ಬೆಳಗಾವಿ: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು. ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣಗಳ ವಿರುದ್ಧ ನಾವು ಹೋರಾಟ ಮಾಡಿದೆವು. ಅದಕ್ಕಾಗಿ ಬಿಜೆಪಿ, ಜೆಡಿಎಸ್ ನಾಯಕರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ಕಾಂಗ್ರೆಸ್ ವಿರುದ್ಧ ನಾವು ಹೇಳಿಕೆ ಕೊಟ್ಟರೆ, ಎಫ್‌ಐಆರ್ ದಾಖಲಿಸಿ ಹೆದರಿಸುವ ತಂತ್ರ ಅನುಸರಿಸಲಾಗುತ್ತಿದೆ. ಹಳೆಯ ಪ್ರಕರಣಗಳನ್ನೆಲ್ಲ …
Read More »Daily Archives: ಸೆಪ್ಟೆಂಬರ್ 21, 2024
ಬಿಜೆಪಿಯಿಂದ ದೇಶದಾದ್ಯಂತ ದ್ವೇಷ ರಾಜಕಾರಣ: ವಿನಯ ಕುಲಕರ್ಣಿ
ಬೆಳಗಾವಿ: ‘ಬಿಜೆಪಿಯವರಂತೆ ನಾವ್ಯಾರೂ ದ್ವೇಷ ರಾಜಕಾರಣ ಮಾಡಿಲ್ಲ. ಅವರು ಎಷ್ಟು ಜನರಿಗೆ, ಎಷ್ಟು ಹಿಂಸೆ ಕೊಟ್ಟಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ಇದಕ್ಕೆ ನಾನೇ ದೊಡ್ಡ ಸಾಕ್ಷಿ’ ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದರು. ‘ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ’ ಎಂಬ ಸಂಸದ ಜಗದೀಶ ಶೆಟ್ಟರ್ ಹೇಳಿಕೆಗೆ, ಪ್ರತಿಕ್ರಿಯಿಸಿದ ಅವರು, ‘ಇಡೀ ದೇಶದಲ್ಲಿ ವಿರೋಧ ಪಕ್ಷದವರ ವಿರುದ್ಧ ಬಿಜೆಪಿಯವರು ದ್ವೇಷದ ರಾಜಕಾರಣ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕನಾದರೂ ನಾಲ್ಕು ವರ್ಷಗಳಿಂದ ನನ್ನೂರು …
Read More »ಶಿವಸಾಗರ ಕಾರ್ಖಾನೆಯಿಂದ ಅನ್ಯಾಯ: ರೈತರ ಪ್ರತಿಭಟನೆ
ರಾಮದುರ್ಗ: ತಾಲ್ಲೂಕಿನ ಶಿವಸಾಗರ ಸಕ್ಕರೆ ಕಾರ್ಖಾನೆಯನ್ನು ಷೇರುದಾರರ ಹಿತ ಕಾಯದೆ ಎನ್‍ಸಿಎಲ್‍ಟಿ ಹರಾಜು ಹಾಕಿ ಷೇರುದಾರರು, ರೈತರು ಮತ್ತು ನೌಕರರಿಗೆ ಅನ್ಯಾಯ ಮಾಡಿದೆಂದು ಆರೋಪಿಸಿ ಉತ್ತರ ಕರ್ನಾಟಕ ರೈತ ಮತ್ತು ಕಬ್ಬು ಬೆಳೆಗಾರರ ಸಂಘ ಮತ್ತು ಷೇರುದಾರರು ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ ನಡೆಸಿದರು. ಜಿಲ್ಲಾಧಿಕಾರಿ ಇಲ್ಲವೇ ಸಕ್ಕರೆ ಆಯುಕ್ತರು ಸ್ಥಳಕ್ಕೆ ಆಗಮಿಸಿ ಪರಿಹಾರ ಒದಗಿಸುವ ತನಕ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ನೀರು, ಊಟ ಸೇವಿಸುವುದಿಲ್ಲ ಎಂದು ನೂರಾರು ಷೇರುದಾರರು ಹಾಗೂ …
Read More »ಸಂಘದ ಸದಸ್ಯರಿಗೆ ಶೇ 25ರಷ್ಟು ಲಾಭಾಂಶ ಹಂಚಿಕೆ: ಎಸ್.ರಮಾನಂದ ಸ್ವಾಮೀಜಿ
ಹುಕ್ಕೇರಿ: ’24 ವರ್ಷದಲ್ಲಿ 17 ಶಾಖೆ ಹೊಂದಿ ₹3.25 ಕೋಟಿ ನಿವ್ವಳ ಲಾಭ ಹೊಂದಿ ಪ್ರಗತಿ ತೋರಿಸುತ್ತಿರುವ ಮಹಾವೀರ ಮಲ್ಟಿಪರಪಜ್ ಸೊಸೈಟಿಯು ಇತರೆ ಹಣಕಾಸು ಸಂಸ್ಥೆಗಳಿಗೆ ಮಾದರಿ’ ಎಂದು ಯರನಾಳ ಸಿದ್ಧಾರೂಢ ಮಠದ ಎಸ್.ರಮಾನಂದ ಸ್ವಾಮೀಜಿ ಹೇಳಿದರು. ಸ್ಥಳೀಯ ಮಹಾವೀರ ಮಲ್ಟಿಪರಪಜ್ ಸೌಹಾರ್ದ ಸಹಕಾರ ಸಂಘದ 24ನೇ ವಾರ್ಷಿಕ ಸರ್ವಸಾಧಾರಣ ಸಭೆ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಮಹಾವೀರ ನಿಲಜಗಿ ಮಾತನಾಡಿ, ‘ಸದಸ್ಯರ, ನಿರ್ದೇಶಕರ, ಉದ್ಯೋಗಿಗಳ ಸಹಕಾರ ಮತ್ತು ನಿಸ್ವಾರ್ಥ ಸೇವೆಯಿಂದ …
Read More »ಮೂಡಲಗಿ | ಕೋ-ಆಪರೇಟಿವ್ ಬ್ಯಾಂಕ್‌ಗೆ ₹70.22 ಲಕ್ಷ ಲಾಭ: ಸುಭಾಷ ಢವಳೇಶ್ವರ
ಮೂಡಲಗಿ: ‘ಮೂಡಲಗಿ ಕೋ ಆಪರೇಟಿವ್ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದ ಅಂತ್ಯಕ್ಕೆ ₹70.22 ಲಕ್ಷ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಬ್ಯಾಂಕ್ ಅಧ್ಯಕ್ಷ ಸುಭಾಷ ಜಿ. ಢವಳೇಶ್ವರ ಹೇಳಿದರು. ಇಲ್ಲಿಯ ದಿ. ಮೂಡಲಗಿಯ ಕೋ ಆಪರೇಟಿವ್ ಬ್ಯಾಂಕ್‌ನ 74ನೇ ವರ್ಷದ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾಂಕ್ ಆರ್‌ಬಿಐ ನಿರ್ದೇಶನ ಮತ್ತು ಮಾರ್ಗಸೂಚಿಯಲ್ಲಿ ನಡೆಯುತ್ತದೆ ಎಂದರು. ಮಾrfcff ಕೊನೆಯಲ್ಲಿ ಶೇರು ಬಂಡವಾಳ ₹2.21 ಕೊಟಿ, ನಿಧಿಗಳು ₹8.8 ಕೋಟಿ, …
Read More »