Breaking News

Monthly Archives: ಜುಲೈ 2024

ಕಾರ್ಕಳ, ಹೆಬ್ರಿ: ಆರು ತಿಂಗಳಲ್ಲಿ 51 ಮಂದಿಗೆ ಡೆಂಗ್ಯೂ

ಕಾರ್ಕಳ: ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಕಳೆದ 6 ತಿಂಗಳಲ್ಲಿ 51 ಮಂದಿಯಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. ನಗರ ಹಾಗೂ ಗ್ರಾಮೀಣ ಭಾಗದಲ್ಲೂ ಡೆಂಗ್ಯೂ ಸೋಂಕಿತರಿದ್ದಾರೆ. ಪಶ್ಚಿಮ ಘಟ್ಟ ತಪ್ಪಲಿನ ಪ್ರದೇಶವಾದ ಈ ಎರಡು ತಾಲೂಕುಗಳಲ್ಲಿ ಕೆಲವು ಸಮಯಗಳ ಹಿಂದೆ ಮಂಗನ ಕಾಯಿಲೆ ಲಕ್ಷಣಗಳು ಕಂಡುಬಂದಿತ್ತು. ಅನಂತರದ ದಿನಗಳಲ್ಲಿ ಮಳೆ ಹಾಗೂ ಬಿಸಿಲಿನ ವಾತಾವರಣಕ್ಕೆ ಜ್ವರ ಲಗ್ಗೆಯಿಟ್ಟಿತ್ತು. ಈ ಪೈಕಿ ಹೆಚ್ಚು ಡೆಂಗ್ಯೂ ಪ್ರಕರಣ ಕಂಡು ಬಂದಿರುವುದು ಕಾರ್ಕಳ ಪುರಸಭೆ …

Read More »

ICC ಅಧ್ಯಕ್ಷ ಸ್ಥಾನಕ್ಕೆ ಜಯ್‌ ಶಾ ಅರ್ಜಿ?

ಹೊಸದಿಲ್ಲಿ: ಬಿಸಿಸಿಐ ಕಾರ್ಯದರ್ಶಿಯಾಗಿ ರುವ ಜಯ್‌ ಶಾ ತಮ್ಮ ಸ್ಥಾನ ತೊರೆದು ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ. ವರ್ಷಾಂತ್ಯ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಸದ್ಯ ಐಸಿಸಿ ಅಧ್ಯಕ್ಷರಾಗಿರುವ ಗ್ರೆಗ್‌ ಬಾಕ್ಲೆì ಅವರಿಗೆ ತನ್ನ ಅವಧಿಯನ್ನು ವಿಸ್ತರಿಸಿಕೊಳ್ಳಲು ಅವಕಾಶವಿದೆ. ಒಂದು ವೇಳೆ ಚುನಾವಣೆ ನಡೆದು ಅದರಲ್ಲಿ ಜಯ್‌ ಶಾ ಸ್ಪರ್ಧಿಸಿ ಗೆದ್ದರೆ, ಅವರು ಐಸಿಸಿ ಅಧ್ಯಕ್ಷ ಸ್ಥಾನಕ್ಕೇರಿದ ಅತ್ಯಂತ ಕಿರಿಯರೆಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

Read More »

ಆಯುಷ್ಮಾನ್‌ ಭಾರತ್‌ ವಿಮೆ ಮೊತ್ತ ದುಪ್ಪಟ್ಟು?

ಹೊಸದಿಲ್ಲಿ: ನರೇಂದ್ರ ಮೋದಿ 3.0 ಸರಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್‌ ಮಂಡನೆಗೆ ಸಿದ್ಧತೆ ನಡೆದಿದ್ದು, “ಆಯುಷ್ಮಾನ್‌ ಭಾರತ್‌’ ವಿಮೆ ಮೊತ್ತವನ್ನು ದುಪ್ಪಟ್ಟು ಅಂದರೆ 10 ಲಕ್ಷ ರೂ.ಗೆ ಹೆಚ್ಚಳದ ಘೋಷಣೆಯನ್ನು ನಿರೀಕ್ಷಿಸಲಾಗುತ್ತಿದೆ! ಜತೆಗೆ, 70 ವರ್ಷ ಮೇಲ್ಪಟ್ಟ ಎಲ್ಲರನ್ನೂ ವಿಮೆ ವ್ಯಾಪ್ತಿಗೆ ಸೇರಿಸುವ ಸಾಧ್ಯತೆಗಳೂ ಇವೆ.   ಆಯುಷ್ಮಾನ್‌ ವಿಮೆ ಮೊತ್ತವನ್ನು ದುಪ್ಪಟ್ಟು ಮಾಡಿದರೆ ಸರಕಾರದ ಖಜಾನೆಗೆ ವರ್ಷಕ್ಕೆ 12,076 ಕೋಟಿ ರೂ. ಹೊರೆ ಯಾಗಲಿದೆ. ಈ ಕುರಿತು ರಾಷ್ಟ್ರೀಯ …

Read More »

ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ

ಹುಬ್ಬಳ್ಳಿ : ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಕಾರವಾರ ಜಿಲ್ಲೆಗಳಲ್ಲಿ ಪುನರ್ವಸು ಮಳೆ ಅಬ್ಬರ ಮುಂದುವರಿದಿದೆ. ಮಹಾರಾಷ್ಟ್ರ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಘಟಪ್ರಭಾ ಹಾಗೂ ಮಲಪ್ರಭಾ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸೋಮವಾರವೂ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವೆಡೆ ಹಾನಿ ಸಂಭವಿಸಿದೆ. ಜಲದಿಗ್ಬಂಧನ ಉತ್ತರ ಕನ್ನಡದ ಕರಾವಳಿಯಲ್ಲೂ ಭಾರೀ ಮಳೆ ಸುರಿಯುತ್ತಿದೆ. ಅಘನಾಶಿನಿ, ವಾಲಗಳ್ಳಿ-ಅರೋಡಿ ರಸ್ತೆಗಳು ಜಲಾವೃತವಾಗಿವೆ. ಅಂಕೋಲಾದ ಹಾರವಾಡದಲ್ಲಿ ಕಡಲ್ಕೊರೆತವಾಗಿದೆ. ಕಾರವಾರದ ಚೆಂಡಿಯಾ, …

Read More »

ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪಾಠ;

ಬೆಂಗಳೂರು : ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ನಡೆಸಿದ್ದು ತಡರಾತ್ರಿಯವರೆಗೂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.   ಎಸ್‌ಎಸ್‌ಎಲ್‌ ಸಿ ಫ‌ಲಿತಾಂಶದಲ್ಲಿ ಕೆಲವು ಜಿಲ್ಲೆಗಳಲ್ಲಿ ಭಾರೀ ಕುಸಿತ ಕಂಡಿರುವ ಬಗ್ಗೆ ಸಿದ್ದರಾಮಯ್ಯ ಸಭೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ್ದು ಈ ಬಾರಿ ನಕಲು ಮಾಡುವುದನ್ನು ಸಂಪೂರ್ಣ ನಿಲ್ಲಿಸಿದ್ದು ಶ್ಲಾಘನೀಯ. ಆದರೆ ಈ ಕಾರಣಕ್ಕೆ ಫ‌ಲಿತಾಂಶ ಕುಸಿತ …

Read More »

ರೈತರಿಗೆ ಸಿಗಲಿದೆ ಶೇ.90 ಸಬ್ಸಿಡಿ

ಉಡುಪಿ: ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಯ ಯೋಜನೆ- ಮುಖ್ಯಮಂತ್ರಿಗಳ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ಹೆಚ್ಚುವರಿ ಸಬ್ಸಿಡಿ ಕಡಿತವಿಲ್ಲದೇ ಪೂರ್ಣ ಲಾಭ ರೈತರಿಗೆ ಸಿಗಲಿದೆ ಎಂದು ಉಡುಪಿ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟನೆ ತಿಳಿಸಿದೆ.  ಜು. 8 ರಂದು ಪ್ರಕಟಗೊಂಡಿರುವ “ಕೇಂದ್ರ ಸರಕಾರದ ಕೃಷಿ ಸಿಂಚಯ ಯೋಜನೆ ರಾಜ್ಯದ ಹೆಚ್ಚುವರಿ ಸಬ್ಸಿಡಿ ಖೋತಾ: ರೈತರ ಹೆಗಲಿಗೆ ಹೆಚ್ಚುವರಿ ಹೊರೆ’ ಎಂಬ ವರದಿಗೆ ಸಂಬಂಧಿಸಿ, 2 …

Read More »

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಮೇ 5ರಂದು ನಡೆದ ನೀಟ್‌-ಯುಜಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದರಲ್ಲಿ ಯಾವುದೇ ಅನುಮಾನಗಳಿಲ್ಲ. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯ ವ್ಯಾಪಕತೆ ಎಷ್ಟಿದೆ ಎಂಬುದನ್ನು ಅರಿತುಕೊಂಡ ಬಳಿಕವಷ್ಟೇ ನೀಟ್‌-ಯುಜಿ(ವೈದ್ಯ ಕೀಯ ಕಾಲೇಜುಗಳಿಗೆ ಪ್ರವೇಶ ಪಡೆ ಯುವ ಪರೀಕ್ಷೆ) ಪರೀಕ್ಷೆಯನ್ನು ರದ್ದು ಮಾಡಬೇಕೇ, ಬೇಡವೇ ಎಂಬುದನ್ನು ನಿರ್ಧರಿಸಲಾಗುವುದು. ನೀಟ್‌ ಪರೀಕ್ಷೆ ರದ್ದು ಕೋರ್ಟ್‌ನ ಕೊನೆಯ ಆಯ್ಕೆಯಾಗಿ ರುತ್ತದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ನೀಟ್‌ ಪರೀಕ್ಷೆ ರದ್ದು ಕೋರಿ ಸಲ್ಲಿಕೆಯಾಗಿರುವ 30ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ …

Read More »

ಸಿಂಧು, ಶರತ್‌ ಕಮಲ್‌ ತ್ರಿವರ್ಣ ಧ್ವಜಧಾರಿಗಳು

ಹೊಸದಿಲ್ಲಿ: ಖ್ಯಾತ ಶಟ್ಲರ್‌ ಪಿ.ವಿ. ಸಿಂಧು ಮತ್ತು ಅನುಭವಿ ಟೇಬಲ್‌ ಟೆನಿಸ್‌ ಆಟಗಾರ ಅಚಂತ ಶರತ್‌ ಕಮಲ್‌ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಧ್ವಜಧಾರಿಗಳಾಗಿರುತ್ತಾರೆ. ಉದ್ಘಾಟನ ಸಮಾರಂಭದ ವೇಳೆ ಇವರು ತ್ರಿವರ್ಣ ಧ್ವಜ ಹಿಡಿದು ಸಾಗಲಿದ್ದಾರೆ. ಲಂಡನ್‌ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಜಯಿಸಿದ್ದ ಮಾಜಿ ಶೂಟರ್‌ ಗಗನ್‌ ನಾರಂಗ್‌ ಅವರು ಭಾರತ ತಂಡದ ಚೆಫ್ ಡಿ ಮಿಷನ್‌ ಆಗಿರುತ್ತಾರೆ. ಮೇರಿ ಕೋಮ್‌ ಅವರ ರಾಜೀನಾಮೆಯಿಂದ ತೆರವಾದ ಸ್ಥಾನವನ್ನು “ಡೆಪ್ಯುಟಿ’ ಆಗಿದ್ದ ನಾರಂಗ್‌ ತುಂಬಲಿದ್ದಾರೆ. …

Read More »

ಗಣಿ ಗುತ್ತಿಗೆ ರದ್ದತಿಗೆ ಶಿಫಾರಸು ಮಾಡಲು ನ್ಯಾಯಮೂರ್ತಿಗೆ ಪತ್ರ: SR ಹಿರೇಮಠ

ಧಾರವಾಡ: ‘ಕುದುರೆಮುಖ ಕಬ್ಬಿಣ ಅದಿರು ಕಂಪೆನಿ (ಕೆಐಒಸಿಎಲ್‌) ಹಾಗೂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಂಪನಿಗೆ (ವಿಐಎಸ್‌ಎಲ್‌) ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ನೈಸರ್ಗಿಕ ಅರಣ್ಯ ಪ್ರದೇಶದಲ್ಲಿ ಗಣಿ ಗುತ್ತಿಗೆ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಿದ್ಧವಾಗಿದ್ದು, ಗುತ್ತಿಗೆ ಪ್ರಸ್ತಾವ ರದ್ದುಪಡಿಸುವಂತೆ ಸುಪ್ರೀಂ ಕೋರ್ಟ್‌ಗೆ ಶಿಫಾರಸು ಮಾಡಬೇಕು ಎಂದು ಮೇಲ್ವಿಚಾರಣಾ ಪ್ರಾಧಿಕಾರದ ನ್ಯಾಯಮೂರ್ತಿ ಬಿ.ಸುದರ್ಶನ ರೆಡ್ಡಿ ಅವರಿಗೆ ಪತ್ರ ಬರೆಯಲಾಗಿದೆ’ ಎಂದು ಸಮಾಜ ಪರಿವರ್ತನಾ ಸಮುದಾಯದ ಸ್ಥಾಪಕ ಅಧ್ಯಕ್ಷ …

Read More »

ಮಹಾರಾಷ್ಟ್ರದಲ್ಲಿ ಭಾರಿ ಮಳೆ; ಕೃಷ್ಣಾ, ದೂಧಗಂಗಾ, ಮಲಪ್ರಭಾ ಒಳಹರಿವು ಹೆಚ್ಚಳ

ಬೆಳಗಾವಿ: ಮಹಾರಾಷ್ಟ್ರದ ಕೊಯ್ನಾ ಹಾಗೂ ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕೃಷ್ಣಾ ಮತ್ತು ದೂಧಗಂಗಾ ನದಿಗಳ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ. ಈಗ ಲಭ್ಯದ ಅಗಿರುವ ಮಾಹಿತಿಯ ಪ್ರಕಾರ ಕೃಷ್ಣಾ ನದಿಯ ಒಳಹರಿವಿನ ಪ್ರಮಾಣ 62 ಸಾವಿರ ಕ್ಯೂಸೆಕ್ಸ್ ದಾಟಿದೆ. ಮಹಾರಾಷ್ಟ್ರದ ಸಾವಂತವಾಡಿ ಹಾಗೂ ಅಂಬೋಲಿ ಅರಣ್ಯ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಘಟಪ್ರಭಾ ನದಿಯ ಮೂಲಕ ಹಿಡಕಲ್ ಜಲಾಶಯಕ್ಕೆ 21 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. …

Read More »