Breaking News

Daily Archives: ಜುಲೈ 23, 2024

ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ದಲಿತ ಯುವಕನ ಕೈ ಕಡಿದರು

ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ದಲಿತ ಯುವಕನ ಕೈ ಕಡಿದರು ಕನಕಪುರ: ಮಾಳಗಾಳು ಗ್ರಾಮದಲ್ಲಿ ಒಕ್ಕಲಿಗ ಸಮುದಾಯದ ಯುವಕರ ಗುಂಪೊಂದು ಭಾನುವಾರ ರಾತ್ರಿ ಪರಿಶಿಷ್ಟ ಜಾತಿ ಯುವಕನ ಮುಂಗೈ ಕತ್ತರಿಸಿ ಹಾಕಿದೆ. ದಲಿತರ ಕಾಲೊನಿಗೆ ನುಗ್ಗಿದ ಗುಂಪು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ವೈರಮುಡಿ ಅವರ ಪುತ್ರ ಅನೀಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಅನೀಶ್‌ ಎಡಗೈ ತುಂಡಾಗಿದ್ದು ಬೆಂಗಳೂರಿನ ಸೇಂಟ್ ಜಾನ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆಯಲ್ಲಿ ತೀವ್ರವಾಗಿ …

Read More »

ಕೃಷಿ ಕಾಯ್ದೆ ಹಿಂಪಡೆಯಲು ರೈತ ಸಂಘಟನೆಗಳ ಆಗ್ರಹ

ಬೆಳಗಾವಿ: ತಮಗೆ ಮಾರಕವಾದ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು …

Read More »

ಪ್ರಾಮಾಣಿಕ ಅಧಿಕಾರಿ ಮೇಲೆ ಕ್ರಮವಾಗದಿರಲಿ: ರೈತ ಸಂಘಟನೆಗಳ ಆಗ್ರಹ

ಬೆಳಗಾವಿ: ‘ವಿವಿಧ ರೈತ ಸಂಘಟನೆಯವರು ಭೂದಾಖಲೆಗಳ ಇಲಾಖೆ ಬೆಳಗಾವಿ ಉಪನಿರ್ದೇಶಕರಿಗೆ ತೊಂದರೆ ನೀಡುತ್ತಿದ್ದಾರೆ. ಆದರೆ, ಪ್ರಾಮಾಣಿಕ ಅಧಿಕಾರಿಗೆ ಯಾವ ತೊಂದರೆಯಾಗದಂತೆ ಕ್ರಮ ವಹಿಸಬೇಕು’ ಎಂದು ಆಗ್ರಹಿಸಿ ರಾಷ್ಟ್ರೀಯ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಸೋಮವಾರ ಮನವಿ ಸಲ್ಲಿಸಿದರು.   ‘ಭೂದಾಖಲೆಗಳ ಇಲಾಖೆ ಉಪನಿರ್ದೇಶಕರು ನಿಯಮಾನುಸಾರ ಕೆಲಸ ಮಾಡುತ್ತಿದ್ದಾರೆ. ಹಲವು ಪ್ರಕರಣಗಳ ವಿಚಾರಣೆ ನಡೆಸಿ, ರೈತರಿಗೆ ಅನ್ಯಾಯವಾಗದಂತೆ ಕ್ರಮ ವಹಿಸಿದ್ದಾರೆ. …

Read More »

