ಮೈಸೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಗುರುವಾರವೂ ಪ್ರಕರಣ ದಾಖಲಾಗಿಲ್ಲ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ನೀಡಿದ್ದ ಆದೇಶದ ಪ್ರತಿಯನ್ನು ಪಡೆಯಲು ಖುದ್ದಾಗಿ ಲೋಕಾಯುಕ್ತ ಎಸ್‌ಪಿ ಟಿ.ಜೆ. ಉದೇಶ್ ಬೆಂಗಳೂರಿಗೆ ತೆರಳಿದ್ದು, ಮೈಸೂರಿಗೆ ಬಂದ ಬಳಿಕ ಶುಕ್ರವಾರ ಬೆಳಗ್ಗೆ ಸಿಎಂ ವಿರುದ್ಧ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬುಧವಾರ ಮಧ್ಯಾಹ್ನ ಆದೇಶವಾದ ಬಳಿಕ ಆದೇಶ ಪ್ರತಿ ಬರಬಹುದೆಂಬ ನಿರೀಕ್ಷೆಯಲ್ಲಿ ಸಂಜೆಯವರೆಗೂ ಕಚೇರಿಯಲ್ಲೇ ಇದ್ದ …
Read More »Daily Archives: ಸೆಪ್ಟೆಂಬರ್ 27, 2024
ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
ನೈಟ್ ರೋಡ್’ ಎಂಬ ಚಿತ್ರ ಇಂದು ತೆರೆಕಾಣುತ್ತಿದೆ. ಅಪಘಾತದಿಂದ ಮೃತಪಟ್ಟ ಯುವಕನ ಅಸಹಜ ಸಾವಿನ ತನಿಖೆಗೆ ಮುಂದಾಗುವ ನಾಯಕ ಆಧ್ಯಾತ್ಮದತ್ತ ವಾಲುತ್ತಾನೆ. ಹೀಗೆ ತಿರುವು ಪಡೆಯುವ ಚಿತ್ರದ ಪ್ರತಿ ದೃಶ್ಯದಲ್ಲೂ ಪ್ರೇಕ್ಷಕರ ಹೃದಯ ಬಡಿತವನ್ನು ಹೆಚ್ಚಿಸುವ ಜೊತೆಗೆ ಯೋಚನೆಗೆ ಹಚ್ಚುತ್ತದೆ. ಕ್ಲೈಮ್ಯಾಕ್ಸ್ ವೇಳೆಗಂತೂ ನೋಡುಗರನ್ನು ತನ್ನಲ್ಲಿ ಆವಾಹನೆ ಮಾಡಿಕೊಂಡಿರುತ್ತದೆ ಎನ್ನುತ್ತದೆ ಚಿತ್ರತಂಡ. ಗೋಪಾಲ್ ಹಳೇಪಾಳ್ಯ ಈ ಚಿತ್ರದ ನಿರ್ದೇಶಕರು. ಈ ಹಿಂದೆ ಗೋಪಾಲ್ ಹಳೇಪಾಳ್ಯ “ತಾಂಡವ’ ಚಿತ್ರವನ್ನು ನಿರ್ದೇಶಿಸಿದ್ದರು. ಚಿತ್ರವನ್ನು …
Read More »ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
ಉಪೇಂದ್ರ ನಾಯಕರಾಗಿ ನಟಿಸಿ, ನಿರ್ದೇಶಿಸಿದ್ದ ಹಾಗೂ ಶಿಲ್ಪಾ ಶ್ರೀನಿವಾಸ್ ಅವರು ನಿರ್ಮಿಸಿದ್ದ ಉಪೇಂದ್ರ ಚಿತ್ರ 1999ರಲ್ಲಿ ಬಿಡುಗಡೆಯಾಗಿ ಭರ್ಜರಿ ಹಿಟ್ ಆಗಿತ್ತು. ಈಗ 25 ವರ್ಷಗಳ ನಂತರ ಚಿತ್ರ ಕಳೆದ ವಾರ ರೀ ರಿಲೀಸ್ ಆಗಿದೆ. ಮತ್ತೂಮ್ಮೆ ಅಭಿಮಾನಿಗಳು ಈ ಚಿತ್ರಕ್ಕೆ ಜೈ ಎಂದಿದಾರೆ. ಚಿತ್ರಕ್ಕೆ ಹೊಸ ಚಿತ್ರದ ರಿಲೀಸ್ ದಿನ ಸಿಗುವಂತಹ ಅದ್ಧೂರಿ ಓಪನಿಂಗ್ ಸಿಕ್ಕಿದೆ. ಉಪ್ಪಿ ಅಭಿಮಾನಿಗಳು ಚಿತ್ರವನ್ನು ನೋಡಿ ಫಿದಾ ಆಗಿದ್ದಾರೆ. ಚಿತ್ರ ಮರು …
Read More »ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ಮನನೊಂದು ರೈತ ಆತ್ಮಹತ್ಯೆ
