ಎಂ.ಕೆ.ಹುಬ್ಬಳ್ಳಿ: ನಿರಂತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲಪ್ರಭೆ ಮೈದುಂಬಿ ಹರಿಯುತ್ತಿದ್ದಾಳೆ. ಖಾನಾಪುರದ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಮಲಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಎಂ.ಕೆ.ಹುಬ್ಬಳ್ಳಿ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ-4ರ ಪಕ್ಕದಲ್ಲಿ ಮಲಪ್ರಭಾ ನದಿ ಮಧ್ಯದಲ್ಲಿರುವ ಶರಣೆ ಗಂಗಾಂಬಿಕಾ ಐಕ್ಯಮಂಟಪದ ಸುತ್ತ ಮಲಪ್ರಭೆಯ ಮೈದುಂಬಿ ಹರಿಯುತ್ತಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಮಳೆಯ ಆರ್ಭಟ ಮುಂದುವರಿದಿದ್ದು, ದಿನದಿಂದ ದಿನಕ್ಕೆ ನದಿಯ ನೀರಿನ ಮಟ್ಟ ಹೆಚ್ಚುತ್ತಿದೆ. ಸದ್ಯ ಎಂ.ಕೆ.ಹುಬ್ಬಳ್ಳಿ ಬಳಿಯ …
Read More »Daily Archives: ಜುಲೈ 25, 2024
ಜಿಲ್ಲೆಯಲ್ಲಿ ಮುಂದುವರೆದ ಮಳೆ ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಎಲ್ಲಾ ಸಿದ್ದತೆ ಮಾಡಿಕೊಳ್ಳಲು ಸೂಚನೆ: ಸತೀಶ ಜಾರಕಿಹೊಳಿ
ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರೆದಿರುವ ಕಾರಣ ಮಾನ್ಯ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಶ್ರೀ ಸತೀಶ ಜಾರಕಿಹೊಳಿ ರವರು ರಾಯಬಾಗ ತಾಲೂಕಿನ ಕುಡಚಿ ಸೇತುವೆ, ಹಳೆ-ದಿಗ್ಗೇವಾಡಿ ಮತ್ತಿತರ ಪ್ರವಾಹ ಪ್ರದೇಶಗಳ ವೀಕ್ಷಣೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ರವರು ಜಿಲ್ಲಾ ಪೋಲೀಸ್ ಅಧೀಕ್ಷಕರು ಹಾಗೂ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಪರೀಕ್ಷಾರ್ಥ ಐ.ಎ.ಎಸ್. ಅಧಿಕಾರಿ ಹಾಗೂ ಇತರೆ ಇಲಾಖಾ ಅಧಿಕಾರಿಗಳ ಜೊತೆಯಲ್ಲಿ ಹಾಜರಿದ್ದರು. ಜಿಲ್ಲಾ ಉಸ್ತುವಾರಿ ಮಂತ್ರಿಗಳ ಸೂಚನೆಯಂತೆ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು …
Read More »ನಡುಗಡ್ಡೆಯಾದ ಜನವಸತಿ
ಅಥಣಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹುಲಗಬಾಳಿ ಗ್ರಾಮದ ವ್ಯಾಪ್ತಿಯ ಮಾಂಗ ಜನವಸತಿ ಪ್ರದೇಶವನ್ನು ಕೃಷ್ಣಾ ನದಿ ನೀರು ಸುತ್ತುವರಿದಿದ್ದು, 50 ಕುಟುಂಬಗಳು ನಡುಗಡ್ಡೆಯಲ್ಲಿ ಸಿಲುಕಿವೆ. ಅಲ್ಲಿನ ಜನ ಮತ್ತು ಜಾನುವಾರುಗಳನ್ನು ಬುಧವಾರ ಸಂಜೆ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಸಂತ್ರಸ್ತರಿಗೆ ಹುಲುಗಬಾಳಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾತ್ಕಾಲಿಕ ಪುನರ್ವಸತಿ ಕೇಂದ್ರ ಸ್ಥಾಪಿಸಲಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ ವೇಳೆ ಆಕ್ರೋಶಗೊಂಡ ಜನ, ‘ನಮಗೆ ಶಾಶ್ವತ ನೆಲೆ ಕಲ್ಪಿಸಬೇಕು. ಪ್ರತಿ …
Read More »ಗಡ್ಕರಿ,ಕೋರೆ ಭೇಟಿ: ಚರ್ಚೆ
