Breaking News

Daily Archives: ಜುಲೈ 20, 2024

ವಿಟಿಯು: 52,615 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ (ವಿಟಿಯು) ಗುರುವಾರ ನಡೆದ 24ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮೂವರು ಗಣ್ಯರಿಗೆ ‘ಡಾಕ್ಟರ್‌ ಆಫ್‌ ಸೈನ್ಸ್‌’ ಹಾಗೂ 52,615 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ರಾಜ್ಯಪಾಲ ಥಾವರಚಂದ್‌ ಗೆಹ್ಲೋತ್‌ ಅವರು ಚಿಕ್ಕಬಳ್ಳಾಪುರದ ಮಧುಸೂದನ್‌ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸದ್ಗುರು ಮಧುಸೂದನ್‌ ಸಾಯಿ, ಬಿಐಎಎಲ್ ವ್ಯವಸ್ಥಾಪಕ ನಿರ್ದೇಶಕ ಹರಿ ಕೆ.ಮರಾರ್‌ ಅವರಿಗೆ ‘ಡಾಕ್ಟರ್‌ ಆಫ್‌ ಸೈನ್ಸ್‌’ ಪ್ರದಾನ ಮಾಡಿದರು.ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಎಂ.ಎಸ್‌.ಶೇಷಗಿರಿ ಎಂಜಿನಿಯರಿಂಗ್‌ ಕಾಲೇಜಿನ …

Read More »

ಕಿತ್ತೂರು ವಿಜಯೋತ್ಸವದ ದ್ವಿಶತಮಾನೋತ್ಸವ: ಕಾಣದ ಸಂಭ್ರಮ

ಚನ್ನಮ್ಮನ ಕಿತ್ತೂರು(ಬೆಳಗಾವಿ ಜಿಲ್ಲೆ): ವೀರರಾಣಿ ಕಿತ್ತೂರು ಚನ್ನಮ್ಮ ತಮ್ಮ ಸೈನ್ಯದೊಂದಿಗೆ ಬ್ರಿಟಿಷರ ವಿರುದ್ಧ ಹೋರಾಡಿ ವಿಜಯ ಸಾಧಿಸಿದ ಘಳಿಗೆಗೆ ಇದೇ ವರ್ಷ ಅಕ್ಟೋಬರ್‌ 23ಕ್ಕೆ 200 ವರ್ಷ ಪೂರ್ಣಗೊಳ್ಳಲಿದೆ. ಈ ಮಹತ್ವದ ಘಟ್ಟಕ್ಕೆ ಪೂರಕವಾಗಿ ಸಂಭ್ರಮಾಚರಣೆ ಕಂಡು ಬಂದಿಲ್ಲ. ಅದಕ್ಕೆ ಸಿದ್ಧತೆಯೂ ನಡೆದಿಲ್ಲ. ‘ಪ್ರತಿ ವರ್ಷ ಅಕ್ಟೋಬರ್‌ 23ರಿಂದ 25ರವರೆಗೆ ಉತ್ಸವ ನಡೆಯುತ್ತದೆ. ಜಿಲ್ಲಾಡಳಿತ ಅದೇ ತಿಂಗಳು ತರಾತುರಿಯಲ್ಲಿ ಪೂರ್ವಭಾವಿ ಸಭೆ ನಡೆಸಿ, ಸಾಂಕೇತಿಕವಾಗಿ ಕಾರ್ಯಕ್ರಮ ನಡೆಸಿ ಸುಮ್ಮನಾಗುತ್ತದೆ. ಆದರೆ, ಹೀಗೆ …

Read More »

