Breaking News

Daily Archives: ಸೆಪ್ಟೆಂಬರ್ 28, 2024

ರಾಜ್ಯದಾದ್ಯಂತ ಅ. 2ರಂದು ಗಾಂಧಿ ನಡಿಗೆ, ಸ್ವಚ್ಛತೆ ಪ್ರತಿಜ್ಞೆ:

ಬೆಂಗಳೂರು: ‘ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಕಾರಣ, ಒಂದು ವರ್ಷ ರಾಜ್ಯದಾದ್ಯಂತ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.   ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇದೇ ಅಕ್ಟೋಬರ್ 2ರಂದು ‘ಗಾಂಧಿ ನಡಿಗೆ’ ಮತ್ತು ‘ಸ್ವಚ್ಛತೆಯ ಪ್ರತಿಜ್ಞಾ ಸ್ವೀಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ, ತಾಲ್ಲೂಕು ಕೇಂದ್ರ ಹಾಗೂ ಪಾಲಿಕೆ ಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿದೆ’ ಎಂದರು. ‘ಬೆಂಗಳೂರಿನಲ್ಲಿ …

Read More »

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ವಿಜಯಪುರ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಗೌರವಯುತವಾಗಿ ರಾಜೀನಾಮೆ ನೀಡಬೇಕು. ಅವರು ಕಳ್ಳರಿದ್ದಾರೆ, ಇವರು ಕಳ್ಳರಿದ್ದಾರೆ ಎನ್ನುವುದು ಬೇಡ. ರಾಜಕೀಯದಲ್ಲಿ ನೀವು ಸ್ವಚ್ಛವಾಗಿರಿ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು.   ಮುಡಾ ಪ್ರಕರಣದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ರಾಜೀನಾಮೆ ವಿಷಯವನ್ನು ಎತ್ತಿದಾಗ ಕೇಂದ್ರ ಸಚಿವ ಎಚ್. ಡಿ. …

Read More »

ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಶಾಕ್‌

ಬೆಂಗಳೂರು, ಸೆಪ್ಟೆಂಬರ್‌ 28: ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಂ ನಾಯ್ಡು ಅವರ ವಿರುದ್ಧ ಬೆದರಿಕೆ, ಜಾತಿ ನಿಂದನೆ ಹಾಗೂ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಇದೀಗ ಮುನಿರತ್ನ ಅವರಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ಶನಿವಾರ ಬೆಳ್ಳಂಬೆಳಗ್ಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಧಿ ವಿಜ್ಞಾನ ಪ್ರಾಯೋಗಾಲಯದ ತಜ್ಞರನ್ನು ಕೂಡ ಜೊತೆಗೆ ಕರೆದೊಯ್ದಿದ್ದಿರುವ ಅಧಿಕಾರಿಗಳ ತಂಡ, ಮಹತ್ವದ ಮಾಹಿತಿ ಕಲೆಹಾಕಿದೆ …

Read More »

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದರು. ಕೆಲವು ಪ್ರಗತಿಪರ ಸಂಘಟನೆಗಳು ಚಾಮುಂಡಿ‌ಬೆಟ್ಟದಲ್ಲಿ‌ ಭಾನುವಾರ ಹಮ್ಮಿಕೊಂಡಿರುವ ಮಹಿಷ ದಸರಾ ಆಚರಣೆ ಬಗ್ಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ‘ಕಾರ್ಯಕ್ರಮ ಮಾಡುವವರು ಕಾನೂನು-ಸುವ್ಯವಸ್ಥೆಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಷ್ಟೆ’ ಎಂದರು.   ‘ಇಂಥದ್ದನ್ನು ಮಾಡಿ ಅಥವಾ ಮಾಡಬೇಡಿ ಎಂದು ಹೇಳಲು ನಾವ್ಯಾರು? ದೇಶದ ನಾಗರಿಕತೆಯಲ್ಲೇ ನೀರು, ಕಲ್ಲು, ಮಣ್ಣನ್ನು …

Read More »

ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ವಿರುದ್ದ ಈಗ ರದ್ದಾಗಿರುವ ಚುನಾವಣಾ ಬಾಂಡ್‌ (Electoral Bonds Scheme) ಗಳ ಮೂಲಕ ಸುಲಿಗೆ ಆರೋಪದಲ್ಲಿ ಎಫ್‌ಐಆರ್‌ ದಾಖಲಿಸುವಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಸೂಚಿಸಿದೆ.   ಸೀತಾರಾಮನ್ ಮತ್ತು ಇತರರು ಚುನಾವಣಾ ಬಾಂಡ್‌ ಗಳ ಸೋಗಿನಲ್ಲಿ ಸುಲಿಗೆ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಸಂಘಟನೆ (JSP) ಆದರ್ಶ್ ಅಯ್ಯರ್ ಎಂಬವರು ದೂರು ದಾಖಲಿಸಿದ್ದಾರೆ. ಪ್ರಕರಣದಲ್ಲಿ ಎಫ್‌ಐಆರ್ …

Read More »

ಪೊಲೀಸರ ಹೆಸರಿನಲ್ಲಿ ಸ್ವಾಮೀಜಿಗೆ ₹1 ಕೋಟಿ ವಂಚನೆ

ಬಾಗಲಕೋಟೆ: ತಾಲ್ಲೂಕಿನ ಗದ್ದನಕೇರಿ ಬಳಿ ಇರುವ ರಾಮಾರೂಢ ಮಠದ ಸ್ವಾಮೀಜಿಗೆ ಉನ್ನತ ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ₹1 ಕೋಟಿ ವಂಚನೆ ಮಾಡಲಾಗಿದೆ. ಜೆಡಿಎಸ್‌ ಮುಖಂಡ ಪ್ರಕಾಶ ಮುಧೋಳ ಎನ್ನುವವರು ಡಿವೈಎಸ್‌ಪಿ ಹೆಸರಿನಲ್ಲಿ, ಇಬ್ಬೊಬ್ಬರು ಎಡಿಜಿಪಿ ಹೆಸರಿನಲ್ಲಿ ರಾಮಾರೂಢ ಮಠದ ಪರಮಹಂಸ ಪರಮರಾಮರೂಢ ಸ್ವಾಮೀಜಿಗೆ ಕರೆ ಮಾಡಿ, ಗೃಹ ಸಚಿವರ ಕಚೇರಿಯಿಂದ ನಮ್ಮ ಕಚೇರಿಗೆ ಸಾಕಷ್ಟು ದೂರುಗಳು ಬಂದಿವೆ. ಅವುಗಳನ್ನು ವಿಚಾರಣೆ ಮಾಡಬೇಕು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ. ಜೈಲಿಗೆ ಕಳುಹಿಸುತ್ತೇವೆ …

Read More »

ದಾಖಲೆ ಇಟ್ಟರೆ 6-7 ಸಚಿವರ ತಲೆದಂಡವಾಗುತ್ತೆ: HDK

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ ಮುಂದುವರೆದಿದೆ. ದಾಖಲೆಗಳನ್ನು ನಾನು ಮುಂದಿಟ್ಟರೆ ರಾಜ್ಯದ 6-7 ಸಚಿವರ ತಲೆದಂಡವಾಗಲಿದೆ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬರಿಗಿಂತ ಒಬ್ಬರು ಪೈಪೋಟಿಯಲ್ಲಿ ಲೂಟಿ ಮಾಡುತ್ತಿದ್ದಾರೆ. ನನ್ನ ಬಳಿ ಇರುವ ದಾಖಲೆಗಳನ್ನು ಬಯಲು ಮಾಡಿದರೆ ಕೊನೇಪಕ್ಷ 6ರಿಂದ 7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಶೀಘ್ರದಲ್ಲಿಯೇ ಎಲ್ಲಾ ದಾಖಲೆಗಳನ್ನು ಬಿಡುತ್ತೇನೆ ಎಂದು …

Read More »

ಹಿಂದೂ ಧರ್ಮದಲ್ಲಿ ಯಾವುದೇ ಪೂಜೆ- ಪುನಸ್ಕಾರವಿರಲಿ. ಮೊದಲು ಗಣೇಶನಿಗೆ ಪೂಜೆ ಸಲ್ಲಿಸುವ ವಾಡಿಕೆಯು ನಮ್ಮ ಪ್ರಾಚಿನ ಕಾಲದಿಂದಲೂ ರೂಢಿಯಲ್ಲಿದೆ.