ಬೆಳಗಾವಿ: ನವದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಭೇಟಿಯಾಗಿ, ವಿವಿಧ ಕಾಮಗಾರಿಗಳ ಕುರಿತು ಚರ್ಚಿಸಿದರು. ‘ಅಥಣಿ ತಾಲ್ಲೂಕಿನ ಮುರಗುಂಡಿಯಿಂದ ಕಾಗವಾಡ, ಚಿಕ್ಕೋಡಿ ಮಾರ್ಗವಾಗಿ ಗೋಟೂರವರೆಗೆ (87 ಕಿ.ಮೀ) ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, ಶಿರಗುಪ್ಪಿಯಿಂದ ಅಂಕಲಿಯವರೆಗೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಮಂಜೂರುಗೊಳಿಸಿರುವುದು ಸ್ವಾಗತಾರ್ಹ. ಈ ಕಾಮಗಾರಿ ಬೇಗ ಆರಂಭಿಸಬೇಕು’ ಎಂದು ಕೋರಿದರು. ‘ನವೀಕರಿಸಬಹುದಾದ ಎಥೆನಾಲ್ ಬಳಕೆಯಿಂದ ರೈತರಿಗೆ …
Read More »ಮದುವೆ ಆಗುವಂತೆ ಕೇಳಿದ್ದಕ್ಕೆ ಪ್ರೇಯಸಿಯ ಕತ್ತು ಹಿಸುಕಿ ಕೊಲೆ
ಆನಂದಪುರ: ಮದುವೆ ಆಗುವಂತೆ ಕೇಳಿದ್ದಕ್ಕೆ ಪ್ರೇಯಸಿಯ ಕತ್ತು ಹಿಸುಕಿ ಕೊಲೆ ಮಾಡಿ ಸಮೀಪದ ಮುಂಬಾಳು ಗ್ರಾಮದ ರೈಲ್ವೆ ಹಳಿ ಪಕ್ಕ ಶವ ಹೂತು ಹಾಕಿದ್ದ ಪ್ರಕರಣವನ್ನು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ. ಕೊಪ್ಪ ತಾಲ್ಲೂಕಿನ ಗುಣವಂತೆಯ ನರ್ಸಿಂಗ್ ವಿದ್ಯಾರ್ಥಿನಿ ಸೌಮ್ಯಾ (27) ಕೊಲೆಯಾದವರು. ಸಾಗರ ತಾಲ್ಲೂಕಿನ ತಾಳಗುಪ್ಪದ ಸೃಜನ್ ಆರೋಪಿ ಯುವಕ. ತೀರ್ಥಹಳ್ಳಿಯ ಫೈನಾನ್ಸ್ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸೃಜನ್, ಪರಿಶಿಷ್ಟ ಸಮುದಾಯಕ್ಕೆ ಸೇರಿದ ಸೌಮ್ಯಾರನ್ನು ಪ್ರೀತಿಸಿದ್ದ. …
Read More »UPSC, SSC ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ: ಕೇಂದ್ರ ಸರ್ಕಾರ
ನವದೆಹಲಿ: ‘ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ), ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ), ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ಮತ್ತು ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ಕಳೆದ ಎರಡು ವರ್ಷಗಳಲ್ಲಿ ನಡೆಸಿದ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಯಾವುದೇ ಪ್ರಕರಣ ವರದಿಯಾಗಿಲ್ಲ’ ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ. ಸಿಬ್ಬಂದಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜೀತೇಂದ್ರ ಸಿಂಗ್ ಅವರು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು …
Read More »ಹುಬ್ಬಳ್ಳಿ: ರೈತರಿಗೆ ನೆರವಾದ ‘ಕೃಷಿ ಸಿಂಚಾಯಿ’
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚಾಯಿ’ ಯೋಜನೆಗೆ ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 2023-24ರ ಸಾಲಿನಲ್ಲಿ 11,143 ಜನ ರೈತರು ಅರ್ಜಿ ಸಲ್ಲಿಸಿದ್ದು, ಇವರಲ್ಲಿ 8,009 ರೈತರಿಗೆ ಯೋಜನೆಯ ಲಾಭ ದಕ್ಕಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಇದು ಅತ್ಯಧಿಕವಾಗಿದೆ. ಉತ್ತಮ ಇಳುವರಿ ಪಡೆಯಲು ಹಾಗೂ ಬೆಳೆಗೆ ಆಗುವ ನೀರಿನ ತೊಂದರೆ ನೀಗಿಸಲು 2015ರಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚಾಯಿ’ಯೋಜನೆ ಜಾರಿಗೆ ತರಲಾಗಿದೆ. ಯೋಜನೆಯ ಲಾಭ ಪಡೆಯುತ್ತಿರುವ ರೈತರ ಸಂಖ್ಯೆ ವರ್ಷದಿಂದ …
