ಕೃಷ್ಣಾ ನದಿಯಲ್ಲಿ ವ್ಯಕ್ತಿ ಶವ ಪತ್ತೆ ಬೆಳಗಾವಿ: ತಾಲ್ಲೂಕಿನ ಬಾವನ ಸವದತ್ತಿ ಗ್ರಾಮದ ಬಾಬುರಾವ್ ಸಂಜೀವ ಬಾಪಕರ (40) ಎಂಬ ವ್ಯಕ್ತಿ ಶವ, ಚಿಕ್ಕೋಡಿ ತಾಲ್ಲೂಕಿನ ಅಂಕಲಿ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಶನಿವಾರ ಪತ್ತೆಯಾಗಿದೆ. ಬಾಬುರಾವ್ ಅವರು ಕಾಗವಾಡ ಸಕ್ಕರೆ ಕಾರ್ಖಾನೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಗುರುವಾರ ಬೆಳಿಗ್ಗೆ ಮನೆಯಿಂದ ಹೋದವರು ಮತ್ತೆ ಬಂದಿರಲಿಲ್ಲ. ಅಂಕಲಿ ಸೇತುವೆ ಬಳಿ ಅವರ ಶವ ಪತ್ತೆಯಾಗಿದೆ. ಸಾವಿಗೆ ನಿಖರ …
Read More »Daily Archives: ಆಗಷ್ಟ್ 3, 2024
ತಪ್ಪು ಕಲ್ಪನೆ ಬಿಟ್ಟು ಅಂಗಾಂಗ ದಾನ ಮಾಡಿ: ಸಚಿವ ದಿನೇಶ್ ಗುಂಡೂರಾವ್
ಬೆಳಗಾವಿ: ‘ಯಾವ ಧರ್ಮವೂ ಅಂಗಾಂಗ ದಾನ ನಿಷೇಧಿಸಿಲ್ಲ. ಈ ಪದ್ಧತಿ ಅನುಸರಿಸಿದರೆ ಬದುಕಿನಲ್ಲಿ ಮೋಕ್ಷ ಸಿಗದು, ನಿಧನದ ನಂತರ ಸ್ವರ್ಗಕ್ಕೆ ಹೋಗಲಾಗದು ಎಂಬೆಲ್ಲ ತಪ್ಪು ಕಲ್ಪನೆ ಜನರಲ್ಲಿವೆ. ಇದರಿಂದ ಎಲ್ಲರೂ ಹೊರಬಂದು ಅಂಗಾಂಗ ದಾನಕ್ಕೆ ಮುಂದಾಗಬೇಕು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಇಲ್ಲಿನ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಆಯಂಡ್ ರಿಸರ್ಚ್‌ನ (ಕಾಹೇರ್) ಡಾ.ಬಿ.ಎಸ್.ಜೀರಗೆ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ …
Read More »ಮುಳಬಾಗಿಲು | ಆಲಂಗೂರು ಪ್ರತಿಮೆ ನಿರ್ಮಾಣ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ
