Breaking News

Daily Archives: ಜುಲೈ 20, 2024

ಸಿಬ್ಬಂದಿ ಕೊರತೆಗೆ ನಲುಗಿದ ಕೃಷಿ ಇಲಾಖೆ

ಬೆಳಗಾವಿ: ಬೇಸಾಯದಲ್ಲಿ ತಾಂತ್ರಿಕತೆ ಅಳವಡಿಕೆ, ಬೆಳೆ ವಿಮೆ, ಸರ್ಕಾರದ ವಿವಿಧ ಕಾರ್ಯಕ್ರಮಗಳ ಕುರಿತು ರೈತರಿಗೆ ನಿಯಮಿತವಾಗಿ ಮಾಹಿತಿ ನೀಡಬೇಕಿದ್ದ ಮತ್ತು ಬೆಳೆಹಾನಿಯಂಥ ಸಂದರ್ಭ ತ್ವರಿತವಾಗಿ ರೈತರ ನೆರವಿಗೆ ನಿಲ್ಲಬೇಕಿದ್ದ ಕೃಷಿ ಇಲಾಖೆ ಸಿಬ್ಬಂದಿ ಕೊರತೆಯಿಂದ ಬಳಲುತ್ತಿದೆ. ಜಿಲ್ಲೆಯಲ್ಲಿ ಕೃಷಿ ಇಲಾಖೆಗೆ ವಿವಿಧ ವೃಂದದ 498 ಹುದ್ದೆ ಮಂಜೂರಾಗಿವೆ. ಈ ಪೈಕಿ 205 ಮಂದಿಯಷ್ಟೇ ಕಾರ್ಯನಿರ್ವಹಿಸುತ್ತಿದ್ದಾರೆ. 293 ಹುದ್ದೆ ಹಲವು ವರ್ಷಗಳಿಂದ ಖಾಲಿ ಇವೆ. ಅದರಲ್ಲೂ ಮುಖ್ಯವಾಗಿ ಸಹಾಯಕ ಕೃಷಿ ಅಧಿಕಾರಿಗಳ(ಎಎಒ), …

Read More »

ಹುಣಶ್ಯಾಳ ಪಿವೈ ಗ್ರಾಮ ಪಂಚಾಯ್ತಿ: ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೂಡಲಗಿ: ತಾಲ್ಲೂಕಿನ ಹುಣಶ್ಯಾಳ ಪಿವೈ ಗ್ರಾಮ ಪಂಚಾಯ್ತಿಗೆ ಶುಕ್ರವಾರ ಜರುಗಿದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಗದೀಶ ಮಾಯಪ್ಪ ಡೊಳ್ಳಿ ಹಾಗೂ ಉಪಾಧ್ಯಕ್ಷೆಯಾಗಿ ಕಾಳವ್ವ ಗೌಡನವರ ಅವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಗೋಕಾಕ ನೀರಾವರ ಇಲಾಖೆಯ ಎಂಜಿನಿಯರ್ ನವೀನಕುಮಾರ ಕಾರ್ಯ ನಿರ್ವಹಿಸಿದರು. ಗ್ರಾಮ ಪಂಚಾಯ್ತಿ ಸದಸ್ಯರು ಮತ್ತು ಗ್ರಾಮದ ಗಣ್ಯರು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಸನ್ಮಾನಿಸಿದರು. ಗ್ರಾಮ ಪಂಚಾಯ್ತಿ ಪಿಡಿಒ ಉದಯಕುಮಾರ ಬೆಳ್ಳುಂಡಗಿ, ಗಣ್ಯರಾದ ಅಜ್ಜಪ್ಪ ಗಿರಡ್ಡಿ, ಗೋಪಾಲ …

Read More »

