Breaking News

Monthly Archives: ಆಗಷ್ಟ್ 2024

ಧರ್ಮ ಜಾಗೃತಿ ಇದ್ದರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ಸಾಧ್ಯ’

ಮೂಡಲಗಿ: ‘ಧರ್ಮದ ಜಾಗೃತಿ ಇದ್ದರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲಸಲು ಸಾಧ್ಯವಿದೆ’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹೇಳಿದರು. ತಾಲ್ಲೂಕಿನ ಯಾದವಾಡದ ಬಸವೇಶ್ವರ ವೃತ್ತದಲ್ಲಿ ನೂತನವಾಗಿ ನಿರ್ಮಿಸಿರುವ ಗಜಾನನ ಮಂದಿರದ ಉದ್ಘಾಟನೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ನವಗ್ರಹ ಮೂರ್ತಿಗಳ ಪ್ರತಿಷ್ಠಾಪನೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.   ಬೆಳಗಾವಿ ಜಿಲ್ಲೆಯನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ಅಭಿವೃದ್ಧಿಯ ಬಗ್ಗೆ ಅಧಿವೇಶದನದಲ್ಲಿ ಪ್ರಸ್ತಾಪಿಸಿರುವೆ. ಸಂಸದರ ಅಭಿವೃದ್ಧಿ ನಿಧಿಯಿಂದ ಯಾದವಾಡಕ್ಕೆ ಸಮುದಾಯ ಭವನ …

Read More »

ಟಿಬಿ ಡ್ಯಾಂ ಗೇಟ್​ ದುರಸ್ತಿ ಕಾರ್ಯ ಯಶಸ್ವಿ: ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದ ಡಿಕೆ ಶಿ

ಟಿಬಿ ಡ್ಯಾಂ ಗೇಟ್​ ದುರಸ್ತಿ ಕಾರ್ಯ ಯಶಸ್ವಿ: ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದ ಡಿಕೆ ಶಿ   ಬೆಂಗಳೂರು, ಆ.17: ತುಂಗಭದ್ರಾ ಡ್ಯಾಂನಕ್ರಸ್ಟಗೇಟ್19 ಕೊಚ್ಚಿಕೊಂಡು ಹೋಗಿದ್ದರಿಂದ ಕಳೆದ ಆಗಸ್ಟ್ 10 ರಿಂದ ನಿರಂತರವಾಗಿ ನೀರು ಹರಿದು ವ್ಯರ್ಥವಾಗಿ ಹೋಗುತ್ತಿತ್ತು. ಇದೀಗ ಯಶಸ್ವಿಯಾಗಿ ಗೇಟ್ ದುರಸ್ತಿ ಕೆಲಸ ಮುಗಿಸಿದ್ದು, ನೀರನ್ನು ಬಂದ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್(DK Shivakumar) ಮಾತನಾಡಿ, ‘ತುಂಗಭದ್ರಾ ಡ್ಯಾಂ ಗೇಟ್​ ದುರಸ್ತಿ ಕಾರ್ಯ ಯಶಸ್ವಿಯಾಗಿದೆ. …

Read More »

ಅನುದಾನ ಹಂಚಿಕೆ ತಾರತಮ್ಯ: ಆಕ್ರೋಶ

ಬೆಳಗಾವಿ: ಮಹಾನಗರ ಪಾಲಿಕೆಯ ಬಜೆಟ್‌ನಲ್ಲಿ ಎಲ್ಲ 58 ವಾರ್ಡ್‌ಗಳಿಗೂ ಅನುದಾನ ಸರಿಯಾಗಿ ಹಂಚಿಕೆ ಆಗಿಲ್ಲ ಎಂದು ಆರೋಪಿಸಿ ಪ್ರತಿಪಕ್ಷ ನಾಯಕರು, ಆಡಳಿತಾರೂಢ ಪಕ್ಷವನ್ನು ತರಾಟೆ ತೆಗೆದುಕೊಂಡರು. ಆಯ್ದ 37 ವಾರ್ಡ್‌ ಸದಸ್ಯರಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ತಾರತಮ್ಯ ಎಸಗಲಾಗಿದೆ ಎಂದೂ ಆಕ್ಷೇಪ ವ್ಯಕ್ತಪಡಿಸಿದರು.   ಮೇಯರ್‌ ಸವಿತಾ ಕಾಂಬಳೆ ಅವರ ಅಧ್ಯಕ್ಷತೆಯಲ್ಲಿ ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಶನಿವಾರ ನಡೆದ ಕೌನ್ಸಿಲ್‌ ಸಭೆಯಲ್ಲಿ ಈ ಬಗ್ಗೆ ಕೆಲಕಾಲ ಬಿಸಿ ಚರ್ಚೆ …