ಬೈಲಹೊಂಗಲ: ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಲು ಆಗ್ರಹ

ಬೈಲಹೊಂಗಲ: ನೂತನವಾಗಿ ಘೋಷಣೆ ಮಾಡಿರುವ ನದಾಫ-ಪಿಂಜಾರ ಹಾಗೂ ಇತರೆ 13 ಜಾತಿಗಳ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡುವಂತೆ ಒತ್ತಾಯಿಸಿ ನದಾಫ, ಪಿಂಜಾರ ಸಮಾಜ ತಾಲ್ಲೂಕು ಘಟಕದ ಸದಸ್ಯರು ಶಿರಸ್ಥೇದಾರ ರಾಘವೇಂದ್ರ ಪೂಜಾರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ನದಾಫ-ಪಿಂಜಾರ ತಾಲ್ಲೂಕು ಘಟಕದ ಅಧ್ಯಕ್ಷ ಅಬ್ದುಲಕಲಾಮ ಆಜಾದ ನದಾಫ ಮಾತನಾಡಿ, ರಾಜ್ಯದಲ್ಲಿ 22‌ಲಕ್ಷಕ್ಕೂ ಅಧಿಕ ಸಂಖ್ಯೆ ಹೊಂದಿರುವ ಪಿಂಜಾರ,ನದಾಫ ಜನಾಂಗವು ಸಾಮಾಜಿಕ,ಔದ್ಯೋಗಿಕ, ಶೈಕ್ಷಣಿಕ,ರಾಜಕೀಯ ಕ್ಷೇತ್ರ ಸೇರಿದಂತೆ ಅತ್ಯಂತ ಶೋಷಣೆ ಯಿಂದ ನಲುಗುತ್ತಿದೆ. ಪ್ರವರ್ಗ-1 …

Read More »

ಅಕ್ರಮ ಸಂಬಂಧ ಶಂಕೆ: ಯುವಕನ ಕೊಲೆ

ಮೂಡಲಗಿ: ತಾಲ್ಲೂಕಿನ ಲಕ್ಷ್ಮೇಶ್ವರ ಕ್ರಾಸ್‌ ಬಳಿ ಸೋಮವಾರ ಮಾರಕಾಸ್ತ್ರದಿಂದ ಕೊಚ್ಚಿ ಯುವಕನೊಬ್ಬನ ಕೊಲೆ ಮಾಡಲಾಗಿದೆ. ಲಕ್ಷ್ಮೇಶ್ವರದ ಮೌಲಾಸಾಬ್‌ ಯಾಸೀನ್‌ ಮೋಮಿನ್‌(22) ಮೃತರು. ‘ತನ್ನ ಪತ್ನಿ ಶಿಲ್ಪಾ ಅವರೊಂದಿಗೆ ಮೌಲಾಸಾಬ್‌ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಶಂಕಿಸಿ, ಸುಣಧೋಳಿಯ ಅಮೋಘ ಢವಳೇಶ್ವರ ಕೊಲೆ ಮಾಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ. ಮೌಲಾಸಾಬ್‌ ಹಾಗೂ ಶಿಲ್ಪಾ ಬೈಕ್‌ ಮೇಲೆ ಹೊರಟಿದ್ದರು. ಅವರನ್ನು ತಡೆದ ಆರೋಪಿ, ಮಾರಕಾಸ್ತ್ರದಿಂದ ಇಬ್ಬರ ಮೇಲೂ ಹಲ್ಲೆ ಮಾಡಿದ. ಮೌಲಾಸಾಬ್‌ ಸ್ಥಳದಲ್ಲೇ ಮೃತಪಟ್ಟರು. …

Read More »

ಯಮಕನಮರಡಿ | ಶಿರೂರ ಜಲಾಶಯದಿಂದ 3,500 ಕ್ಯುಸೆಕ್ ನೀರು ಬಿಡುಗಡೆ

ಯಮಕನಮರಡಿ: ಹುಕ್ಕೇರಿ ತಾಲ್ಲೂಕಿನ ಶಿರೂರ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದ್ದು, ಭಾನುವಾರ ಎರಡು ಕ್ರಸ್ಟ್‌ಗೇಟ್‌ ತೆರೆದು 3,500 ಕ್ಯುಸೆಕ್ ನೀರು ಬಿಡುಗಡೆಗೊಳಿಸಲಾಯಿತು. ಇದಕ್ಕೂ ಮುನ್ನ ಪೂಜೆ ಸಲ್ಲಿಸಿದ ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಿಕ, ‘ಜಲಾಶಯ ಭರ್ತಿಗೆ ಎರಡು ಅಡಿಯಷ್ಟೇ ಬಾಕಿ ಇದೆ. ಮತ್ತೊಂದೆಡೆ ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಬೆಳಗಾವಿ ತಾಲ್ಲೂಕಿನ ರಕ್ಕಸಕೊಪ್ಪ ಜಲಾಶಯದಿಂದಲೂ 4,500 ಕ್ಯುಸೆಕ್‌ ನೀರು ಬಿಡಲಾಗಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಎರಡು ಕ್ರಸ್ಟ್‌ಗೇಟ್‌ ತೆರೆದು …

Read More »