ಜಮೀನಿಗೆ ಅಧಿಕಾರಿಗಳ ಭೇಟಿ

ಸತ್ತಿಗೇರಿ: ಸ್ಥಳೀಯ ರೈತರ ಜಮೀನುಗಳಿಗೆ ಸಹಾಯಕ ಕೃಷಿ ನಿರ್ದೇಶಕ ಶಿವಪ್ರಕಾಶ ಪಾಟೀಲ ಭೇಟಿ ನೀಡಿ ವಿವಿಧ ಬೆಳೆಗಳನ್ನು ವೀಕ್ಷಿಸಿದವರು. ‘ಈಗಾಗಲೇ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾದ ಕಾರಣ ಹೆಸರು, ಗೋವಿನ ಜೋಳ, ಹತ್ತಿ ಬೆಳೆಗಳು ಉತ್ತಮ ಸ್ಥಿತಿಯಲ್ಲಿವೆ. ಅಲ್ಲಲ್ಲಿ ರೋಗ ಮತ್ತು ಕೀಟ ಬಾಧೆ ಕ್ಷೇತ್ರಗಳಿಗೆ ಭೇಟಿ ನೀಡಿ ಹತೋಟಿ ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದರು.   ರೈತರು ಆದಷ್ಟು ಅಂತರ ಬೆಳೆ ಮತ್ತು ಮಿಶ್ರ ಬೆಳೆ ಮೊರೆ …

Read More »

ಪತ್ರಿಕೆ ಓದಿ ಜ್ಞಾನ ಹೆಚ್ಚಿಸಿಕೊಳ್ಳಿ: ಮುರಗೇಶ ಶಿವಪೂಜಿ

ಹುಕ್ಕೇರಿ: ಯುವಕರು ಮತ್ತು ಕಾಲೇಜು ವಿದ್ಯಾರ್ಥಿಗಳು ದಿನನಿತ್ಯ ಪತ್ರಿಕೆ ಓದಿ ಜ್ಞಾನ ಬೆಳೆಸಿಕೊಂಡು ಪ್ರಬುದ್ಧ ನಾಗರಿಕರಾಗಬೇಕು. ಜತೆಗೆ ಪತ್ರಿಕೆಗಳಲ್ಲಿ ಬರುವ ಮಹತ್ವದ ಘಟನೆಗಳನ್ನು ಟಿಪ್ಪಣೆ ಮಾಡಿಕೊಂಡು, ವೈಯಕ್ತಿಕ ಬೆಳವಣಿಗೆಗೆ ಸದುಪಯೋಗ ಮಾಡಿಕೊಳ್ಳಿ ಎಂದು ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಘಟಕ ಅಧ್ಯಕ್ಷ ಮುರಗೇಶ ಶಿವಪೂಜಿ ಹೇಳಿದರು.   ತಾಲ್ಲೂಕಿನ ಹಿಡಕಲ್ ಡ್ಯಾಂನಲ್ಲಿ ಪತ್ರಕರ್ತರ ಸಂಘ, ಸಮ್ಮೂರ ಬಾನುಲಿ ಸಮುದಾಯ ರೆಡಿಯೊ ಕೇಂದ್ರ, ಎಲ್ಲಾಪುರ ಹಾಗೂ ಸ್ಥಳೀಯ ಪತ್ರಕರ್ತರ ಬಳಗದ ಸಹಯೋಗದಲ್ಲಿ …

Read More »

ಕುರಿ, ಮೇಕೆಗಳಿಗೆ ಜಂತುನಾಶಕ ಔಷಧ ವಿತರಣೆ

ಬೈಲಹೊಂಗಲ: ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಕುರಿಗಾರರು ನೆಲೆಸಿದ ಸ್ಥಳಗಳಿಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ ಹಾಗೂ ಮುಖ್ಯ ಪಶುವೈಧ್ಯಾಧಿಕಾರಿ ಡಾ.ಶ್ರೀಕಾಂತ ಗಾಂವಿ ಅವರು ಕುರಿಗಳಿಗೆ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಔಷಧಗಳನ್ನು ವಿತರಿಸಿದರು.   ಪಶು ಇಲಾಖೆ ಸಂಯುಕ್ತ ಆಶ್ರಯದಲ್ಲಿ ವಿತರಿಸುವ ಔಷಧೋಪಚಾರಗಳನ್ನು ಕಡ್ಡಾಯವಾಗಿ ಪಡೆದುಕೊಂಡು ಪ್ರಸ್ತುತ ದಿನಗಳಲ್ಲಿ ಕುರಿ ಮತ್ತು ಆಡುಗಳಿಗೆ ಹಲವಾರು ರೀತಿಯ ಕಾಯಿಲೆಗಳು, ಕಾಲುಬೆನಿ ಮತ್ತು ಸಾಂಕ್ರಮಿಕ ರೋಗಗಳು ಹರಡದಂತೆ ಎಚ್ಚರವಹಿಸಬೇಕು. ಹೆಚ್ಚಿನ …