Read More »ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮಹತ್ವದ ಸಭೆ
ಬೆಳಗಾವಿ : ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹದ ಹಿನ್ನೆಲೆಯಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಗುರುತಿಸಲಾಗಿರುವ 427 ಕಾಳಜಿ ಕೇಂದ್ರಗಳಿಗೆ ಎಲ್ಲ ತಹಶೀಲ್ದಾರರು ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಬೇಕು; ತುರ್ತು ಸಂದರ್ಭದಲ್ಲಿ ಗ್ರಾಮಸ್ಥರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಉಂಟಾಗಬಹುದಾದ ಅತಿವೃಷ್ಟಿ/ಪ್ರವಾಹ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜರುಗಿದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ …
Read More »ನೀರು ಬಂತು ಹೊರಗೆ ಬನ್ನಿ ಅಂದ್ರು ಮನೆ ಬಿಟ್ಟು ಬರದ ಜನ ; ಹೈರಾಣಾದ ಅಧಿಕಾರಿಗಳು
ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಕೃಷ್ಣಾ ನದಿಗೆಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಅಥಣಿ ತಾಲೂಕಿನ ಹುಲಗಬಾಳ ಗ್ರಾಮ ಮುಳುಗಡೆ ಭೀತಿಯಲ್ಲಿದೆ. ಅಥಣಿಯ ಹುಲಗಬಾಳ ಗ್ರಾಮದ ನಡುಗಡ್ಡೆಯಲ್ಲಿ ಸಿಲುಕಿದ 40ಕ್ಕೂ ಹೆಚ್ಚು ಕುಟುಂಬಗಳಿಗೆ ಹೊರಗೆ ಬಾ ಎಂದು ಅಧಿಕಾರಿಗಳು ಕರೆದರು ಜನ ಖ್ಯಾರೆ ಎನ್ನುತ್ತಿಲ್ಲ. ಮಾಂಗ್ ವಸತಿ ತೋಟದ ಜನ ಸಂಪರ್ಕ ರಸ್ತೆ ಕಳೆದುಕೊಂಡರು ಸುರಕ್ಷಿತ ಸ್ಥಳಕ್ಕೆ ಬರುತ್ತಿಲ್ಲ.ಮಕ್ಕಳು, ವಯೋವೃದ್ದರೂ ಜೊತೆಯಾಗಿ ದನಕರುಗಳು ಕೂಡ ನಡುಗಡ್ಡೆಯಲ್ಲಿ ಸಿಲುಕಿದ್ದು. …
Read More »ಕೃಷ್ಣಾ ನದಿ ನೀರು ; ಆತಂಕದಲ್ಲಿ ಜನರು
ಬೆಳಗಾವಿ : ನಿರಂತರ ಮಳೆಯಿಂದ ಕಂಗಾಲಾಗಿರುವ ಜನರಿಗೆ ಈಗ ಪ್ರವಾಹದ ಸಂಕಷ್ಟ ಎದುರಾಗಿದೆ. ಕೃಷ್ಣಾ ನದಿ ನೀರಿನ ಮಟ್ಟ ಕ್ಷಣ, ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಅನೇಗ ಗ್ರಾಮಗಳು ಮುಳುಗಡೆ ಭೀತಿ ಎದುರಿಸುತ್ತಿವೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ರಾಯಬಾಗ, ಅಥಣಿ, ಕುಡಚಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಅನೇಕ ಗ್ರಾಮಗಳು ಸಂಪರ್ಕ ಕಳೆದುಕೊಂಡಿದ್ದು ಜನ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ.ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದ ಬಣದ ರಸ್ತೆ ಸಂಪರ್ಕ …
Read More »