Breaking News

Daily Archives: ಸೆಪ್ಟೆಂಬರ್ 21, 2024

ಹಾವೇರಿ | ನೀರಿಲ್ಲ, ವಿದ್ಯುತ್ತಿಲ್ಲ: ಸೊರಗಿದ ಹುರುಳಿಕುಪ್ಪಿ ಆಸ್ಪತ್ರೆ

ಹಾವೇರಿ: ಮಳೆ ಬಂದರೆ ಸೋರುವ ಕಟ್ಟಡ, ಆವರಣದಲ್ಲಿ ಹೆಚ್ಚಾಗಿರುವ ಕಸ-ಕಂಟಿ, ತುರ್ತು ಪರಿಸ್ಥಿತಿಯಲ್ಲಿ ಲಭ್ಯವಾಗದ ಚಿಕಿತ್ಸೆ, ನೀರಿನ ಸೌಲಭ್ಯ ಹಾಗೂ ವಿದ್ಯುತ್ ಸಂಪರ್ಕವಿಲ್ಲದೇ ದಿನದೂಡುತ್ತಿರುವ ಸಿಬ್ಬಂದಿ, ಅರ್ಧಕ್ಕೆ ನಿಂತ ಮೇಲ್ದರ್ಜೆಗೇರಿಸುವ ಪ್ರಕ್ರಿಯೆ…   ಜಿಲ್ಲೆಯ ಸವಣೂರು ತಾಲ್ಲೂಕಿನ ಹುರುಳಿಕುಪ್ಪಿ ಗ್ರಾಮದಲ್ಲಿರುವ ಆರೋಗ್ಯ ವಿಸ್ತರಣಾ ಚಿಕಿತ್ಸಾಲಯ ಕೇಂದ್ರದ ದುಸ್ಥಿತಿ ಇದು. ಮೂಲಸೌಕರ್ಯಗಳ ಕೊರತೆಯಿಂದಾಗಿ ಕೇಂದ್ರ ಸೊರಗುತ್ತಿದೆ. ಗ್ರಾಮಸ್ಥರ ಹೋರಾಟದ ಫಲವಾಗಿ ಉದ್ಘಾಟನೆಗೊಂಡಿದ್ದ ಕೇಂದ್ರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗದಿದ್ದರಿಂದ, ಹುರುಳಿಕುಪ್ಪಿ ಹಾಗೂ …

Read More »

ಬೆಳಗಾವಿಯಲ್ಲಿ ಪ್ಯಾಲಿಸ್ಟೀನ್‌ ಧ್ವಜದ ಮಾದರಿಯ ಶಾಮಿಯಾನ

ಬೆಳಗಾವಿ: ನಗರದಲ್ಲಿ ಭಾನುವಾರ (ಸೆ.22) ನಡೆಯಲಿರುವ ಈದ್‌ ಮಿಲಾದ್‌ ಮೆರವಣಿಗೆ ಹಿನ್ನೆಲೆಯಲ್ಲಿ, ಇಲ್ಲಿನ ದರ್ಬಾರ್‌ ಗಲ್ಲಿಯ ಬೀದಿಯೊಂದರಲ್ಲಿ ಪ್ಯಾಲಿಸ್ಟೀನ್‌ ಧ್ವಜ ಹೋಲುವ ದೊಡ್ಡ ಶಾಮಿಯಾನ ಹಾಕಿದ್ದು ವಿವಾದಕ್ಕೆ ಕಾರಣವಾಗಿದೆ. ಬೆಳಿಗ್ಗೆ ವೀರಭದ್ರ ನಗರದಲ್ಲಿ ಬೀದಿಯೊಂದರಲ್ಲಿ ಪ್ಯಾಲಿಸ್ಟೀನ್‌ ಧ್ವಜ ಹೋಲುವ ಬೀದಿ ಶಾಮಿಯಾನ ಹಾಕಲಾಗಿತ್ತು. ಮುಂದೆ ಎರಡು ಖಡ್ಗ ನೇತುಹಾಕಿ ಅವುಗಳಿಗೂ ಪ್ಯಾಲಿಸ್ಟೀನ್‌ ಧ್ವಜದ ಬಣ್ಣವನ್ನೇ ಬಳಿಯಲಾಗಿತ್ತು. ಇದನ್ನು ಗಮನಿಸಿದ ಪೊಲೀಸರು ಸ್ಥಳಕ್ಕೆ ಧಾವಿಸಿ ತೆರವುಗೊಳಿಸಿದರು. ದರ್ಬಾರ್‌ ಗಲ್ಲಿಯಲ್ಲೂ ಅರ್ಧ ಕಿಲೋಮೀಟರ್‌ವರೆಗೆ ಶಾಮಿಯಾನ …

