ಬೆಂಗಳೂರು: ‘ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಕೆಲವು ಶಾಸಕರು ಸೇರಿ ಉತ್ತರ ಕರ್ನಾಟಕದ ಭಾಗದಲ್ಲಿ ಪಾದಯಾತ್ರೆ ನಡೆಸುವ ಬಗ್ಗೆ ನಮ್ಮ ತಕರಾರು ಇಲ್ಲ. ಆದರೆ, ಅವರು ವರಿಷ್ಠರ ಅನುಮತಿ ಪಡೆದುಕೊಂಡು ಮಾಡಲಿ’ ಎಂದು ಬಿಜೆಪಿ ರಾಜ್ಯ ಘಟಕದ ಆಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಸಂತನಗರದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ವಿಷಯ …
Read More »Daily Archives: ಆಗಷ್ಟ್ 14, 2024
ಕಿತ್ತೂರು-ಧಾರವಾಡ ರೈಲು ಮಾರ್ಗ ಶೀಘ್ರ
ಹಿರೇಬಾಗೇವಾಡಿ: ಬೆಳಗಾವಿ-ಕಿತ್ತೂರು-ಧಾರವಾಡ ರೈಲು ಮಾರ್ಗದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು. ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ ಇಲ್ಲಿನ ಪಡಿಬಸವೇಶ್ವರ ದೇವಸ್ಥಾನದಲ್ಲಿ ಗ್ರಾಮಸ್ಥರ ವಿವಿಧ ಬೇಡಿಕೆಗಳ ಮನವಿ ಸ್ವೀಕರಿಸಿ ಮಾತನಾಡಿದರು. ಹಿರೇಬಾಗೇವಾಡಿ ಮಾರ್ಗವಾಗಿ ಧಾರವಾಡಕ್ಕೆ ಹೊಸ ರೈಲು ಮಾರ್ಗ ನಿರ್ಮಾಣ ಕಾರ್ಯದಲ್ಲಿ ಯಾವುದೇ ಅಡೆತಡೆಗಳಿಲ್ಲ. ರೈತರು ಜಮೀನು ನೀಡಲು ಮುಂದಾಗಿದ್ದು, ಅದರಿಂದ ಯಾವುದೇ ರೈತರಿಗೆ ಸಮಸ್ಯೆಗಳಾಗದಂತೆ ಕ್ರಮ ಕೈಗೊಳ್ಳಲಾಗುವುದು. ಭಕ್ತರ ಬೇಡಿಕೆಗನುಸಾರವಾಗಿ …
Read More »ಮನೆ ಹಾನಿಗೆ ತಕ್ಷಣ ಪರಿಹಾರ ಒದಗಿಸಿ’
ಬೆಳಗಾವಿ: ‘ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೆ ಒಳಗಾದ ಮನೆಗಳ ಸ್ಥಳಗಳನ್ನು ಮಹಜರು ಮಾಡಬೇಕು. ವಸತಿ ನಿಗಮದ ಪೋರ್ಟಲ್‌ನಲ್ಲಿ ಮಾಹಿತಿ ದಾಖಲಿಸಿ ಪರಿಹಾರ ಒದಗಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಜಿಲ್ಲೆಯಲ್ಲಿ ಸಂಪೂರ್ಣ ಹಾನಿಗೀಡಾದ ಮನೆಗಳ ಮಾಹಿತಿ ಲಭ್ಯವಿದೆ. ಅಂಥ ಮನೆಗಳಿಗೆ ತ್ವರಿತವಾಗಿ ಪರಿಹಾರ ವಿತರಿಸಬೇಕು. ಈ …
Read More »ಹೆಸರುಕಾಳು ದರ ಕುಸಿತ ರೈತರು ಕಂಗಾಲ
