Breaking News

Daily Archives: ಜುಲೈ 27, 2024

ಮಲಪ್ರಭಾ ನದಿ ದಡದಲ್ಲಿ ಮೊಸಳೆಗಳು

ಬೈಲಹೊಂಗಲ: ಸಮೀಪದ ಮಾಟೊಳ್ಳಿ, ಮಲ್ಲೂರ, ಹೊಸೂರ ಗ್ರಾಮದ ಮಲಪ್ರಭಾ ನದಿ ದಡದಲ್ಲಿ ಬೃಹತ್ ಗಾತ್ರದ ಮೊಸಳೆಗಳು ಶನಿವಾರ ಪ್ರತ್ಯಕ್ಷವಾಗಿವೆ. ಖಾನಾಪೂರ ಭಾಗದಲ್ಲಿ ನಿರಂತರ ಸುರಿಯುತ್ತಿರುವ ಮಳೆಗೆ ಮಲಪ್ರಭಾ ನದಿಯ ಒಡಲು ದಿನೇ, ದಿನೇ ಹೆಚ್ಚುತ್ತಿದೆ. ಹರಿಯುವ ನದಿಯ ನೀರಿನಲ್ಲಿ ಸರಾಗ ಹರಿದು ಬರುತ್ತಿರುವ ಬೃಹತ್ ಗಾತ್ರದ ಮೊಸಳೆಗಳು ನದಿ ಪಾತ್ರದ ಗ್ರಾಮಸ್ಥರಲ್ಲಿ, ರೈತರಲ್ಲಿ ಆತಂಕ ಉಂಟು ಮಾಡಿವೆ. ನದಿಯ ದಂಡೆಯ ಮೇಲೆ ಆಗಾಗ ಕಾಣಿಸಿಕೊಳ್ಳುತ್ತಿರುವ ಬೃಹತ್ ಗಾತ್ರದ ಮೊಸಳೆಗಳನ್ನು ಯುವಕರು …

Read More »

ಬೆಳಗಾವಿ | ಮನೆಗಳು ಜಲಾವೃತ: ಕಾಳಜಿ ಕೇಂದಲ್ಲಿ ಆಶ್ರಯ

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಹಾಗೂ ಜಿಲ್ಲೆಯ ಜಲಾನಯನ ಪ್ರದೇಶಗಳಲ್ಲಿ ಶನಿವಾರ ಮಳೆ ಅಬ್ಬರ ತುಸು ತಗ್ಗಿದೆ. ಅಣೆಕಟ್ಟೆಗಳಿಂದ ನಿರಂತರ ನೀರು ಹರಿಸುತ್ತಿರುವ ಕಾರಣ, ಜಿಲ್ಲೆಯ 41 ಸೇತುವೆಗಳು ಇನ್ನೂ ನೀರಿನಲ್ಲಿ ಮುಳುಗಿವೆ. ಅಂದಾಜು 700ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಹುಕ್ಕೇರಿ ತಾಲ್ಲೂಕಿನ ಹೆಬ್ಬಾಳ ಬಳಿ ರಾಷ್ಟ್ರೀಯ ಹೆದ್ದಾರಿ-48ರ ಮೇಲೆ ಅಪಾರ ಪ್ರಮಾಣ ನೀರು ಹರಿಯಿತು. ಇದರಿಂದ ಕೆಲ ಸಮಯ ಸಂಚಾರ ಬಂದ್ ಆಯಿತು. ಹೆದ್ದಾರಿ ಮೇಲೆಯೇ ಮಣ್ಣು-ಕಲ್ಲು ಸುರಿದು ಅದರ ಮೇಲೆ …

Read More »

ತಹಶೀಲ್ದಾರ್ ಕಚೇರಿಯಲ್ಲಿ ಕೊಡೆ ಹಿಡಿದು ಕೆಲಸ

ಹಾವೇರಿ: ಇಲ್ಲಿಯ ತಹಶೀಲ್ದಾರ್‌ ಕಚೇರಿಯು ಹಲವು ವರ್ಷಗಳಿಂದ ಶಿಥಿಲ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಮಸ್ಯೆಯಾಗಿದೆ. ಕಂದಾಯ ದಾಖಲೆಗಳು ಒದ್ದೆಯಾಗುವ ಭೀತಿ ಒಂದೆಡೆಯಿದ್ದರೆ, ಮತ್ತೊಂದೆಡೆ ಬಕೆಟ್ ಇರಿಸಿ ನೀರು ಸಂಗ್ರಹಿಸಿ ಚೆಲ್ಲಬೇಕಿದೆ. ಕೊಡೆ ಹಿಡಿದು ಕೆಲಸ ಮಾಡಬೇಕಿದೆ. ‘ಪ್ರತಿ ವರ್ಷ ಮಳೆಗಾಲದಲ್ಲಿ ಕಟ್ಟಡ ಸೋರುತ್ತದೆ. ಕಚೇರಿ ಸ್ಥಳಾಂತರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಮಳೆಗಾಲದಲ್ಲಿ ಸೋರುವಕಡೆಯಲ್ಲ ಬಕೆಟ್‌ ಇಡುತ್ತೇವೆ. ಕಂದಾಯ ದಾಖಲೆಗಳು ಒದ್ದೆಯಾಗದಂತೆ ನೋಡಿಕೊಳ್ಳಲು ಪ್ರಯತ್ನಿಸುತ್ತೇವೆ’ ಎಂದು ನೌಕರರು …

