ಹುಬ್ಬಳ್ಳಿ: ತವರು ಮನೆಗೆ ಹೋಗಲು ಯಾವ ಮಹಿಳೆಯಾದರು ಒಲ್ಲೆ ಎನ್ನುತ್ತಾಳೆಯೆ? ಬಿಜೆಪಿಗೆ ಮರಳಲು ನಾನೇಕೆ ಒಲ್ಲೆ ಎನ್ನಲಿ. ತವರು ಮನೆಯಲ್ಲಿ ಕೆಲ ಸಹೋದರರು ಇಲ್ಲಸಲ್ಲದ ಸ್ಥಿತಿ ನಿರ್ಮಿಸಿದ್ದು, ಶೀಘ್ರ ಅದು ಸರಿಯಾಗಿ ಮತ್ತೆ ತವರಿಗೆ ಮರಳುವೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಕುಟುಂಬದ ಕೈಯಲ್ಲಿಪಕ್ಷ ಸಿಲುಕಿದೆ. ಎಲ್ಲವೂ ಸರಿಯಾಗಲಿದೆ ಎಂಬ ನನಗೆ ವಿಶ್ವಾಸವಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಆರು ತಿಂಗಳಿಂದ …
Read More »Daily Archives: ಸೆಪ್ಟೆಂಬರ್ 12, 2024
ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ
ಹೊಸದಿಲ್ಲಿ: ಪುಣೆಯಲ್ಲಿ ಗಣೇಶ ವಿಗ್ರಹ ವಿಸರ್ಜನೆ ಆಚರಣೆಗಳು ಸೇರಿದಂತೆ ಉತ್ಸವದಲ್ಲಿ ಭಾಗಿಯಾಗಿರುವ ‘ಡೋಲು-ತಾಸೆ’ (dhol-tasha)ತಂಡಗಳಲ್ಲಿ 30 ಜನರ ಸಂಖ್ಯೆಯನ್ನು ನಿರ್ಬಂಧಿಸುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ( NGT) ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ಗುರುವಾರ(ಸೆ12) ತಡೆಯಾಜ್ಞೆ ನೀಡಿದೆ. ಎನ್‌ಜಿಟಿ ಆದೇಶದ ವಿರುದ್ಧ ಪುಣೆ ಮೂಲದ ‘ಧೋಲ್-ತಾಶಾ’ ಗುಂಪಿನ ಅರ್ಜಿಯನ್ನು ಮಧ್ಯಾಹ್ನ 2 ಗಂಟೆಗೆ ವಿಚಾರಣೆಗೆ ಕೈಗೆತ್ತಿಕೊಳ್ಳಲು ನಿರ್ಧರಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ …
Read More »ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆ ಇದೆ. ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಸಚಿವಾಲಯ ಕಾರ್ಯದರ್ಶಿ ಪಂಕಜ್ ಜೈನ್ ಈ ಬಗ್ಗೆ ಸುಳಿವು ನೀಡಿದ್ದಾರೆ. ವಿಶ್ವದಾದ್ಯಂತ ಕಚ್ಚಾತೈಲದ ದರ ಸ್ವಲ್ಪ ಸಮಯದವರೆಗೆ ನಿರಂತರವಾಗಿ ಕಡಿಮೆಯಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಕಚ್ಚಾತೈಲ ದರ ದೀರ್ಘಕಾಲದವರೆಗೆ ಕಡಿಮೆಯಾದರೆ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರ ಕಡಿಮೆ ಮಾಡಲು ಪರಿಗಣಿಸಬಹುದು ಎಂದು ಹೇಳಿದ್ದಾರೆ. ಸರ್ಕಾರ ಪೆಟ್ರೋಲ್, …
Read More »ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ: ತೀರ್ಪು ಕಾಯ್ದಿರಿಸಿದ ನ್ಯಾಯಾಲಯ
ಬೆಂಗಳೂರು: ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಇಂದು ಮುಕ್ತಾಯಗೊಂಡಿದ್ದು, ಅರ್ಜಿ ಕುರಿತು ಹೈಕೋರ್ಟ್ ಸದ್ಯ ತೀರ್ಪು ಕಾಯ್ದಿರಿಸಿದೆ. ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿ ವಿಚಾರಣೆಯನ್ನು ನಡೆಸಿದ ಕೋರ್ಟ್, ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿತ್ತು. ರಾಜ್ಯಪಾಲರ ಹಾಗೂ ಮುಖ್ಯಮಂತ್ರಿಗಳ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಸುದೀರ್ಘ ವಿಚಾರಣೆಯ ಬಳಿಕ ಇದೀಗ ತೀರ್ಪನ್ನು ಕಾಯ್ದಿರಿಸಿದೆ. ಸಿಎಂ …
Read More »ಹಾರ್ದಿಕ್ ಮಾಜಿ ಪತ್ನಿ ಮುಂಬೈನಲ್ಲಿ ಬಾಯ್ ಫ್ರೆಂಡ್ ಜೊತೆ ತಿರುಗಾಟ!