ಬಾಗಲಕೋಟೆ: ಸತತ ಮಳೆ ಸುರಿಯುತ್ತಿರುವುದರಿಂದ ಹೆಸರುಕಾಳಿಗೆ ಹಳದಿ ರೋಗ ಕಾಡುತ್ತಿದ್ದು, ಬೆಲೆ ಕುಸಿದಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಬೆಂಬಲ ಬೆಲೆ ಘೋಷಿಸಿದ್ದರೂ ಖರೀದಿ ಕೇಂದ್ರಗಳು ಇನ್ನೂ ಆರಂಭಗೊಂಡಿಲ್ಲ. ಹೀಗಾಗಿ, ಮಾರುಕಟ್ಟೆಯಲ್ಲಿ ಲಭ್ಯವಿರುವ ಬೆಲೆಗೆ ರೈತರಯ ಹೆಸರುಕಾಳು ಮಾರುವಂತಾಗಿದೆ. ಬಾಗಲಕೋಟೆ, ಗದಗ, ಯಾದಗಿರಿ, ಧಾರವಾಡ, ಕೊಪ್ಪಳ, ವಿಜಯಪುರ, ರಾಯಚೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಹೆಸರುಕಾಳು ಪ್ರಮುಖ ಬೆಳೆಯಾಗಿದೆ. 2.50 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಯಲಾಗಿದೆ. ಬಾಗಲಕೋಟೆ, ಗದಗ, ಯಾದಗಿರಿ, ಹುಬ್ಬಳ್ಳಿ …
Read More »ಇಂದಿನಿಂದ ಗೇಟ್ ಅಳವಡಿಕೆ ಕೆಲಸ ಆರಂಭ,
ಬೆಂಗಳೂರು, ಆಗಸ್ಟ್ 14: ಕೊಪ್ಪಳದ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಿಂಕ್ ಕಟ್ಟಾಗಿ ಕೊಚ್ಚಿ ಹೋಗಿತ್ತು. ಹೀಗಾಗಿ ಅಪಾರ ಪ್ರಮಾಣದ ನೀರನ್ನು ಹೊರ ಬಿಡಲಾಯಿತು. ಈ ಸ್ಥಳಕ್ಕೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಇಂದು ಬುಧವಾರದಿಂದ ಜಲಾಶಯಕ್ಕೆಂದೆ ಸಿದ್ದಪಡಿಸಲಾದ ಗೇಟ್‌ಗಳನ್ನು ಅಳವಡಿಸುವ ಕಾರ್ಯ ಶುರುವಾಗಲಿದೆ ಎಂದು ಮಾಹಿತಿ ನೀಡಿದರು. ತುಂಗಭದ್ರಾ ಜಲಾಶಯದ ಗೇಟ್ ಕೊಚ್ಚಿ ಹೋದ ಬಳಿಕ ಇತರ ಗೇಟ್‌ಗಳ ಮೇಲೆ …
Read More »ಬೈಲಹೊಂಗಲ ಸಮೀಪದ ಬೆನಕಟ್ಟಿ ಗ್ರಾಮದಲ್ಲಿ ವ್ಯಕ್ತಿಯ ಕೊಲೆ
ಬೈಲಹೊಂಗಲ: ಸಮೀಪದ ಬೆನಕಟ್ಟಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಶನಿವಾರ ನಡೆದಿದೆ. ಸವದತ್ತಿ ತಾಲೂಕಿನ ಬೆನಕಟ್ಟಿ ಗ್ರಾಮದ ಕಾಡಪ್ಪ ರುದ್ರಪ್ಪ ಶಿರಸಂಗಿ(42) ಕೊಲೆಯಾದ ವ್ಯಕ್ತಿ. ಮಬನೂರ ಗ್ರಾಮದ ಲಕ್ಷ್ಮಣ ದೇವೇಂದ್ರಪ್ಪ ಹೂಲಿ(21), ಜೀವಾಪುರ ಗ್ರಾಮದ ಸತೀಶ ಯಮನಪ್ಪ ಅರಿಬೆಚ್ಚಿ(28) ಬಂಧಿತ ಆರೋಪಿಗಳು. ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
Read More »