ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯವು ಆಗಸ್ಟ್ 27ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಿದೆ. ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಪರೀಕ್ಷೆ ಆಗಸ್ಟ್ 27ಕ್ಕೆ ನಿಗದಿಯಾಗಿರುವುದರಿಂದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಿರುವ ಪದವಿ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿಯನ್ನು ವಿಶ್ವವಿದ್ಯಾಲಯದ www.kud.ac.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಪರೀಕ್ಷಾಂಗ ಕುಲಸಚಿವ ಎನ್.ವೈ.ಮಟ್ಟಿಹಾಳ್ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.
Read More »Daily Archives: ಆಗಷ್ಟ್ 27, 2024
ಶಾಸಕ ರವಿಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ’ರಾಜ್ಯ ಸರ್ಕಾರ ಉರುಳಿಸಲು ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿರುವ ಮಂಡ್ಯ ಶಾಸಕ ಪಿ.ರವಿಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ‘ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳನ್ನು ಮರೆ ಮಾಚಲು ಶಾಸಕರ ಖರೀದಿ ಕುರಿತು ಅಪಪ್ರಚಾರ ಮಾಡಲಾಗುತ್ತಿದೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು. ‘ಕಾಂಗ್ರೆಸ್ ಶಾಸಕರಿಗೆ ₹50 ರಿಂದ ₹100 ಕೋಟಿ ಆಮಿಷವೊಡ್ಡುತ್ತಿದ್ದಾರೆ ಎಂದು …
Read More »ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ; ಕನ್ನಡತಿ ಶ್ರೇಯಾಂಕಾ ಪಾಟೀಲ್‌ಗೆ ಸ್ಥಾನ
ಅಕ್ಟೋಬರ್ 3ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್‌ಗೆ ಬಿಸಿಸಿಐ ಭಾರತ ತಂಡವನ್ನು ಆಯ್ಕೆ ಮಾಡಿದೆ. ಬಾಂಗ್ಲಾದೇಶದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಪಂದ್ಯಾವಳಿ ಅಲ್ಲಿ ದಂಗೆ ಶುರುವಾದ ಬಳಿಕ, ಯುಎಇಗೆ ಸ್ಥಳಾಂತರ ಮಾಡಿದೆ. ಭಾರತ ಬಲಿಷ್ಠ ತಂಡವನ್ನು ಆಯ್ಕೆ ಮಾಡಿದ್ದು, ಈ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ. ಕನ್ನಡತಿ ಶ್ರೇಯಾಂಕಾ ಪಾಟೀಲ್ ಕೂಡ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಹರ್ಮನ್‌ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಮೃತಿ ಮಂದಾನಗೆ ತಂಡದ ಉಪನಾಯಕಿ ಪಟ್ಟ …
Read More »ಕುತೂಹಲ ಕೆರಳಿಸಿದೆ ಡಿಕೆಶಿ-ಎಚ್.ವಿಶ್ವನಾಥ್ ಮಾತುಕತೆ
ಬೆಂಗಳೂರು,ಆ.27- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ಕಿಡಿ ಹೊತ್ತಿಸಿದ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ. ಎಸ್.ಆರ್.ವಿಶ್ವನಾಥ್ ಅವರು ತಮ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಅತ್ತ ಎಚ್.ವಿಶ್ವನಾಥ್ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿರುದ್ದ ಡಿ.ಕೆ.ಶಿವಕುಮಾರ್ ಮನೆಯ ಎದುರೇ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಮುಡಾದಲ್ಲಿ …
Read More »‘DYSP’ ಎಂ.ಕೆ ಗಣಪತಿ ಆತ್ಮಹತ್ಯೆ ಕೇಸ್ : ಇಂಧನ ಸಚಿವ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್
ಬೆಂಗಳೂರು : ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆಜೆ ಜಾರ್ಜ್ ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ. ಹೌದು ಡಿವೈಎಸ್ಪಿ ಎಂ ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪ್ರಕರಣದಲ್ಲಿ ಕೆಜೆ ಜಾರ್ಜ್ ಅವರ ಪಾತ್ರ ಇಲ್ಲ ಎಂದು ಆದೇಶ ನೀಡಿದ್ದು, ಹೈಕೋರ್ಟ್ ಆದೇಶದ ವಿರುದ್ಧ ಎಂ ಕೆ ಗಣಪತಿ ಅವರ …
Read More »ಈ ಬಾರಿ ‘ಗಣೇಶ ಚತುರ್ಥಿ’ ಯಾವಾಗ..? : ದಿನಾಂಕ, ಮುಹೂರ್ತ, ಮಹತ್ವ ತಿಳಿಯಿರಿ.!