ಮುಂಬೈ: ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮಾಜಿ ಪತ್ನಿ, ಮಾಡೆಲ್ ನತಾಶಾ ಸ್ಟಾಂಕೋವಿಕ್ ಮುಂಬೈನಲ್ಲಿದ್ದು, ಆಕೆ ಗೆಳೆಯ ಅಲೆಕ್ಸಾಂಡರ್ ಇಲಾಕ್ ಜೊತೆ ಸುತ್ತಾಟ ನಡೆಸುತ್ತಿದ್ದು ಗಮನಸೆಳೆಯುತ್ತಿದ್ದಾಳೆ. ಇದಕ್ಕೆ ಸಂಬಂಧಿಸಿದ ವೀಡಿಯೋ ವೈರಲ್ ಆಗಿದೆ. ನತಾಶಾ ಎರಡು ತಿಂಗಳ ಕಾಲ ಸರ್ಬಿಯಾದಲ್ಲಿ ತಂಗಿದ್ದು ಆಕೆ ಈಗ ಮುಂಬೈಗೆ ಬಂದಿದ್ದಾಳೆ. ಆದರೆ, ಆಕೆಯ ಜೊತೆ ಆಕೆಯ ಗೆಳೆಯ ಅಲೆಕ್ಸಾಂಡರ್ ಇಲಾಕ್ ಕೂಡ ಇರುವುದು ಗಮನಾರ್ಹ ಸಂಗತಿಯಾಗಿದೆ. ಇಬ್ಬರೂ ಮುಂಬೈನ ಬೀದಿಗಳಲ್ಲಿ …
Read More »ಹಿಂದೂ ಹಬ್ಬಗಳಿಗೆ ಯಾಕಿಷ್ಟು ತಾತ್ಸಾರ: ಕರ್ನಾಟಕ ಪಾಕಿಸ್ತಾನ ಮಾಡಲಾಗುತ್ತಿದೆ: ಪ್ರಹ್ಲಾದ್ ಜೋಶಿ
ಬೆಂಗಳೂರು, ಸೆಪ್ಟಂಬರ್ 12: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಬುಧವಾರ ತಡರಾತ್ರಿ ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳಿಂದ ಗಲಭೆ ನಡೆದಿದೆ. ಇದೆಲ್ಲ ನೋಡಿದರೆ ಕರ್ನಾಟಕದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ. ಹಿಂದೂಗಳ ಹಬ್ಬದಂದು ನಡೆದ ಈ ದುಷ್ಕೃತ್ಯ ಅತ್ಯಂತ ಖಂಡನೀಯ ಎಂದು ರಾಜ್ಯ ಸರ್ಕಾರದ ಆಡಳಿತ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಂಡ್ಯ ಗಲಭೆ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಸಚಿವ …
Read More »ಪಿಜಿ-ನೀಟ್ ದೇಶಕ್ಕೆ 9ನೇ RANK ಗಳಿಸಿದDr.ಶರಣಪ್ಪ
ಪಿಜಿ-ನೀಟ್ ದೇಶಕ್ಕೆ 9ನೇ ರ‌್ಯಾಂಕ್ ಗಳಿಸಿದ ಡಾ.ಶರಣಪ್ಪ ಬಿಮ್ಸ್ ಮುಕುಟಕ್ಕೆ ಮತ್ತೊಂದು ಗರಿ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್)ಯ ವೈದ್ಯಕೀಯ ವಿದ್ಯಾರ್ಥಿ ರಾಷ್ಟ್ತಮಟ್ಟದ ಪಿ.ಜಿ. ನೀಟ್ ಪರೀಕ್ಷೆಯಲ್ಲಿ ಒಂಬತ್ತನೇ ಗಳಿಸುವ ಮೂಲಕ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಬಿಮ್ಸ್ ಸಾಧನೆ ಗುರುತಿಸುವಂತಾಗಿದೆ. ಬಿಮ್ಸ್ ನ ಎಂ.ಬಿ.ಬಿ.ಎಸ್ ವಿದ್ಯಾರ್ಥಿಯಾಗಿರುವ ಡಾ. ಶರಣಪ್ಪ ಶೀನಪ್ಪನವರ ಪಿ.ಜಿ. ನೀಟ್ ಪರೀಕ್ಷೆಯಲ್ಲಿ ಒಂಬತ್ತನೇ ರ‌್ಯಾಂಕ್ ಗಳಿಸುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸುವುದರ ಜತೆಗೆ ಸಂಸ್ಥೆಗೆ ಕೀರ್ತಿಯನ್ನು …
