Breaking News

Monthly Archives: ಜುಲೈ 2024

ಬೆಳಗಾವಿ | ಪಠ್ಯಕ್ರಮ ಬದಲಿಸದಿರಲು ಆಗ್ರಹ

ಬೆಳಗಾವಿ: ‘ಕನ್ನಡ ಮಾಧ್ಯಮದ ಸಮಾಜ ವಿಜ್ಞಾನ ವಿಷಯದ 9ನೇ ತರಗತಿಯ ಪಠ್ಯದಲ್ಲಿ ‘ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ’ ಶೀರ್ಷಿಕೆಯಡಿ ಅಳವಡಿಸಿದ ವಿಷಯ ಸೂಕ್ತವಾಗಿದೆ. ‘ವೀರಶೈವ’ ಎಂಬ ಪದವನ್ನು ಪಠ್ಯದಿಂದ ಕೈಬಿಟ್ಟು ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ’ ಎಂದು ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ಹೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದ ಅವರು, ‘ವೀರಶೈವ ಶಿವಾಚಾರ್ಯ ಸಂಸ್ಥೆ ಹಾಗೂ ಕೆಲವು ರಾಜಕಾರಣಿಗಳು ವೀರಶೈವ …

Read More »

ಶಿವಸಾಗರ ಸಕ್ಕರೆ ಕಾರ್ಖಾನೆ ಮಾರಾಟ: ಪ್ರತಿಭಟನೆ

ರಾಮದುರ್ಗ: ತಾಲ್ಲೂಕಿನ ಶಿವಸಾಗರ ಸಕ್ಕರೆ ಕಾರ್ಖಾನೆಯನ್ನು ಷೇರುದಾರರ ಹಿತ ಕಾಯದೆ ಎನ್‍ಸಿಎಲ್‍ಟಿ ಹರಾಜು ಹಾಕಿರುವುದನ್ನು ವಿರೋಧಿಸಿ ಉತ್ತರ ಕರ್ನಾಟಕ ರೈತ ಮತ್ತು ಕಬ್ಬು ಬೆಳೆಗಾರರ ಸಂಘ ಮತ್ತು ಷೇರುದಾರರು ಗುರುವಾರ ಬೆಳಿಗ್ಗೆಯಿಂದ ಸಂಜೆತನಕ ಕಾರ್ಖಾನೆ ಎದುರು ಪ್ರತಿಭಟನೆ ಮಾಡಿದರು. ಗುರುವಾರ ನೂರಾರು ಷೇರುದಾರರು ಹಾಗೂ ರೈತರು ಕಾರ್ಖಾನೆಯ ಗೇಟ್ ಎದುರು ಪ್ರತಿಭಟನೆ ಆರಂಭಿಸಿದರು. ಕಾರ್ಖಾನೆಯ ಪ್ರಾರಂಭಕ್ಕೆ ಬೆಳಗಾವಿ, ಬಾಗಲಕೋಟೆ, ಮತ್ತು ಧಾರವಾಡ ಜಿಲ್ಲೆಯ ರೈತರು ಷೇರು ಖರೀದಿ ಮಾಡಿದ್ದರಿಂದ ಆರಂಭವಾಗಿದೆ. …

Read More »

ಚನ್ನಮ್ಮನ ಸ್ಮಾರಕ ಬಾವಿ ಅಭಿವೃದ್ಧಿಗೆ ₹ 50 ಲಕ್ಷ: ಪ್ರಭಾವತಿ

ಬೈಲಹೊಂಗಲ: ಪಟ್ಟಣದ ಹುಡೇದ ಗಲ್ಲಿಯಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮನ ಸ್ಮಾರಕ ಬಾವಿ ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನದಲ್ಲಿ ಅಭಿವೃದ್ಧಿ ಪಡಿಸಲು ಕ್ರೀಯಾಯೋಜನೆ ರೂಪಿಸಲಾಗಿದೆ ಎಂದು ಉಪ ವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಹೇಳಿದರು. ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮನ ಐಕ್ಯ ಸ್ಥಳ ಹಾಗೂ ಹುಡೇದ ಗಲ್ಲಿ ಹತ್ತಿರ ಇರುವ ವೀರರಾಣಿ ಕಿತ್ತೂರು ಚನ್ನಮ್ಮನ ಸ್ಮಾರಕ ಭಾವಿಗೆ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು. ‘ಕಿತ್ತೂರು ಚನ್ನಮ್ಮ ಸ್ಮಾರಕ ಬಾವಿ ಅಭಿವೃದ್ದಿಗೆ …

Read More »