Read More »

ಒಂದೇ ದಿನ 2 ಪರೀಕ್ಷೆ : RCU ಬಿ.ಎ 4ನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳಲ್ಲಿ ಗೊಂದಲ

ಬೆಳಗಾವಿ: ಒಂದೇ ದಿನ ಎರಡು ಪರೀಕ್ಷೆ ನಿಗದಿಯಾದ ಕಾರಣ, ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ(ಆರ್‌ಸಿಯು) ಬಿ.ಎ 4ನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದಾರೆ. ಆರ್‌ಸಿಯು ವ್ಯಾಪ್ತಿಯಲ್ಲಿ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ 421 ಪದವಿ ಕಾಲೇಜುಗಳಿವೆ. ಬಿ.ಎ 4ನೇ ಸೆಮಿಸ್ಟರ್‌ನಲ್ಲಿ ಸುಮಾರು 25 ಸಾವಿರ ವಿದ್ಯಾರ್ಥಿಗಳು ಇದ್ದಾರೆ. ಅವರಿಗೆ ಸೆ.29, 30ರಂದು ಐಚ್ಛಿಕ ಕನ್ನಡ ವಿಷಯದ ಪರೀಕ್ಷೆ ನಿಗದಿಪಡಿಸಲಾಗಿದೆ. ಆದರೆ, ಗ್ರಾಮ ಲೆಕ್ಕಾಧಿಕಾರಿ ಹುದ್ದೆ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ …

Read More »

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ‘ಸ್ಥಾಯಿ ಸಮಿತಿ’ಗಳಿಗೆ ಚುನಾವಣೆಗೆ ಮಹೂರ್ತ ಫಿಕ್ಸ್

ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23 ನೇ ಅವಧಿಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗೆ ಚುನಾವಣೆಯನ್ನು ಆಯೋಜಿಸಲಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗೆ ಸ್ಪರ್ಧಿಸುವವರು ಅಕ್ಟೋಬರ್ 3, 2024 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು.   ಪಾಲಿಕೆಯ ಚುನಾವಣೆಯನ್ನು ಅಕ್ಟೋಬರ್ 3, 2024 ರಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿ ಮಹಾನಗರ …

Read More »

ಯತ್ನಾಳ್-ಕಾಶಪ್ಪನವರ್ ನಡುವೆ ‘ಟಿಪ್ಪು-ಔರಂಗಜೇಬ’ ಗಲಾಟೆ! ನಾಲಿಗೆ ಹರಿಬಿಟ್ಟ ನಾಯಕರು!

ಬಾಗಲಕೋಟೆ: ಟಿಪ್ಪು ಸುಲ್ತಾನ್ (Tipu Sultan) ಹಾಗೂ ಔರಂಗಜೇಬ್ (Aurangzeb) ವಿಚಾರಕ್ಕೆ ವಿಜಯಪುರ ಶಾಸಕ (Vijayapura MLA) ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹಾಗೂ ಬಾಗಲಕೋಟೆಯ (Bagalkot) ಹುನಗುಂದ ಶಾಸಕ (Hungunda MLA) ವಿಜಯಾನಂದ ಕಾಶಪ್ಪನವರ್ (Vijayananda Kashappanaar) ಟಾಕ್ ಫೈಟ್ ಜೋರಾಗಿದೆ. ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬ್ ವಿರುದ್ಧ ಯತ್ನಾಳ್ ಏಕವಚನದಲ್ಲಿ ಟೀಕಿಸಿದ್ದರು. ಇದಕ್ಕೆ ವಿಜಯಾನಂದ ಕಾಶಪ್ಪನವರ್ ಏಕವಚನದಲ್ಲಿಯೇ ತಿರುಗೇಟು ನೀಡಿದ್ದಾರೆ. ಈ ದೇಶ ಕಂಡ ವೀರ …

