Daily Archives: ಜುಲೈ 27, 2024

ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಆ ಪಕ್ಷದ ಹಿರಿಯ ನಾಯಕರ ಅಸಮಾಧಾನದ ಸರಣಿ ಮುಂದುವರಿದಿದ್ದು ಇದೀಗ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಅರವಿಂದ ಲಿಂಬಾವಳಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್‌. ಅಶೋಕ್‌ ವಿರುದ್ಧ ಮತ್ತು ಪಕ್ಷದ ವಿಧಾನ ಮಂಡಲ ಕಾರ್ಯತಂತ್ರಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.   ರಾಜ್ಯದ ಹತ್ತು ಹಲವು ಸಮಸ್ಯೆಗಳ ಬಗ್ಗೆ ವಿಧಾನ …

Read More »

ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್‌ ಅವರನ್ನು ನೇಮಕ ಮಾಡಲು ರಾಜ್ಯ ಸರಕಾರ ನಿರ್ಧಾರ ತೆಗೆದುಕೊಂಡಿದೆ. ಸಂಪುಟ ಸಭೆಯಲ್ಲಿ ನಿರ್ಣಯ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಇದುವರೆಗೆ ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿದ್ದ ಶಾಲಿನಿ ರಜನೀಶ್‌ ಅವರ ಪತಿ ರಜನೀಶ್‌ ಗೋಯಲ್‌ ಜುಲೈ 31ರಂದು ಸೇವಾ ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಂಪುಟ ಸಭೆಯಲ್ಲಿ ರಜನೀಶ್‌ ಗೋಯಲ್‌ …

Read More »

10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ

ಹುಬ್ಬಳ್ಳಿ/ಬೆಂಗಳೂರು: ನಿರಂತರ ಮಳೆ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಸೇರಿ ಕಾವೇರಿ ಕೊಳ್ಳದ 11 ಜಿಲ್ಲೆಗಳಲ್ಲಿ ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಹಲವು ಸೇತುವೆಗಳು ಮುಳುಗಡೆಯಾಗಿದೆ. ನೂರಾರು ಗ್ರಾಮಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಆಯಾ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ನೂರಾರು ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಕೊಪ್ಪಳ, ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಜಲಾಶಯಗಳ ಮೂಲಕ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆಗೊಳಿಸುತ್ತಿರುವುದರಿಂದ …

Read More »

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ   ಲಾರಿ ಚಾಲಕ ಅರ್ಜುನ ಸೇರಿದಂತೆ ನಾಪತ್ತೆಯಾದವರ ಪತ್ತೆಗೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ ಕಾರವಾರ/ಅಂಕೋಲಾ: ಜುಲೈ 16 ರಂದು ಉತ್ತರಕನ್ನಡದ ಶಿರೂರಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಲಾರಿ ಸಮೇತ ಚಾಲಕ ಅರ್ಜುನ್ ಸೇರಿದಂತೆ ಮೂವರು ನಾಪತ್ತೆಯಾಗಿ ಇಂದಿಗೆ ಹನ್ನೊಂದು ದಿನಗಳು ಕಳೆದಿದ್ದು ಇನ್ನೂ ಹುಡುಕಾಟ ಮುಂದುವರೆದಿದೆ, ಅದರಂತೆ ಇಂದು ಮಲ್ಪೆ ಈಶ್ವರ್ ತಂಡ ಶಿರೂರಿಗೆ ಬಂದಿದ್ದು ನಾಪತ್ತೆಯಾದ ಕಾರ್ಯಾಚರಣೆ ನಡೆಸಲಿದ್ದಾರೆ …

Read More »

ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

ರಬಕವಿ-ಬನಹಟ್ಟಿ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅಲ್ಲಿನ ವಿವಿಧ ಜಲಾಶಯಗಳಿಂದ ಭಾರಿ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಸಮೀಪದ ಕೃಷ್ಣಾ ನದಿಯಲ್ಲಿ ದಿನದಿಂದ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ಶನಿವಾರ ಹಿಪ್ಪರಗಿ ಜಲಾಶಯಕ್ಕೆ 2,28,056 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುರಿಂದ ಅವಳಿ ರಬಕವಿ-ಬನಹಟ್ಟಿ ನಗರಗಳಿಗೆ ನೀರು ಪೂರೈಸುವ ಜಾಕವೆಲ್‌ಗಳಿಗೆ ಹೋಗುವ ಮಾರ್ಗ ಬಂದಾಗಿದೆ. ಸದ್ಯ ಜಾಕವೆಲ್‌ಗಳು ಸಂಪೂರ್ಣವಾಗಿ ನಡುಗಡ್ಡೆಗಳಾಗಿವೆ. ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ …

Read More »

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ

ಶಿವಮೊಗ್ಗ: ಗಾಜನೂರಿನ ತು೦ಗಾ ಜಲಾಶಯಕ್ಕೆ 70 ಸಾವಿರ ಕ್ಯೂಸೆಕ್ ಗಿಂತಲೂ ಅಧಿಕ ನೀರು ಬರುತ್ತಿದ್ದು ಅಷ್ಟೇ ಪ್ರಮಾಣದ ನೀರು ನದಿಗೆ ಬಿಡಲಾಗುತ್ತಿರುವುದರಿಂದ ಈ ಭಾಗದ ರಸ್ತೆಗಳು ಜಲಾವೃತವಾಗುತ್ತದೆ. ಇದರಿಂದ ಗದ್ದೆ ತೋಟಗಳು ಮುಳುಗಿ ತುಂಬಾ ನಷ್ಠವಾಗುತ್ತಿದೆ. ಪ್ರತಿ ವರ್ಷದ ಮಳೆಗಾಲದಲ್ಲಿ ಈ ಪರಿಸ್ಥಿತಿ ಉಂಟಾಗುತ್ತಿದ್ದು ಇದಕ್ಕೊಂದು ಶಾಶ್ವತ ಪರಿಹಾರವನ್ನು ಸರ್ಕಾರ ಕೈಗೊಳ್ಳಬೇಕಿದೆ ಎಂಬುದು ಈ ಭಾಗದ ರೈತರ, ಗ್ರಾಮಸ್ಥರ ಮತ್ತು ಭಕ್ತರ ಆಗ್ರಹವಾಗಿದೆ. ಭದ್ರಾ ಜಲಾಶಯದ ಗರಿಷ್ಠ ಮಟ್ಟ 186 ಅಡಿಗಳಿದ್ದು …

Read More »

ಸಂತೋಷ್ ಜಾರಕಿಹೊಳಿ ಅವರ“ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಹನುಮಸಾಗರ ಗ್ರಾಮದ ಶ್ರೀ ಹನುಮಂತ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ನಿಂಗಪ್ಪ ಮ ಹಳ್ಳೂರ,ವಿಠ್ಠಲ ಯ ಹೊನ್ನಿಕೊಳ್ಳ …

Read More »