ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು? ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?: * ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಅರ್ಹರು. * ಮೊದಲನೆಯ ಪ್ರಯತ್ನದಲ್ಲಿಯೆ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ …
Read More »Daily Archives: ಜುಲೈ 29, 2024
ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಸೇರಿ ಐವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ CBI
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ತನಿಖೆಯನ್ನು ಪೂರ್ಣಗೊಳಿಸಿರುವ ಸಿಬಿಐ ಅಧಿಕಾರಿಗಳು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಎಎಪಿ ಶಾಸಕ ದುರ್ಗೇಶ್ ಪಾಠಕ್ ಸೇರಿದಂತೆ ಐವರ ವಿರುದ್ಧ ಅಂತಿಮ ದೋಷಾರೋಪ ಪಟ್ಟಿಯನ್ನು ಸೋಮವಾರ ಸಲ್ಲಿಸಿದ್ದಾರೆ. ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ತೆಲಂಗಾಣದ ವಿಧಾನ ಪರಿಷತ್ ಸದಸ್ಯೆ ಕೆ. ಕವಿತಾ ಹಾಗೂ 15 ಮಂದಿ ಇತರರ ವಿರುದ್ಧ ಸಿಬಿಐ ಅಧಿಕಾರಿಗಳು ಈ ಹಿಂದೆ ಒಂದು ಮುಖ್ಯ ದೋಷಾರೋಪ …
Read More »ಬೆಳಗಾವಿ: 41 ಸೇತುವೆಗಳು ಮುಳುಗಡೆ
ಬೆಳಗಾವಿ/ರಾಯಚೂರು: ರಾಜ್ಯದ ವಿವಿಧೆಡೆ ಭಾನುವಾರ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಮಹಾರಾಷ್ಟ್ರದ ಪಶ್ಚಿಮಘಟ್ಟ ಹಾಗೂ ಜಲಾನಯನ ಪ್ರದೇಶಗಳಲ್ಲಿ ಮಳೆ ಮುಂದುವರಿದಿದ್ದು, ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಿದೆ. ಬೆಳಗಾವಿ ಜಿಲ್ಲೆಯಲ್ಲಿ 41 ಸೇತುವೆಗಳು ಮುಳುಗಡೆಯಾಗಿವೆ. ರಾಯಚೂರು ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳು ತುಂಬಿ ಹರಿಯುತ್ತಿವೆ. ಕೃಷ್ಣಾ ಪ್ರವಾಹದಲ್ಲಿ ಎರಡು ಸೇತುವೆಗಳು, ಒಂದು ಬ್ಯಾರೇಜ್ ಮುಳುಗಡೆಯಾಗಿದೆ. ಎಲೆಬಿಚ್ಚಾಲಿ ಗ್ರಾಮದಲ್ಲಿರುವ ರಾಯರ ಏಕಶಿಲಾ ವೃಂದಾವನ ಹಾಗೂ ಜಪದ ಕಟ್ಟೆ ತುಂಗಭದ್ರಾ ನದಿ ನೀರಿನಿಂದ ಜಲಾವೃತವಾಗಿವೆ. …