ಹಿಂದೂಗಳ ಹಬ್ಬವಾದ ಗಣೇಶ ಚತುರ್ಥಿಯನ್ನು ವಾರ್ಷಿಕವಾಗಿ ಆಡಂಬರ ಮತ್ತು ವೈಭವದಿಂದ ಆಚರಿಸಲಾಗುತ್ತದೆ. ಇದನ್ನು ವಿನಾಯಕ ಚತುರ್ಥಿ ಅಥವಾ ಗಣೇಶ ಉತ್ಸವ ಎಂದೂ ಕರೆಯುತ್ತಾರೆ. ಈ ಹಬ್ಬವು ಗಣೇಶನ ಜನನವನ್ನು ಸೂಚಿಸುತ್ತದೆ ಮತ್ತು 10 ದಿನಗಳವರೆಗೆ ಇರುತ್ತದೆ. ಹಬ್ಬದ ದಿನಾಂಕ, ಇತಿಹಾಸ, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಲು ಮುಂದೆ ಓದಿ. ಗಣೇಶ ಚತುರ್ಥಿ ಯಾವಾಗ? ಗಣೇಶ ಚತುರ್ಥಿ ವಾರ್ಷಿಕವಾಗಿ ಶುಕ್ಲ ಪಕ್ಷದ ಚತುರ್ಥಿ ತಿಥಿಯಂದು ಬರುತ್ತದೆ. ಇದು 10 ದಿನಗಳವರೆಗೆ …
Read More »ಕೈದಿಗಳಿಗೆ ಇನ್ಮುಂದೆ ‘ಹಾಟ್‌ಬಾಕ್ಸ್’ನಲ್ಲಿ ಊಟ
ಮೈಸೂರು: ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಗಳಿಗೆ ನೀಡುವ ಊಟವನ್ನು ಇದೇ ಮೊದಲ ಬಾರಿಗೆ ‘ಹಾಟ್‌ಬಾಕ್ಸ್’ನಲ್ಲಿ ಕೊಡುವುದಕ್ಕೆ ತಯಾರಿ ಆರಂಭವಾಗಿದೆ. ‘ಈ ಉಪಕ್ರಮದ ಮೂಲಕ ತಟ್ಟೆಯಲ್ಲಿ ಊಟ ಪಡೆಯುವುದು, ತಣ್ಣಗಾದ ಆಹಾರ ಸೇವಿಸುವ ಪ್ರಮೇಯ ತಪ್ಪಲಿದೆ’ ಎಂಬ ಆಶಯವನ್ನು ಇಲಾಖೆ ಹೊಂದಿದೆ. ಸದ್ಯ 810 ಕೈದಿಗಳಿರುವ ಕಾರಾಗೃಹದಲ್ಲಿ ನಿತ್ಯ ಸಂಜೆ 6.30ರೊಳಗೆ ರಾತ್ರಿ ಊಟ ವಿತರಿಸಲಾಗುತ್ತದೆ. ತಟ್ಟೆಗಳಲ್ಲಿ ಊಟ ಪಡೆಯುವ ಕೈದಿಗಳು ರಾತ್ರಿ ವೇಳೆ ಊಟ ಮಾಡುತ್ತಿದ್ದರು. ಅಷ್ಟರ ವೇಳೆಗೆ ಊಟವು …
Read More »ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ
ಮುಂಬೈ : ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಸೋಮವಾರ ಮಹಿಳೆ ತನ್ನ ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರತ್ನಗಿರಿಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್ ಓದುತ್ತಿರುವ ವಿದ್ಯಾರ್ಥಿನಿಗೆ ಆಟೋ ರಿಕ್ಷಾ ಚಾಲಕ ತನ್ನ ನೀರಿನಲ್ಲಿ ಮತ್ತು ಬೆರೆಸಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಪೊಲೀಸರ ಪ್ರಕಾರ, ಆಟೋ ರಿಕ್ಷಾದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ, ವಿದ್ಯಾರ್ಥಿನಿ ಚಾಲಕನಿಂದ ನೀರು …
Read More »ಕರ್ನಾಟಕ ಸೇರಿ ದೇಶದಲ್ಲಿ 21 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಿದ `UGC’
ನವದೆಹಲಿ : ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ) ದೇಶದಲ್ಲಿ 21 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಿದೆ. ಇವುಗಳಲ್ಲಿ ದೆಹಲಿಯಲ್ಲಿ 8 ಮತ್ತು ಕರ್ನಾಟಕದಲ್ಲಿ ಒಂದು ನಕಲಿ ವಿಶ್ವವಿದ್ಯಾಲಯಗಳಿವೆ. ಕಳೆದ ವರ್ಷ 20 ನಕಲಿ ವಿಶ್ವವಿದ್ಯಾಲಯಗಳಿದ್ದು, ಈ ವರ್ಷ ಅವುಗಳ ಸಂಖ್ಯೆ 21ಕ್ಕೆ ತಲುಪಿದೆ. ಈ ವಿಶ್ವವಿದ್ಯಾಲಯಗಳು ನೀಡುವ ಪದವಿಗಳು ಮಾನ್ಯವಾಗಿಲ್ಲ ಎಂದು ಹೇಳಿದೆ. ಮೇಲಾಗಿ, ಈ ನಕಲಿ ವಿಶ್ವವಿದ್ಯಾನಿಲಯಗಳು ಪದವಿಗಳನ್ನು ನೀಡಿದ್ದರೂ, ಉದ್ಯೋಗದ ಉದ್ದೇಶಕ್ಕಾಗಿ ಅವುಗಳನ್ನು ಗುರುತಿಸಲಾಗುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದೆ. …
Read More »KAS’ ಪೂರ್ವಭಾವಿ ಪರೀಕ್ಷೆ : ಬೆಳಗಾವಿಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂದು ಪರೀಕ್ಷಾರ್ಥಿಗಳ ಪ್ರತಿಭಟನೆ!
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಇಂದು ನಡೆಯುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಅಂಜುಮನ್ ಕಾಲೇಜಿನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಅಲ್ಲದೇ ಪ್ರಶ್ನೆ ಪತ್ರಿಕೆ ಕೊಡಲು 15 ನಿಮಿಷ ತಡ ಮಾಡಲಾಗಿದೆ. ಒಎಂಆರ್ ಶೀಟ್ ಕೂಡ ಅದಲು ಬದಲಾಗಿದೆ ಎಂದು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿರುವ …
Read More »