗೆ ಫಾಸ್ಟಾಗ್‌ ಅಂಟಿಸದೇ ಇರುವವರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHIA), ದುಪ್ಪಟ್ಟು ಟೋಲ್‌ ವಿಧಿಸಲು ಮುಂದಾಗಿದೆ. ಈ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿರುವ ಎನ್‌ಎಚ್‌ಐಎ, ಫಾಸ್ಟಾಗ್‌ ಅಂಟಿಸದಿರುವುದರಿಂದ ಟೋಲ್‌ ಪ್ಲಾಜಾಗಳಲ್ಲಿ ಅನಗತ್ಯ ವಿಳಂಬವಾ ಗುತ್ತಿದೆ. ಇದನ್ನು ತಡೆಯಲು ದುಪ್ಪಟ್ಟು ಶುಲ್ಕ ವಿಧಿಸಬೇಕು ಎಂದು ಸೂಚಿಸಿದೆ. ಫಾಸ್ಟಾಗ್‌ ನಿಯಮಗಳನ್ನು ಪಾಲಿಸ ದಿದ್ದರೆ ವಿಧಿಸಲಾಗುವ ದಂಡಗಳ ಕುರಿತು ಟೋಲ್‌ ಪ್ಲಾಜಾಗಳಲ್ಲಿ ಎಲ್ಲರಿಗೂ ಕಾಣಿಸುವಂತೆ ಮಾಹಿತಿ ಪ್ರದರ್ಶಿಸಬೇಕು. ಫಾಸ್ಟಾಗ್‌ ಇಲ್ಲದ …

Read More »

ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು

ಗಂಗಾವತಿ: ಹಳಿಯ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೇ ಮಾರ್ಗದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತರನ್ನು ಗಂಗಾವತಿಯ ಮೌನೇಶ (23), ಸುನೀಲ್ ಕುಮಾರ(23), ವೆಂಕಟ್ (20) ಎನ್ನಲಾಗಿದ್ದು ಈ ಮೂವರು ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಕನಕಗಿರಿ ರಸ್ತೆಯಲ್ಲಿರುವ ರೈಲ್ವೇ ಹಳಿ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದರು ಎನ್ನಲಾಗಿದೆ ಈ …

Read More »

ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ಸ್ಥಳದಲ್ಲಿಯೇ ಇಬ್ಬರು ಮಕ್ಕಳು ಹಾಗೂ ಮಹಿಳೆ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ದುರ್ಘಟನೆ ಜು.19ರ ಶುಕ್ರವಾರ ಬೆಳಗಿನ ಜಾವ ಸವಣೂರ ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ.   ನಸುಕಿನ ಜಾವ 4 ಗಂಟೆಯ ಸುಮಾರು ಗ್ರಾಮದ ಹರಕುಣಿ ಕುಟುಂಬಸ್ಥರ ಮನೆ ಮೇಲ್ಬಾವಣಿ ಕುಸಿದಿದೆ. ನಿದ್ರಿಸುತ್ತಿದ್ದ 18 ತಿಂಗಳ ಅವಳಿ ಮಕ್ಕಳಾದ ಅಮೂಲ್ಯ ಹಾಗೂ ಅನುಶ್ರೀ ಮತ್ತು ಮಕ್ಕಳ ಅತ್ತೆ …

Read More »

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿದೆಡೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಅದರಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.   ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಅವರ ಮನೆಗೆ ಬೆಂಗಳೂರಿನ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Read More »

ಶಾರದಾ ಪೀಠದಲ್ಲಿ ಇನ್ಮುಂದೆ ವಸ್ತ್ರಸಂಹಿತೆ ಕಡ್ಡಾಯ;