ಚಿಂಚೋಳಿ: ತಾಲೂಕಿನ ಪೋತಂಗಲ ಗ್ರಾಮದಲ್ಲಿ ರೈತನೋರ್ವರು ಸಾಲದ ಭಾದೆ ತಾಳದೆ ಮತ್ತು ಹೊಲದಲ್ಲಿ ಬೆಳೆದ ಮುಂಗಾರು ಬೆಳೆ ಹಾನಿಯಿಂದ ಮನನೊಂದು ಮನೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.26ರ ಗುರುವಾರ ಸಂಜೆ ನಡೆದಿದೆ. ಪೊತಂಗಲ ಗ್ರಾಮದ ಪಾಂಡಪ್ಪ ತಿಪ್ಪಣ್ಣ(45) ಮೃತಪಟ್ಟ ರೈತ. ಪ್ರಸ್ತುತ ಸಾಲಿನಲ್ಲಿ ಮುಂಗಾರು ಬೆಳೆಗಳಾದ ತೊಗರಿ, ಹೆಸರು, ಉದ್ದುಗಳನ್ನು ಪಾಂಡಪ್ಪ ತಿಪ್ಪಣ್ಣ ತನ್ನ ಹೊಲದಲ್ಲಿ ಬೆಳೆದಿದ್ದ. ಆದರೆ ಅತಿಯಾಗಿ ಸುರಿದ ಮಳೆಯಿಂದಾಗಿ ಬೆಳೆಗಳು ಹಾನಿಯಾಗಿದ್ದವು. ಅಲ್ಲದೇ …
Read More »ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು
ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಶಾಸಕರಾಗಿದ್ದಾಗ ವಿರೋಧ ಪಕ್ಷದ ನಾಯಕ ಮತ್ತು ಮುಖ್ಯಮಂತ್ರಿಯಾಗಿ ಕೆಲಸ ನಿರ್ವಹಣೆ ಮಾಡಿದ್ದಾರೆ. ಭ್ರಷ್ಟಾಚಾರ ನಡೆದಾಗ ಕ್ಷಮಿಸುವ ಪ್ರಶ್ನೆಯೇ ಇಲ್ಲ. ಕ್ರಮ ತೆಗೆದುಕೊಳ್ಳಬೇಕು ಎಂದು ಅವರೇ ಹೇಳುತ್ತಾರೆ. ಇದೀಗ ಅವರ ಮೇಲೆ ಭ್ರಷ್ಟಾಚಾರದ ಅರೋಪ ಬಂದಿದೆ. ಹೀಗಾಗಿ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಸಿಕ್ಯೂಷನ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿಯೂ ಸಿದ್ದರಾಮಯ್ಯ ಹಿನ್ನಡೆಯಾಗಿದೆ. ಇದನ್ನರಿತು ರಾಜೀನಾಮೆ …
Read More »ಮಗಳನ್ನು ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ. ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ
ಹುಬ್ಬಳ್ಳಿ: ತಮ್ಮ ಮಗಳನ್ನು ಮದುವೆ ಮಾಡಿಕೊಡುವಂತೆ ಪೀಡಿಸುತ್ತಿದ್ದವನಿಗೆ ಬುದ್ದಿವಾದ ಹೇಳಿದ್ದಕ್ಕೆ ಯುವತಿಯ ತಾಯಿಗೆ ಚಾಕುವಿನಿಂದ ಇರಿದಿದ್ದು, ಚಾಕುವಿನಿಂದ ಇರಿದ ವ್ಯಕ್ತಿಗೆ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಬುಧವಾರ ಸಂಜೆ ಇಲ್ಲಿನ ಲೋಹಿಯಾ ನಗರದ ನೀಲಾ ಎನ್ನುವ ಮಹಿಳೆಗೆ ಚಾಕುವಿನಿಂದ ಇರಿದಿದ್ದು, ಮಹಿಳೆಯರನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದಿದ್ದರೆ. ಗಾಯಗೊಂಡಿರುವ ನೀಲಾ ಅವರಿಗೆ ನಾಲ್ವರು ಮಕ್ಕಳಿದ್ದು, ಅವರಲ್ಲಿ ಓರ್ವಳನ್ನು ಆರೋಪಿ ಮಹೇಶ ಮೇಟಿ ಎಂಬಾತ …
Read More »ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್