Read More »

ತಿರುಪತಿ ಲಾಡು ಪ್ರಸಾದದ ಬಗ್ಗೆ ಸಮಗ್ರ ತನಿಖೆಯಾಗಲಿ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ತಿರುಪತಿ ಪ್ರಸಾದ ಲಾಡುವಿನ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದೆ. ಆಂಧ್ರಪ್ರದೇಶದ ಹಿಂದಿನ‌ ಸರ್ಕಾರ ಲಾಡು ತಯಾರಿಕೆಗೆ ರಾಜ್ಯದ ನಂದಿನಿ ತುಪ್ಪ‌ ತರಿಸಿಕೊಳ್ಳಲಾಗುತ್ತಿತ್ತು. ಅದನ್ನು ನಿಲ್ಲಿಸಿ, ಬೇರೆ ಕಡೆಯಿಂದ ತುಪ್ಪ ತರಿಸಿಕೊಳ್ಳಲು ಆರಂಭಿಸಿದಾಗಿನಿಂದ ಈ ರೀತಿ ಘಟನೆಗಳು ನಡೆದಿವೆ ಎಂದು ಕೇಂದ್ರ ಸಚಿವ ಪಲ್ಹಾದ ಜೋಶಿ ಹೇಳಿದರು.   ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಕ್ಕೆ ಸಂಬಂಧಿಸಿದ ಪ್ರಯೋಗಾಲಯದ ವರದಿಯನ್ನು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಿಡುಗಡೆ ಮಾಡಿದ್ದಾರೆ. …

Read More »

ಶಾಸಕ ಮುನಿರತ್ನ ವಿಶ್ವದಲ್ಲೇ ಕಂಡುಕೇಳರಿಯದಂತಹ ಸಂಚು ಮಾಡಿದ್ದಾರೆ : ಡಿಕೆಶಿ

ಬೆಂಗಳೂರು,ಸೆ.21- ವಿಶ್ವದಲ್ಲೇ ಕಂಡಿರದಂತಹ ಸಂಚನ್ನು ಆರ್‌ಆರ್‌ ನಗರ ಕ್ಷೇತ್ರದ ಶಾಸಕ ಮುನಿರತ್ನ ಸ್ವಪಕ್ಷ ಹಾಗೂ ವಿರೋಧಪಕ್ಷದ ವಿರುದ್ಧ ನಡೆಸಿದ್ದಾರೆ. ಬಿಜೆಪಿ, ಜೆಡಿಎಸ್‌‍ ನಾಯಕರು ಸತ್ಯಾಸತ್ಯತೆ ತಿಳಿದು ಮಾತನಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಚ್ಚರಿಸಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರ್ಯಾರು ಸಿಕ್ಕಿಕೊಂಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿ ಗೊತ್ತಿಲ್ಲ. ಎಲ್ಲವನ್ನೂ ಪರಿಶೀಲಿಸಿದ ಬಳಿಕ ಮಾತನಾಡುವುದು ಒಳ್ಳೆಯದು ಎಂದರು. ಮುನಿರತ್ನ ಪ್ರಕರಣದಲ್ಲಿ ಎಸ್‌‍ಐಟಿ ರಚನೆ ಮಾಡಬೇಕೆಂಬುದು ನಮ ಪಕ್ಷದ ಶಾಸಕರು, ಸಚಿವರು, …

