ಯಾದಗಿರಿ: ಸೋಮವಾರ(ಸೆ. 23) ಸಿಡಿಲು ಬಡಿದು ನಾಲ್ವರು ಮೃತಪಟ್ಟದ್ದರು ಇಂದು ಯಾದಗಿರಿ ತಾಲ್ಲೂಕಿನ ಜಿನಕೇರಾ ತಾಂಡಕ್ಕೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ತಾಂಡಾಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇಂತಹ ಘಟನೆಗಳು ಆಗದಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಆ ಕುಟುಂಬದ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ. ಸರ್ಕಾರದಿಂದ ಏನೆಲ್ಲ ಪರಿಹಾರ ಇದೆಯೋ ಅದನ್ನು ಆ ಕುಟುಂಬಗಳಿಗೆ ಒದಗಿಸಲು ಅಧಿಕಾರಿಗಳಿಗೆ …
Read More »Daily Archives: ಸೆಪ್ಟೆಂಬರ್ 25, 2024
ಸಾಲು ಮರದ ತಿಮ್ಮಕ್ಕ ಪಾರ್ಕ್ ಸಾಲು ಸಾಲು ಸಮಸ್ಯೆ!
ಪುತ್ತೂರು: ಪರಿಸರ ಪ್ರೀತಿ ಮೂಡಿಸಬೇಕಿದ್ದ, ಸದಾ ಕಾಲ ನಳನಳಿಸ ಬೇಕಿದ್ದ ವೃಕ್ಷೋದ್ಯಾನವೊಂದು ನಿರ್ವಹಣೆ ಕೊರತೆಯಿಂದ ತನ್ನ ಲವಲವಿಕೆಯನ್ನೇ ಕಳೆದುಕೊಂಡು ನಿರ್ಜಿವ ಸ್ಥಿತಿಯಲ್ಲಿದೆ. ಐದು ವರ್ಷದ ಹಿಂದೆ ನಗರದ ಬೀರಮಲೆಯಲ್ಲಿ ಸ್ಥಾಪಿಸಲಾಗಿರುವ ಸಾಲು ಮರ ತಿಮ್ಮಕ್ಕ ಟ್ರೀ ಪಾರ್ಕ್‌ನ ಸ್ಥಿತಿ ಹೇಗಿದೆ ಎಂದು ಉದಯವಾಣಿ ಸುದಿನ ನಡೆಸಿದ ರಿಯಾಲಿಟಿ ಚೆಕ್‌ನಲ್ಲಿ ಕಂಡು ಬಂದ ದೃಶ್ಯ ಇದು. ಬೆಟ್ಟದ ತುತ್ತತುದಿಯಲ್ಲಿ ಇರುವ, ಪುತ್ತೂರಿಗೆ ಮುಕುಟಪ್ರಾಯದಂತಿರಬೇಕಿದ್ದ ವೃಕ್ಷೋದ್ಯಾನದ ನಿರ್ವಹಣೆ ಇಲ್ಲದೆ ಹಾಳು ಕೊಂಪೆಯಂತಾಗಿದೆ. ಶುಲ್ಕ ಸಂಗ್ರಹ …
Read More »ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿಲ್ಲ. ಸಿಎಂ ಸಿದ್ದರಾಮಯ್ಯ ನಿರಪರಾಧಿಯಾಗಿ ಹೊರ ಬರಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ
ಶಿರಸಿ: ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿಲ್ಲ. ಸಿಎಂ ಸಿದ್ದರಾಮಯ್ಯ ನಿರಪರಾಧಿಯಾಗಿ ಹೊರ ಬರಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ ಪ್ರತಿಕ್ರಿಯೆ ನೀಡಿದರು. ಅವರು ಸೆ.24ರ ಮಂಗಳವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅಧಿವೇಶದಲ್ಲಿ ವಿಧಾನಸಭೆ ಒಳಗಡೆ ಹಾಗೂ ಹೊರಗಡೆಯೂ ಬಿಜೆಪಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಅವರ ಆರೋಪವನ್ನು ನಾವು ಒಪ್ಪುವುದಿಲ್ಲ. ಬಿಜೆಪಿಯು ರಾಜ್ಯಪಾಲರನ್ನು ಅಸ್ತ್ರ ಮಾಡಿಕೊಂಡು ಮುಖ್ಯಮಂತ್ರಿ ವಿರುದ್ಧ ರಣತಂತ್ರ ರೂಪಿಸಿದೆ. ನ್ಯಾಯಾಲಯ ನೀಡಿದ …
Read More »ತಂಗಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಅಣ್ಣ