ಚಿಕ್ಕಮಗಳೂರು: ಮಲೆನಾಡಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಶೃಂಗೇರಿ ಶಾರದಾ ಪೀಠಕ್ಕೆ ಆಗಮಿಸುವ ಭಕ್ತರು ಶ್ರೀಮಠದ ಗುರುಗಳ ದರ್ಶನಕ್ಕೆ ವಸ್ತ್ರ ಸಂಹಿತೆಯನ್ನು ಇನ್ನು ಮುಂದೆ ಅನುಸರಿಸಬೇಕಿದೆ. ಈ ಕುರಿತು ಶ್ರೀಮಠದ ಆಡಳಿತ ಮಂಡಳಿ ಮಹತ್ವದ ತೀರ್ಮಾನ ಕೈಗೊಂಡಿದೆ.   ಶ್ರೀಗಳ ದರ್ಶನ ಹಾಗೂ ಪಾದಪೂಜೆಗೆ ತೆರಳುವ ಭಕ್ತರು ಆಗಸ್ಟ್ 15 ರಿಂದ ಭಾರತೀಯ ಸಂಪ್ರದಾಯದಂತೆ ವಸ್ತ್ರ ಧರಿಸಿ ಶ್ರೀಗಳ ದರ್ಶನ ಪಡೆಯಬೇಕು. ಪುರುಷರು ಧೋತಿ ಮತ್ತು ಶಲ್ಯ ಹಾಗೂ ಉತ್ತರೀಯವನ್ನು ಧರಿಸಬೇಕು. …

Read More »

ಬೆಳ್ಳಂಬೆಳಗ್ಗೆ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಬೆಳಂಬೆಳಗ್ಗೆ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕರಾಗಿರುವ ಪ್ರಕಾಶ್ ಹಾಗೂ ಭದ್ರಾವತಿ ತಾಲೂಕಿನ ಅಂತರಗಂಗೆಯ ಗ್ರಾಮ ಪಂಚಾಯ್ತಿ ಅಧ್ಯಕ್ಷ ‌ನಾಗೇಶ್ ನಿವಾಸದ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Read More »

ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವ

ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನೂತನ ಅಧ್ಯಕ್ಷರಾಗಿ ಬಸಗೌಡ ಪಾಟೀಲ, ಉಪಾಧ್ಯಕ್ಷರಾಗಿ ಸಂಜೀವ ಸೋನಪ್ಪನವರ ಅವಿರೋಧವಾಗಿ ಆಯ್ಕೆ ಬೆಳಗಾವಿ- ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನೂತನ ಅಧ್ಯಕ್ಷರಾಗಿ ಬಸಗೌಡ ದುಂಡನಗೌಡ ಪಾಟೀಲ ಪುನರಾಯ್ಕೆಯಾದರೆ, ಉಪಾಧ್ಯಕ್ಷರಾಗಿ ಸಂಜೀವ ಸದೆಪ್ಪ ಸೋನಪ್ಪನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರದಂದು ನಡೆಯಬೇಕಿದ್ದ ಯೂನಿಯನ್ ಅಧ್ಯಕ್ಷ- ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾದ್ದರಿಂದ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಯೂನಿಯನ್ ಪ್ರಕಟಣೆಯಲ್ಲಿ ತಿಳಿಸಿದೆ. ಕಳೆದ …

Read More »

ಮಾನಸಿಕ ಅಸ್ವಸ್ಥನನ್ನು ಮನೆ ತಲುಪಿಸಿದ ಆಧಾರ್‌ ಕಾರ್ಡ್‌!

