ಆರೀಕಟ್ಟಿ (ಹಂಸಬಾವಿ): ಇಲ್ಲಿಯ ಆರೀಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದ್ದು, ಇದರ ಜೊತೆಯಲ್ಲಿಯೇ ಹಲವು ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿವೆ. ಶತಮಾನೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ಆಚರಿಸಿದ ಗ್ರಾಮಸ್ಥರು, ‘ನಮ್ಮ ಶಾಲೆ ಮೂಲ ಸೌಕರ್ಯ ಕಲ್ಪಿಸಬೇಕು. ಶತಮಾನ ಸಂಭ್ರಮದಲ್ಲಿರುವ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಬೇಕು’ ಎಂದು ಒತ್ತಾಯಿಸಿದರು. ಶತಮಾನದ ಸಂಭ್ರಮದಲ್ಲಿರುವ ಶಾಲೆಯಲ್ಲಿ ವರ್ಷದಿಂದ ವರ್ಷಕ್ಕೆ ದಾಖಲಾತಿ ಸಂಖ್ಯೆ ಕ್ಷೀಣಿಸುತ್ತಿದೆ. ದಾಖಲಾತಿ ಪ್ರಮಾಣ ಹೆಚ್ಚಿಸಲು ಶಿಕ್ಷಣ ಇಲಾಖೆ ಹಾಗೂ ಜನಪ್ರತಿನಿಧಿಗಳು …
Read More »Daily Archives: ಸೆಪ್ಟೆಂಬರ್ 28, 2024
3 ವರ್ಷದ ಬಾಲಕಿಯ ಅಪಹರಣ,ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ
ಬೆಳಗಾವಿ ಜಿಲ್ಲೆಯ ಹಾರೂಗೇರಿಯಲ್ಲಿ 7 ವರ್ಷಗಳ ಹಿಂದೆ ನಡೆದಿದ್ದ 3 ವರ್ಷದ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ತನಿಖಾ ಅಂತಿಮ ಹಂತ ತಲುಪಿದ್ದು, ಆರೋಪಿ ಉದ್ದಪ್ಪ ರಾಮಪ್ಪ ಗಾಣಿಗೇರಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. 2017ರ ಸೆಪ್ಟೆಂಬರ್ 21ರಂದು, ಕುರುಬಗೋಡಿ ಹಾರೂಗೇರಿಯ ನಿವಾಸಿ ಸುಧಾ ಅಪ್ಪಾಸಾಬ ಸಣ್ಣಕ್ಕಿ ಅವರು ತಮ್ಮ 3 ವರ್ಷದ ಮಗಳ ನಾಪತ್ತೆ ಬಗ್ಗೆ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ …
Read More »ಬಾಡಿಗೆ ಮನೆಯಲ್ಲಿ ಅಂಗನವಾಡಿ: ಮಳೆ ಬಂದರೆ ಆತಂಕ
ಅಡವಿಸೋಮಾಪುರ (ತಡಸ): ಕುನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅಡವಿಸೋಮಾಪುರ ಗ್ರಾಮದಲ್ಲಿ ಎರಡು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ಅಂಗನವಾಡಿ ನಡೆಯುತ್ತಿದ್ದು, ಮಳೆ ಬಂದರೆ ಹಂಚಿನ ಮನೆ ಸೋರುತ್ತಿದೆ. ಇದರಿಂದಾಗಿ ಮಕ್ಕಳ ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಅಡವಿಸೋಮಾಪುರ ಗ್ರಾಮದ 96ನೇ ಅಂಗನವಾಡಿ ಕೇಂದ್ರದ ಹಳೇ ಕಟ್ಟಡ ಎರಡು ವರ್ಷಗಳ ಹಿಂದೆ ಮಳೆಯಿಂದ ಹಾನಿಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು, ಮಕ್ಕಳನ್ನು ಬಾಡಿಗೆ ಹಂಚಿನ ಮನೆಗೆ ಸ್ಥಳಾಂತರಿಸಿದ್ದರು. ಎರಡು ವರ್ಷವಾದರೂ ನೂತನ ಕಟ್ಟಡ ನಿರ್ಮಿಸುವಲ್ಲಿ …
Read More »ಹವಾಮಾನದಲ್ಲಿ ಬದಲಾವಣೆ: ವೈರಾಣು ಜ್ವರ ವ್ಯಾಪಕ, ಮಕ್ಕಳು ಹೈರಾಣ
ರಾಣೆಬೆನ್ನೂರು: ಹವಾಮಾನದ ಬದಲಾವಣೆಯಿಂದಾಗಿ ತಾಲ್ಲೂಕಿನಾದ್ಯಂತ ಚಿಕ್ಕಮಕ್ಕಳಲ್ಲಿ ಕೆಮ್ಮು, ಜ್ವರ, ನೆಗಡಿ ಪ್ರಕರಣಗಳು ಹೆಚ್ಚಾಗಿವೆ. ನಗರದ ಪ್ರಮುಖ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗಗಳಿಗೆ ಭೇಟಿ ನೀಡುತ್ತಿರುವವರಲ್ಲಿ ಶೇ 30 ರಿಂದ 40ಕ್ಕೂ ಹೆಚ್ಚು ಮಂದಿ ಜ್ವರ ತಪಾಸಣೆಗೆ ಒಳಗಾಗುತ್ತಿದ್ದಾರೆ. ಇವರಲ್ಲಿ ಮಕ್ಕಳೇ ಹೆಚ್ಚಾಗಿದ್ದಾರೆ. ತಾಪಮಾನ ಏರಿಳಿತ, ಗಾಳಿ ಸಹಿತ ಮಳೆ ಹಾಗೂ ಬಿಸಿಲಿನಿಂದಾಗಿ ವೈರಾಣು ಜ್ವರವು ಮಕ್ಕಳನ್ನು ಹೆಚ್ಚಾಗಿ ಕಾಡುತ್ತಿದೆ. ಇನ್ನೊಂದು ಕಡೆ, ಶೀತ- ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆಗಳೂ …
Read More »ಬೆಳಗಾವಿ ಜಿಲ್ಲೆ ವಿಭಜನೆಗೆ ದಸರಾ ನಂತರ ಮನವಿ: ಲಕ್ಷ್ಮಿ ಹೆಬ್ಬಾಳಕರ
ಬೆಳಗಾವಿ: ‘ದಸರಾ ಮುಗಿದ ನಂತರ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಮನವಿ ಪತ್ರ ಕೊಡುತ್ತೇವೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭೌಗೋಳಿಕವಾಗಿ ಮತ್ತು ಜನಸಂಖ್ಯೆ ದೃಷ್ಟಿಯಿಂದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ವಿಭಜನೆಯಾಗದ ಹೊರತು, ಅಭಿವೃದ್ಧಿ ಸಾಧ್ಯವಿಲ್ಲ. ಈ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಚರ್ಚಿಸಿ, ಮನವಿ ಪತ್ರ …
Read More »ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ರಾಜೀನಾಮೆ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಏನಂದ್ರು?