ಮುಳಬಾಗಿಲು: ನಗರದ ತಾತಿಪಾಳ್ಯ ವೃತ್ತದಲ್ಲಿ ಆಲಂಗೂರು ಶ್ರೀನಿವಾಸ್ ಪ್ರತಿಮೆ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ರಾಜ್ಯ ಹೈಕೋರ್ಟ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಭೇಟಿ ನೀಡಿ ಪರಿಶೀಲಿಸಿದರು. ನಾಡಪ್ರಭು ಕೆಂಪೇಗೌಡರ ಅಶ್ವರೂಢ ಪ್ರತಿಮೆ ಹಾಗೂ ಹಿಂದೆ ತಾಲ್ಲೂಕು ಒಕ್ಕಲಿಗರ ಸಂಘದಿಂದ ಪ್ರತಿಷ್ಠಾಪನೆ ಮಾಡಲು ನಿಲ್ಲಿಸಿರುವ ಕ್ಷೇತ್ರದ ಮಾಜಿ ಶಾಸಕ, ಸಚಿವ ದಿವಂಗತ ಆಲಂಗೂರು ಶ್ರೀನಿವಾಸ್ ಅವರ ಪುತ್ಥಳಿ ಸ್ಥಳವನ್ನು ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ಪಾದಚಾರಿ ಮಾರ್ಗದಲ್ಲಿ …
Read More »ಆದಾಯಕ್ಕಿಂತ ಅಧಿಕ ಆಸ್ತಿ: ಯಾದಗಿರಿ ಡಿಎಚ್‌ಒ ಅಮಾನತು
ಯಾದಗಿರಿ: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪ್ರಭುಲಿಂಗ ಮಾನಕರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಡಳಿತಾಧಿಕಾರಿ ಅಮಾನತು ಮಾಡಿ ಆದೇಶಿಸಿದ್ದಾರೆ. ಪ್ರಭುಲಿಂಗ ಅವರು ₹1.40 ಕೋಟಿ ಮೌಲ್ಯದ ಅಕ್ರಮ ಆಸ್ತಿ ಹೊಂದಿರುವುದನ್ನು ಲೋಕಾಯುಕ್ತ ಪೊಲೀಸ್ ಪತ್ತೆ ಹಚ್ಚಿದ್ದರು. ಹೀಗಾಗಿ ನಿಷ್ಪಕ್ಷಪಾತ ತನಿಖೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಅಳಂದ ಸಾರ್ವಜನಿಕ ಆಸ್ಪತ್ರೆಗೆ ಲೀನ್ ವರ್ಗಾವಣೆ …
Read More »ವಯನಾಡ್ ಭೂಕುಸಿತ: ಕೊಡಗು ಜಿಲ್ಲೆಯ ಯುವತಿ ಮೃತದೇಹ ಪತ್ತೆ
ಸಿದ್ದಾಪುರ: ವಯನಾಡು ಭೂಕುಸಿತ ದುರಂತದಲ್ಲಿ ನಾಪಯ್ತೆಯಾಗಿದ್ದ ಕೊಡಗಿನ ನೆಲ್ಯಹುದಿಕೇರಿ ಮೂಲದ ಯುವತಿ ಹಾಗೂ ಕುಟುಂಬದ ಮೃತದೇಹ ಶುಕ್ರವಾರ ಪತ್ತೆಯಾಗಿದೆ. ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿಯ ನಲ್ವತ್ತೇಕರೆ ನಿವಾಸಿ ಪೊನ್ನಮ್ಮ ಎಂಬವರ ಮಗಳು ದಿವ್ಯಾ (35) ಚೂರಲ್ ಮಲ ಗೆ ವಿವಾಹವಾಗಿದ್ದರು. ಭೂಕುಸಿತದಲ್ಲಿ ದಿವ್ಯಾ ಸೇರಿದಂತೆ ಕುಟುಂಬದ 9 ಮಂದಿ ನಾಪತ್ತೆಯಾಗಿದ್ದರು. ಮಗಳು ಹಾಗೂ ಕುಟುಂಬಸ್ಥರನ್ನು ಹುಡುಕಿಕೊಡುವಂತೆ ಪೊನ್ನಮ್ಮ ಮನವಿ ಮಾಡಿದ್ದರು. ಶುಕ್ರವಾರ ಸಂಜೆ ಕುಟುಂಬದ 9 ಮಂದಿಯ ಪೈಕಿ 8 ಮಂದಿಯ …
