ಮೂಡಲಗಿ: ಕರ್ನಾಟಕ ಪೋಟೋಗ್ರಾಫಿ ಅಸೋಸಿಯೆಷನ್ ನೀಡುವ ‘ಛಾಯಾಶ್ರೀ’ ಪ್ರಶಸ್ತಿಗೆ ಮೂಡಲಗಿಯ ಛಾಯಾಗ್ರಾಹಕ ಮಧು ಪಿ. ಗೌಡ ಭಾಜನರಾಗಿದ್ದಾರೆ. ಸೆ.20ರಿಂದ 22ರ ವರೆಗೆ ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ನಡೆಯುವ ಕರ್ನಾಟಕ ಫೋಟೊಗ್ರಾಫಿ ಅಸೋಸಿಯೇಷನದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸುವರು ಎಂದು ಕೆ.ಪಿ.ಎ ನಿರ್ದೇಶಕ ಮಲ್ಲಿಕಾರ್ಜುನ ಕೆ.ಆರ್ ಹಾಗೂ ಮೂಡಲಗಿ ತಾಲ್ಲೂಕು ಫೋಟೊಗ್ರಾಫಿ ಅಸೋಸಿಯೇಷನ್ ಅಧ್ಯಕ್ಷ ಶಂಕರ ಹಾದಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »Daily Archives: ಸೆಪ್ಟೆಂಬರ್ 18, 2024
ರಾಜ್ಯದಲ್ಲಿ ಡ್ರಗ್ಸ್ ದಂಧೆ ಹತೋಟಿಗೆ : ನೋವು ನಿವಾರಕ ಮಾತ್ರೆಗಳದೇ ಆತಂಕ : ಗೃಹ ಸಚಿವ ಪರಮೇಶ್ವರ
ರಾಜ್ಯದಲ್ಲಿ ಡ್ರಗ್ಸ್ ದಂಧೆ ಹತೋಟಿಗೆ : ನೋವು ನಿವಾರಕ ಮಾತ್ರೆಗಳದೇ ಆತಂಕ : ಗೃಹ ಸಚಿವ ಪರಮೇಶ್ವರ ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ …
Read More »ಸಿದ್ದಾಪುರ ಗೇಟ್‌ನಲ್ಲಿ ಅಹೋರಾತ್ರಿ ಉಪವಾಸ
ಕೊಣನೂರು: ‘ನಮಗೆ ನ್ಯಾಯ ಸಿಗುವವರೆಗೂ ಅಹೋರಾತ್ರಿ ಉಪವಾಸ ಸತ್ಯಾಗ್ರಹವನ್ನು ನಿಲ್ಲಿಸುವುದಿಲ್ಲ’ ಎಂದು ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ಸಂಸ್ಥಾಪಕ ಅಧ್ಯಕ್ಷ ಎಸ್.ರಾಘವೇಂದ್ರ ಗೌಡ ಆಕ್ರೋಶ ವ್ಯಕ್ತಪಡಿಸಿದರು. ಕೊಣನೂರು ಮತ್ತು ರಾಮನಾಥಪುರ ಹೋಬಳಿಗಳ ಮೂಲಕ ಹಾದು ಹೋಗಿರುವ ಮಾಗಡಿ- ಸೋಮವಾರಪೇಟೆ ರಾಜ್ಯ ಹೆದ್ದಾರಿ ನಿರ್ಮಾಣದಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಸಿದ್ದಾಪುರ ಗೇಟ್ ಸರ್ಕಲ್‌ನಲ್ಲಿ ಸುವರ್ಣ ಕರ್ನಾಟಕ ರಕ್ಷಣಾ ಸೇನೆಯಿಂದ ಮಂಗಳವಾರದಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಉಪವಾಸ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು. …
Read More »ಬೀದರ್ | ಲೋಕ ಅದಾಲತ್‌ನಲ್ಲಿ 17,476 ಪ್ರಕರಣ ಇತ್ಯರ್ಥ, ₹7.98 ಕೋಟಿ ಪರಿಹಾರ
ಬೀದರ್: ‘ಸೆ. 14ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 17,476 ಪ್ರಕರಣಗಳನ್ನು ಇತ್ಯರ್ಥಗೊಳಿಸಿದ್ದು, ₹7.98 ಕೋಟಿ ಪರಿಹಾರ ಕಕ್ಷಿದಾರರಿಗೆ ಒದಗಿಸಲಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಎ.ಬನಸೋಡೆ ತಿಳಿಸಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು ಪ್ರಕರಣಗಳಲ್ಲಿ 6,788 ಪೆಂಡಿಂಗ್ ಪ್ರಕರಣಗಳಿದ್ದವು. ಜಿಲ್ಲೆಯಾದ್ಯಂತ ಒಟ್ಟು 10,688 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ₹54.75 …
Read More »ಚಿತ್ರದುರ್ಗ | ವಾಹನಗಳ ಮೇಲೆ ಎಣ್ಣೆ ಉತ್ಪನ್ನಗಳ ಜಾಹೀರಾತು: ಸಭೆಯಲ್ಲಿ ನಿರ್ಣಯ