ಮಂಗಳೂರು: ಆರು ವರ್ಷಗಳಿಂದ ತಪ್ಪಿಸಿಕೊಂಡಿದ್ದ ಮಾನಸಿಕ ಅಸ್ವಸ್ಥ ಯುವಕನೊಬ್ಬ “ಆಧಾರ್‌’ ಕಾರ್ಡ್‌ನ ಸಹಾಯದಿಂದ ಮನೆ ಸೇರುವಂತಾಗಿದೆ. 2019 ನ.19ರಂದು ಮಂಗಳೂರಿನ ವೆನ್ಲಾಕ್‌ ಸರಕಾರಿ ಆಸ್ಪತ್ರೆ ಭಾಗದಲ್ಲಿ ಮಾನಸಿಕ ಅಸ್ವಸ್ಥನಾಗಿದ್ದ ಯುವಕನನ್ನು ಮಂಜೇಶ್ವರದ ಸ್ನೇಹಾಲಯ ಮಾನಸಿಕ ಸಾಮಾಜಿಕ ಪುನರ್ವಸತಿ ಕೇಂದ್ರವು ಸ್ನೇಹಾಲಯದಲ್ಲಿ ಸೇರಿಸ ಲಾಗಿತ್ತು.   ದಾಖಲಾತಿ ಸಮಯದಲ್ಲಿ ಆತನ ಮಾನಸಿಕವಾಗಿ ಅತೀ ರೇಗಾಟದ ಸ್ಥಿತಿಯಲ್ಲಿ ಇದ್ದುದರಿಂದ ಅವನ ಗುರುತನ್ನು ತಿಳಿಯಲು ಸಾಧ್ಯವಾಗದೆ ಅವನಿಗೆ “ಬಬ್ಲು’ ಎಂದು ಹೆಸರಿಸಲಾಯಿತು. ಬಳಿಕ ಆರೈಕೆಯನ್ನು …

Read More »

ಕನ್ನಡಿಗರಿಗೆ ಮೀಸಲಾತಿ: ರಾಜ್ಯ ಸರಕಾರಕ್ಕೆ ಇಕ್ಕಟ್ಟು !

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಮಸೂದೆ ಜಾರಿಗೆ ತಾತ್ಕಾಲಿಕ ತಡೆ ನೀಡಿರುವ ರಾಜ್ಯ ಸರಕಾರ ಈಗ ಇಕ್ಕಟ್ಟಿಗೆ ಸಿಲುಕಿದೆ. ಒಂದು ವೇಳೆ ಮಸೂದೆ ಜಾರಿಗೆ ಮುಂದಾದರೆ ಉದ್ಯಮ ವಲಯಗಳ ವಿರೋಧ ಎದುರಿಸಬೇಕಾಗುತ್ತದೆ. ಜಾರಿ ಮಾಡ ದಿದ್ದರೆ ಸರಕಾರ ಕನ್ನಡಿಗರ ಪರ ಇಲ್ಲ ಎಂಬ ಹಣೆಪಟ್ಟಿಗೆ ಒಳಗಾಗಬೇಕಾಗುತ್ತದೆ. ಒಂದರ್ಥದಲ್ಲಿ ನುಂಗಿದರೆ ಕಷ್ಟ, ನುಂಗದಿದ್ದರೆ ಇನ್ನೂ ಕಷ್ಟ ಎಂಬುದು ಸರಕಾರದ ಈಗಿನ ಪರಿಸ್ಥಿತಿಯಾಗಿದೆ. ಕನ್ನಡಿಗರಿಗೆ ಮೀಸಲು ಮಸೂದೆ ಇನ್ನೇನು ಈ …

Read More »

ಪ್ರಾಧಿಕಾರ ವಿರುದ್ಧ ಎಫ್‌ಐಆರ್‌: ಕೃಷ್ಣ ಬೈರೇಗೌಡ

ಬೆಂಗಳೂರು: ಅಂಕೋಲಾದ ಶಿರೂರಿನ ಗುಡ್ಡ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ( ಎನ್‌ಎಚ್‌ಎ) ಬೇಜವಾಬ್ದಾರಿಯೇ ಕಾರಣ’ ಎಂದು ಆರೋಪಿಸಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರಾಧಿಕಾರ ಮತ್ತು ಐಆರ್‌ಬಿ ಕಂಪೆನಿ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದಾಗಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಡ್ಡ ಕುಸಿತ ಆಗಬಹುದು ಎಂಬ ಬಗ್ಗೆ ಕಳೆದ ವರ್ಷವೇ ಮಾಹಿತಿ ನೀಡಿದ್ದೆವು. ಆದರೆ ಗುಡ್ಡ ಕುಸಿತ ತಡೆಗಟ್ಟುವ ಕೆಲಸ ಅವರು ಮಾಡಿಲ್ಲ. ಬುಧವಾರವೂ ತ್ವರಿತವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಸ್ಪಂದಿಸಲಿಲ್ಲ. …

Read More »