Read More »

ಬೆಳಗಾವಿ | 2 ವರ್ಷದ ಮಗುವಿಗೆ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ

ಬೆಳಗಾವಿ: ಬಡತನದಿಂದ ಬಳಲುತ್ತಿದ್ದ ಎರಡು ವರ್ಷದ ಹೆಣ್ಣು ಮಗುವಿನ ಹೃದಯ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲು ರೋಟರಿ ಕ್ಲಬ್ ಆಫ್ ಬೆಳಗಾವಿ ದಕ್ಷಿಣ ಪದಾಧಿಕಾರಿಗಳು ‘ಗಿಫ್ಟ್‌ ಆಫ್ ಲೈಫ್’ ಯೋಜನೆಯಡಿ ಆರ್ಥಿಕವಾಗಿ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. ನೀಲೇಶ ಪಾಟೀಲ, ಭೂಷಣ ಮೋಹಿತೆ, ಚೈತನ್ಯ ಕುಲಕರ್ಣಿ, ಆರತಿ ಅಂಗಡಿ ಮತ್ತಿತರ ಪದಾಧಿಕಾರಿಗಳು ಶನಿವಾರ ಕೆಎಲ್‌ಇ ಆಸ್ಪತ್ರೆಗೆ ಭೇಟಿ ನೀಡಿ, ಮಗುವಿನ ಆರೋಗ್ಯ ವಿಚಾರಿಸಿದರು. ‘ಮುಂದೆಯೂ ನಾವು ಮಗುವಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತೇವೆ’ …

Read More »

ಆಸ್ತಿಗಾಗಿ ನಡೆದಿತ್ತಾ ಡೆಡ್ಲಿ ಮರ್ಡರ್

ಬೆಳಗಾವಿ : ವ್ಯಕ್ತಿಯನ್ನು ಆಸ್ತಿ ವಿಚಾರವಾಗಿ ಕೊಲೆ ಮಾಡಿ ನಂತರ ಅಪಘಾತ ಎಂದು ಬಿಂಬಿಸಿದ್ದ ಪ್ರಕರಣವನ್ನು ಭೇದಿಸಿ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಅಥಣಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ನಿವಾಸಿ ಮಾಣಿಕ ಕೇಶವ ಕದಮ್ ( 50 ) ರಸ್ತೆ ಮೇಲೆ ಸಂಚರಿಸುವ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ನಡೆದಿತ್ತು.ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು …

Read More »

ಹೆಸ್ಕಾಂ ನೂತನ ಎಂ.ಡಿಯಾಗಿ ವೈಶಾಲಿ

ಹುಬ್ಬಳ್ಳಿ : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ( ಹೆಸ್ಕಾಂ) ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ವೈಶಾಲಿ ಎಂ.ಎಲ್ (ಐಎಎಸ್) ಗುರುವಾರ ಅಧಿಕಾರ ವಹಿಸಿಕೊಂಡರು. ಈ ಹಿಂದಿನ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮೊಹಮ್ಮದ್ ರೋ‍‍ಷನ್ ( ಐಎಎಸ್) ಅವರು ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಹೊಂದಿದ್ದರು.ಈ ಹಿನ್ನೆಲೆ ತೆರವಾಗಿದ್ದ ಎಂ.ಡಿ ಹುದ್ದೆಗೆ ವೈಶಾಲಿ ಎಂ.ಎಲ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಇವರು ಗದಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

