Breaking News

Daily Archives: ಜುಲೈ 28, 2024

ನಾನು ‘MA, PHD’ ಮಾಡಿದ್ದೇನೆ ಆದರೆ ನನ್ನ ‘ಜಾತಿ’ ನನ್ನ ಬಿಟ್ಟು ಹೋಗಲ್ಲ : ಗೃಹ ಸಚಿವ

ದಾವಣಗೆರೆ : ಜಾತಿ ಪದ್ಧತಿ ಹೋಗಲ್ಲ ಎಂಬುವುದು ನನ್ನ ಅಭಿಪ್ರಾಯ. ನಾವು ಬದಲಾಗದಿದ್ದರೆ ಮುಂದೆಯೂ ಗ್ರಾಮಗಳ ಹೊರಗೆ ಇರಬೇಕಾಗುತ್ತದೆ ಎಂದು ದಾವಣಗೆರೆಯಲ್ಲಿ ಗೃಹ ಇಲಾಖೆಯ ಸಚಿವ ಜಿ. ಪರಮೇಶ್ವರ್ ಬೇಸರ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ಛಲವಾದಿ ಮಹಾಸಭೆಯ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಭಾಷಣ ಮಾಡಿ, ನಾನು ಎಂಎ.ಪಿಎಚ್ ಡಿ ಮಾಡಿದ್ದೇನೆ. ಆದರೆ ನನ್ನ ಜಾತಿ ನನ್ನ ಬಿಟ್ಟು ಹೋಗುವುದಿಲ್ಲ. ಜಿ ಪರಮೇಶ್ವರ್ ಬುದ್ಧಿವಂತ ಆದರೆ ಪರಿಶಿಷ್ಟ ಜಾತಿಗೆ ಸೇರಿದ್ದಾನೆ ಇಲ್ಲದಿದ್ದರೆ …

Read More »

ಡಿ.ಕೆ.ಶಿವಕುಮಾರ್‌ ಅವರಿಗೆ ‘ಸಿ.ಡಿ ಶಿವು’ ಎಂದು ಹೊಸದಾಗಿ ನಾಮಕರಣ ಮಾಡಿದ್ದೇವೆ:.ರಮೇಶ ಜಾರಕಿಹೊಳಿ

ಗೋಕಾಕ(ಬೆಳಗಾವಿ ಜಿಲ್ಲೆ): ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಭಾಗಿಯಾದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಿಂದ ಬಳ್ಳಾರಿಯವರೆಗೆ ಪಾದಯಾತ್ರೆ ಮಾಡುತ್ತೇವೆ. ಇದಕ್ಕಾಗಿ ನಾನು, ಶಾಸಕ ಬಸನಗೌಡ ಪಾಟೀಲ ಯತ್ನಾಳ ರೂಪುರೇಷೆ ಸಿದ್ಧಪಡಿಸುತ್ತೇವೆ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.   ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಅಕ್ರಮವಾಗಿ ಬೇನಾಮಿ ಖಾತೆಗಳಿಗೆ ವರ್ಗಾಯಿಸಿರುವ ಈ ಪ್ರಕರಣ ದೇಶದಲ್ಲೇ ದೊಡ್ಡದು. ಇದರ ವಿರುದ್ಧ ಮಾಡಲಿರುವ ಪಾದಯಾತ್ರೆಯಲ್ಲಿ ನಮ್ಮ …

Read More »

