ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಈಗ ಯಾರೂ ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಸಿಎಂ ಸ್ಥಾನ ಖಾಲಿ ಇಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವೇ ಸಿಎಂ ಆಗಿ ಮುಂದುವರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬುಧವಾರ ಹೇಳಿದ್ದಾರೆ. ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿದ್ದು, ನಾಯಕತ್ವ ಬದಲಾದರೆ ಸಿಎಂ ಆಗುವ ರೇಸ್‌ಗೆ ಕಾಂಗ್ರೆಸ್‌ನ ಕೆಲ …
Read More »Daily Archives: ಸೆಪ್ಟೆಂಬರ್ 11, 2024
ಕಸ ತಂದು ಸುರಿದ ಲಾರಿ ಚಾಲಕನಿಗೆ ₹5,000 ದಂಡ
11: ಜಾಸ್ತಿ ಮೈಮೇಲೆ ಬಿಟ್ಟುಕೊಂಡ್ರೆ ತಲೆ ಮೇಲೆ ಕುಳಿತುಕೊಂಡುಬಿಡ್ತಾರೆನ್ನುವ ಮಾತಿದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ಹೊರ ರಾಜ್ಯದವರದ್ದೇ ದರ್ಬಾರ್ ಆಗ್ಬಿಟ್ಟಿದೆ. ಆದ್ರೆ ಕನ್ನಡಿಗರು ಒಮ್ಮೆ ತಾಳ್ಮೆ ಕಳೆದುಕೊಂಡರೆ, ಮೆರೆಯುವವರ ಬುಡಕ್ಕೆ ಬೆಂಕಿ ಇಡುತ್ತಾರೆನ್ನುವುದು ತಿಳಿದಿರಬೇಕಾಗುತ್ತದೆ. ಇದೀಗ ಕೇರಳದಿಂದ ಕಸ ತಂದು ರಾಜ್ಯದಲ್ಲಿ ಸುರಿದ ಲಾರಿ ಚಾಲಕನಿಗೆ ಗುಂಡ್ಲುಪೇಟೆ ಪುರಸಭೆ ದಂಡ ವಿಧಿಸಿ, ಛೀಮಾರಿ ಹಾಕಿದೆ. ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ಪುರಸಭೆ ತ್ಯಾಜ್ಯ ವಿಲೇವಾರಿ ಘಟಕದಲ್ಲಿ …
Read More »ಸೆ.15 ರಂದು ಕಿತ್ತೂರು ಚನ್ನಮ್ಮ ಪುತ್ಥಳಿ ಅನಾವರಣ
ಸಿಂಧನೂರು: ‘ನಗರದಲ್ಲಿ ಕಿತ್ತೂರುರಾಣಿ ಚನ್ನಮ್ಮ ವೃತ್ತ ಹಾಗೂ ನೂತನ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ಸೆ.15 ರಂದು ನಡೆಯಲಿದೆ’ ಎಂದು ವೀರಶೈವ ಲಿಂಗಾಯತ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಪಂಪನಗೌಡ ತಾವರಗೇರಾ ತಿಳಿಸಿದರು. ಈ ಬಗ್ಗೆ ಬುಧವಾರ ಹೇಳಿಕೆ ನೀಡಿರುವ ಅವರು, ‘ಸೆ.15 ರಂದು ಬೆಳಿಗ್ಗೆ ನಗರದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಅಂಬಾದೇವಿ ದೇವಸ್ಥಾನದಿಂದ ಚನ್ನಮ್ಮ ವೃತ್ತದವರೆಗೆ ಅದ್ದೂರಿ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ವಾಸವಿ ಕಲ್ಯಾಣ ಮಂಟಪದಲ್ಲಿ …
Read More »ಅಳಿವಿನಂಚಿಗೆ ಗೊರವರ ಕುಣಿತ; ಈ ಕಲೆಯಿಂದ ದೂರವಾದ ಯುವ ಸಮುದಾಯ