Read More »

ಕನ್ನಡಮ್ಮ ಮಡಿಲಿಗೆ ಪಾಪು‌ ಪ್ರಶಸ್ತಿ

ಧಾರವಾಡ : ಪಾಟೀಲ್ ಪುಟ್ಟಪ್ಪನವರ ಪತ್ರಿಕೋದ್ಯಮದಲ್ಲಿ ಕನ್ನಡದ ಯೋಧರು. ಅವರ ಹೆಸರಿನಲ್ಲಿ ‌ನೀಡುವ ಪ್ರಶಸ್ತಿಯನ್ನು ಕನ್ನಡಮ್ಮ ದಿನಪತ್ರಿಕೆಗೆ ಕೊಡುತ್ತಿರುವುದು‌‌‌ ಅಭಿಮಾನದ ಸಂಗತಿ ಎಂದು ಉನ್ನತ ಶಿಕ್ಷಣ ಅಕಾಡೆಮಿ ವಿಶ್ರಾಂತ ನಿರ್ದೇಶಕ ಡಾ. ಎಂ.ಎಸ್.ಶಿವಪ್ರಸಾದ ಹೇಳಿದರು. ಭಾನುವಾರ ಕರ್ನಾಟಕ ವಿಧ್ಯಾವರ್ಧಕ ಸಂಘದ 135ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕನ್ನಡದ ಪ್ರಪಂಚ ನಾಡೋಜ ಡಾ. ಪಾಟೀಲ್ ಪುಟ್ಟಪ್ಪನವರ ಸವಿ ನೆನಪಿನಲ್ಲಿ ಕೊಡಮಾಡುವ ಡಾ. ಪಾಟೀಲ್ ಪುಟ್ಟಪ್ಪನವರ ಪ್ರಶಸ್ತಿಯನ್ನು ಕನ್ನಡಮ್ಮ ದಿನಪತ್ರಿಕೆಯ ಸಂಪಾದಕ ರಾಜಕುಮಾರ ಟೋಪಣ್ಣವರ …

Read More »

ಗ್ರಾಮಸ್ಥರ ; ಕಣ್ಣೀರು ತರಿಸುವ ಘಟನೆ

ಬೆಳಗಾವಿ : ತೀವ್ರವಾಗಿ ಜ್ವರದಿಂದ ಬಳಲುತ್ತಿದ್ದ ಮಹಿಳೆಯನ್ನು ಗ್ರಾಮಸ್ಥರು ಕಟ್ಟಿಗೆಯ ಸ್ಟ್ರೇಚರ್ ನಲ್ಲಿ ಹಾಕಿ ಸುಮಾರು ಐದು ಕಿ.ಮೀಟರ್ ವರೆಗೆ ನಡೆದುಕೊಂಡು ಆಸ್ಪತ್ರೆಗೆ ಸೇರಿಸಿದ ಘಟನೆ ಖಾನಾಪುರ ತಾಲೂಕಿನ ಅಂಗಾವ್ ಗ್ರಾಮದಲ್ಲಿ ನಡೆದಿದೆ. 36 ವರ್ಷದ ಹರ್ಷದಾ ಘಾಡಿ ಎಂಬ ಮಹಿಳೆ ತೀವ್ರ ಜ್ವರದಿಂದ ಬಳಲುತ್ತಿದ್ದರು. ಆದರೆ ಖಾನಾಪುರ ಘಟ್ಟ ಪ್ರದೇಶದ ಕಾಡಂಚಿನಲ್ಲಿರುವ ಅಂಗಾವ್ ಗ್ರಾಮಕ್ಕೆ ರಸ್ತೆ ಸಂಪರ್ಕ ಸೇತುವೆ ಯಾವುದೂ ಇಲ್ಲ. ಮೋಬೈಲ್ ನೆಟ್ವರ್ಕ್ ಬೇಕಾದರೆ ಗ್ರಾಮದಿಂದ ಒಂದು‌ …

Read More »