ಬೆಳಗಾವಿ, ಸೆಪ್ಟೆಂಬರ್ 28: ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದಸಚಿವೆ ಲಕ್ಷ್ಮೀ ಹೆಬ್ಬಾಳಕರ್ , ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದ್ದು, ಇದಕ್ಕಾಗಿ ರಾಜಭವನಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. 6 ಸಾವಿರ …
Read More »ನಾಗಮಂಗಲ ಗಲಭೆ ಪ್ರಕರಣ: ಎಲ್ಲಾ 55 ಆರೋಪಿಗಳಿಗೆ ಜಾಮೀನು ಮಂಜೂರು
ಮಂಡ್ಯ: ನಾಗಮಂಗಲ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಎಲ್ಲಾ 55 ಆರೋಪಿಗಳಿಗೆ ಜಾಮೀನು ಮಂಜೂರು ಮಡಿ ಮಂಡ್ಯ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಯಾಲಯ ಆದೇಶ ಹೊರಡಿಸಿದೆ. ನ್ಯಾಯಾಂಗ ಬಂಧನದಲ್ಲಿದ್ದ ಎರಡೂ ಕೋಮಿನ ಒಟ್ಟು 55 ಆರೋಪಿಗಳಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ತಲಾ ಒಂದು ಲಕ್ಷ ಮೌಲ್ಯದ ಬಾಂಡ್, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ಪ್ರತಿ ಭಾನುವರ ಠಾಣೆಗೆ ತೆರಳಿ ಸಹಿ, ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗದಂತೆ ಷರತ್ತು ವಿಧಿಸಿ, ಜಾಮೀನು …
Read More »ಬಿಜೆಪಿಗೆ ಈಶ್ವರಪ್ಪ ಕರೆತರಲು ಯತ್ನಿಸಿಲ್ಲ: ರಮೇಶ ಜಾರಕಿಹೊಳಿ
ಬೆಳಗಾವಿ: ‘ನಾನು ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿ ಕೆ.ಎಸ್.ಈಶ್ವರಪ್ಪ ಅವರನ್ನು ಮತ್ತೆ ಬಿಜೆಪಿಗೆ ಕರೆತರಲು ಯತ್ನಿಸುತ್ತಿದ್ದೇವೆ ಎಂಬುದು ಸುಳ್ಳು. ಈಶ್ವರಪ್ಪ ಅವರನ್ನು ಪಕ್ಷದಿಂದ ಹೊರಹಾಕಿದ್ದು ರಾಷ್ಟ್ರೀಯ ನಾಯಕರು. ಸೇರಿಸಿಕೊಳ್ಳಬೇಕಾದವರೂ ಅವರೇ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ‘ಈಶ್ವರಪ್ಪ ಅವರ ಬೆಂಗಳೂರು ನಿವಾಸದಲ್ಲಿ ನಾವೆಲ್ಲ ಸೇರಿದ್ದು ನಿಜ. ಆದರೆ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಮತ್ತು ಕುರುಬ ಸಮಾಜಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿಯ ಬೇಡಿಕೆ ಕುರಿತು …
Read More »ಸೈಬರ್ ಅಪರಾಧ ತಡೆಗೆ ಯುವಕರ ತಂಡ; ಜನರಿಗೂ ಡಿಜಿಟಲ್ ಸಾಕ್ಷರತೆ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಜಿಲ್ಲೆಯಲ್ಲಿ ಸೈಬರ್ ಅಪರಾಧಗಳನ್ನು ತಡೆಯಲು ಹಾಗೂ ಜನರನ್ನು ಜಾಗೃತಗೊಳಿಸಲು ಯುವಕರ ತಂಡವೊಂದು ನಾಲ್ಕು ವರ್ಷಗಳಿಂದ ಸದ್ದಿಲ್ಲದೇ ಕೆಲಸ ಮಾಡುತ್ತಿದೆ. ‘ಸೈಬರ್ ಕ್ರೈಂ ಅವೇರ್‌ನೆಸ್ ಟೀಮ್ ಚಿಕ್ಕೋಡಿ’ ಎಂಬ ಹೆಸರಿನಲ್ಲಿ ಎಂಟು ಯುವಕರು ತಂಡ ಉಚಿತವಾಗಿ ಡಿಜಿಟಲ್ ಸಾಕ್ಷರತೆ ನಡೆಸಿದೆ. 2020ರಲ್ಲಿ ರಚನೆಯಾದ ತಂಡವು ಈವರೆಗೆ 3,700ಕ್ಕೂ ಹೆಚ್ಚು ಸೈಬರ್ ವಂಚನೆ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸ್ ಇಲಾಖೆಗೆ ನೆರವಾಗಿದೆ. 2,500 ‘ಲೋನ್ ಆಯಪ್’ ವಂಚನೆ ಪ್ರಕರಣ, 1,000 ವಿಡಿಯೊ …
Read More »ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ದಾಸನಹಟ್ಟಿ ಗ್ರಾಮದ ಶ್ರೀ ಬಂಡೆಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …
Read More »