ವಿಜಯಪುರ(ದೇವನಹಳ್ಳಿ): ಜಾನಪದ ನೃತ್ಯಗಳಲ್ಲಿ ಗೊರವರ ಕುಣಿತವೂ ಒಂದು. ಆದರೆ, ಈಚೆಗೆ ಕಣ್ಮರೆಯಾಗುತ್ತಿದೆ. ಯುವ ಸಮುದಾಯ ಈ ಕಲೆಯಿಂದ ದೂರ ಉಳಿದಿದೆ. ಶ್ರೀಮಂತ ಕಲೆಯೊಂದು ಅಳಿವಿನಂಚಿನಲ್ಲಿದೆ ಎಂದು ಕಲಾವಿದ ಕೃಷ್ಣಪ್ಪ ಆತಂಕ ವ್ಯಕ್ತಪಡಿಸುತ್ತಾರೆ. ‘ನಮ್ಮ ಹಿರಿಯರಿಂದ ಸಾಂಪ್ರದಾಯಿಕವಾಗಿ ಬಂದಿರುವ ಗೊರವರ ಕುಣಿತ ಆಧುನಿಕ ಸೆಳೆತಕ್ಕೆ ಸಿಲುಕಿದೆ. ನಮ್ಮ ತಲೆಮಾರಿಗೆ ಅಂತ್ಯವಾಗುವ ಆತಂಕವಿದೆ. ಯುವಕರು ಈ ನೃತ್ಯ ಮಾಡಲು ಮುಂದೆ ಬರುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸುತ್ತಾರೆ. 9ರಿಂದ 12 ಮಂದಿ ತಂಡ ಕಟ್ಟಿಕೊಂಡು ಏಳುಕೋಟಿ …
Read More »ಕೈ ಸರ್ಕಾರ ಬದಲಾಗಲು ಇನ್ನೂ 4 ದೀಪಾವಳಿ ಮುಗಿಯುವವರೆಗೆ ಕಾಯಬೇಕು: ಮಧು ಬಂಗಾರಪ್ಪ
ಬೆಳಗಾವಿ: ‘ದೀಪಾವಳಿ ನಂತರ ನಮ್ಮ ಸರ್ಕಾರ ಬೀಳುತ್ತದೆ ಎಂದು ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ. ಅವರು ಇನ್ನೂ ನಾಲ್ಕು ದೀಪಾವಳಿ ಮುಗಿಯುವವರೆಗೆ ಕಾಯಬೇಕು’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ವ್ಯಂಗ್ಯ ಮಾಡಿದರು. ‘ದೀಪಾವಳಿ ನಂತರ ಕಾಂಗ್ರೆಸ್ ಸರ್ಕಾರ ಬೀಳುತ್ತದೆ’ ಎಂಬ ಬಿಜೆಪಿ ನಾಯಕರ ಮಾತಿಗೆ ನಗರದಲ್ಲಿ ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ ಸಿದ್ದರಾಮಯ್ಯ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರನ್ನು ಕಂಡು ಬಿಜೆಪಿ, ಜೆಡಿಎಸ್ …
Read More »ಮೊಟ್ಟ ಮೊದಲ ಬಾರಿಗೆ ನಾಲ್ವರು ‘GST ಅಧಿಕಾರಿ’ಗಳು ಅರೆಸ್ಟ್
ಬೆಂಗಳೂರು: ಬೆಂಗಳೂರಲ್ಲಿ ಮೊಟ್ಟಲ ಮೊದಲ ಬಾರಿ ಎನ್ನುವಂತೆ ಉದ್ಯಮಿಯೊಬ್ಬರಿಂದ ಹಣ ಪಡೆದು ಪರಾರಿಯಾಗಿದ್ದಂತ ನಾಲ್ವರು ಕೇಂದ್ರದ ಜಿಎಸ್ಟಿ ಅಧಿಕಾರಿಗಳನ್ನು ಪೊಲೀಸರು ಭರ್ಜರಿ ಬೇಟೆಯಾಡುವ ಮೂಲಕ ಬಂಧಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸರಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು, ದಿನಾಂಕ:09-09-2024 ರಂದು ಸಂಜೆ 16-35 ಗಂಟೆಗೆ ಪಿರಾದುದಾರರಾದ ಕೇಶವ್ ಟಾಕ್ ರವರು ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಗೆ ಹಾಜರಾಗಿ ನೀಡಿದ ಲಿಖಿತ ದೂರಿನ ಸಾರಾಂಶವೇನೆಂದರೆ, Mexo Solutions Private Limited having …
Read More »ಕಾಂಗ್ರೆಸ್ ಸರ್ಕಾರ ಪತನ: ಭವಿಷ್ಯ ನುಡಿದ ಜಗದೀಶ್ ಶೆಟ್ಟರ್
ಹುಬ್ಬಳ್ಳಿ, ಸೆಪ್ಟೆಂಬರ್ 11: ಕಾಂಗ್ರೆಸ್ ನಲ್ಲಿನ ಆಂತರಿಕ ವಿಚಾರ ದೊಡ್ಡ ಪ್ರಮಾಣದಲ್ಲಿ ಇದೆ. ಅದು ಬಹಿರಂಗ ಆಗಿದ್ದು ಅವರ ಕಚ್ಚಾಟದಿಂದಲೇ ಸರಕಾರ ಪತನ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದ ಅವರು, ಮುಡಾ ಹಗರಣ ಆದ ಬಳಿಕ ಇದು ಇನ್ನೂ ದೊಡ್ಡ ಪ್ರಮಾಣದಲ್ಲಿ ನಡೆದಿದ್ದು, ಮುಖ್ಯಮಂತ್ರಿ ಆಗಬೇಕು ಅಂತಾ ಸಾಕಷ್ಟು ಜನ ತಯಾರಿ ನಡೆಸಿದ್ದಾರೆ. ಇದರಿಂದಲೇ …