ಚಿತ್ರದುರ್ಗ: ಎಣ್ಣೆಬೀಜ ಬೆಳೆಗಾರರು ಹಾಗೂ ಎಣ್ಣೆ ಉತ್ಪಾದಕ ಸಂಸ್ಥೆಗಳು ತಮ್ಮ ವಾಹನಗಳ ಮೇಲೆ ತಮ್ಮದೇ ಕಂಪನಿಗಳ ಎಣ್ಣೆ ಉತ್ಪನ್ನ ಜಾಹೀರಾತು ಅಳವಡಿಸಲು ಅನುಮತಿ ನೀಡಿ ಬುಧವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಎಣ್ಣೆ ಬೀಜ ಬೆಳೆಗಾರರು ಹಾಗೂ ಎಣ್ಣೆ ಉತ್ಪಾದಕ ಸಂಸ್ಥೆಗಳ ಮನವಿಯನ್ನು ಪರಿಗಣಿಸಿ ಜಾಹೀರಾತು ಅಳವಡಿಸಲು ಅನುಮತಿ ನೀಡಲು ಒಪ್ಪಿಗೆ ಸೂಚಿಸಲಾಯಿತು. ಮಧ್ಯಮಗಾತ್ರದ …
Read More »ಕೆಎಸ್‌ಸಿಎ: ಧಾರವಾಡ ವಲಯದ ಸಭೆ ನಡೆಸಲು ವೀರಣ್ಣ ಸವಡಿ ಆಗ್ರಹ
ಹುಬ್ಬಳ್ಳಿ: ‘ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಧಾರವಾಡ ವಲಯದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಶೀಘ್ರ ಸಭೆ ಕರೆಯಬೇಕು’ ಎಂದು ವಲಯದ ಚೇರ್ಮನ್ ವೀರಣ್ಣ ಸವಡಿ ಕೋರಿದ್ಧಾರೆ. ಈ ಕುರಿತು ಕೆಎಸ್‌ಸಿಎ ಕಾರ್ಯದರ್ಶಿ ಅವರಿಗೆ ಇ-ಮೇಲ್ ಮಾಡಿರುವ ಅವರು, ‘ಆಟಗಾರರ ಪೋಷಕರು, ಕೋಚ್‌ಗಳು, ವಿವಿಧ ಕ್ಲಬ್‌ಗಳ ಸದಸ್ಯರು ನನ್ನನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದಾರೆ. ಎಲ್ಲ ಬೆಳವಣಿಗೆಗಳನ್ನು ಕಾರ್ಯದರ್ಶಿಗೆ ಮಾಹಿತಿ ನೀಡಲಾಗಿದೆ’ ಎಂದರು. ’19 ವರ್ಷದೊಳಗಿನವರ ತಂಡದ ಆಯ್ಕೆ ಕುರಿತು …
Read More »ಮೈಸೂರು ದಸರಾ: ಮರದ ಅಂಬಾರಿ ಹೊರುವ ತಾಲೀಮು ಆರಂಭಿಸಿದ ಗಜಪಡೆ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಅಭಿಮನ್ಯು ಮುಂದಾಳತ್ವದಲ್ಲಿ ಜಂಬೂ ಸವಾರಿಗೆ ಆನೆಗಳು ಕೂಡ ತಯಾರಿ ಮಾಡುತ್ತಿವೆ. ಅಂಬಾರಿ ಹೊರುವ ಆನೆಗಳಿಗೆ ಇಷ್ಟು ದಿನ ಮರಳಿನ ಮೂಟೆ ಹೊರಿಸಿ ತಾಲೀಮು ನಡೆಸಲಾಗಿತ್ತು, ಇಂದಿನಿಂದ ಮರದ ಅಂಬಾರಿ ಹೊರುವ ತಾಲೀಮಿಗೆ ಚಾಲನೆ ನೀಡಲಾಗಿದೆ. ಅಭಿಮನ್ಯು 280 ಕೆಜಿ ತೂಕದ ಮರದ ಅಂಬಾರಿ ಹಾಗೂ ಗಾದಿ, ನಮ್ದ ಮತ್ತು ಮರಳಿನ ಮೂಟೆ ಸೇರಿ 750 ಕೆ.ಜಿ ಭಾರ ಹೊತ್ತು …
Read More »ರಾಜ್ಯದಲ್ಲಿ ‘ಡ್ರಗ್ಸ್’ ಹಾವಳಿ ತಡೆಗಟ್ಟಲು ಹೊಸ ಕಾನೂನು ಜಾರಿ?C.M.
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಲು ಹೊಸ ಕಾನೂನು ಜಾರಿಗೆ ತರಲು ನಿರ್ಧರಿಸಲಾಗಿದ್ದು, ಅಲ್ಲದೆ ಇದಕ್ಕೆ ಟಾಸ್ಕ್ ಫೋರ್ಸ್ ರಚನೆ ಕೂಡ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಮತ್ತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡ್ರಗ್ಸ್ ಹಾವಳಿ ತಡೆಗಟ್ಟಲು ಟಾಸ್ಕ್ ಫೋರ್ಸ್ ರಚಿಸಲು …
Read More »HSRP’ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ.!
ಬೆಂಗಳೂರು : ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ಇದರ ಅರ್ಜಿ ವಿಚಾರಣೆ ನವೆಂಬರ್ 20 …
Read More »ಅತ್ಯಾಚಾರ ಸಂತ್ರಸ್ತೆಗೆ ಜಿಲ್ಲಾಡಳಿತ ನೆರವು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು, ಅತ್ಯಂತ ಖಂಡನೀಯ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿನ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮಾಹಿತಿ ಬಂದ ತತ್‌ಕ್ಷಣ ಘಟನೆಗೆ ಸಂಬಂಧಿಸಿ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸರು ಕೂಲಂಕಷವಾಗಿ …
Read More »