Read More »ಜೋಗಫಾಲ್ಸ್ ವೀಕ್ಷಣೆಗೆ KSRTC ವಿಶೇಷ ಪ್ಯಾಕೇಜ್
ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರತಿ ವರ್ಷದಂತೆ ಪ್ರಸಕ್ತ ವರ್ಷದಲ್ಲಿಯೂ ಆಗಸ್ಟ್ 3 ರಿಂದ ಪ್ರತಿ ಶನಿವಾರ, ಭಾನುವಾರ ರಜಾದಿನಗಳಂದು ದಾವಣಗೆರೆ ಹಾಗೂ ಹರಿಹರದಿಂದ ವಿಶ್ವವಿಖ್ಯಾತ ಪ್ರೇಕ್ಷಣೀಯ ಸ್ಥಳವಾದ ಜೋಗಫಾಲ್ಸ್, ಶಿರಸಿ ವಿಕ್ಷಣೆಗೆ ವಿಶೇಷ ಪ್ಯಾಕೇಜ್‌ನೊಂದಿಗೆ ರಾಜಹಂಸ ಹಾಗೂ ವೇಗದೂತ(ಅಶ್ವಮೇದ) ಸಾರಿಗೆಯನ್ನು ಕಾರ್ಯಾಚರಣೆಗೆ ಬಿಡಲಾಗುತ್ತಿದೆ. ಮುಂಗಡ ಬುಕ್ಕಿಂಗ್ ಕೌಂಟರ್‌ಗಳಲ್ಲಿ ಬುಕ್ಕಿಂಗ್ ಮಾಡಲು ಸೌಕರ್ಯ ಕಲ್ಪಿಸಲಾಗಿದೆ. ಅಥವಾ ಆನ್‌ಲೈನ್ ಬುಕ್ಕಿಂಗ್‌ಗಾಗಿ ನಿಗಮದ ವೆಬ್‌ಸೈಟ್ ksrtc.karnataka.gov.in ನಲ್ಲಿ ಸಾರಿಗೆ ಸೌಲಭ್ಯದ …
Read More »ಪಾದಯಾತ್ರೆ ಯಾವ ಪುರುಷಾರ್ಥಕ್ಕೆ?: ಎಚ್ಕೆಪಿ
ಬಾಗಲಕೋಟೆ: ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಪಾದಯಾತ್ರೆ ನಡೆಸುತ್ತಿರುವುದು ಯಾವ ಪುರುಷಾರ್ಥಕ್ಕೆ ಎಂದು ಪ್ರವಾಸೋದ್ಯಮ ಹಾಗೂ ಕಾನೂನು ಸಚಿವ ಎಚ್.ಕೆ. ಪಾಟೀಲ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಕುಟುಂಬದ ಮೇಲೆ ಆಪಾದನೆ ಬಂದಾಗ ಇದೇ ಮೊದಲ ಬಾರಿಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ದು ಸಿಎಂ ಸಿದ್ದರಾಮಯ್ಯ. ಹಿಂದೆ ದೇವೇಗೌಡರು, ಯಡಿಯೂರಪ್ಪ, ಜಗದೀಶ್ ಶೆಟ್ಟರ್ ವಿರುದ್ಧ ಆಪಾದನೆ ಬಂದಾಗ ತಮ್ಮ ಕುಟುಂಬದ ವಿರುದ್ಧವೇ ತನಿಖಾ ತಂಡ ರಚಿಸಿರಲಿಲ್ಲ ಎಂದರು.
