Breaking News

Daily Archives: ಜುಲೈ 25, 2024

ಪುಣೆಯಲ್ಲಿ ಭಾರಿ ಮಳೆ | ಅಗತ್ಯಬಿದ್ದರೆ ಜನರನ್ನು ಏರ್‌ಲಿಫ್ಟ್ ಮಾಡುತ್ತೇವೆ: ಶಿಂದೆ

ಪುಣೆ: ಅಗತ್ಯವೆನಿಸಿದರೆ ಪುಣೆಯಲ್ಲಿ ಮಳೆ ಸಂತ್ರಸ್ತರನ್ನು ವಾಯು ಮಾರ್ಗದ ಮೂಲಕ ಸ್ಥಳಾಂತರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹೇಳಿದ್ದಾರೆ. ಪುಣೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನೂರಾರು ಮನೆಗಳಿಗೆ ನೀರು ನುಗ್ಗಿದೆ. ಮಳೆ ಸಂಬಂಧಿತ ಅವಘಡಗಳಿಂದಾಗಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ ಪುಣೆ ಜಿಲ್ಲಾಧಿಕಾರಿ, ಪಾಲಿಕೆ ಅಧಿಕಾರಿಗಳು ಹಾಗೂ ನೆರೆಯ ಪಿಂಪ್ರಿ ಚಿಂಚ್ವಾಡ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿರುವ ಶಿಂದೆ, ಸ್ಥಳಾಂತರ ಕಾರ್ಯಗಳಿಗೆ ನೆರವಾಗುವಂತೆ ಸೇನೆ ಹಾಗೂ ರಾಷ್ಟ್ರೀಯ …

Read More »

ಮಹಾರಾಷ್ಟ್ರದ ಕೆಲವೆಡೆ ರೆಡ್‌ ಅಲರ್ಟ್‌ ಘೋಷಣೆ

ಮುಂಬೈ: ಮಹಾರಾಷ್ಟ್ರದ ಮುಂಬೈ ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಇಂದು (ಗುರುವಾರ) ನಗರದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ ತಿಳಿಸಿದೆ. ಮುಂಬೈ ನಗರ, ಥಾಣೆ ಮತ್ತು ರಾಯಗಢ, ಪಾಲ್ಘರ್ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ( ಐಎಂಡಿ) ಗುರುವಾರ ರೆಡ್‌ ಅಲರ್ಟ್‌ ಘೋಷಿಸಿದೆ. ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಗೆ …

Read More »

ಹದಗೆಟ್ಟ ಕೇಜ್ರಿವಾಲ್ ಆರೋಗ್ಯ

ನವದೆಹಲಿ: ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿದ್ದು, ಇದನ್ನು ಪ್ರತಿಭಟಿಸಲು ‘ಇಂಡಿಯಾ’ ಮೈತ್ರಿಕೂಟವು ಜುಲೈ 30ರಂದು ಜಂತರ್‌ ಮಂತರ್‌ನಲ್ಲಿ ಬೃಹತ್ ರ‍್ಯಾಲಿ ಹಮ್ಮಿಕೊಂಡಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ತಿಳಿಸಿದೆ. ‘ಅರವಿಂದ ಕೇಜ್ರಿವಾಲ್‌ ಅವರನ್ನು ಜೈಲಿನಲ್ಲಿ ಕೊಲ್ಲಲು ಬಿಜೆಪಿ ಸಂಚು ರೂಪಿಸುತ್ತಿದೆ. ಅಲ್ಲದೆ, ಕೇಜ್ರಿವಾಲ್‌ ಅವರ ಜೀವನದೊಂದಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಲೆಫ್ಟಿನಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಆಟವಾಡುತ್ತಿದ್ದಾರೆ’ ಎಂದು ಪಕ್ಷ …

Read More »

17 ಪಿಎಸ್‌ಐಗಳ ವರ್ಗಾವಣೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 17 ಪೊಲೀಸ್ ಸಬ್ ಇನ್ಸಪೆಕ್ಟರ್‌ಗಳನ್ನು (ಪಿಎಸ್‌ಐ) ನಗರದ ವಿವಿಧ ಠಾಣೆಗಳಿಗೆ ಆಂತರಿಕ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶಿಸಿದೆ. ಇತ್ತೀಚೆಗೆ ಒಂದೇ ಠಾಣೆಯಲ್ಲಿ ಐದು ವರ್ಷಕ್ಕಿಂತ ಹೆಚ್ಚು ಕಾಲ ಕರ್ತವ್ಯ ನಿರ್ವಹಿಸಿದ್ದ ಎಎಸ್‌ಐ, ಹೆಡ್‌ ಕಾನ್‌ಸ್ಟೆಬಲ್‌, ಕಾನ್‌ಸ್ಟೆಬಲ್‌ಗಳನ್ನು ಕೌನ್ಸ್‌ಲಿಂಗ್‌ ಮೂಲಕ ವಿವಿಧ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿತ್ತು.