Read More »ಮಹಿಳೆ ಮೇಲೆ ಪಿಎಸ್‌ಐ ಅನಿತಾ ರಾಠೋಡರಿಂದ ಹಲ್ಲೆ- ಆರೋಪ
ಚಿಕ್ಕೋಡಿ(ಬೆಳಗಾವಿ ಜಿಲ್ಲೆ): ‘ವಿಚಾರಣೆ ನೆಪದಲ್ಲಿ ಪಿಎಸ್‌ಐ ಅನಿತಾ ರಾಠೋಡ ಅವರು ನನ್ನ ಹೊಟ್ಟೆಗೆ ಒದ್ದು ಗಾಯಗೊಳಿಸಿದ್ದಾರೆ’ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಇದನ್ನು ಅಲ್ಲಗಳೆದಿರುವ ಎಸ್ಪಿ ಡಾ.ಭೀಮಾಶಂಕರ ಗುಳೇದ, ‘ಮಹಿಳೆಯ ಕೆನ್ನೆಗೆ ಹೊಡೆದಿದ್ದು ದೃಢಪಟ್ಟಿದೆ. ಹೊಟ್ಟೆಗೆ ಒದ್ದಿದ್ದು ವೈದ್ಯಕೀಯ ಪರೀಕ್ಷೆಯಲ್ಲಿ ಗೊತ್ತಾಗಿಲ್ಲ’ ಎಂದು ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಸಂತ್ರಸ್ತೆ, ತಾಲ್ಲೂಕಿನ ಖಡಕಲಾಟ ಗ್ರಾಮದ ಪೂನಂ ಮಾಯಣ್ಣವರ, ‘ನನ್ನನ್ನು ಜುಲೈ 27ರಂದು ಠಾಣೆಗೆ ಕರೆಯಿಸಿ, ಹಲ್ಲೆ ಮಾಡಿದ್ದಾರೆ. ನಿಪ್ಪಾಣಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ …
Read More »ನಡುಗಡ್ಡೆಯಾದ ಢವಳೇಶ್ವರ, ಹುಣಶ್ಯಾಳ, ಮಸಗುಪ್ಪಿ
ಮೂಡಲಗಿ: ತಾಲ್ಲೂಕಿನ ಕೊನೆಯ ಗ್ರಾಮಗಳಾಗಿರುವ ಹುಣಶ್ಯಾಳ ಮತ್ತು ಢವಳೇಶ್ವರ ಗ್ರಾಮಗಳು ಘಟಪ್ರಭಾ ನದಿಯ ಪ್ರವಾಹಕ್ಕೆ ಭಾನುವಾರ ಬೆಳಿಗ್ಗೆಯಿಂದ ಅಕ್ಷರಶಃ ನಡುಗಡ್ಡೆಗಳಾಗಿವೆ. ಹುಣಶ್ಯಾಳ ಪಿವೈ ಗ್ರಾಮದ ಹಣಮಂತ ದೇವರ ದೇವಾಲಯವು ಜಲಾವೃತಗೊಂಡಿದೆ. ಶನಿವಾರ ಸಂಜೆಯಿಂದ ನದಿಯ ನೀರಿನ ಪ್ರಮಾಣ ಏರುತ್ತಿರುವುದರಿಂದ ಇಡೀ ಊರಿನ ಜನ, ಜಾನುವಾರು, ಸಾಮಾನು ಸರಂಜುಮಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ಸಾಗುತ್ತಿದ್ದಾರೆ. ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಕಾಳಜಿ ಕೇಂದ್ರ ತೆರೆದಿದ್ದು 200ಕ್ಕೂ ಹೆಚ್ಚು ಸಂತ್ರಸ್ತರು ಆಶ್ರಯ ಪಡೆದಿದ್ದಾರೆ. ಶಾಸಕ …