ಗದಗ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತಂಗಿಯನ್ನು ಬರ್ಬರವಾಗಿ ಕೊಲೆ ಮಾಡಿದ ಅಣ್ಣನೊಬ್ಬ ನಂತರ ಪೊಲೀಸರಿಗೆ ಶರಣಾದ ಘಟನೆ ಮುಂಡರಗಿ ಪಟ್ಟಣದಲ್ಲಿ ಸೆ.24ರ ಮಂಗಳವಾರ ನಡೆದಿದೆ. ಕಾವ್ಯಾ (32) ಮೃತಪಟ್ಟ ಮಹಿಳೆ. ಈಶಪ್ಪ ಕ್ಯಾದಗಿಹಳ್ಳಿ ಕೊಲೆ ಮಾಡಿದ ಆರೋಪಿ. ಅನ್ಯಕೋಮಿನ ಯುವಕ ಪ್ರಶಾಂತ ಹಡಪದ (37) ಎಂಬವರ ಜೊತೆ ಮದುವೆಯಾಗಿದ್ದ ಯುವತಿ ಕಾವ್ಯಾ, ಆಸ್ತಿಗಾಗಿ ಅಣ್ಣ ಈಶಪ್ಪನ ವಿರುದ್ಧ ಕೇಸ್ ದಾಖಲಿಸಲು ಮುಂದಾಗಿದ್ದಳು. ಮನೆಗೆ ಬಂದ ತಂಗಿ ಕಾವ್ಯಾ ಅಣ್ಣ ಈಶಪ್ಪನೊಂದಿಗೆ …
Read More »ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ
ದಾವಣಗೆರೆ: ನಮಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ. ಅದರಲ್ಲಿ ಯಾವುದೇ ಗೊಂದಲ ಇಲ್ಲವೇ ಇಲ್ಲ ಎಂದು ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನ ರದ್ಧುಗೊಳಿಸಬೇಕು ಎಂಬ ಅರ್ಜಿ ಹೈಕೋರ್ಟ್‌ನಲ್ಲಿ ವಜಾ ಆಗಿರುವುದರಿಂದ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ. ನಾವು ಕಾಂಗ್ರೆಸ್‌ನವರು ಸ್ವಚ್ಛವಾಗಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ನಮಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ …
Read More »ಲೈಂಗಿಕ ದೌರ್ಜನ್ಯ, ಯತ್ನಾಳ್ ವಿರುದ್ದ ಅವಹೇಳನಕ್ಕೆ ಖಂಡನೆ; ಮನವಿ ಸಲ್ಲಿಕೆ
ಮುಧೋಳ: ನಗರದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ನಡೆದ ಪ್ರತಿಭಟನೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಸೆ.24ರ ಮಂಗಳವಾರ ಪ್ರತಿಭಟನೆ ನಡೆಸಿ ಡಿವೈಎಸ್ಪಿ ಶಾಂತವೀರ ಅವರಿಗೆ ಮನವಿ ಸಲ್ಲಿಸಿದರು. ಜಡಗಣ್ಣ ಬಾಲಣ್ಣ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ನಗರದ ಶಿವಾಜಿ ವೃತ್ತಕ್ಕೆ ಬಂದು ಸಭೆಯಾಗಿ ಮಾರ್ಪಟ್ಟಿತು. ಈ ವೇಳೆ ಮಾತನಾಡಿದ ಹಿಂದೂ ಸಂಘಟನೆ ಮುಖಂಡ ಹನಮಂತ ಮಳಲಿ, …
Read More »ಅಕ್ರಮವಾಗಿ ಕರುಗಳ ಸಾಗಾಟ; ಕಂಟೈನರ್ ವಶ, ಇಬ್ಬರ ಬಂಧನ
ಹುಣಸೂರು: ಅಕ್ರಮವಾಗಿ ಒಂದೇ ಕಂಟೈನರ್‌ನಲ್ಲಿ 42 ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಬಿಳಿಕೆರೆ ಠಾಣಾ ಪೊಲೀಸರು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ ಘಟನೆ ಸೆ.24ರ ಮಂಗಳವಾರ ನಡೆದಿದೆ. ಹುಣಸೂರು ತಾಲೂಕಿನ ರತ್ನಪುರಿ ಹಾಗೂ ಚಾಮರಾಜನಗರದ ಇಬ್ಬರನ್ನು ಬಂಧಿಸಿ, ವಾಹನ ವಶಕ್ಕೆ ಪಡೆಯಲಾಗಿದೆ. ಹುಣಸೂರು ತಾಲೂಕಿನ ರತ್ನಪುರಿಯಿಂದ ಕೆ.ಆರ್.ನಗರ, ಗೊಮ್ಮಟಗಿರಿ ಮಾರ್ಗವಾಗಿ ಮೈಸೂರು ಕಡೆಗೆ ಕಂಟೈನರ್‌ನಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಮಂಗಳವಾರ ಬೆಳಗ್ಗೆ ಬೆನ್ನಟ್ಟಿ ಮನುಗನಹಳ್ಳಿ ಬಳಿಯಲ್ಲಿ …
