ಮುಂಬೈ : ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಸೋಮವಾರ ಮಹಿಳೆ ತನ್ನ ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರತ್ನಗಿರಿಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್ ಓದುತ್ತಿರುವ ವಿದ್ಯಾರ್ಥಿನಿಗೆ ಆಟೋ ರಿಕ್ಷಾ ಚಾಲಕ ತನ್ನ ನೀರಿನಲ್ಲಿ ಮತ್ತು ಬೆರೆಸಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಪೊಲೀಸರ ಪ್ರಕಾರ, ಆಟೋ ರಿಕ್ಷಾದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ, ವಿದ್ಯಾರ್ಥಿನಿ ಚಾಲಕನಿಂದ ನೀರು …
Read More »Monthly Archives: ಆಗಷ್ಟ್ 2024
ಕರ್ನಾಟಕ ಸೇರಿ ದೇಶದಲ್ಲಿ 21 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಿದ `UGC’
ನವದೆಹಲಿ : ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ) ದೇಶದಲ್ಲಿ 21 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಿದೆ. ಇವುಗಳಲ್ಲಿ ದೆಹಲಿಯಲ್ಲಿ 8 ಮತ್ತು ಕರ್ನಾಟಕದಲ್ಲಿ ಒಂದು ನಕಲಿ ವಿಶ್ವವಿದ್ಯಾಲಯಗಳಿವೆ. ಕಳೆದ ವರ್ಷ 20 ನಕಲಿ ವಿಶ್ವವಿದ್ಯಾಲಯಗಳಿದ್ದು, ಈ ವರ್ಷ ಅವುಗಳ ಸಂಖ್ಯೆ 21ಕ್ಕೆ ತಲುಪಿದೆ. ಈ ವಿಶ್ವವಿದ್ಯಾಲಯಗಳು ನೀಡುವ ಪದವಿಗಳು ಮಾನ್ಯವಾಗಿಲ್ಲ ಎಂದು ಹೇಳಿದೆ. ಮೇಲಾಗಿ, ಈ ನಕಲಿ ವಿಶ್ವವಿದ್ಯಾನಿಲಯಗಳು ಪದವಿಗಳನ್ನು ನೀಡಿದ್ದರೂ, ಉದ್ಯೋಗದ ಉದ್ದೇಶಕ್ಕಾಗಿ ಅವುಗಳನ್ನು ಗುರುತಿಸಲಾಗುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದೆ. …
Read More »KAS’ ಪೂರ್ವಭಾವಿ ಪರೀಕ್ಷೆ : ಬೆಳಗಾವಿಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂದು ಪರೀಕ್ಷಾರ್ಥಿಗಳ ಪ್ರತಿಭಟನೆ!
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಇಂದು ನಡೆಯುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಅಂಜುಮನ್ ಕಾಲೇಜಿನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಅಲ್ಲದೇ ಪ್ರಶ್ನೆ ಪತ್ರಿಕೆ ಕೊಡಲು 15 ನಿಮಿಷ ತಡ ಮಾಡಲಾಗಿದೆ. ಒಎಂಆರ್ ಶೀಟ್ ಕೂಡ ಅದಲು ಬದಲಾಗಿದೆ ಎಂದು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿರುವ …
Read More »ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ: ನಟ ದರ್ಶನ್ & ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್?
ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ: ನಟ ದರ್ಶನ್ & ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್? ಬೆಳಗಾವಿ, ಆಗಸ್ಟ್ 27: ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಫೋಟೋ ವೈರಲ್ ಆಗಿದ್ದು, ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಇತರ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಹೀಗಾಗಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು …
Read More »ನಮ್ಮ ಸರ್ಕಾರ ಇರುವವರೆಗೂ `ಗೃಹಲಕ್ಷ್ಮಿ’ ಯೋಜನೆ ನಿಲ್ಲಲ್ಲ : CM
ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದನವಾಗಿದೆ. ನಮ್ಮ ಸರ್ಕಾರ ಇರುವ ತನಕ ಈ ಯೋಜನೆ ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿಯರಿಗೆ ಬೆಲೆಯೇರಿಕೆಯ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ. ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ, ಮನೆಗೆ …
Read More »ಕೃಷ್ಣನೂರಿನಲ್ಲಿ ಅಷ್ಟಮಿ ಸಂಭ್ರಮ, ಇಂದು ಶ್ರೀಕೃಷ್ಣ ಲೀಲೋತ್ಸವ
ಉಡುಪಿ: ಶ್ರೀಕೃಷ್ಣಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವವು ಸೋಮವಾರ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ವೈಭವದಿಂದ ನಡೆಯಿತು. ಭಂಡಾರಕೇರಿ ಮಠದ ಶ್ರೀವಿದ್ಯೇಶತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು. ಅದಮಾ ರು ಮಠದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಪೂಜೆಗೆ ಸಹಕರಿಸಿದರು. ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ದೇವರ ದರ್ಶನ ಪಡೆದರು. ಸೋಮವಾರ ರಾತ್ರಿ ನೈವೇ ದ್ಯ ಸಮರ್ಪಿಸಿ ಮಹಾಪೂಜೆ ನಡೆಸಿದ ಶ್ರೀಪಾದರು ಚಂದ್ರೋದಯದ ವೇಳೆ 12.07 …
Read More »ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ: ಅರಣ್ಯಾಧಿಕಾರಿ ಅಮಾನತು
ಚಿಕ್ಕಮಗಳೂರು: ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ ನೀಡಿದ ಆರೋಪದ ಮೇಲೆ ಕೊಪ್ಪ ವಿಭಾಗದ ಕಳಸ ವಲಯದ ಉಪ ವಲಯ ಅರಣ್ಯ ಅಧಿಕಾರಿ ಚಂದನಗೌಡ ದ್ಯಾಮನಗೌಡರ ಅವರನ್ನು ಅರಣ್ಯ ಇಲಾಖೆ ಸೋಮವಾರ ಅಮಾನತು ಮಾಡಿ ಆದೇಶ ಹೊರಡಿಸಿದೆ. ಮೂಡಿಗೆರೆ ತಾಲೂಕಿನ ರಾಣಿಝರಿ ಪ್ರವಾಸಿ ತಾಣದ ಸಮೀಪದಿಂದ ಬಲ್ಲಾಳ ರಾಯನದುರ್ಗ ಮತ್ತು ಬಂಡಾಜೆ ಜಲಪಾತ ವೀಕ್ಷಣೆಗೆ ಚಾರಣಕ್ಕೆ ತೆರಳಲು ಆನ್ಲೈನ್ ಮೂಲಕ 250ರೂ. ಪಾವತಿಸಿ ಕಾಯ್ದಿರಿಸಲು ಅವಕಾಶವಿದೆ. ಈ ಚಾರಣದ ಉಸ್ತುವಾರಿಯನ್ನು ಅರಣ್ಯ …
Read More »ದುಬಾರಿ ಮದ್ಯ ನಾಳೆಯಿಂದ ಅಗ್ಗ: ಯಾವ ಬ್ರ್ಯಾಂಡ್ ದರ ಎಷ್ಟು ಇಳಿಕೆ?