Read More »ನಾಗಮಂಗಲ ಗಲಭೆ ಪ್ರಕರಣದ ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ‘CM ಸಿದ್ದರಾಮಯ್ಯ’ ಎಚ್ಚರಿಕೆ
ಬೆಂಗಳೂರು : ನಾಗಮಂಗಲ ಗಲಭೆ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ. ಕಳೆದ …
Read More »ಕನ್ನಡದ ಔಷಧ ಚೀಟಿ ಬಗ್ಗೆ ಸರ್ಕಾರದಿಂದ ಮಹತ್ವದ ನಿರ್ಧಾರ
ಬೆಂಗಳೂರು, ಸೆಪ್ಟೆಂಬರ್, 12: ನಿಯಮ ಜಾರಿಯಾಗುವ ಮೊದಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ವೈದ್ಯರು ಕನ್ನಡದಲ್ಲೇ ಔಷಧ ಚೀಟಿ ಬರೆದು ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇನ್ನು ಇದಕ್ಕೆ ಆರೋಗ್ಯ ಸಚಿವರಿಂದಲೂ ಮೆಚ್ಚುಗೆ ವ್ಯಕ್ತವಾಗಿದ್ದು, ಈ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದೆ ಆ ನಿರ್ಧಾರ ಏನು ಎಂದು ಇಲ್ಲಿ ತಿಳಿಯಿರಿ. ರಾಜ್ಯದ ಹಲವು ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯರು ಕನ್ನಡದಲ್ಲೇ ರೋಗಿಗಳಿಗೆ ಔಷಧಿ ಚೀಟಿಯನ್ನು ಬರೆಯುವಂತೆ ಆದೇಶಿಸಿ ಎಂಬುದಾಗಿ ಆರೋಗ್ಯ …
Read More »ನಾಗಮಂಗಲ ಗಲಭೆ ಪ್ರಕರಣ : 150 ಆರೋಪಿಗಳ ವಿರುದ್ಧ ‘FIR’ ದಾಖಲು
ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 150 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. 53 ಆರೋಪಿಗಳ ಹೆಸರು ಮತ್ತು ವಿಳಾಸ ಸಮೇತ ಎಫ್‌ಐಆರ್ ದಾಖಲಿಸಲಾಗಿದೆ. 30 ಜನ ಮುಸ್ಲಿಂ ಆರೋಪಿಗಳ ವಿರುದ್ಧ ಹಾಗೂ 23 ಜನ ಹಿಂದೂ ಸಮುದಾಯದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಿಸಿಕ್ಯಾಮರಾ ದೃಶ್ಯ ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲು ಪೊಲೀಸರು ಮುಂದಾಗಿದ್ದಾರೆ ಎಂದು ಮಂಡ್ಯ ಎಸ್ ಪಿ …
Read More »