Breaking News

Daily Archives: ಜುಲೈ 22, 2024

ಅಂಕಲಗಿ ಗ್ರಾಮದಲ್ಲಿ ಬೈಕ್ ಮತ್ತು ಕ್ರೂಸರ್ ನಡುವೆ ಡಿಕ್ಕಿ: ಓರ್ವ ಸಾವು

ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಬೈಕ್ ಮತ್ತು ಕ್ರೂಸರ್ ನಡುವೆ ಡಿಕ್ಕಿ: ಓರ್ವ ಸಾವು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ, ಅಡಿವೆಪ್ಪನ ಮಠದ ಮುಂಭಾಗದ ರಸ್ತೆಯಲ್ಲಿ ಬೈಕ್ ಮತ್ತು ಕ್ರೂಸರ್ ನಡುವೆ ನಡೆದ ಭೀಕರ ಅಪಘಾತದಲ್ಲಿ 18 ವರ್ಷದ ಅನೀಲ್ ಬಿಚಗತ್ತಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಬೈಕ್ ಹಿಂಬದಿ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಲ್ಮೆಟ್ ಧರಿಸದೆ ಇದ್ದುದರಿಂದ ಅನೀಲ್ ತಲೆಗೆ ಗಂಭೀರ …

Read More »

ಮಹಾರಾಷ್ಟ್ರ ಭಾಗದಲ್ಲಿ ಭಾರೀ ಮಳೆ;

ಬೆಳಗಾವಿ: ಮಹಾರಾಷ್ಟ್ರದ ಕೊಯ್ನಾ, ಕಾಳಮ್ಮವಾಡಿ ಜಲಾನಯನ ಪ್ರದೇಶಗಳಲ್ಲಿ ಮತ್ತು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇದರಿಂದ ಬೆಳಗಾವಿ ಜಿಲ್ಲೆಯಲ್ಲಿ ಹರಿಯುವ ಕೃಷ್ಣಾ, ಘಟಪ್ರಭಾ ದೂದಗಂಗಾ, ಹಿರಣ್ಯಕೇಶಿ ಹಾಗೂ ಮಲಪ್ರಭಾ ನದಿಗಳಲ್ಲಿ ಒಳಹರಿವು ಹೆಚ್ಚಿದೆ. ನದಿಗಳು ತುಂಬಿ ಹರಿಯುತ್ತಿರುವದರಿಂದ ಜಿಲ್ಲೆಯಲ್ಲಿ 15ಕ್ಕೂ ಹೆಚ್ಚು ಕೆಳಮಟ್ಟದ ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದ ರಸ್ತೆ ಸಂಪರ್ಕ ಕಡಿತವಾಗಿದೆ. ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು ಇದರಿಂದ ಕೃಷ್ಣಾ ನದಿಗೆ ಒಂದು ಲಕ್ಷ ಕ್ಯೂಸೆಕ್ಸ್ ಗೂ …

Read More »

ಅಂಚೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ- 10th ಪಾಸಾದವರಿಗೆ ₹ 63,000 ಸಂಬಳ

Post Office Recruitment 2024: ಭಾರತೀಯ ಅಂಚೆ ಇಲಾಖೆ(India Postal Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸ್ಟಾಫ್ ಕಾರ್​ ಡ್ರೈವರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜುಲೈ 23, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು …

Read More »

SBI Recruitment 2024 ಪದವಿ’ ಪಾಸಾದವರಿಗೆ ಗುಡ್ ನ್ಯೂಸ್ : ‘SBI’ ನಲ್ಲಿ 1040 ಹುದ್ದೆಗಳಿಗೆ ಅರ್ಜಿ ಆಹ್ವಾನ |

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜುಲೈ 2024 ರ ಅಧಿಕೃತ ಅಧಿಸೂಚನೆಯ ಮೂಲಕ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ 08-08-2024ರೊಳಗೆ ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಹುದ್ದೆಗಳ ಸಂಖ್ಯೆ: 1040 ಉದ್ಯೋಗ ಸ್ಥಳ: ಮುಂಬೈ ಹುದ್ದೆ ಹೆಸರು: ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಸಂಬಳ: ವರ್ಷಕ್ಕೆ ರೂ.3000000-6100000/- …

