ಬೆಂಗಳೂರು: ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಸೆ.22ರಂದು ನಿಗದಿಪಡಿಸಿರುವ ಪಿಎಸ್ಐ ಪರೀಕ್ಷೆಯನ್ನು ಮುಂದೂಡಿ ಕ್ರಮ ವಹಿಸುವ ಪ್ರಯತ್ನ ಮಾಡುವುದಾಗಿ ಗೃಹ ಸಚಿವರು ತಿಳಿಸಿದ್ದಾಗಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿ ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದರು. …
Read More »Daily Archives: ಸೆಪ್ಟೆಂಬರ್ 10, 2024
ಸಿಎಂ ಬದಲಾವಣೆ ಬಗ್ಗೆ ಕೋಡಿಮಠದ ಸ್ವಾಮೀಜಿಯಿಂದ ಸ್ಫೋಟಕ ಭವಿಷ್ಯ
ಪ್ರಕೃತಿ ವಿಕೋಪಗಳು ಮುಂದುವರಿಯಲಿದ್ದು, ರಾಜನ ಮೇಲೂ ಭಂಗ ಬರಲಿದೆ ಎಂದು ಹಾಸನದ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ ಹಾಸನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಾಕೃತಿಕ ವಿಕೋಪಗಳು ಮುಂದುವರಿಯಲಿದೆ. ಪಂಚಭೂತಗಳಿಂದ ದೋಷ ಇದ್ದು ಆಕಾಶದಲ್ಲೂ ದೊಡ್ಡ ಪರಿಣಾಮ ಬೀರಲಿದ್ದು, ಇದು ರಾಜನಿಗೂ ಭಂಗ ಆಗಲಿದೆ ಎಂದರು. ಕರ್ನಾಟಕದ ಮುಖ್ಯಮಂತ್ರಿ ಬದಲಾಗುತ್ತಾರಾ ಎಂಬ ಪ್ರಶ್ನೆಗೆ ಇದು ನ್ಯಾಯಾಲಯದಲ್ಲಿ ಇರುವುದರಿಂದ ನಾನು ಮಾತನಾಡುವುದು ಸರಿಯಾಗುವುದಿಲ್ಲ. ಆದರೆ ಸಿಎಂ …
Read More »ರಾಜ್ಯ ಸರ್ಕಾರದಿಂದ SC ಸಮುದಾಯಕ್ಕೆ ಭರ್ಜರಿ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ.!
ರಾಜ್ಯ ಸರ್ಕಾರದಿಂದ SC ಸಮುದಾಯಕ್ಕೆ ಭರ್ಜರಿ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ.! ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ. 2024-25ನೇ ಸಾಲಿನಲ್ಲಿ ಈ ಯೋಜನೆಗಳಿಗೆ ಅರ್ಜಿ ಅಹ್ವಾನಿಸಿದೆ. ಅಕ್ಟೋಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, 2023-24ನೇ ಸಾಲಿನಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ 9482 300 …
Read More »ನಾನು ಮೋದಿಯನ್ನು ದ್ವೇಷಿಸುವುದಿಲ್ಲ’:ಅಮೇರಿಕಾದಲ್ಲಿ ರಾಹುಲ್ ಗಾಂಧಿ ಹೇಳಿಕೆ
ನವದೆಹಲಿ: ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಏನು ಯೋಚಿಸುತ್ತಾರೆ ಎಂಬುದು ಸೇರಿದಂತೆ ಭಾರತೀಯ ರಾಜಕೀಯಕ್ಕೆ ಸಂಬಂಧಿಸಿದ ಅನೇಕ ಪ್ರಮುಖ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ವಿಷಯದ ಸುತ್ತಲಿನ ಎಲ್ಲಾ ದ್ವೇಷವನ್ನು ತಳ್ಳಿಹಾಕಿದ ರಾಹುಲ್ ಗಾಂಧಿ, “ನಾನು ಮೋದಿಯವರನ್ನು ದ್ವೇಷಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ನಾಯಕ ಅವರು ಪ್ರಧಾನಿಯವರ ದೃಷ್ಟಿಕೋನವನ್ನು ಒಪ್ಪುವುದಿಲ್ಲ.ಆದರೆ ಇನ್ನೂ ಅವರೊಂದಿಗೆ …
Read More »ಭಾಗ್ಯಲಕ್ಷೀ ಯೋಜನೆಯ ಹೆಸರು ಬದಲು: ಇಲ್ಲಿದೆ ಪೋಷಕರಿಗೆ ಮಹತ್ವದ ಮಾಹಿತಿ
ಬೆಂಗಳೂರು, ಸೆಪ್ಟೆಂಬರ್ 10: ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಲ್ಲಿ ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸುವ ದೃಷ್ಟಿಯಿಂದ ಅಂದಿನ ಬಿಜೆಪಿ ಸರ್ಕಾರ ಭಾಗ್ಯಲಕ್ಷೀ ಯೋಜನೆಯನ್ನು ಜಾರಿಗೆ ತಂದಿತು. 2006ರಲ್ಲಿ ಆರಂಭವಾದ ಈ ಯೋಜನೆಯ ಮೊತ್ತವು ಕೆಲವು ಫಲಾನುಭವಿಗಳ ಕೈ ಸೇರುವ ಸಮಯ ಸಮೀಪಿಸುತ್ತಿದೆ. ಬಾಂಡ್ ಮೆಚ್ಯುರಿಟಿ ಆದ ಬಗ್ಗೆ ಲೆಕ್ಕಚಾರ ಆರಂಭವಾಗಿದೆ. ಈ ಬಗ್ಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಟಿವಿ …
Read More »ರೈಲಿನಲ್ಲಿ ಖಾಸಗಿ ಅಂಗ ತೋರಿಸಿದ ವ್ಯಕ್ತಿಗೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ
ಎಷ್ಟೇ ಕಾನೂಕು ಕ್ರಮಗಳನ್ನು ಜಾರಿಗೆ ತಂದ್ರೂ ಕಾಮುಕ ಅಟ್ಟಹಾಸ ಮಾತ್ರ ನಿಲ್ಲುತ್ತಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ಮಹಿಳೆಯರಿಗೆ ಕಿರುಕುಳವನ್ನು ನೀಡುತ್ತಲೇ ಇರುತ್ತಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಕೂಡಾ ಚಲಿಸುತ್ತಿರುವ ರೈಲಿನಲ್ಲಿ ಮಹಿಳಾ ಪ್ರಯಾಣಿಕರಿಗೆ ತನ್ನ ಖಾಸಗಿ ಅಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದು, ದಿಟ್ಟ ಮಹಿಳೆಯೊಬ್ಬರು ಆತನಿಗೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿ ಎಲ್ರ ಮುಂದೆ ಆತನ ಗ್ರಹಚಾರ ಬಿಡಿಸಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.ಇತ್ತೀಚಿಗಂತೂ ಮಹಿಳೆಯರು …
Read More »ಧ್ರುವ ಮ್ಯಾನೇಜರ್ ಅಶ್ವಿನ್ ಅರೆಸ್ಟ್
ಬೆಂಗಳೂರು: ಜಿಮ್ ಟ್ರೇನರ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನ ಆಗಿದೆ ಎನ್ನಲಾಗಿದೆ. ಬನಶಂಕರಿ ಪೊಲೀಸರು ಆರೋಪಿ ಅಶ್ವಿನ್ನ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಮೇ.26 ರಂದು ರಾತ್ರಿ ಪ್ರಾಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವ ಸರ್ಜಾಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ …
Read More »ದಾಂಡೇಲಿಯ ಗ್ಯಾರೇಜಿನಲ್ಲಿತ್ತು ಹತ್ತು ಅಡಿ ಉದ್ದದ ಮೊಸಳೆ.
ದಾಂಡೇಲಿ : ತಾಲೂಕಿನ ಅಂಬಿಕಾನಗರದಲ್ಲಿ ಸ್ಥಳೀಯ ಕೆಪಿಸಿಯ ಗ್ಯಾರೇಜಿನಲ್ಲಿ 10 ಅಡಿ ಉದ್ದದ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಈ ಬಗ್ಗೆ ಕೆಪಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದಾರೆ. ಅರಣ್ಯ ಇಲಾಖೆಯ ನುರಿತ ರಕ್ಷಣಾ ತಂಡ ಸ್ಥಳಕ್ಕಾಗಮಿಸಿ ಮೊಸಳೆಯನ್ನು ಸುರಕ್ಷಿತವಾಗಿ ಹಿಡಿದು ಸ್ಥಳಾಂತರಗೊಳಿಸಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಚೌವ್ಹಾಣ್ ಅವರ ಮಾರ್ಗದರ್ಶನದಲ್ಲಿ ವಲಯಾರಣ್ಯಾಧಿಕಾರಿಗಳಾದ ಎನ್.ಎಲ್.ನದಾಫ್ ಮತ್ತು ಮಹಿಮ್ ಜನ್ನು …
Read More »ಶಿವಾಪೂರ(ಹ) ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಅವಿರತ ಶ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ
ಶಿವಾಪೂರ(ಹ) ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಅವಿರತ ಶ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ ಅಡವಿ ಸಿದ್ಧೇಶ್ವರ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಅಂಕಲಗಿ ಶ್ರೀ ಮಠದ ಕಾರ್ಯಗಳನ್ನು ಪ್ರಶಂಶಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ಇತಿಹಾಸ ಪ್ರಸಿದ್ಧ ಅಂಕಲಗಿ ಅಡವಿ ಸಿದ್ಧೇಶ್ವರ ಮಹಾಸ್ವಾಮಿಗಳು ಇಲ್ಲಿ ಬಂದು ನೆಲೆಸಿರುವ ಇತಿಹಾಸಗಳಿದ್ದು, ಈ ಮಠಕ್ಕೆ ಭವ್ಯವಾದ ಪರಂಪರೆ ಇದೆ. ನಮ್ಮ ಕ್ಷೇತ್ರದ ಭಕ್ತಾಧಿಗಳು ಸೇರಿಕೊಂಡು ಶ್ರೀ ಮಠದ ಅಭಿವೃದ್ಧಿಗೆ ಪಣ ತೊಡೋಣ. ಮಠದ ವಿಷಯದಲ್ಲಿ …
Read More »