Read More »

ಐಶ್ವರ್ಯಗೆ ಚಿನ್ನ, ಸಿದ್ಧಾರ್ಥಗೆ ಬೆಳ್ಳಿ

ಹುಬ್ಬಳ್ಳಿ: ಬೆಂಗಳೂರಿನ ಸಾಯಿ ಶೂಟಿಂಗ್ ರೇಂಜ್‌ನಲ್ಲಿ ನಡೆದ 12ನೇ ಶೂಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಹುಬ್ಬಳ್ಳಿ ಶೂಟಿಂಗ್ ಅಕಾಡೆಮಿಯ ಐಶ್ವರ್ಯ ಬಾಲೆಹೊಸೂರು ಚಾಂಪಿಯನ್ ಆಗಿ ಹೊರಹೊಮ್ಮಿದರು. ಪಿಸ್ತೂಲ್ ಐಎಸ್‌ಎಸ್‌ಎಫ್‌ನ ಮಹಿಳೆಯರ ವಿಭಾಗದ ಫೈನಲ್ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಅವರು, ಚಿನ್ನದ ಪದಕ ತಮ್ಮದಾಗಿಸಿಕೊಂಡರು. ಪುರುಷರ ವಿಭಾಗದಲ್ಲಿ (ಪಿಸ್ತೂಲ್‌) ಸಿದ್ಧಾರ್ಥ ದಿವಟೆ ಬೆಳ್ಳಿ ಪದಕ ಗೆದ್ದರು. ಪಿಸ್ತೂಲ್ ಮಾಸ್ಟರ್ ವಿಭಾಗದಲ್ಲಿ ಜಯಶ್ರೀ ಪಾಟೀಲ ಬೆಳ್ಳಿ, ಇದೇ ಸ್ಪರ್ಧೆಯ ಪುರುಷರ ವಿಭಾಗದಲ್ಲಿ ಪ್ರಶಾಂತ್ ಪಾವಸ್ಕರ್ …

Read More »

ಆಯುಕ್ತರ ಕಚೇರಿಗೆ ಪೌರಕಾರ್ಮಿಕರ ಮುತ್ತಿಗೆ

ಹುಬ್ಬಳ್ಳಿ: ಸೇವೆ ಕಾಯಂಗೊಳಿಸುವುದು, ನೇರ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪೌರಕಾರ್ಮಿಕರು, ಮಂಗಳವಾರ ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಪೌರಕಾರ್ಮಿಕರ ಸಂಘದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಾರಾಯಣ ಅವರ ನೇತೃತ್ವದಲ್ಲಿ ಆಯುಕ್ತರ ಕಚೇರಿ ಎದುರು ಕುಳಿತ ‍ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು. ನಾರಾಯಣ ಮಾನತಾಡಿ, ‘ಮಹಾನಗರ ಪಾಲಿಕೆ ಆಯುಕ್ತ, ಮೇಯರ್ ಅವರು ಬೇಡಿಕೆಗಳ ಈಡೇರಿಕೆಗೆ …

Read More »

ಹುಬ್ಬಳ್ಳಿ: ₹173 ಕೋಟಿ ನೀರಿನ ಕರ ಬಾಕಿ

ಹುಬ್ಬಳ್ಳಿ: ಅವಳಿ ನಗರದಲ್ಲಿ ಎಲ್‌ ಆಯಂಡ್ ಟಿ ಕಂಪನಿಯಿಂದ 24X7 ಕುಡಿಯುವ ನೀರಿನ ಕಾಮಗಾರಿ ಕುಂಟುತ್ತಾ ಸಾಗಿದ್ದು, ನೀರಿನ ಕರ ಬಾಕಿ ವಸೂಲಿ ಸವಾಲಾಗಿದೆ. ಈ ನಡುವೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯು ನೀರಿನ ಕರ ಸಂಗ್ರದಲ್ಲಿ ಶೇ 94ರಷ್ಟು ಪ್ರಗತಿ ಸಾಧಿಸಿದೆ. ಏಪ್ರಿಲ್‌, ಮೇ, ಜೂನ್‌ ತಿಂಗಳಲ್ಲಿ ₹13.1 ಕೋಟಿ ನೀರನ ಕರ ಸಂಗ್ರಹಿಸುವ ಗುರಿ ಇತ್ತು. ಅದರಲ್ಲಿ ಈಗಾಗಲೇ ₹12.18 ಕೋಟಿ ಸಂಗ್ರಹಿಸಲಾಗಿದೆ. ಅವಳಿ …