Read More »

ಮೈಸೂರು ದಸರಾ 2024 : ‘ಯುವ ಸಂಭ್ರಮ’ದ ಪೋಸ್ಟರ್ ಹಾಗೂ ವೆಬ್ ಸೈಟ್ ಬಿಡುಗಡೆ

ಮೈಸೂರು, ಸೆ. 21- ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024 ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದ್ದು ಇಂದು ಯುವ ಸಂಭ್ರಮದ ಪೋಸ್ಟರ್ ಬಿಡುಗಡೆ, ದಸರಾ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು.   ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ, ಫೋಸ್ಟರ್ ಹಾಗೂ ದಸರಾ ವೆಬ್ ಸೈಟ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ …

Read More »

ಇನ್ಮುಂದೆ ‘ವೈದ್ಯರ ಚೀಟಿ’ ಇಲ್ಲದೇ ‘ಔಷಧಿ’ ಕೊಡುವ ಮೆಡಿಕಲ್ ಸ್ಟೋರ್ ಮೇಲೆ ಕಠಿಣ ಕ್ರಮ : ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ಬೆಂಗಳೂರು : ವೈದ್ಯರ ಚೀಟಿ ಇಲ್ಲದೇ ಮಾತ್ರೆ ಕೊಡುವ ‘ಮೆಡಿಕಲ್ ಸ್ಟೋರ್’ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ಬೇರು ಸಮೇತ ಕಿತ್ತುಹಾಕಲು ಪಣತೊಟ್ಟಿರುವ ನಮ್ಮ ಸರ್ಕಾರ ಈಗಾಗಲೇ ಕಾರ್ಯಪ್ರವೃತ್ತವಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಔಷಧಿಗಳ ದುರ್ಬಳಕೆಯನ್ನು ತಡೆಗಟ್ಟಲು ವಿಶೇಷ ಅಭಿಯಾನ ನಡೆಸಲಾಗಿದೆ. ಮೆಡಿಕಲ್ ಸ್ಟೋರ್ಗಳಲ್ಲಿ ವೈದ್ಯರ ಚೀಟಿ ಇಲ್ಲದೆ ಮಾತ್ರೆಗಳನ್ನು ಕೊಡುತ್ತಿದ್ದಾರೆ, ಸಿಂಥೆಟಿಕ್ ಡ್ರಗ್ಸ್ …

Read More »

ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಬಳ್ಳಾರಿ: ಇದು ಬೇಲಿಯೇ ಎದ್ದು ಹೊಲ ಮೇಯ್ದ ಕತೆ. ಕಳ್ಳರು ಕಳ್ಳರ ಜೊತೆಗೆ ಸೇರಿಕೊಂಡು ಕಳ್ಳತನ ಮಾಡುವ ಸುದ್ದಿಗಳನ್ನು ಓದಿರುತ್ತೇವೆ. ಆದರೆ ಕಳ್ಳರ ಜೊತೆಗೆ ಪೊಲೀಸ್ ಒಬ್ಬರು ಸೇರಿಕೊಂಡ ದರೋಡೆ ನಡೆಸಿರುವ ಪ್ರಕರಣ ಇದೀಗ ಬಯಲಿಗೆ ಬಂದಿದೆ. ಬಳ್ಳಾರಿಯಲ್ಲಿ ಈ ಘಟನೆ ನಡೆದಿದೆ.   ಬ್ರೂಸ್ ಪೇಟ್ ಠಾಣೆಯ ಹೆಡ್ ಕಾನ್ಸಟೇಬಲ್ ಕಳ್ಳರ ಗ್ಯಾಂಗ್‌ ಗೆ ಸಾಥ್ ನೀಡಿದ್ದು, ಆತನನ್ನು ಇಲಾಖೆಯಿಂದ ಅಮಾನತು ಮಾಡಿ ಬಂಧಿಸಲಾಗಿದೆ. ಘಟನೆಯ ವಿವರ ರಘು …

Read More »