ಬೆಳಗಾವಿಯಲ್ಲಿ ಪ್ರವಾಹ: ಹಲವು ಗ್ರಾಮಗಳು ಜಲಾವೃತ,

ಬೆಳಗಾವಿ, ಜುಲೈ 28: ಜಿಲ್ಲೆಯಲ್ಲಿ 7 ನದಿಗಳಿಂದ ಪ್ರವಾಹ(flood)ಪರಿಸ್ಥಿತಿ ನಿರ್ಮಾಣವಾಗಿದೆ. 40 ಗ್ರಾಮಗಳಲ್ಲಿ ನದಿಗಳ ಪ್ರವಾಹದಿಂದ ಜನರು ಅತಂತ್ರವಾಗಿದ್ದಾರೆ. ಘಟಪ್ರಭಾ ನದಿ (Ghataprabha River) ಸೃಷ್ಟಿಸಿರುವ ಅವಾಂತರಕ್ಕೆ ಈಗ ಜನ ತತ್ತರಿಸಿ ಹೋಗಿದ್ದಾರೆ. ತನ್ನ ಪಾತ್ರವನ್ನ ಬಿಟ್ಟು ಹರಿಯುತ್ತಿರುವ ನದಿ ಊರಿಗೆ ಊರನ್ನೇ ತನ್ನ ಒಡಲಿಗೆ ಹಾಕಿಕೊಂಡಿದೆ. ಸೇತುವೆ, ದೇವಸ್ಥಾನ, ಬ್ಯಾಂಕ್ ಮತ್ತು ಮನೆಗಳು ಹೀಗೆ ಎಲ್ಲವೂ ಜಲಾವೃತವಾಗಿವೆ. ಪ್ರವಾಹದಿಂದ ಬಿದಿಗೆ ಬಿದ್ದ 1 ಸಾವಿರಕ್ಕೂ ಹೆಚ್ಚು ಕುಟುಂಬಗಳು ಗೋಕಾಕ್, ನಿಪ್ಪಾಣಿ, ಅಥಣಿ, ಮೂಡಲಗಿ, …

Read More »

ಮುಡಾ ಹಗರಣ ಸ್ವಪಕ್ಷದವರ ವಿರುದ್ಧವೇ ಹೊಸ ಬಾಂಬ್ ಸಿಡಿಸಿದ ಯತ್ನಾಳ್

ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡಾ ಪಾಟೀಲ ಯತ್ನಾಳ್​, ರಾಜೀವ್ ಯಡ್ಡಿಯೂರಪ್ಪ ಶಿಷ್ಯನೋ, ವಿಜಯೇಂದ್ರ ಶಿಷ್ಯನೋ ಯಾರೆಂದು ಹೇಳಬೇಕು. ಮುಡಾ ಹಗರಣ ರಾಜೀವ್ ಬಿಜೆಪಿಯಲ್ಲೇ ಇದ್ದಾಗ ನಡೆದ ವಿಚಾರ. ಈಗ ಅವನು ಕಾಂಗ್ರೆಸ್ ಸೇರಿದ್ದಾನೆ ಎಂದು ಸ್ವಪಕ್ಷದವರ ವಿರುದ್ಧವೇ ಹೊಸ ಬಾಂಬ್ ಸಿಡಿಸಿದಿದ್ದಾರೆ. ವಿಜಯಪುರ, ಜುಲೈ 28: ಮುಡಾ ಮಾಜಿ ಅಧ್ಯಕ್ಷ ಹೆಚ್​.ವಿ ರಾಜೀವ್(HV Rajeeva)ಬಿಜೆಪಿಯಲ್ಲೆ ಇದ್ದಾಗ ಆದ ಹಗರಣ ನಡೆದಿದೆ. ಈಗ ಅವರು ಕಾಂಗ್ರೆಸ್ ಸೇರಿದ್ದಾನೆ. ಕಾಂಗ್ರೆಸ್​ಗೆ ಯಾಕೆ ಸೇರಿದ್ದಾರೆ …

Read More »