ಮೂಡಲಗಿ- ಹಿಂದೂ ಧರ್ಮದಲ್ಲಿ ಯಾವುದೇ ಪೂಜೆ- ಪುನಸ್ಕಾರವಿರಲಿ. ಮೊದಲು ಗಣೇಶನಿಗೆ ಪೂಜೆ ಸಲ್ಲಿಸುವ ವಾಡಿಕೆಯು ನಮ್ಮ ಪ್ರಾಚಿನ ಕಾಲದಿಂದಲೂ ರೂಢಿಯಲ್ಲಿದೆ. ಅದು ಯಾವುದೇ ಕೆಲಸವಿರಲಿ. ಶುಭ ಕೆಲಸವಿದ್ದಾಗ ಗಣೇಶನನ್ನು ಪೂಜಿಸಿ ಆರಾಧಿಸಿದರೆ ಕಷ್ಟ- ಕಾರ್ಪಣ್ಯಗಳು ದೂರವಾಗಲಿವೆ ಎಂಬ ನಂಬಿಕೆಯು ಈಗಲೂ ನಮ್ಮ ಪೂರ್ವಜರಲ್ಲಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ಪಟ್ಟಣದ ಬಸವ ಮಂಟಪದಲ್ಲಿ ಏಕದಂತ ಉತ್ಸವ ಸಮೀತಿಯಿಂದ ಜರುಗಿದ ಮೂಡಲಗಿ ಮಹಾರಾಜ ಗಣೇಶನ …

Read More »

ಪ್ರಿಯಕರನನ್ನೇ ರಾಬರಿ ಮಾಡಿಸಿದ ಕಿಲಾಡಿ ಪ್ರಿಯತಮೆ: ಪ್ರೇಯಸಿ ಸೇರಿ ನಾಲ್ವರು ಅರೆಸ್ಟ್

ಬೆಂಗಳೂರು: ಪ್ರಿಯಕರನ ಮೊಬೈಲ್ ನಲ್ಲಿದ್ದಂತ ತನ್ನ ಖಾಸಗಿ ಪೋಟೋ, ವೀಡಿಯೋ ಡಿಲೀಟ್ ಮಾಡೋ ಸಲುವಾಗಿ ಚಾಲಾಕಿ ಪ್ರಿಯತಮೆಯೊಬ್ಬಳು ಆತನ ಮೊಬೈಲ್ ರಾಬರಿ ಮಾಡಿಸಿ, ತಗಲಾಕಿಕೊಂಡ ಘಟನೆ ಬೆಂಗಳೂರಲ್ಲಿ ನಡೆದಿದೆ. ಪ್ರಿಯಕರನನ್ನೇ ರಾಬರಿ ಮಾಡಿದಂತ ಪ್ರಿಯತಮೆ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬೆಳ್ಳಂದೂರಿನಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದಂತ ಶೃತಿ ಎಂಬಾಕೆ ಪ್ರಿಯಕರ ವಂಶಿಕೃಷ್ಣನನ್ನು ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದಳು. ಕೆಲ ದಿನಗಳಿಂದ ಅವರಿಬ್ಬರ ನಡುವೆ ವೈಮನಸ್ಸು ಉಂಟಾಗಿ ದೂರಾಗುವಂತ ಪ್ಲಾನ್ ಮಾಡಿದ್ದಳು. …

Read More »

ಅಮಾನತು ಪ್ರಕರಣ ರದ್ದತಿಗೆ ಆಗ್ರಹ

ಶಿಗ್ಗಾವಿ: ಮೊಬೈಲ್ ತಂತ್ರಾಂಶಗಳ ಕುರಿತ ಅಮಾನತು ಪ್ರಕರಣಗಳನ್ನು ರದ್ದು ಪಡಿಸಬೇಕು, ಕೇರಿಗೆ ಮೂಲ ಸೌಕರ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ಗುರುವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಿದರು.   ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಸಾದ್ ಅಕ್ಕಿ ಮಾತನಾಡಿ, ‘ಗ್ರಾಮ ಲೆಕ್ಕಾಧಿಕಾರಿಗಳು ನಿತ್ಯ ಸುಮಾರು 21 ವೆಬ್, …

Read More »