Read More »ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ
ರಬಕವಿ-ಬನಹಟ್ಟಿ: ಶ್ರೀ ಕಾಡಸಿದ್ಧೇಶ್ವರ ರಥೋತ್ಸವಕ್ಕೆ ಅದ್ಧೂರಿ ಮಂಗಳವಾರ ರಾತ್ರಿ 8.00ಕ್ಕೆ ಚಾಲನೆ ದೊರೆಯಿತು. ಅದಕ್ಕೂ ಮುಂಚೆ ವಿದ್ಯುತ್‌ದೀಪ ಹಾಗೂ ಅಪಾರ ಪ್ರಮಾಣದ ಹೂವುಗಳಿಂದ ಅಲಂಕೃತವಾದ ರಥಕ್ಕೆ (ತೇರಿಗೆ) ನಗರದ ಸಮಸ್ತ ಹಿರಿಯರು ಸಂಜೆ 6 ಗಂಟೆಗೆ ಪೂಜೆ ಸಲ್ಲಿಸಿ ಕಾಯಿ ಒಡೆಯುವುದರ ಮೂಲಕ ಜಾತ್ರೆಗೆ ಚಾಲನೆ ನೀಡಿದರು. ಶ್ರೀ ಕಾಡಸಿದ್ಧೇಶ್ವರ ಮಹಾರಾಜ ಕಿ ಜೈ’ ಎಂಬ ಜಯಘೋಷಗಳ ಮಧ್ಯೆ ಜಾತ್ರೆಯ ಪ್ರಥಮ ದಿನ ಬಾನಂಗಳದಲ್ಲಿ ಹಾರಾಡಿದ ಪಟಾಕಿಗಳ ಸಂಭ್ರಮ, ಸಡಗರದ ನಡುವೆ …
Read More »ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್
ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್ ರಬಕವಿ-ಬನಹಟ್ಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಳಷ್ಟು ನುರಿತ, ಅನುಭವಿ ರಾಜಕಾರಣಿಯಾಗಿದ್ದು, ಹಿಂದಿನ ಪರಂಪರೆ ಅವಲೋಕಿಸಿದಾಗ ಇಂತಹ ತೀರ್ಮಾನ ಬಂದ ಸಂದರ್ಭದಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗೆ ಅವಕಾಶ ನೀಡಬೇಕು ಎಂದು ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ್ ಹೇಳಿದರು. ಮಂಗಳವಾರ ಬನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಸಾಮಾಜಿಕ ನ್ಯಾಯದ ವಿರುದ್ಧವಿದೆ ಎಂದು ಹೇಳಿದ್ದು ಸರಿಯಲ್ಲ. ಅವರ ಆಡಳಿತದಲ್ಲಿ ಹಲವು …
Read More »MUDA: ಸಿದ್ದರಾಮಯ್ಯ ಬೆನ್ನಿಗೆ ನಿಂತ ರಾಜ್ಯ ಕಾಂಗ್ರೆಸ್ ಪಡೆ, ವರದಿ ಕೇಳಿದ ಹೈಕಮಾಂಡ್!
ಬೆಂಗಳೂರು: ಹೈಕೋರ್ಟ್ ತೀರ್ಪು ಹೊರಬಿದ್ದದ್ದೇ ತಡ. ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದು, ಕಾಂಗ್ರೆಸ್ ಶಾಸಕರು, ಸಚಿವರು ಮಾತ್ರ ಸಿಎಂ ಬೆನ್ನಿಗೆ ಇದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ. ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ರಾಜೀನಾಮೆ ಕೇಳುವ ನೈತಿಕತೆಯೂ ಪ್ರತಿಪಕ್ಷಗಳಿ ಗಿಲ್ಲ ಎಂದು ತಿರುಗೇಟು ನೀಡಿದ್ದಾರೆ. ತೀರ್ಪು ಹೊರಬೀಳುತ್ತಿದ್ದಂತೆ ಒಬ್ಬೊಬ್ಬರಾಗಿಯೇ ಸಿಎಂ ನಿವಾಸದತ್ತ ದೌಡಾಯಿಸಿದ ಶಾಸಕ, ಸಚಿವರು ಸಿದ್ದರಾಮಯ್ಯ ಪರವಾಗಿ ತಾವೆಲ್ಲ ಇದ್ದೇವೆ ಎಂಬ ಸಂದೇಶ ನೀಡುವ ಪ್ರಯತ್ನ …
Read More »