ಭಾರತಕ್ಕೆ​ ಒಲಿಯಿತು ಮೊದಲ ಕಂಚು

ಪ್ಯಾರಿಸ್​: ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಪಿಸ್ತೂಲ್​ ದೋಷದಿಂದ ಹಿನ್ನಡೆ ಅನುಭವಿಸಿದ್ದ ಶೂಟರ್​ ಮನು ಭಾಕರ್(Manu Bhaker)​ ಇದೀಗ ಪ್ಯಾರಿಸ್(Paris Olympics Shooting)​ ಒಲಿಂಪಿಕ್ಸ್​ನಲ್ಲಿ ಐತಿಹಾಸಿಕ ಪದಕವೊಂದನ್ನು ಗೆದ್ದು ಸಂಭ್ರಮಿಸಿದ್ದಾರೆ. 10 ಮೀಟರ್ ಮಹಿಳಾ ಏರ್ ಪಿಸ್ತೂಲ್ ಫೈನಲ್​ ಪಂದ್ಯದಲ್ಲಿ 221.7 ಅಂಕ ಗಳಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಒಲಿದ ಮೊದಲ ಪದಕ. ಕೊರಿಯಾದ ಶೂಟರ್​ಗಳಾದ ಓಹ್ ಯೇ ಜಿನ್(243.2), ಕಿಮ್​ ಯೆಜಿ(241.3) ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕ …

Read More »

ಮಹಿಳೆಯರಿಗೆ ಸಿಗಲಿದೆ 20ಲಕ್ಷ ರೂ. ಸಾಲ ಸೌಲಭ್ಯ!

ನವದೆಹಲಿ : ಜುಲೈ 23, 2024ರಂದು ಕೇಂದ್ರ ಬಜೆಟ್ 2024 ಮಂಡಿಸಲಾಗಿದೆ. ಇದರಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸರ್ಕಾರಿ ಯೋಜನೆಗಳಲ್ಲಿ ಬದಲಾವಣೆಗಳಿಗೆ ಸಂಬಂಧಿಸಿದ ದೊಡ್ಡ ಘೋಷಣೆಗಳನ್ನು ಮಾಡಿದರು. ಈ ಪ್ರಕಟಣೆಗಳಲ್ಲಿ ಒಂದು ಪ್ರಧಾನ ಮಂತ್ರಿ ಮುದ್ರಾ ಯೋಜನೆಗೆ ಸಂಬಂಧಿಸಿದೆ. ಈ ಯೋಜನೆಯಡಿ ಉದ್ಯಮಿಗಳಿಗೆ ನೀಡಲಾಗುವ ಸಾಲವನ್ನ ಈಗ 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುತ್ತಿದೆ ಎಂದು ಹಣಕಾಸು ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು. ಆದಾಗ್ಯೂ, …

Read More »

ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ!

ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ! ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ ಕಂಡಿದೆ. ಹತ್ತು ದಿನದಲ್ಲಿ ಬರೋಬ್ಬರಿ 560 ರೂನಷ್ಟು ಬೆಲೆ ಇಳಿಕೆ ಆಗಿರುವುದು ಗಮನಾರ್ಹ. ಬಜೆಟ್ ಪೂರ್ವದಿಂದಲೇ ಚಿನ್ನದ ಬೆಲೆ ಇಳಿಯಲು ಆರಂಭಿಸಿತಾದರೂ ಬಜೆಟ್​ನಲ್ಲಿ ಚಿನ್ನ, ಬೆಳ್ಳಿ ಮೇಲಿನ ಆಮದು ಸುಂಕ ಇಳಿಸಿದ ಬಳಿಕ ತೀವ್ರ ಮಟ್ಟದಲ್ಲಿ ಭಾರತದಲ್ಲಿ ಬೆಲೆ ಕುಸಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ …

Read More »