ಖಾನಾಪುರ ತಾಲ್ಲೂಕಿನಲ್ಲಿ ಒಂದೇ ದಿನ 74.5 ಸೆಂ.ಮೀ ಮಳೆ

ಖಾನಾಪುರ: ತಾಲ್ಲೂಕಿನಲ್ಲಿ ಗುರುವಾರ ಒಂದೇ ದಿನ 74.5 ಸೆ.ಮೀ ಮಳೆಯಾಗಿದೆ. ‘ಇದು ಈ ವರ್ಷದಲ್ಲಿ ಸುರಿದ ಅತ್ಯಧಿಕ ಮಳೆ’ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಮಲಪ್ರಭಾ, ಮಹಾದಾಯಿ ಮತ್ತು ಪಾಂಡರಿ ನದಿಗಳಲ್ಲಿ ನೀರಿನ ಹರಿವು ಪ್ರಮಾಣ ವೃದ್ಧಿಸಿದೆ. ಅಲಾತ್ರಿ, ಕಳಸಾ, ಬಂಡೂರಿ, ಮಂಗೇತ್ರಿ, ವಜ್ರಾ, ಪಣಸೂರಿ, ಬೈಲ್, ಕುಂಬಾರ, ಕರೀಕಟ್ಟಿ, ತಟ್ಟಿ, ಕೋಟ್ನಿ ಹಳ್ಳಗಳಲ್ಲೂ ನೀರಿನ ರಭಸ ಮುಂದುವರೆದಿದೆ. ಹಬ್ಬನಹಟ್ಟಿ ಆಂಜನೇಯ ದೇವಾಲಯ ಮಲಪ್ರಭಾ ನದಿಯಲ್ಲಿ …

Read More »

ಚಿಕ್ಕೋಡಿ | ನಿರಂತರ ಸುರಿಯುತ್ತಿರುವ ಮಳೆ: ಪ್ರವಾಹ ಸಾಧ್ಯತೆ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ನೆರೆಯ ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಕೃಷ್ಣಾ, ದೂಧಗಂಗಾ ಹಾಗೂ ವೇದಗಂಗಾ ನದಿಗಳಲ್ಲಿ ದಿನದಿಂದ ದಿನಕ್ಕೆ ನೀರು ಹರಿಯುವ ಪ್ರಮಾಣ ಹೆಚ್ಚಳವಾಗುತ್ತಿದೆ. ಕೃಷ್ಣಾ ನದಿಗೆ ಅಡ್ಡಲಾಗಿರುವ ಕಲ್ಲೋಳ-ಯಡೂರು ಬ್ಯಾರೇಜ್ ಬಳಿಯಲ್ಲಿ ಬುಧವಾರ 26 ಸಾವಿರ ಕ್ಯುಸೆಕ್ ನಷ್ಟಿದ್ದ ನೀರು ಒಂದೇ ದಿನದಲ್ಲಿ 47 ಸಾವಿರ ಕ್ಯುಸೆಕ್ ಏರಿಕೆ ಕಂಡಿದೆ. ಪ್ರವಾಹ ಉಂಟಾಗುವ ಸಾಧ್ಯತೆ ಹೆಚ್ಚಿವೆ. ಹೀಗಾಗಿ ಜಿಲ್ಲಾಡಳಿತ ಹಲವು ಮುಂಜಾಗೃತಾ …

Read More »

ಗಿಡ- ಮರಗಳನ್ನು ಉಳಿಸಿ- ಬೆಳೆಸಿ- ಶಾಸಕ ಬಾಲಚಂದ್ರ ಜಾರಕಿಹೊಳಿ

ಗಿಡ- ಮರಗಳನ್ನು ಉಳಿಸಿ- ಬೆಳೆಸಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಏಕ ಪೇಡ್ ಮಾ ಕೆ ನಾಮ ವನ ಮಹೋತ್ಸವ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ಅರಣ್ಯ ಉಳಿಯಬೇಕಾದರೆ ಗಿಡ- ಮರಗಳನ್ನು ನೆಟ್ಟು ಅರಣ್ಯವನ್ನು ಬೆಳೆಸಬೇಕೆಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಮ್ಮ ತಾಯಿಯ ಸ್ಮರಣಾರ್ಥವಾಗಿ ನಗರದ ಎನ್ಎಸ್ಎಫ್ ಆವರಣದಲ್ಲಿ “ಏಕ ಪೇಡ್ ಮಾ …

Read More »

ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

ಹುಣಸೂರು: ರಾಜ್ಯಾದ್ಯಂತ ದಿನೇ ದಿನೇ ಹೆಚ್ಚುತ್ತಿರುವ ಡೆಂಗ್ಯೂ ಮಹಾಮಾರಿಗೆ ಹುಣಸೂರು ತಾಲೂಕಿನ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿಯೇ ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹೊಸೂರು ಗೇಟ್ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗುರುಪುರ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ನಾಗೇಂದ್ರ (೩೪) ಮೃತರು, ಪತ್ನಿ ಇದ್ದಾರೆ. ಮೂಲತಃ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ದೊಡ್ಡ ಆಣೆ ಗ್ರಾಮದವರು. ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಇವರು ಪತ್ನಿ ಜ್ಯೋತಿ ಗರ್ಭಿಣಿಯಾಗಿದ್ದು, ಕಾಮಾಕ್ಷಿ ಆಸ್ಪತ್ರೆಯಲ್ಲಿ …

Read More »

ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

ಹುಣಸೂರು: ರಾಜ್ಯಾದ್ಯಂತ ದಿನೇ ದಿನೇ ಹೆಚ್ಚುತ್ತಿರುವ ಡೆಂಗ್ಯೂ ಮಹಾಮಾರಿಗೆ ಹುಣಸೂರು ತಾಲೂಕಿನ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿಯೇ ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹೊಸೂರು ಗೇಟ್ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗುರುಪುರ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ನಾಗೇಂದ್ರ (೩೪) ಮೃತರು, ಪತ್ನಿ ಇದ್ದಾರೆ. ಮೂಲತಃ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ದೊಡ್ಡ ಆಣೆ ಗ್ರಾಮದವರು. ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಇವರು ಪತ್ನಿ ಜ್ಯೋತಿ ಗರ್ಭಿಣಿಯಾಗಿದ್ದು, ಕಾಮಾಕ್ಷಿ ಆಸ್ಪತ್ರೆಯಲ್ಲಿ …

Read More »

ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ

ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ ಮಹಾಲಿಂಗಪುರ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮಳೆಯಾಗಿ ಮತ್ತು ಅಂತರಾಜ್ಯದಲ್ಲಿ ಮಳೆಯಾಗಿ ಕೃಷ್ಣಾ ಮತ್ತು ಘಟಪ್ರಭಾ ನದಿಗಳಿಗೆ ಪ್ರವಾಹ ಬಂದು ಮಹಾಲಿಂಗಪುರ ಸುತ್ತಮುತ್ತಲಿನ ಗ್ರಾಮಗಳು ಪ್ರವಾಹ ಎದುರಿಸುವದರಿಂದ ವಿಪತ್ತು ನಿರ್ವಹಣೆಗೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಡಿ ಹೇಳಿದರು. ಪುರಸಭೆಯಲ್ಲಿ ಜರುಗಿದ ಸ್ಥಳೀಯ ಮಟ್ಟದ ಅ ಧಿಕಾರಿಗಳ ವಿಪತ್ತು ನಿರ್ವವಣಾ ಮುಂಜಾಗ್ರತೆಯ ಕ್ರಮಗಳ ಸಭೆಯ ಅಧ್ಯಕ್ಷತೆ …

Read More »

ಐವರು ಜಿಲ್ಲಾಧಿಕಾರಿಗಳು ಸೇರಿ 23 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಕಳೆದೆರಡು ದಿನಗಳಲ್ಲಿ ಸುಮಾರು 29 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರವು ಇದೀಗ ಆಡಳಿತಾತ್ಮಕ ವಿಭಾಗದಲ್ಲಿ ಮೇಜರ್ ಸರ್ಜರಿ ಮಾಡಿದೆ. 23 ಐಎಎಸ್ ಅಧಿಕಾರಿಗಳನ್ನು ಶುಕ್ರವಾರ ವರ್ಗಾವಣೆ ಮಾಡಲಾಗಿದೆ. ಐವರು ಜಿಲ್ಲಾಧಿಕಾರಿಗಳು ಸೇರಿ ಒಟ್ಟು 23 ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಹಾವೇರಿ, ಗದಗ, ದಾವಣಗೆರೆ, ಮೈಸೂರು, ರಾಯಚೂರು, ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಿಗೆ ಹೊಸ ಡಿಸಿ ನೇಮಿಸಲಾಗಿದೆ. ಇಲ್ಲಿದೆ ಐಎಎಸ್ ವರ್ಗಾವಣೆ ವಿವರ ಹೆಸರು-ಎಲ್ಲಿಂದ- ಎಲ್ಲಿಗೆ ಡಾ. …

Read More »