ಹುಬ್ಬಳ್ಳಿ: ಮುಡಾ ಪ್ರಕರಣದಲ್ಲಿ ಹೈ ಕೋರ್ಟ್ ಆದೇಶ ಬಂದ ನಂತರ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸೂಕ್ತ. ಕೂಡಲೇ ಅವರು ವಿಧಾನಸಭೆ ವಿಸರ್ಜನೆ ಮಾಡಲಿ ಎಂದು ಬಿಜೆಪಿ ಮುಖಂಡ, ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರು ಅಧಿಕಾರದಲ್ಲಿದ್ದರೆ ತನಿಖೆ ಮೇಲೆ ಪ್ರಭಾವ ಖಚಿತ. ಈ ಹಿಂದೆ ವಿಪಕ್ಷದಲ್ಲಿದ್ದಾಗ ಅವರು ಏನು ಮಾತನಾಡಿದ್ದರೂ ನೆನಪಿಸಿಕೊಳ್ಳಲಿ. ಮುಖ್ಯಮಂತ್ರಿ ಹುದ್ದೆಯಲ್ಲಿದ್ದು ಯಾವುದೇ ತನಿಖೆ ಎದುರಿಸುವುದು ಸರಿಯಲ್ಲ. ಅವರು ಹೈಕೋರ್ಟ್‌ನ ಆದೇಶ ಪಾಲಿಸಬೇಕು. …
Read More »ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ
ಹೊಸದಿಲ್ಲಿ: ತುಟ್ಟಿ ಭತ್ತೆ ಪರಿಷ್ಕರಿಸುವ ಮೂಲಕ ಕೇಂದ್ರ ಸರಕಾರವು ಅಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಹೆಚ್ಚಳ ಮಾಡಿದೆ. ದಿನೇ ದಿನೆ ಹೆಚ್ಚಾಗುತ್ತಿರುವ ಜೀವನ ವೆಚ್ಚವನ್ನು ನಿಭಾಯಿಸಲು ಕಾರ್ಮಿಕರಿಗೆ ಅನುಕೂಲವಾಗಲಿ ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯ ತಿಳಿಸಿದೆ. ಅ.1ರಿಂದ ಈ ಪರಿಷ್ಕೃತ ಕನಿಷ್ಠ ವೇತನವು ಅನ್ವಯವಾಗಲಿದ್ದು, ಕಟ್ಟಡ ನಿರ್ಮಾಣ ಕಾರ್ಮಿಕರು, ಲೋಡಿಂಗ್-ಅನ್‌ಲೋಡಿಂಗ್, ಕಸ ಗುಡಿಸುವ ಕಾರ್ಮಿಕರು, ಸ್ವತ್ಛತಾ ಕಾರ್ಮಿಕರು, ಮನೆಗೆಲಸದ ಕಾರ್ಮಿಕರು, ಗಣಿಗಾರಿಕೆ, …
Read More »ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ನಾಯಕರ ಪಟ್ಟು ಬಿಗಿ
ಬೆಂಗಳೂರು: ಮುಡಾ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು 1 ಗಂಟೆ ಕಾಲ ಪ್ರತಿಭಟನೆ ನಡೆಸಿದರು. ಶಾಸಕರಾದ ಅರವಿಂದ ಬೆಲ್ಲದ್ ವಿಧಾನಸೌಧದ ಪಶ್ಚಿಮದ್ವಾರಕ್ಕೆ ಬೀಗ ಹಾಕಲು ಯತ್ನಿಸಿದಾಗ ಪೊಲೀಸರು ಬಿಜೆಪಿ ನಾಯಕರನ್ನು ಬಂಧಿಸಿದರು. ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು …
Read More »ಸೆಪ್ಟೆಂಬರ್ 28-29: ದಸರಾ ಕ್ರೀಡಾಕೂಟ
ಉಡುಪಿ: ಜಿಲ್ಲಾಡಳಿತ, ಜಿ.ಪಂ. ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಸೆ.28 ಮತ್ತು 29ರಂದು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೆ. 28ರಂದು ಬೆಳಗ್ಗೆ 9ಕ್ಕೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಉದ್ಘಾಟಿಸಲಿದ್ದಾರೆ. ಸೆ. 28ರಂದು ಬೆಳಗ್ಗೆ 9ಕ್ಕೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಆತ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ವೇಟ್‌ಲಿಫ್ಟಿಂಗ್, ಕುಸ್ತಿ, ತ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಹಾಗೂ ಟೇಕ್ವಾಂಡೋ ಕ್ರೀಡಾಕೂಟ, …
Read More »