ದುಬಾರಿ ಮದ್ಯ ನಾಳೆಯಿಂದ ಅಗ್ಗ: ಯಾವ ಬ್ರ್ಯಾಂಡ್ ದರ ಎಷ್ಟು ಇಳಿಕೆ? ಬೆಂಗಳೂರು: ದುಬಾರಿ ದರದ (ಪ್ರೀಮಿಯಂ) ಬ್ರ್ಯಾಂಡ್ಗಳ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಇಳಿಕೆ ಮಾಡಿ ಅಬಕಾರಿ ಇಲಾಖೆ ಆದೇಶ ಹೊರಡಿಸಿದೆ. ಮಂಗಳವಾರದಿಂದಲೇ ಪ್ರೀಮಿಯಂ ಬ್ರ್ಯಾಂಡ್ಗಳ ಮದ್ಯದ ದರದಲ್ಲಿ ಶೇಕಡ 15ರಿಂದ ಶೇ 20ರಷ್ಟು ಇಳಿಕೆಯಾಗಲಿದೆ. ದುಬಾರಿ ಬೆಲೆಯ ಮದ್ಯದ ದರಗಳನ್ನು ನೆರೆಯ ರಾಜ್ಯಗಳಿಗೆ ಸರಿಸಮನಾಗಿ ಪರಿಷ್ಕರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ರ …
Read More »ಕುಮಾರಸ್ವಾಮಿಯಷ್ಟು ಸುಳ್ಳುಗಾರ ದೇಶದಲ್ಲೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕುಮಾರಸ್ವಾಮಿಯಷ್ಟು ಸುಳ್ಳುಗಾರ ದೇಶದಲ್ಲೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ: ‘ಮುಡಾ ಪ್ರಕರಣದಿಂದ ನಾನು ಹೆದರಿದ್ದೇನೆ. ನನ್ನ ಕಾರಿನಲ್ಲೇ ದಾಖಲೆಗಳನ್ನು ಇಟ್ಟುಕೊಂಡು ಓಡಾಡುತ್ತಿದ್ದೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ. ಬಹುಶಃ ಅವರಷ್ಟು ಸುಳ್ಳು ಹೇಳುವವರು ಈ ದೇಶದಲ್ಲೇ ಹುಟ್ಟಿಲ್ಲ. ಬೇಕಾದರೆ ನೀವೇ ನನ್ನ ಕಾರಿನಲ್ಲಿ ಬಂದು ನೋಡಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ನಗರದಲ್ಲಿ ಸೋಮವಾರ ಸಂಜೆ ಮಾತನಾಡಿದ ಅವರು, ‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನೇ …
Read More »ರಥದ ಕಳಸ ಬಿದ್ದು ಬಾಲಕ ಸಾವು
ಚಚಡಿ: ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದಲ್ಲಿ ಸೋಮವಾರ, ರಥೋತ್ಸವ ವೇಳೆ ರಥದ ಮೇಲಿನ ಬೆಳ್ಳಿಯ ನವಿಲು ಬಿದ್ದು ಶಿವಾನಂದ ರಾಜಕುಮಾರ ಸಾವಳಗಿ (13) ಎಂಬ ಬಾಲಕ ಮೃತಪಟ್ಟಿದ್ದಾನೆ. ಪ್ರತಿ ವರ್ಷದ ವಾಡಿಕೆಯಂತೆ ಶ್ರಾವಣದ ಪ್ರಯುಕ್ತ ಸಂಗಮೇಶ್ವರ ರಥೋತ್ಸವಕ್ಕೆ ಸಿದ್ಧತೆಯಾಗಿತ್ತು. 30 ಅಡಿ ಎತ್ತರದ ರಥದ ಮೇಲಿನ ಕಳಸದ ಮೇಲೆ 5 ಕೆಜಿ ತೂಕದ ಬೆಳ್ಳಿಯ ನವಿಲು ಪ್ರತಿಷ್ಠಾಪಿಸಲಾಗಿತ್ತು. ಸಾವಿರ ವರ್ಷಗಳ ಇತಿಹಾಸಯುಳ್ಳ ಈ ಜಾತ್ರೆಯಲ್ಲಿ ಇದೇ ಮೊದಲ ಸಲ ಬೆಳ್ಳಿಯ …
Read More »