Read More »ಮನೆಗಳಿಗೆ ನುಗ್ಗಿದ ಮಳೆ ನೀರು
ಯಮಕನಮರಡಿ: ಹುಕ್ಕೇರಿ ತಾಲ್ಲೂಕಿನ ದಡ್ಡಿ ಗ್ರಾಮದ ಹೊರವಲಯದಲ್ಲಿ ಬರುವ ಹೊಸ ರಸ್ತೆಯ ಬಳಿ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಕಳೆದ ವರ್ಷ ಲೋಕೋಪಯೋಗಿ ಇಲಾಖೆಯಿಂದ ₹ 20 ಲಕ್ಷ ವೆಚ್ಚದಲ್ಲಿ ಆಗಿರುವ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿ ಅವೈಜ್ಞಾನಿಕವಾಗಿದೆ. ಹೀಗಾಗಿ ಈ ರಸ್ತೆಯ ಮೇಲೆ ಹರಿಯುವ ಮಳೆ ನೀರು ಗಟಾರಕ್ಕೆ ಹೋಗದೆ ಮನೆಗೆ ನುಗ್ಗುತ್ತಿದೆ ಎಂದು ನಿವಾಸಿಗಳು ದೂರಿದ್ದಾರೆ. ‘ಈ ಬಗ್ಗೆ ಇಲ್ಲಿಯ ಮುಸ್ಲಿಂ ಸಮುದಾಯದವರು …
Read More »ಮಹಾದಾಯಿಗೆ ಶೀಘ್ರದಲ್ಲಿ ತಾರ್ಕಿಕ ಅಂತ್ಯ: ಶೆಟ್ಟರ
ಸವದತ್ತಿ: ಮಹಾದಾಯಿ, ಕಳಸಾ-ಬಂಡೂರಿ ಸೇರಿ 13 ಟಿಎಂಸಿ ಅಡಿ ನೀರು ಮಲಪ್ರಭೆಗೆ ಹರಿಸಬೇಕಿದೆ. ಗೋವಾ ಸರ್ಕಾರದ ಉದ್ಧಟತನದಿಂದ ವಿಳಂಬವಾಗುತ್ತಿದೆ. ಅರಣ್ಯ, ನೀರಾವರಿ ಇಲಾಖೆಗಳಿಂದ ಕ್ಲಿಯರನ್ಸ್ ಬಂದಿದ್ದು, ಕೆಲ ದಿನಗಳಲ್ಲಿ ಇದಕ್ಕೊಂದು ತಾರ್ಕಿಕ ಅಂತ್ಯ ನೀಡಲಾಗುವುದು ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು. ಇಲ್ಲಿನ ಕಲ್ಮಠದ ಆರವಣದಲ್ಲಿ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘ ತಾಲ್ಲೂಕು ಘಟಕದಿಂದ ಭಾನುವಾರ ಜರುಗಿದ ಪ್ರತಿಭಾ ಪುರಸ್ಕಾರ ಮತ್ತು ಗೌರವ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. …
Read More »ಮಳೆಗಾಲದಲ್ಲಿ ಸಂಪರ್ಕ ಕಡಿದುಕೊಳ್ಳುವ ಹಳ್ಳಿಗಳು