Read More »

ಗದಗ: ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಜಿಲ್ಲಾ ಪ್ರವಾಸ

ಗದಗ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಭಾನುವಾರ ಮತ್ತು ಸೋಮವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಭಾನುವಾರ ಬೆಳಿಗ್ಗೆ 10ಕ್ಕೆ ನಗರದ ಡಾ. ಅಂಬೇಡ್ಕರ್ ಭವನದಲ್ಲಿ ನಡೆಯುವ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿಯಿಂದ ಏರ್ಪಡಿಸಿರುವ ಎರಡನೇ ಜಿಲ್ಲಾ ಮಟ್ಟದ ಸಮ್ಮೇಳನದಲ್ಲಿ ಪಾಲ್ಗೊಳ್ಳುವರು.   ಬೆಳಿಗ್ಗೆ 11ಕ್ಕೆ ಕೆ.ಎಚ್.ಪಾಟೀಲ ಸಭಾ ಭವನದಲ್ಲಿ ನಡೆಯುವ ಪಂಚಮಸಾಲಿ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ …

Read More »

ನವಿಲುತೀರ್ಥ ಭರ್ತಿಗೆ ಕಾಲ ಸನ್ನಿಹಿತ

ಸವದತ್ತಿ: ಪಶ್ಚಿಮ ಘಟ್ಟದಲ್ಲಿ ಸುರಿದ ಭಾರೀ ಮಳೆಯಿಂದ ಮಲಪ್ರಭಾ ನದಿಯ ಒಳಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ನವಿಲುತೀರ್ಥ (ಇಂದಿರಾ) ಅಣೆಕಟ್ಟು 10ನೇ ಬಾರಿ ಭರ್ತಿಯಾಗುವ ಕಾಲ ಸನ್ನಿಹಿತವಾಗಿದೆ. ಇದರಿಂದ ಆಣೆಕಟ್ಟೆ ಕೆಳಭಾಗದ ಮತ್ತು ನದಿ ಪಾತ್ರದ ಜನತೆಗೆ ಈಗಾಗಲೇ ಮುನ್ನೆಚ್ಚರಿಕೆ ನೀಡಲಾಗಿದೆ. ನವಿಲುತೀರ್ಥ ಅಣೆಕಟ್ಟೆ ಗರಿಷ್ಠ ಮಟ್ಟ 2079.50 ಅಡಿ. ಇದೀಗ 2069.60 ಅಡಿ ನೀರು ಸಂಗ್ರಹವಾಗಿದೆ. ಸದ್ಯ 21 ಸಾವಿರ ಕ್ಯುಸೆಕ್‌ಗೂ ಅಧಿಕ ಒಳಹರಿವಿದೆ. 10 ಸಾವಿರ ಕ್ಯುಸೆಕ್‌ನಷ್ಟು ನೀರನ್ನು …

Read More »

ಕಾಗವಾಡ | ಪ್ರವಾಹ: ಐದು ಪ್ರಮುಖ ರಸ್ತೆಗಳು ಮುಳುಗಡೆ

ಕಾಗವಾಡ: ತಾಲ್ಲೂಕಿನ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳವಾಗುತ್ತಿದ್ದು, ಪ್ರಮುಖ ಐದು ರಸ್ತೆಗಳ ಮೇಲೆ ನದಿಯ ನೀರು ಹರಿಯುತ್ತಿದ್ದರಿಂದ ಸಂಚಾರ ಬಂದ್‌ ಮಾಡಲಾಗಿದೆ. ತಾಲ್ಲೂಕಿನ ಅಥಣಿ-ಕಾತ್ರಾಳ, ಉಗಾರ ಬಿ.ಕೆ. ಕುಸುನಾಳ, ಉಗಾರ ಬಿ.ಕೆ- ಶಿರಗುಪ್ಪಿ,ಕಾತ್ರಾಳ-ಬಣಜವಾಡ, ಮೋಳವಾಡ-ಇಂಗಳಿ ರಸ್ತೆಗಳು ಜಲಾವೃತ ಆಗಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಕಾಗವಾಡ ಪಿಎಸ್‌ಐ ಎಂ.ಬಿ. ಬಿರಾದಾರ ಬ್ಯಾರಿಕೇಡ್ ಗಳನ್ನು ಅಳವಡಿಸಿ ಸಿಬ್ಬಂದಿ ನಿಯೋಜಿಸಿ ಸಂಚಾರ ಬಂದ್‌ ಮಾಡಿದ್ದಾರೆ. ತಾಲ್ಲೂಕಿನ ನದಿ ತೀರದ ಗ್ರಾಮಗಳಾದ ಕಾತ್ರಾಳ, ಐನಾಪುರ, …

