ವೈದ್ಯಶಾಸ್ತ್ರ ಪರಿಣತಿ ಹೊಂದಿದವರಿಂದಲೇ ವೈದ್ಯಕೀಯ ಚಿಕಿತ್ಸೆಗಳನ್ನು ಮಾಡಿಸಿಕೊಳ್ಳುತ್ತೇವೆ. ಅಡುಗೆ ಬಲ್ಲವರಿಂದಲೇ ಅಡುಗೆ ಮಾಡಿಸಿಕೊಳ್ಳುತ್ತೇವೆ. ಅದರಂತೆಯೇ ಧಾರ್ಮಿಕ ವಿಧಿ ವಿಧಾನಗಳನ್ನು ಬಲ್ಲವರ ಮುಖೇನವೇ ಮಾಡಿಸಬೇಕು. ಲೆಕ್ಕಪರಿಶೋಧನೆಯನ್ನು ಬೇರೆ ಯಾವುದೋ ಹುದ್ದೆಯವರು ಮಾಡಲು ಸಾಧ್ಯವಿಲ್ಲ. ಲೆಕ್ಕಪರಿಶೋಧಕರೇ ಅದನ್ನು ನಿರ್ವಹಿಸಬೇಕು. ಹಾಗೆಯೇ ದೇವಸ್ಥಾನ/ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ನಿರ್ವಹಣೆಯನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ನಡೆಸಬೇಕೇ ಹೊರತು ಸರಕಾರ ಅಲ್ಲ. ಹಿಂದೂ ದೇವಸ್ಥಾನ, ಧಾರ್ಮಿಕ ಕೇಂದ್ರಗಳು ಸರಕಾರದ ಹಿಡಿತದಿಂದ ಹೊರಬರಬೇಕು ಎಂಬ ಆಂದೋಲನ ದಶಕಗಳಿಂದ …
Read More »Daily Archives: ಸೆಪ್ಟೆಂಬರ್ 29, 2024
ಸಾಂಸ್ಕೃತಿಕ ನಗರಿಯಲ್ಲಿ ರೇವ್ ಪಾರ್ಟಿ: ಪೊಲೀಸ್ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ
ಮೈಸೂರು: ಖಾಸಗಿ ಜಮೀನಿನಲ್ಲಿ ನಡೆದ ರೇವ್ ಪಾರ್ಟಿಯ ಮೇಲೆ ಮೈಸೂರು ಪೊಲೀಸರು ದಾಳಿ ನಡೆಸಿದ್ದಾರೆ. ಒಟ್ಟು 50 ಕ್ಕೂ ಜನರನ್ನು ಪೊಲೀಸರು ಬಂಧಿಸಿದ್ದು, ಹಲವು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಸಾಂಸ್ಕೃತಿಕ ನಗರಿಯಲ್ಲಿ ದಸರಾ ಸಂದರ್ಭದಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು. ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ಪಾರ್ಟಿ ಮೇಲೆ ದಾಳಿ ಮಾಡಿದ್ದಾರೆ. 50ಕ್ಕೂ ಹೆಚ್ಚು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಎ.ಎಸ್.ಪಿ ಪಿ.ನಾಗೇಂದ್ರ ಹಾಗೂ ಡಿವೈಎಸ್ಪಿ ಕರೀಂ …
Read More »ಬೈಕ್-ಲಾರಿ ಡಿಕ್ಕಿ : ಓರ್ವ ಸ್ಥಳದಲ್ಲಿ ಸಾವು
ಸಿರವಾರ: ಪಟ್ಟಣದ ಲಿಂಗಸೂರು ಮುಖ್ಯರಸ್ತೆಯ ಬಂಗ್ಲೆ ಹಳ್ಳದ ಸಮೀಪ ರವಿವಾರ (ಸೆ.29) ಅನ್ನಭಾಗ್ಯದ ಅಕ್ಕಿಯ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ರಾಯಚೂರಿನಿಂದ ಲಿಂಗಸೂರು ಕಡೆಗೆ ಹೊರಟಿದ್ದ ಅನ್ನಭಾಗ್ಯದ ಲಾರಿಯು ಬೈಕ್ ನಲ್ಲಿ ತೆರಳುತ್ತಿದ್ದವರಿಗೆ ಡಿಕ್ಕಿ ಹೊಡೆದ ಪರಿಣಾಮ ಕೆ.ಗುಡದಿನ್ನಿ ಗ್ರಾಮದ ಚನ್ನಪ್ಪ (27) ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಗಂಭೀರ ಗಾಯಗೊಂಡಿರುವ ಚನ್ನಬಸವ ಎಂಬುವವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನನ್ನು ಬಂಧಿಸಲಾಗಿದ್ದು, ಸ್ಥಳಕ್ಕೆ …