Read More »

1500 ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಚಿಕ್ಕೋಡಿ: ‘ಚಿಕ್ಕೋಡಿ-ಸದಲಗಾ ಶಾಸಕ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರು ಚಿಕ್ಕೋಡಿ ಕ್ಷೇತ್ರದಲ್ಲಿ ಸದಾ ಕಾಲವೂ ಜನರ ಸಮಸ್ಯೆಗೆ ಸ್ಪಂದಿಸುತ್ತ ಜನರ ಹೃದಯದಲ್ಲಿ ನೆಲೆ ನಿಂತಿದ್ದಾರೆ. ಕ್ಷೇತ್ರದಲ್ಲಿ ಶಿಕ್ಷಣ, ನೀರಾವರಿ, ಆರೋಗ್ಯ, ಮೂಲಸೌಕರ್ಯ ಒದಗಿಸಲು ಆದ್ಯತೆ ನೀಡಿದ್ದು ಕ್ಷೇತ್ರದ ಜನರ ಹೆಮ್ಮೆಯಾಗಿದೆ’ ಎಂದು ಕಾಂಗ್ರೆಸ್ ಮುಖಂಡ ರಾಮಾ ಮಾನೆ ಹೇಳಿದರು. ಪಟ್ಟಣದ ಪರಟಿ ನಾಗಲಿಂಗೇಶ್ವರ ಸಭಾಭವನದಲ್ಲಿ ಬುಧವಾರ ದು ಶಾಸಕ ಗಣೇಶ ಹುಕ್ಕೇರಿ ಅವರ 46ನೇ …

Read More »

ಮನೆಗಳಿಗೆ ನುಗ್ಗಿದ ನೀರು; ಆಕ್ರೋಶ

ಬೆಳಗಾವಿ: ನಗರವೂ ಸೇರಿದಂತೆ ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಮಳೆ ಹಲವು ಅವಾಂತರ ಸೃಷ್ಟಿಸಿದೆ. ಸತತ ಮಳೆಯಿಂದಾಗಿ ನಗರದ ಹೊರವಲಯದ ಬಸವನ ಕುಡಚಿಯ ಹಲವು ಮನೆಗಳು, ಅಂಗಡಿಗಳಿಗೆ ನೀರು ನುಗ್ಗಿ, ಜನರು ಪರದಾಡುವಂತಾಯಿತು. ಕೆಎಲ್‌ಇ ಸಂಕಲ್ಪ ವೆಲ್‌ನೆಸ್‌ ಸೆಂಟರ್‌ಗೆ ಸಹ ನೀರು ನುಗ್ಗಿದ ಪರಿಣಾಮ ಔಷಧಗಳು ಮತ್ತು ವೈದ್ಯಕೀಯ ಪರಿಕರಗಳಿಗೆ ಹಾನಿಯಾಯಿತು. ಈ ನೀರು ಹೊರಹಾಕಲು ಮಹಾನಗರ ಪಾಲಿಕೆಯವರು ಬುಧವಾರ ಬೆಳಿಗ್ಗೆಯಿಂದ ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದು ಕಂಡುಬಂತು. ‘ವಾರದಿಂದ ನಮ್ಮಲ್ಲಿ ಸತತ ಮಳೆಯಾಗುತ್ತಿದೆ. …

Read More »

ಹರಗಾಪುರ: ಗುಡ್ಡ ಕುಸಿತ, ಪ್ರಾಣಾಪಾಯ ಇಲ್ಲ

ಹುಕ್ಕೇರಿ: ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಹರಗಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಗುಡ್ಡ ಕುಸಿತದ ಸ್ಥಳಕ್ಕೆ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ ಕಟ್ಟಿ ಭೇಟಿ ನೀಡಿ ಪರಿಶೀಲಿಸಿದರು. ‘ಕಲ್ಲುಗಳು ಉರುಳಿ ಬಿದ್ದು, ವಸತಿ ಪ್ರದೇಶದ ಸಮೀಪ ಬಂದು ನಿಂತಿವೆ. ಯಾವುದೇ ಪ್ರಾಣಹಾನಿ ಅಥವಾ ಮನೆಗೆ ತೊಂದರೆ ಆಗಿಲ್ಲ. ಆದರೆ ಕಲ್ಲು ಬಿದ್ದ ಹೊಡೆತಕ್ಕೆ ಚರಂಡಿ ರಿಪೇರಿಗೆ ಬಂದಿವೆ’ ಎಂದು ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ ಅಧ್ಯಕ್ಷ …

Read More »