Read More »ಚಂದ್ರಶೇಖರ ಗುರೂಜಿ ಸಂಬಂಧಿಕರಿಗೆ ಜೀವ ಬೆದರಿಕೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು : ಹು-ಧಾ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್
ಚಂದ್ರಶೇಖರ ಗುರೂಜಿ ಸಂಬಂಧಿಕರಿಗೆ ಜೀವ ಬೆದರಿಕೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು : ಹು-ಧಾ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು. ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪೊಲೀಸ್ …
Read More »ಶಾಲೆಗಳಿಗೆ ಚಕ್ಕರ್ ಹಾಕುವ ಶಿಕ್ಷಕರಿಗೆ ಸಚಿವರ ಖಡಕ್ ವಾರ್ನಿಂಗ್..!!!
ಬೆಳಗಾವಿ :ಶಾಲೆಗೆ ಚಕ್ಕರ ಹಾಕಿ ಬೇರೆ ಬೇರೆ ಕೆಲಸ ಮಾಡುವ ಶಿಕ್ಷಕರ ಮೇಲೆ ಮುಲ್ಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಬುಧವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರಾದವರು ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡಬೇಕು. ಅದನ್ನು ಬಿಟ್ಟು ಬೇರೆ ಬೇರೆ ಕೆಲಸ, ಸಂಘಟನೆಯಲ್ಲಿ ಗುರುತಿಸಿಕೊಂಡರೆ ಮುಲ್ಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದರು. ಶಿಕ್ಷಕರು ಪ್ರತಿಭಟನೆ ಮಾಡುವ ಹಕ್ಕು ಇದೆ. ಹಾಗಂತ ಬೇರೆ ಬೇರೆ …
Read More »ದೇಶಿ ಸಂಸ್ಕೃತಿ ಉಳಿಸಿ: ಸಂಸದ ಜಗದೀಶ ಶೆಟ್ಟರ್
ರಾಮದುರ್ಗ: ‘ಪಾಶ್ಚಿಮಾತ್ಯ ಸಂಸ್ಕೃತಿಗೆ ವಾಲಿಕೊಂಡಿರುವ ಯುವ ಜನಾಂಗವನ್ನು ಮರಳಿ ದೇಶೀಯ ಸಂಸ್ಕೃತಿಗೆ ತರುವ ಕೆಲಸ ಧಾರ್ಮಿಕ ಕೇಂದ್ರಗಳಿಂದ ನಡೆಯಬೇಕಿದೆ’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು. ತಾಲ್ಲೂಕಿನ ಗೊಡಚಿಯಲ್ಲಿ ಜಗದ್ಗುರು ರೇಣುಕಾಚಾರ್ಯ ಮಂದಿರ, ರೇಣುಕಾಚಾರ್ಯ ಗುರುಕುಲ, ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಜ್ಞಾನ ಮಂಟಪ ಕಟ್ಟಡದ ಶಂಕುಸ್ಥಾಪನೆ, ವೀರಭದ್ರೇಶ್ವರ ಜಯಂತಿ ಮತ್ತು ಧರ್ಮಸಭೆ ಸಮಾರಂಭವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿ, ಮೊದಲಿನಿಂದಲೂ ರಂಭಾಪುರಿ ಪೀಠ ಧರ್ಮ ಜಾಗೃತಿ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದೆ ಎಂದರು. …
Read More »