ರಾಕಸಕೊಪ್ಪ ಜಲಾಶಯದ ನೀರು ಹೊರಕ್ಕೆ

ಬೆಳಗಾವಿ: ತಾಲ್ಲೂಕಿನ ರಾಕಸಕೊಪ್ಪ ಜಲಾಶಯ ಭರ್ತಿಯಾಗಲು ಒಂದು ಅಡಿ ಮಾತ್ರ ಬಾಕಿ ಉಳಿದಿದೆ. ಹಾಗಾಗಿ, ಶುಕ್ರವಾರದಿಂದಲೇ ಎರಡು ಕ್ರಸ್ಟ್‌ಗೇಟ್‌ಗಳನ್ನು ತೆರೆದು ಆರು ಇಂಚು ಅಂತರದಿಂದ ನೀರು ಹೊರ ಹರಿಸಲಾಗುತ್ತಿದೆ. ಪಶ್ಚಿಮ ಘಟ್ಟ ಪ್ರದೇಶ ಮತ್ತು ಮಾರ್ಕೆಂಡೇಯ ನದಿಯ ಜಲಾನಯನ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಮಾರ್ಕೆಂಡೇಯ ನದಿಗೆ ಕಟ್ಟಿರುವ ರಾಕಸಕೊಪ್ಪ ಅಣೆಕಟ್ಟೆ ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಭರ್ತಿಯಾಗಿದೆ. ಜಲಾಶಯದ ಕೆಳಹಂತದ ಗ್ರಾಮಗಳ ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು …

Read More »

ಖಾನಾಪುರ | ಮುಂದುವರಿದ ಮಳೆ: ಪ್ರವಾಹ ಪರಿಸ್ಥಿತಿ

ಖಾನಾಪುರ: ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಮಳೆರಾಯನ ಅಬ್ಬರ ಮುಂದುವರೆದಿದೆ. ಗುರುವಾರ ಇಡೀ ರಾತ್ರಿ ಮತ್ತು ಶುಕ್ರವಾರ ಇಡೀ ದಿನ ಪಟ್ಟಣ ಸೇರಿದಂತೆ ತಾಲ್ಲೂಕಿನ ಲೋಂಡಾ, ಕಣಕುಂಬಿ, ಹೆಮ್ಮಡಗಾ, ಜಾಂಬೋಟಿ, ಶಿರೋಲಿ, ಗುಂಜಿ ಅರಣ್ಯದಲ್ಲಿ ಧಾರಾಕಾರ ಮಳೆ ಸುರಿದಿದೆ. ಗುರುವಾರ ಮುಳುಗಿದ್ದ ಸೇತುವೆಗಳು ಶುಕ್ರವಾರವೂ ಸಂಚಾರಕ್ಕೆ ತೆರೆದುಕೊಳ್ಳಲಿಲ್ಲ. ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇಟಗಿ, ಗಂದಿಗವಾಡ, ಬೀಡಿ, ಪಾರಿಶ್ವಾಡ, ದೇವಲತ್ತಿ ಸುತ್ತಮುತ್ತ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಿದ್ದು, ತಾಲ್ಲೂಕಿನಾದ್ಯಂತ ಮೋಡ ಮುಸುಕಿದ ಶೀತ ವಾತಾವರಣ …

Read More »

ಗೋಕಾಕ- ಶಿಂಗಳಾಪುರ ಸೇತುವೆ ಮುಳುಗಡೆ

ಗೋಕಾಕ: ಘಟಪ್ರಭಾ ನದಿಯ ಹಿನ್ನೀರಿನಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹದಲ್ಲಿ ಏರಿಕೆ ಉಂಟಾಗುತ್ತಿರುವ ಪರಿಣಾಮ ಗೋಕಾಕ-ಶಿಂಗಳಾಪುರ ಸೇತುವೆ ಶುಕ್ರವಾರ ಸಂಜೆ ಪ್ರವಾಹದಲ್ಲಿ ಮುಳುಗಡೆ ಆಗಿದೆ. ಬ್ರಿಜ್‌ ಕಂ ಬ್ಯಾರೇಜ್ ಪ್ರವಾಹದಲ್ಲಿ ಮುಳುಗಿದ್ದರಿಂದ ಶಿಂಗಳಾಪುರ ಮತ್ತು ಟಕ್ಕೆ ನಿವಾಸಿಗಳು ಅಪಾಯವನ್ನೂ ಲೆಕ್ಕಿಸದೇ ಪ್ರವಾಹದ ಮಧ್ಯೆಯೇ ಸೇತುವೆ ದಾಟುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ ಮೋಹನ ಭಸ್ಮೆ ಸ್ಥಳಕ್ಕೆ ಭೇಟಿ ನೀಡಿದರು. ಪೊಲೀಸ್ ಬಂದೋಬಸ್ತ್‌ ಕಲ್ಪಿಸಲು ಗೋಕಾಕ ಶಹರ ಮತ್ತು …