Read More »ಕ್ಲಾಸ್ ತಪ್ಪಿಸಲು ಇಮೇಲ್ ಮೂಲಕ ಶಾಲೆಗೆ ಬಾಂಬ್ ಬೆದರಿಕೆ: 14 ವರ್ಷದ ಬಾಲಕನ ಬಂಧನ
ನವದೆಹಲಿ: ತರಗತಿಗೆ ಹೋಗುವುದರಿಂದ ತಪ್ಪಿಸಿಕೊಳ್ಳಲು ತನ್ನ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ 14 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಮಧ್ಯರಾತ್ರಿ 12.30ರ ಸುಮಾರಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದರಿಂದ ಖಾಸಗಿ ಶಾಲೆಯಲ್ಲಿ ಆತಂಕ ಮನೆ ಮಾಡಿತ್ತು. ಕೂಡಲೇ ಪೊಲೀಸರನ್ನು ಕರೆಸಿ ಬಾಂಬ್ ಮತ್ತು ಶ್ವಾನ ದಳದಿಂದ ತಪಾಸಣೆ ನಡೆಸಲಾಯಿತು. ದಕ್ಷಿಣ ದೆಹಲಿಯ ಇನ್ನೂ ಎರಡು ಖಾಸಗಿ ಶಾಲೆಗಳಲ್ಲಿ ಬಾಂಬ್ …
Read More »ಹಾಸನದಲ್ಲಿ ಆಶ್ಲೀಲ ಪೆನ್‍ಡ್ರೈವ್ ಹಂಚಿಸಿದ್ದೇ ವಿಜಯೇಂದ್ರ; ಯತ್ನಾಳ ಗಂಭೀರ ಆರೋಪ
ಹಾಸನದಲ್ಲಿ ಆಶ್ಲೀಲ ಪೆನ್‍ಡ್ರೈವ್ ಹಂಚಿಸಿದ್ದೇ ವಿಜಯೇಂದ್ರ; ಯತ್ನಾಳ ಗಂಭೀರ ಆರೋಪ ವಿಜಯಪುರ: ಭ್ರಷ್ಟ ವಿಜಯೇಂದ್ರನನ್ನು ಬಿಜೆಪಿ ರಾಜ್ಯಾಧ್ಯಕ್ಷನೆಂದು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ. ವಿಜಯೇಂದ್ರನ ನಾಲ್ಕಾರು ಚೇಲಾ ಶಾಸಕರ ಹೊರತಾಗಿ 55ಕ್ಕೂ ಹೆಚ್ಚು ಶಾಸಕರ ವಿರೋಧವಿದ್ದು, ಈ ಬಗ್ಗೆ ಹೈಕಮಾಂಡ್ ನಾಯಕರನ್ನು ನಾವು ಪ್ರಶ್ನಿಸುತ್ತೇವೆ. ಪಕ್ಷದಲ್ಲಿ ಹೈಕಮಾಂಡ್ ಭ್ರಷ್ಟ ವಿಜಯೇಂದ್ರನನ್ನು ವಿರುದ್ಧ ಕ್ರಮ ಕೈಗೊಳ್ಳಲಿ, ತಪಿದ್ದರೆ ನಮ್ಮ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು …
Read More »ವೃಕ್ಷದಲ್ಲಿ ಸಾಕಷ್ಟು ರಂಬೆ-ಕೊಂಬೆಗಳಿವೆ : ವಚನಾನಂದ ಸ್ವಾಮೀಜಿ
ದಾವಣಗೆರೆ: ವೀರಶೈವ – ಲಿಂಗಾಯತರು ಹಿಂದುಗಳು ಎನ್ನುವುದು ಚರ್ಚೆ ಮಾಡುವ ವಿಚಾರ. ನಾವು ಎಲ್ಲಿ ಇದ್ದೇವೆ? ನಾವು ಯಾವ ರಾಷ್ಟ್ರದಲ್ಲಿ ಇದ್ದೇವೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ನಾವು ಈ ರಾಷ್ಟ್ರವನ್ನು ಯಾವ ರೀತಿ ಬೆಳೆಸಬೇಕು ಎಂದು ಯೋಚಿಸಬೇಕು ಎಂದು ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಹಿಂದೂ ಎನ್ನುವುದು ಅತ್ಯಂತ ಶ್ರೇಷ್ಠ ವಾದ ಸತ್ಯ ಸನಾತನವಾದದ್ದು ಹಿಂದುತ್ವದ ವೃಕ್ಷದಲ್ಲಿ ಸಾಕಷ್ಟು ರಂಬೆ-ಕೊಂಬೆಗಳಿವೆ. ಅಲ್ಲಿ ಅಲ್ಲಮಪ್ರಭು ಬಸವಾದಿ ಶರಣರು, ಗೌತಮ …
Read More »
Laxmi News 24×7