Breaking News

Daily Archives: ಜುಲೈ 19, 2024

ಸಮವಸ್ತ್ರ ಧರಿಸಿ 5 ಗಂಟೆ ಗಸ್ತು: ಪೊಲೀಸರಿಗೆ ಐಜಿಪಿ ಆದೇಶ

ಬೆಂಗಳೂರು: ಸಾರ್ವಜನಿಕ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ 11ರ ವರೆಗೆ ಹಾಗೂ ಸಾಯಂಕಾಲ 6ರಿಂದ ರಾತ್ರಿ 9ರ ವರೆಗೆ ಒಟ್ಟು 5 ಗಂಟೆ ಗಸ್ತು ತಿರುಗುವಂತೆ ರಾಜ್ಯ ಡಿಜಿ-ಐಜಿಪಿ ಆಲೋಕ್‌ ಮೋಹನ್‌ ಪೊಲೀಸರಿಗೆ ಆದೇಶಿಸಿದ್ದಾರೆ. ಕಮಿಷನರೆಟ್‌ ವ್ಯಾಪ್ತಿಯಲ್ಲಿ ಡಿಸಿಪಿಗಳು, ಜಿಲ್ಲೆಗಳಲ್ಲಿ ಎಸ್‌ಪಿ ನೇತೃತ್ವದಲ್ಲಿ ಪೊಲೀಸರು ಗಸ್ತು ತಿರುಗಬೇಕು. ಪ್ರಮುಖ ಅಪರಾಧ ಪ್ರಕರಣಗಳು ಘಟಿಸಿದಾಗ ಸ್ಥಳಕ್ಕೆ ಭೇಟಿ ನೀಡಬೇಕು. ಆಯಾ ವಲಯ ಐಜಿಪಿಗಳು, ಹೆಚ್ಚುವರಿ ಪೊಲೀಸ್‌ ಆಯುಕ್ತರು ಠಾಣೆಗಳಿಗೆ ಭೇಟಿ ನೀಡಬೇಕು. ಶಾಲಾ ಕಾಲೇಜು …

Read More »

ಕೃಷ್ಣಾ- ಪಂಚಗಂಗಾ ನದಿಗಳ ಸಂಗಮ ಕ್ಷೇತ್ರದ ಸುಕ್ಷೇತ್ರ ನರಸಿಂಹವಾಡಿ ಶ್ರೀ ದತ್ತಮಂದಿರ ಜಲಾವೃತ

ಚಿಕ್ಕೋಡಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕೃಷ್ಣಾ ಮತ್ತು ಪಂಚಗಂಗಾ ನದಿ ನೀರಿನ ಮಟ್ಟದಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದ ಗಡಿಭಾಗದ ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಶಿರೋಳ ತಾಲೂಕಿನ ಸುಕ್ಷೇತ್ರ ನರಸಿಂಹವಾಡಿ ಶ್ರೀ ದತ್ತ ಮಂದಿರ ಜಲಾವೃತಗೊಂಡಿದೆ. ಕೃಷ್ಣಾ ನದಿ ಮತ್ತು ಪಂಚಗಂಗಾ ನದಿ ಸಂಗಮ ಕ್ಷೇತ್ರವಾದ ನರಸಿಂಹವಾಡಿ ಶ್ರೀ ದತ್ತ ದೇವಸ್ಥಾನಕ್ಕೆ ಮಂಗಳವಾರ ನೀರು ನುಗ್ಗಿದೆ. ದೇವವಸ್ಥಾನ ಅರ್ಧ ಭಾಗ ನೀರಿನಲ್ಲಿ ಮುಳುಗಡೆಯಾಗಿದೆ. ಹೀಗಾಗಿ ದೇವಸ್ಥಾನ …

Read More »

ಗಡಿಯಲ್ಲಿಯ ಘಾಟ್‌ ಹೆದ್ದಾರಿ ಭಾರೀ ಅಪಾಯಕಾರಿ-ಗುಡ್ಡ ಕುಸಿತಕ್ಕೆ ತಡೆ ಇಲ್ಲವೇ?

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಶುರು ವಾಯಿತೆಂದರೆ ಗಡಿ ಭಾಗ ಬೆಳಗಾವಿ ಜಿಲ್ಲೆಯಿಂದ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಹಾಗೂ ಮಣ್ಣು ಕುಸಿತ ಆಗುವುದು ಸಾಮಾನ್ಯವಾಗಿದ್ದು, ಕುಸಿತಕ್ಕೆ ತಡೆ ಇಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ಪಶ್ಚಿಮ ಘಟ್ಟದಲ್ಲಿ ಸುರಿಯುವ ಧಾರಾಕಾರ ಮಳೆಯಿಂದ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳು ಅಪಾಯಕಾರಿ ಮಟ್ಟಕ್ಕೆ ತಲುಪುತ್ತವೆ. ಗುಡ್ಡ ಕುಸಿತ ಆಗುವುದು ಈ ಪ್ರದೇಶದಲ್ಲಿ ಸಾಮಾನ್ಯವಾಗಿದೆ. …

Read More »

ಸದನದಲ್ಲಿ ಮುಖ್ಯಮಂತ್ರಿ Vs ಬಿಜೆಪಿ ರೋಷಾವೇಶ!

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸದನದಲ್ಲಿ ಭಾರೀ ಸದ್ದು ಮಾಡಿದ್ದು, ಗುರುವಾರ ಚರ್ಚೆ ವೇಳೆ, ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಡಿಸಿಎಂ ಡಾ| ಸಿ.ಎನ್‌. ಅಶ್ವತ್ಥನಾರಾಯಣ ಮಧ್ಯೆ ಜಟಾಪಟಿಗೆ ಕಾರಣವಾಗಿದೆ. “ನಿಮ್ಮಲ್ಲಿ ಕೆಲವರದ್ದು ತೆಗೆಯುತ್ತೇನೆ ಈಗ, ಯಾರ ಯಾರ ಕಾಲದಲ್ಲಿ ಏನೇನು ಆಯ್ತು ಎಂಬುದನ್ನು ಬಿಚ್ಚಿಡುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆ ವಿಧಾನಸಭೆಯಲ್ಲಿ ತೀವ್ರ ವಾಗ್ವಾದಕ್ಕೆ ಕಾರಣವಾಗಿದ್ದು, ಸಿಎಂ ಸಿದ್ದರಾಮಯ್ಯ-ಮಾಜಿ ಡಿಸಿಎಂ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಮಧ್ಯೆ ಏಕವಚನ …

Read More »

ನಾಗೇಂದ್ರ ಮತ್ತೆ 5 ದಿನ ಇ.ಡಿ. ವಶಕ್ಕೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಬಂಧಿತರಾಗಿ ರುವ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲ ಯವು ಮತ್ತೆ 5 ದಿನಗಳ ಕಾಲ ಜಾರಿ ನಿರ್ದೇಶನಾಲಯದ (ಇಡಿ) ವಶಕ್ಕೆ ನೀಡಿದೆ. ನಾಗೇಂದ್ರ ಅವರನ್ನು ವಶಕ್ಕೆ ಪಡೆದ ಅವಧಿಯು ಗುರುವಾರ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಇಡಿ ಪರ ವಕೀಲ ಪ್ರಸನ್ನಕುಮಾರ್‌ ಇನ್ನೂ ವಿಚಾರಣೆ ಬಾಕಿ ಇರುವುದರಿಂದ 8 …

Read More »