ಅಂದು ಕಾನ್‌ಸ್ಟೆಬಲ್, ಇಂದು ರಾಣೆಬೆನ್ನೂರು ಪೌರಾಯುಕ್ತ

ಹಾವೇರಿ: ರಾಣೆಬೆನ್ನೂರು ನಗರಸಭೆಯ ನೂತನ ಪೌರಾಯುಕ್ತರನ್ನಾಗಿ ಫಕ್ಕೀರಪ್ಪ ಇ. ಇಂಗಳಗಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅಧಿಕಾರ ಸ್ವೀಕರಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿ ಕೆಲಸ ಮಾಡುತ್ತಿದ್ದ ಇಂಗಳಗಿ ಅವರನ್ನು ರಾಣೆಬೆನ್ನೂರು ನಗರಸಭೆಯ ನೂತನ ಪೌರಾಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿತ್ತು.   ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ತರ್ಲಘಟ್ಟ ಗ್ರಾಮದ ಫಕ್ಕೀರಪ್ಪ, ಸ್ವಂತ ಊರಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪಡೆದಿದ್ದಾರೆ. ನಂತರ, ಕುಂದಗೋಳ …

Read More »

ರಾಣೆಬೆನ್ನೂರು | ಯೂರಿಯಾ ಗೊಬ್ಬರ ಹೆಚ್ಚಿನ ಬೆಲೆಗೆ ಮಾರಾಟ; ರೈತರ ಆಕ್ರೋಶ

ರಾಣೆಬೆನ್ನೂರು: ‘ಸತತವಾಗಿ ಸುರಿಯುತ್ತಿರುವ ಮಳೆಯಿಂದ ಮುಂಗಾರು ಹಂಗಾಮಿಗೆ ಬಿತ್ತನೆ ಮಾಡಿದ ಬೆಳೆಗಳಿಗೆ ಮೇಲು ಗೊಬ್ಬರವಾಗಿ ನೀಡಲು ಯೂರಿಯಾ ಗೊಬ್ಬರ ಅತ್ಯವಶ್ಯ. ಸರ್ಕಾರ ಯೂರಿಯಾ ಗೊಬ್ಬರ ಪೂರೈಸಲು ಮುಂಜಾಗ್ರತಾ ಕ್ರಮ ಕೈಗೊಂಡರೂ ನಗರದ ಆಗ್ರೋ ಕೇಂದ್ರಗಳಲ್ಲಿ ಸರ್ಕಾರ ನಿಗದಿಪಡಿಸಿದ ದರ ₹266 ಇದ್ದರೂ, ವ್ಯಾಪಾರಸ್ಥರು ₹ 300 ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ದೂರು ನೀಡಿದರೂ ಕೃಷಿ ಅಧಿಕಾರಿಗಳು ಕ್ರಮಕೈಗೊಂಡಿಲ್ಲ’ ಎಂದು ತಾಲ್ಲೂಕಿನ ಹುಲ್ಲತ್ತಿ ಗ್ರಾಮದ ಜಗದೀಶ ಕೆರೂಡಿ ಆರೋಪಿಸಿದ್ದಾರೆ. …

Read More »

ಮಹದಾಯಿ ಯೋಜನೆ ಜಾರಿಗೆ ಮನವಿ

ಹುಬ್ಬಳ್ಳಿ: ‘ಕೇಂದ್ರ ಸರ್ಕಾರವು ಮಹದಾಯಿ ಯೋಜನೆಯನ್ನು ಶೀಘ್ರ ಜಾರಿಗೊಳಿಸಬೇಕು ಹಾಗೂ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕು’ ಎಂದು ರೈತ ಹೋರಾಟಗಾರ ವೀರೇಶ ಸೊಬರದಮಠ ಒತ್ತಾಯಿಸಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹದಾಯಿ ಮತ್ತು ಕಳಸಾ ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರಧಾನಮಂತ್ರಿ, ರಾಷ್ಟ್ರಪತಿ, ವಿರೋಧ ಪಕ್ಷದ ನಾಯಕರ ಕಚೇರಿಗೆ, ರಾಜ್ಯದ 28 ಸಂಸದರಿಗೆ ಹಾಗೂ ದೆಹಲಿಯಲ್ಲಿ ಈಚೆಗೆ ಮನವಿ ಸಲ್ಲಿಸಲಾಗಿದೆ. ಈ ಯೋಜನೆ ಜಾರಿಗೆ ಕೇಂದ್ರ …

Read More »