ಖಾನಾಪುರ: 93 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶದಿಂದ ಸುತ್ತುವರಿದ ಖಾನಾಪುರ ತಾಲ್ಲೂಕಿನ 100ಕ್ಕೂ ಹೆಚ್ಚು ಗ್ರಾಮಗಳು ದಟ್ಟ ಅರಣ್ಯ ಪ್ರದೇಶದಲ್ಲಿವೆ. ಪ್ರತಿ ಬಾರಿ ಮಳೆಗಾಲದಲ್ಲಿ ಈ ಗ್ರಾಮಗಳು ಮುಖ್ಯ ವಾಹಿನಿಯಿಂದ ಸಂಪರ್ಕ ಕಡಿತಗೊಳ್ಳುತ್ತವೆ. ಮಳೆಗಾಲ ಮುಗಿಯುವವರೆಗೂ ಭಯದಲ್ಲೇ ಬದುಕಬೇಕಾದ ಅನಿವಾರ್ಯವಿದೆ. ಲೋಂಡಾ, ನಾಗರಗಾಳಿ, ಕಣಕುಂಬಿ ಮತ್ತು ಭೀಮಗಡ ವನ್ಯಧಾಮ ವ್ಯಾಪ್ತಿಯಲ್ಲಿರುವ ಈ ಗ್ರಾಮಗಳ ವ್ಯಾಪ್ತಿಯಲ್ಲಿ ಹೊಲ- ಗದ್ದೆಗಳು ಮತ್ತು ಜನವಸತಿಗಿಂತ ಅರಣ್ಯ ಪ್ರದೇಶವೇ ಅಧಿಕ ಪ್ರಮಾಣದಲ್ಲಿದೆ. ವನ್ಯಜೀವಿಗಳ ಮೇಲೆ …
Read More »ಪೋಷಕರ ಗಮನಕ್ಕೆ : ಇನ್ಮುಂದೆ ಮಕ್ಕಳಿಗೆ ʻಆಧಾರ್ ಕಾರ್ಡ್ʼ ಮಾಡಿಸಲು ಹೊಸ ನಿಯಮ ಜಾರಿ
ನವದೆಹಲಿ : ನೀವು ಆಧಾರ್ ಕಾರ್ಡ್ ಗೆ ಸಂಬಂಧಿಸಿದ ಕೆಲವು ಪ್ರಮುಖ ನಿಯಮಗಳು ಮತ್ತು ಸೂಚನೆಗಳನ್ನು ತಿಳಿದುಕೊಳ್ಳಬೇಕು, ನಿಮ್ಮ ಮನೆಯಲ್ಲಿ ಮಕ್ಕಳಿದ್ದರೆ, ಈಗ ನೀವು ಅವರಿಗೂ ಆಧಾರ್ ಕಾರ್ಡ್ ಪಡೆಯುವುದು ಕಡ್ಡಾಯವಾಗಿದೆ. ಇಂದಿನ ಕಾಲದಲ್ಲಿ, ಶಾಲೆಗಳಿರಲಿ ಅಥವಾ ಶಿಕ್ಷಣ ಸಂಸ್ಥೆಗೆ ದಾಖಲಾಗಿರಲಿ ಅಥವಾ ಸರ್ಕಾರಿ ಯೋಜನೆಗಳ ಲಾಭವನ್ನು ಪಡೆಯಲಿ ಅಥವಾ ಉಳಿತಾಯ ಖಾತೆಯನ್ನು ತೆರೆಯಲಿ ಅಥವಾ ಮಗುವಿನ ಗುರುತಿನ ಚೀಟಿಯನ್ನು ತಯಾರಿಸಲಿ, ಆಧಾರ್ ಕಾರ್ಡ್ ಮಾತ್ರ ಹೆಚ್ಚು ಬಳಸಲಾಗುವ ಗುರುತಿನ …
Read More »ಯಡೂರ ವೀರಭದ್ರೇಶ್ವರ ದೇವಸ್ಥಾನ ಜಲಾವೃತ
ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆ ಬೀಳುತ್ತಿರುವ ಪರಿಣಾಮವಾಗಿ ಕೃಷ್ಣಾ ನದಿಗೆ 2 ಲಕ್ಷ 75 ಸಾವಿರ ಕ್ಯುಸೆಕ್‌ಗೂ ಹೆಚ್ಚು ನೀರು ಹರಿದು ಬರುತ್ತಿದೆ. ಹೀಗಾಗಿ ಕೃಷ್ಣಾ ನದಿ ತೀರದಲ್ಲಿರುವ ಚಿಕ್ಕೋಡಿ ತಾಲ್ಲೂಕಿನ ಯಡೂರು ಗ್ರಾಮದ ಪೌರಾಣಿಕ ಹಿನ್ನೆಲೆಯ ವೀರಭದ್ರೇಶ್ವರ ದೇವಸ್ಥಾನದ ಗರ್ಭಗುಡಿ ಸಂಪೂರ್ಣ ಜಲಾವೃತಗೊಂಡಿದೆ. ಶನಿವಾರ ತಡರಾತ್ರಿ ದೇವಸ್ಥಾನದ ದಕ್ಷಿಣ ದ್ವಾರದಿಂದ ಕೃಷ್ಣಾ ನದಿ ನೀರು ಗರ್ಭಗುಡಿಯೊಳಗೆ ಪ್ರವೇಶಿಸಿತು. ನದಿ ನೀರು …
Read More »