Read More »

ನಾಳೆ ಕೇಂದ್ರ ಸರ್ಕಾರದ ಬಜೆಟ್‌ ಮಂಡನೆ

ನವದೆಹಲಿ: ಜುಲೈ 23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿರುವ ಕೇಂದ್ರ ಬಜೆಟ್ 2024 ವೇತನದಾರರ ತೀವ್ರ ಆಸಕ್ತಿಯನ್ನು ಕೆರಳಿಸಿದೆ. ಅವರ ನಿರೀಕ್ಷೆಗಳು ಅನುಕೂಲಕರ ಪ್ರಕಟಣೆಗಳ ನಿರೀಕ್ಷೆಯ ಸುತ್ತ ಕೇಂದ್ರೀಕೃತವಾಗಿವೆ, ವಿಶೇಷವಾಗಿ ತೆರಿಗೆ ಕಡಿತಗಳು ಮತ್ತು ತೆರಿಗೆ ಪ್ರಕ್ರಿಯೆಗಳನ್ನು ಸರಳೀಕರಿಸುವ ಮತ್ತು ಉತ್ತಮಗೊಳಿಸುವ ಗುರಿಯನ್ನು ಹೊಂದಿರುವ ಸುಧಾರಣೆಗಳ ಮೇಲೆ ಕೇಂದ್ರೀಕರಿಸುತ್ತವೆ. ಸಂಬಳ ಪಡೆಯುವ ತೆರಿಗೆದಾರರು ಹಣದುಬ್ಬರ ಮತ್ತು ಬಡ್ಡಿದರಗಳ ಏರಿಕೆಯ ಪರಿಣಾಮಗಳನ್ನು ತಗ್ಗಿಸಲು ಕಡಿಮೆ ಆದಾಯ ತೆರಿಗೆ …

Read More »

25 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ

ಕೌಜಲಗಿ: ಸಾರ್ವಜನಿಕ ಸಂಚಾರಕ್ಕೆ ಅಗತ್ಯವಿರುವ ಮನ್ನಿಕೇರಿಯಿಂದ ಬೆಟಗೇರಿ ಮತ್ತು ಮನ್ನಿಕೇರಿಯಿಂದ ಕೌಜಲಗಿವರೆಗಿನ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ಒಟ್ಟಾರೆ ₹25 ಕೋಟಿ ಮಂಜೂರಾಗಿದ್ದು, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಸಮೀಪದ ಮನ್ನಿಕೇರಿ ಗ್ರಾಮದ ಹತ್ತಿರ ಭಾನುವಾರ ಜರುಗಿದ ಲೋಕೋಪಯೋಗಿ ಇಲಾಖೆಯ ಎಸ್‌ಎಚ್‌ಡಿಪಿ 5ನೇ ಹಂತದ ಯೋಜನೆಯ ₹13 ಕೋಟಿ ವೆಚ್ಚದ ಬೆಟಗೇರಿ-ಬಗರನಾಳ-ಮನ್ನಿಕೇರಿ ರಸ್ತೆ ಅಭಿವೃದ್ಧಿ ಮತ್ತು ಅಗಲೀಕರಣ ಕಾಮಗಾರಿ ಮತ್ತು …

Read More »

ತುಂಬಿದ ಕೃಷ್ಣೆ: ನದಿ ತೀರದ ಗ್ರಾಮಗಳಿಗೆ ಪ್ರಕಾಶ ಹುಕ್ಕೇರಿ ಭೇಟಿ

ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಪ್ರದೇಶ ಹಾಗೂ ಚಿಕ್ಕೋಡಿ ಉಪ ವಿಭಾಗದಲ್ಲಿ ಕಳೆದ 3-4 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ಹಾಗೂ ಉಪ ನದಿಗಳ ನೀರಿನ ಮಟ್ಟ ಹೆಚ್ಚಳವಾಗಿದ್ದು, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ 2 ಪ್ರಕಾಶ ಹುಕ್ಕೇರಿ ಭಾನುವಾರ ಕೃಷ್ಣಾ ನದಿ ತೀರದ ಗ್ರಾಮಗಳಾದ ಚಿಕ್ಕೋಡಿ ತಾಲ್ಲೂಕಿನ ಇಂಗಳಿ, ಮಾಂಜರಿ, ಯಡೂರ, ಚಂದೂರ, ಕಲ್ಲೋಳಗಳಿಗೆ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿ ಪರಿಶೀಲಿಸಿದರು. ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಬಂದರೆ …

Read More »

ಬೆಳಗಾವಿ: ಮನೆ ಗೋಡೆ ಕುಸಿದು ವ್ಯಕ್ತಿ ಸಾವು

ನಿಪ್ಪಾಣಿ(ಬೆಳಗಾವಿ): ಸತತ ಮಳೆಯಿಂದಾಗಿ ಇಲ್ಲಿನ ಜತ್ರಾಟ ವೇಸ್‌ನಲ್ಲಿ ಭಾನುವಾರ ಬೆಳಿಗ್ಗೆ ಪಕ್ಕದ ಮನೆಯ ಗೋಡೆ ತಗಡಿನ ಶೆಡ್ ಮೇಲೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ತಿರುಪತಿ ರಾಜಾರಾಮ ವಟಕರ್(50) ಮೃತರು. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮುಜಫ್ಫರ್ ಬಳಿಗಾರ ಭೇಟಿ‌ ನೀಡಿ ಪರಿಶೀಲನೆ ನಡೆಸಿದರು. ನಿಪ್ಪಾಣಿಯ ಬಸವೇಶ್ವರ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »

ಉಕ್ಕೇರಿದ ನದಿಗಳು-

ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಯಮಕನಮರಡಿ, ನಿಪ್ಪಾಣಿ, ಚಿಕ್ಕೋಡಿ, ಗೋಕಾಕ ಭಾಗದ 10 ಸೇತುವೆಗಳು ಜಲಾವೃತಗೊಂಡಿವೆ. ಯಮಕನಮರಡಿ ವರದಿ: ಮಹಾ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಹುಕ್ಕೇರಿ ತಾಲ್ಲೂಕಿನ ದಡ್ಡಿ, ಸಲಾಮವಾಡಿ, ಮೊದಗಾ, ಶೆಟ್ಟಿಹಳ್ಳಿ ಗ್ರಾಮದ ನಾಲ್ಕು ಸೇತುವೆಗಳು ಶನಿವಾರ ಮುಳುಗಿದ್ದು, ವಾಹನ ಸಂಚಾರ ಸ್ಥಗಿತವಾಗಿದೆ. ‘ನದಿ ದಡದ ನಿವಾಸಿಗಳಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚಿಸಲಾಗಿದೆ. ಸೇತುವೆ ಮೇಲೆ ಜನರು ಓಡಾಡದಂತೆ ತಡೆಯಲು ಪೊಲೀಸರು ಬ್ಯಾರಿಕೇಡ್ ಇಟ್ಟಿದ್ದು, ನಿಗಾ …

Read More »

ಜಾಂಬೋಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಕಾರಣ ಜಾಂಬೋಟಿಯಿಂದ ಬೆಳಗಾವಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಶನಿವಾರದಿಂದ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಾಂಬೋಟಿಯಿಂದ ಬೆಳಗಾವಿ ನಗರಕ್ಕೆ ಸಂಪರ್ಕ ಕಲ್ಪಿಸುವ ಜಾಂಬೋಟಿ- ಪೀರಣವಾಡಿ ರಸ್ತೆಯಲ್ಲಿ (ರಾಷ್ಟ್ರೀಯ ಹೆದ್ದಾರಿ- 54) ಕುಸಮಳಿ ಗ್ರಾಮದ ಹತ್ತಿರದ ಸೇತುವೆ ಹಳೆಯದಾಗಿದೆ. ಇದು ಸಂಚಾರಕ್ಕೆ ಯೋಗ್ಯವಾಗಿಲ್ಲ. ಅಲ್ಲದೇ ಜಾಂಬೋಟಿಯಿಂದ ಖಾನಾಪುರಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ …

Read More »