Read More »

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ₹3,252 ಕೋಟಿ ನಿವ್ವಳ ಲಾಭ

ನವದೆಹಲಿ: 2024-25ನೇ ಆರ್ಥಿಕ ವರ್ಷದ ಜೂನ್‌ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ), ₹3,252 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಲಾಭದಲ್ಲಿ ಎರಡು ಪಟ್ಟು ಏರಿಕೆಯಾಗಿದೆ. 2023-24ನೇ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ₹1,255 ಕೋಟಿ ಲಾಭಗಳಿಸಲಾಗಿತ್ತು. ವಸೂಲಾಗದ ಸಾಲದ ‍ಪ್ರಮಾಣದಲ್ಲಿ ಇಳಿಕೆಯಾಗಿದೆ. ಜೊತೆಗೆ, ಬಡ್ಡಿ ವರಮಾನದಲ್ಲಿ ಏರಿಕೆಯಾಗಿದೆ. ಹಾಗಾಗಿ, ಈ ತ್ರೈಮಾಸಿಕದಲ್ಲಿ ಲಾಭ ಹೆಚ್ಚಳವಾಗಿದೆ ಎಂದು ಬ್ಯಾಂಕ್‌, ಶನಿವಾರ ತಿಳಿಸಿದೆ. …

Read More »

ಮಾರುತಿ ಸುಜುಕಿಗೆ 779 ಕೋಟಿ ಐ.ಟಿ ಇಲಾಖೆ ನೋಟಿಸ್‌

ನವದೆಹಲಿ: 2019-20ನೇ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿದಂತೆ ₹779 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿರುವ ದೇಶದ ಪ್ರಮುಖ ವಾಹನ ತಯಾರಿಕಾ ಕಂಪನಿ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್‌ಗೆ, ಆದಾಯ ತೆರಿಗೆ ಇಲಾಖೆಯು ಷೋಕಾಸ್‌ ನೋಟಿಸ್‌ ನೀಡಿದೆ. ‘ಈ ಮೊತ್ತದಲ್ಲಿ ಬಡ್ಡಿಯೂ ಸೇರಿದೆ. ತೆರಿಗೆ ಪಾವತಿ ಬಾಕಿ ಸಂಬಂಧ ಕಂಪನಿ ವಿರುದ್ಧ ದಂಡಾರ್ಹ ಪ್ರಕ್ರಿಯೆ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಇಲಾಖೆಯಿಂದ ಈ ನೋಟಿಸ್‌ ನೀಡಲಾಗಿದೆ’ ಎಂದು ಕಂಪನಿಯು ಷೇರುಪೇಟೆಗೆ ತಿಳಿಸಿದೆ.  

Read More »

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ. ಆರೋಪಿ ಕಾಲಿಗೆ ಗುಂಡೇಟು

ಹುಬ್ಬಳ್ಳಿ: ಇಲ್ಲಿನ ಕೇಶ್ವಾಪುರದ ರಮೇಶ ಭವನ ಬಳಿ ಚಿನ್ನಾಭರಣ ಮಳಿಗೆಯಲ್ಲಿ ಕಳ್ಳತನ ಮಾಡಿದ್ದ ಅಂತಾರಾಜ್ಯ ದರೋಡೆಕೋರನನ್ನು ಬಂಧಿಸಲು ಹೋದ ಪೊಲೀಸರ ಮೇಲೆ ದರೋಡೆಕೋರ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಗಾಮನಗಟ್ಟಿ ರಸ್ತೆ ತಾರಿಹಾಳ ಕ್ರಾಸ್ ಬಳಿ ನಡೆದಿದೆ. ಬಂಧಿತ ಆರೋಪಿಯನ್ನು ಮುಂಬೈ ಮೂಲದ ಫರ್ಹಾನ್ ಶೇಖ್ ಎನ್ನಲಾಗಿದೆ. ಕೇಶ್ವಾಪುರದ ರಮೇಶ ಭವನದ ಬಳಿಯಿರುವ ಭುವನೇಶ್ವರಿ ಜ್ಯುವೆಲ್ಲರಿ ಶಾಪ್‌ನಲ್ಲಿನ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ …

Read More »

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

ಹುಬ್ಬಳ್ಳಿ: ತೀವ್ರ ಜ್ವರದಿಂದ ಬಳಲುತ್ತಿದ್ದ ಕುಂದಗೋಳ ತಾಲೂಕ ಹಿರೇನರ್ತಿ ಗ್ರಾಮದ ಐದು ವರ್ಷದ ಬಾಲಕಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದಾಳೆ. ಬಾಲಕಿಯು ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಪೂರ್ಣಾ ಎಂಬ ಬಾಲಕಿಯನ್ನು ಅವಳ ಪಾಲಕರು ಮೊದಲು ಕುಂದಗೋಳದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಶಂಕಿತ …

Read More »