Read More »

ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್: ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆ ನೀಡಬೇಕು ಎಂದ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್​ 17: ಮುಡಾ ಹಗರಣದಲ್ಲಿ (muda) ಸಿಎಂ ಸಿದ್ದರಾಮಯ್ಯ(Siddaramaiah)ವಿರುದ್ಧ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ನಿರ್ಧಾರ ಸಿಎಂಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ. ಸದ್ಯ ಈ ವಿಚಾರವಾಗಿ ಸಿಎಂ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಮಾಡಿದ್ದು, ರಾಜ್ಯಪಾಲರ ನಿರ್ಣಯವನ್ನ ಸಂಪುಟ ಸಭೆ ಖಂಡಿಸಿದೆ. ಬಳಿಕ ಮಾತನಾಡಿದ ಸಿದ್ದರಾಮಯ್ಯ, ನಾನು ಯಾವ ಕಾರಣಕ್ಕೆ ರಾಜೀನಾಮೆಯನ್ನ ನೀಡಬೇಕು? ಯಾವ ಆಧಾರದ ಮೇಲೆ ನೀಡಬೇಕು? ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆಯನ್ನ …

Read More »

ಖಾಸಗಿ ಶಾಲೆಗೆ ಸೆಡ್ಡು ಹೊಡೆದ ಸರ್ಕಾರಿ ಶಾಲೆ;

ಸರ್ಕಾರಿ ಶಾಲೆಗಳು ಬದಲಾಗುತ್ತಿವೆ‌. ಖಾಸಗಿ ಶಾಲೆಗಳ ಅಬ್ಬರದ ನಡುವೆಯೋ ಸರ್ಕಾರಿ ಶಾಲೆಗಳು ಪೈಪೋಟಿ ನೀಡುತ್ತಿವೆ. ಇದಕ್ಕೆ ವಿಜಯಪುರದ ಸರ್ಕಾರಿ ಶಾಲೆಗಳು ಉದಾಹರಣೆಯಾಗಿದೆ. ಯಾಕೆ ಅಂತೀರಾ? ಈ ಸ್ಟೋರಿ ಓದಿ.ಸರ್ಕಾರಿ ಶಾಲೆಗಳು ಅಂದರೆ ಸಾಕು ಜನರಿಗೆ ಅಸಡ್ಯ. ಅಲ್ಲಿ ಮಕ್ಕಳು ಕಲಿಯೋದಿಲ್ಲ, ಕಲಿಸೋರು ಇಲ್ಲ. ಸೌಲಭ್ಯಗಳಂತೂ ಇಲ್ಲವೇ ಇಲ್ಲ ಎನ್ನುವುದು ಪೋಷಕರ ಮಾತು. ಇದಕ್ಕೆ ತದ್ವಿರುದ್ಧವಾಗಿ ಬದಲಾಗುತ್ತಿವೆ ವಿಜಯಪುರದ ಸರ್ಕಾರಿ ಶಾಲೆಗಳು. ಅದರಲ್ಲೂ ವಿಜಯಪುರದ ಇಬ್ರಾಹಿಂಪುರದ ಬಳಿಯ ಸರ್ಕಾರಿ ಪ್ರಾಥಮಿಕ ಶಾಲೆ …

Read More »

ಗ್ರಾಮಸ್ಥರೆಲ್ಲರೂ ಸೇರಿಮಹರ್ಷಿ ಭಗೀರಥ ದೇವಸ್ಥಾನ ಮತ್ತು ಸಮುದಾಯ ಭವನವನ್ನು ನಿರ್ಮಿಸಿರುವುದು ಪ್ರಶಂಸನೀಯ; ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಗ್ರಾಮಸ್ಥರೆಲ್ಲರೂ ಸೇರಿಕೊಂಡು ಒಗ್ಗಟ್ಟಿನಿಂದ ಮಹರ್ಷಿ ಭಗೀರಥ ದೇವಸ್ಥಾನ ಮತ್ತು ಸಮುದಾಯ ಭವನವನ್ನು ನಿರ್ಮಿಸಿರುವುದು ಪ್ರಶಂಸನೀಯ ಎಂದು ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಬಿಲಕುಂದಿ ಗ್ರಾಮಸ್ಥರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ತಾಲ್ಲೂಕಿನ ಬಿಲಕುಂದಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮಹರ್ಷಿ ಭಗೀರಥ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಮುದಾಯ ಭವನದಲ್ಲಿ ಗ್ರಾಮಸ್ಥರು ನೀಡಿದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಭಗೀರಥ ಸಮಾಜ ಬಾಂಧವರು ಒಂದಾಗಿ ಸಾರ್ವಜನಿಕ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!ಸಿದ್ನಾಳ ಗ್ರಾಮದ ಶ್ರೀ ವಿಠ್ಠಲ ರುಕ್ಮಿಣಿ ಮಂದಿರ ಆವರಣದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಸಿದ್ನಾಳ ಗ್ರಾಮದ ಶ್ರೀ ವಿಠ್ಠಲ ರುಕ್ಮಿಣಿ ಮಂದಿರ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …

Read More »

ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಇಂದಿಗೂ, ಎಂದೆಂದಿಗೂ ಅಮರ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ನಮ್ಮ ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯೋತ್ಸವದ ದಿನದಂದು ಹುಟ್ಟಿ, ಗಣ ರಾಜ್ಯೋತ್ಸವದಂದು ಮರಣ ಹೊಂದಿದ ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಇಂದಿಗೂ, ಎಂದೆಂದಿಗೂ ಅಮರ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ತಾಲ್ಲೂಕಿನ ಕಲ್ಲೊಳ್ಳಿ ಪ.ಪಂ ಕಚೇರಿಯ ಹತ್ತಿರ ನಿರ್ಮಾಣಗೊಂಡ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ರಾಯಣ್ಣನಂತಹ ಕೆಚ್ಚದೆಯ ಶೂರರ ಜೀವನವು ಪ್ರತಿಯೊಬ್ಬ ವ್ಯಕ್ತಿಗೂ ಮಾದರಿಯಾಗಿದೆ ಎಂದು ತಿಳಿಸಿದರು. ಕಿತ್ತೂರು …

Read More »

ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ: ವಾಹನ ಸವಾರರು ಪರದಾಟ

ಬೆಂಗಳೂರು, ಆ.16: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿವರಮಹಾಲಕ್ಷ್ಮಿಹಬ್ಬದಂದೆ ವರುಣನ ಆಗಮನವಾಗಿದೆ. ದಿಢೀರ್ ಮಳೆಗೆ ಹಬ್ಬದ ಸಡಗರದಲ್ಲಿದ್ದ ಸಿಟಿಮಂದಿ ಸುಸ್ತಾಗಿದ್ದಾರೆ. ನಗರದ ವಿಧಾನ ಸೌಧ, ಕಾರ್ಪೊರೇಷನ್ ಸರ್ಕಲ್, ರಾಜಾಜಿನಗರ, ವಿಜಯನಗರ, ಬಸವೇಶ್ವರನಗರ, ಶಾಂತಿನಗರ, ರಿಚ್ಮಂಡ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆ(Rain) ಆಗಿದ್ದು, ದಿಢೀರ್​ ಮಳೆಯಿಂದಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಇನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲೂ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಹೆಸರಘಟ್ಟ ಸೇರಿದಂತೆ ಹಲವಾರು ಕಡೆ …

Read More »

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು, : ಬೆಂಗಳೂರು ಮಳೆ(Bengaluru Rain) ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ (Siddaramaiah) ಅವರು, ‘ಬೆಂಗಳೂರು ನಗರದಲ್ಲಿಕಂಟ್ರೋಲ್‌ ರೂಂ ಗಳನ್ನು ಗುರುತಿಸಲಾಗಿದೆ. ದೊಡ್ಡ ಚರಂಡಿಗಳು ಓಪನ್‌ ಇರುವ ಸ್ಥಳಗಳನ್ನು ಗುರುತಿಸಿ ಮೊದಲೇ ಬಂದೋಬಸ್ತ್‌ ಮಾಡಲಾಗಿದೆ. ಇದರಿಂದ ಇದುವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ. ಇನ್ನು ರಾಜಕಾಲುವೆಗಳ ಒತ್ತುವರಿ ತೆರವು ಮಾಡಬೇಕು. ಜೊತೆಗೆ ಕೋಡಿಗೆ ಗೇಟ್‌ ಅಳವಡಿಸುವ ಮೂಲಕ ಮಳೆಗಾಲದಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ನಿಯಂತ್ರಿಸಿ ಪ್ರವಾಹ …

Read More »