Read More »

0 ಪಂಪ್‌ಸೆಟ್ ಕಳವು ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿ

ಬೈಲಹೊಂಗಲ: ತಾಲ್ಲೂಕಿನ ನಯಾನಗರ ಗ್ರಾಮದ ಮಲಪ್ರಭಾ ನದಿ ದಡದಲ್ಲಿರುವ ರೈತರ ಜಮೀನಿನ 10 ಪಂಪ್‌ಸೆಟ್ ಕಳವು ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಧಾರವಾಡದ ಮಾಳಾಪೂರ ಖಾದ್ರಿ ಗಲ್ಲಿ ನಿವಾಸಿಗಳಾದ ಮೊಹಮ್ಮದನದೀಮ ಮಹಮ್ಮದಹನೀಫ ಹೆಬ್ಬಳ್ಳಿ (33), ರಿಯಾಜ ರಫೀಕ ಕಾರಿಗಾರ (28), ಸಮೀರ ನಜೀರ ಹೆಬ್ಬಳ್ಳಿ (21), ಜಾಕೀರಹುಸೇನ ನೂರಹ್ಮದ ಮಾಲದಾರ (25) ಬಂಧಿತರು. ಬಂಧಿತರಿಂದ ₹2 ಲಕ್ಷ ಮೌಲ್ಯದ 10 ಪಂಪ್‌ಸೆಟ್‍ಗಳನ್ನು ಹಾಗೂ ಅಪಾರಧಕ್ಕೆ ಬಳಸಿದ್ದ …

Read More »

ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿದ್ದು ನಿಜ

ಬೆಂಗಳೂರು, ಜುಲೈ20: ವಾಲ್ಮೀಕಿ ನಿಗಮದಲ್ಲಿ ಯಾವುದೇ ಅಕ್ರಮ ಆಗಿಲ್ಲ ಎಂದು ನಾವು ಹೇಳುತ್ತಿಲ್ಲ. ಅಕ್ರಮ ಎಸಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ …

Read More »

ಗಂಧದ ಮರ ಕಡಿದರೆ 5 ವರ್ಷ ಜೈಲು ಶಿಕ್ಷೆ

ಬೆಂಗಳೂರು : ಗಂಧದ ಮರ ಕಡಿದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಗಂಧದ ಮರ ಕಡಿದು ಕಳುವು ಮಾಡಲು ಯತ್ನಿಸಿದ ಆರೋಪಿಗೆ 10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ದಂಡದ ಮೊತ್ತವನ್ನು 50 ಸಾವಿರಕ್ಕೆ ಹೆಚ್ಚಿಸಿ 5 ವರ್ಷ ಶಿಕ್ಷೆ ಖಾಯಂಗೊಳಿಸಿದೆ.   ಮಂಡ್ಯ ಜಿಲ್ಲೆಯ ಬಲ್ಲೇನಹಳ್ಳಿ ಗ್ರಾಮದ ದೇವಾರಾಜಾಚಾರಿ ಎಂಬುವವರಿಗೆ ಈ ಶಿಕ್ಷೆನೀಡಲಾಗಿದೆ. ಸೆಕ್ಷನ್ …

Read More »