ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವುದು, ಅತೀ ವೇಗವಾಗಿ ವಾಹನ ಚಲಾಯಿಸುವುದರ ಸಹಿತ ಸಂಚಾರ ನಿಯಮ ಉಲ್ಲಂಘಿಸುವವರ ಚಾಲನ ಪರವಾನಗಿ ರದ್ದುಪಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ’ ಅಡಿಯಲ್ಲಿ ನೂತನ 65 ಆಯಂಬುಲೆನ್ಸ್ಗಳನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿ ನಮ್ಮ ಸರಕಾರ ರಸ್ತೆ ಸುರಕ್ಷೆಗೆ ಆದ್ಯತೆ ನೀಡುತ್ತಿದ್ದು, ಅಪಘಾತ …
Read More »Daily Archives: ಸೆಪ್ಟೆಂಬರ್ 24, 2024
ಮುನಿರತ್ನ ವಿಧಾನಸಭೆ ಸದಸ್ಯತ್ವ ಅಮಾನತು?
ಬೆಂಗಳೂರು: ದಿನದಿಂದ ದಿನಕ್ಕೆ ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮದ ಕುಣಿಕೆ ಬಿಗಿಯಾಗುತ್ತಿದ್ದು, ಮುಂದುವರಿದ ಭಾಗವಾಗಿ ಅವರ ಮೇಲೆ ಈಗ ವಿಧಾನಸಭೆ ಸದಸ್ಯತ್ವ ಸ್ಥಾನದ ಅಮಾನತಿನ ತೂಗುಗತ್ತಿ ನೇತಾಡುತ್ತಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಸೋಮವಾರ ಮುನಿರತ್ನ ಅವರನ್ನು ವಿಧಾನಸಭೆ ಸದಸ್ಯತ್ವದಿಂದ ಅಮಾನತುಗೊಳಿಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ಗೆ ಪತ್ರ ಬರೆದಿದ್ದಾರೆ. ಈ ಮೂಲಕ ಸರಕಾರ ಮುನಿರತ್ನ ಶಾಸಕತ್ವ ಅಮಾನತು ಕ್ರಮಕ್ಕೆ ಮುಂದಡಿ ಇಟ್ಟಿದೆ. ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ …
Read More »ಅನೈತಿಕ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ,
ಮುಧೋಳ: ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ನಗರದ ಮಧ್ಯಭಾಗದಲ್ಲಿರುವ ಸಮುದಾಯ ಭವನವೊಂದು ಪಾಳು ಕೊಂಪೆಯಂತಾಗುತ್ತಿದ್ದು, ಸಾರ್ವಜನಿಕರ ಅನೈತಿಕ ಚಟುವಟಿಕೆ ತಾಣವಾಗಿ ಬದಲಾಗಿದೆ. ಬಸ್ ನಿಲ್ದಾದಿಂದ ಕೂಗಳತೆ ದೂರದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಭವನದ ನಿರ್ವಹಣೆಗೆ ನಗರಸಭೆ ಮುಂದಾಗದಿರುವ ಕಾರಣ ಭವನದ ಆವರಣ ಮತ್ತು ಭವನದೊಳಗೆ ಕಸಕಡ್ಡಿಯಥೇಚ್ಛವಾಗಿ ಬೆಳೆದುಕೊಂಡಿದೆ. ಸುಂದರ ಸಮಾರಂಭ ಹಾಗೂ ವಿವಿಧ ಶುಭ ಕಾರ್ಯಗಳಿಗೆ ಬಳಕೆಯಾಗಬೇಕಿದ್ದ ಭವನಕ್ಕೆ ಗ್ರಹಣ ಹಿಡಿದಿದ್ದು ಅಧಿಕಾರಿಗಳು ಕನಿಷ್ಠ ಸ್ವಚ್ಛತೆಗೂ ಮುಂದಾಗದಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. …
Read More »ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ
ಮೇಷ: ಮನಸ್ಸಿನ ಸ್ವಾಸ್ಥ್ಯವನ್ನು ಕಾಯ್ದುಕೊಳ್ಳುವ ಪ್ರಯತ್ನ. ಉದ್ಯೋಗಸ್ಥರು, ವ್ಯವಹಾರಸ್ಥರಿಗೆ ಶುಭ ಸೂಚನೆ. ಹಳೆಯದಾದ ಜಟಿಲ ಸಮಸ್ಯೆಗೆ ಪರಿಹಾರ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಆನಂದದ ದಿನ. ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ. ಸ್ವತಂತ್ರ ಉದ್ಯಮಿಗಳಿಗೆ ಎದುರಾಳಿಗಳಿಂದ ಸ್ಪರ್ಧೆ. ಗುರುಸಮಾನರ ಅಕಸ್ಮಾತ್ ಭೇಟಿ. ಸಂಗಾತಿಯ ಮನೋಗತವನ್ನು ಗೌರವಿಸಿ ನಡೆದುಕೊಂಡರೆ ಕ್ಷೇಮ. ಮಕ್ಕಳ ಪರೀಕ್ಷಾ ತಯಾರಿಗೆ ಗಮನ. ಮಿಥುನ: ಪೂರ್ವಜರ ಸ್ಮರಣೆಯಿಂದ ಹಿತ. ಕುಟುಂಬದ ಕ್ಷೇಮದ ಕುರಿತು ಚಿಂತನೆ. ಜೀವನದಲ್ಲಿ ಹಿರಿಯರ ಆರೋಗ್ಯದತ್ತ ಗಮನವಿರಲಿ. ಉತ್ತರ ದಿಕ್ಕಿನಿಂದ ಶುಭ …
Read More »ಇನ್ಮುಂದೆ ಇವರಿಗೆ ಬರಲ್ಲ `ಗೃಹಲಕ್ಷ್ಮಿ’ ಹಣ!
ಬೆಂಗಳೂರು: ರಾಜ್ಯ ಸರ್ಕಾರದಿಂದ ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳೂ 2000 ಪಡೆಯುತ್ತಿದ್ದಂತ 1.78 ಲಕ್ಷ ಯಜಮಾನಿಯರಿಗೆ ಹಣ ಪಾವತಿ ಮಾಡದಂತೆ ತಡೆ ಹಿಡಿಯಲಾಗಿದೆ. ಈ ಮೂಲಕ ಗೃಹ ಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಲಾಗಿದೆ. ಗೃಹ ಲಕ್ಷ್ಮೀ ಯೋಜನೆಯ ನಿಯಮಾನುಸಾರ ಆದಾಯ ತೆರಿಗೆ ಪಾವತಿ ಮಾಡುವವರಿಗೆ ಈ ಯೋಜನೆಯಡಿ ಪ್ರಯೋಜನ ಸಿಗುವುದಿಲ್ಲ. ಆದರೂ ಯೋಜನೆಗೆ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದರೂ …
Read More »