Read More »ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು
ಬೀದರ್ : ಡ್ಯೂಟಿಗೆ ತಡವಾಗಿ ಬಂದಿರುವುದನ್ನು ಪ್ರಶ್ನಿಸಿದ್ದ ಮಹಿಳಾ ಪಿಎಸ್‌ಐ ಮೇಲೆ ಪೊಲಿಸ್ ಪೇದೆಯೊಬ್ಬ ಹಲ್ಲೆ ಮಾಡಿರುವ ಘಟನೆ ರವಿವಾರ(ಸೆ29)ನಗರದಲ್ಲಿ ನಡೆದಿದ್ದು, ಪೇದೆಯನ್ನು ಅಮಾನತು ಮಾಡಲಾಗಿದೆ. ಇಲ್ಲಿನ ಮಹಿಳಾ ಪೊಲೀಸ್ ಠಾಣೆ ಪಿಎಸ್‌ಐ ಮಲ್ಲಮ್ಮ ಎಂಬುವರೇ ಹಲ್ಲೆಗೊಳಗಾಗಿ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ ಪರೀಕ್ಷೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ನ್ಯೂಟೌನ್ ಠಾಣೆಯ ಪೇದೆ ಧನರಾಜ್ ಅವರು ಎರಡು ಗಂಟೆ ತಡವಾಗಿ ಹಾಜರಾಗಿದ್ದು, ಈ ಬಗ್ಗೆ ಪಿಎಸ್‌ಐ ಮಲ್ಲಮ್ಮ ಪ್ರಶ್ನಿಸಿದ್ದಾರೆ. …
Read More »ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಬೆಳಗಾವಿ: ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಮಿರಜ್ ತಾಲೂಕಿನ ಮೈಶಾಳ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ. ಮೈಶಾಳ ಗ್ರಾಮದ ಪಾರೀಶನಾಥ ಹೊನಮೋರೆ(40), ಸಾಯಿರಾಜ ಪಾರೀಶನಾಥ ಹೊನಮೋರೆ(13), ಪ್ರದೀಪ ಶ್ರೀಕೃಷ್ಣ ಮೋಠೆ (35) ಮೃತಪಟ್ಟಿದ್ದು, ಹೇಮಂತ ಹೊನಮೋರೆ(14) ಗಂಭೀರ ಗಾಯಗೊಂಡು ಮಿರಜ್ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ರವಿವಾರ ಬೆಳಗ್ಗೆ ಹೊಲದಲ್ಲಿ ಮೇವು ಸಂಗ್ರಹಿಸಿ ಇಡುವಾಗ ವಿದ್ಯುತ್ ತಂತಿ ಮುರಿದು ಬಿದ್ದಿತ್ತು. …
Read More »ಇಬ್ಬರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ಬೆಳಗಾವಿ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ರವಿವಾರ ಬೆಳಗ್ಗೆ(ಸೆ29) ನಡೆದಿದೆ. ಯಲ್ಲವ್ವ ಅರ್ಜುನ ಕರಿಹೋಳ (30) ಎಂಬಾಕೆ ಸಾತ್ವಿಕ್ (5) ಹಾಗೂ ಒಂದು ವರ್ಷದ ಮುತ್ತಪ್ಪ ನೊಂದಿಗೆ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ದುರ್ದೈವಿಗಳು.ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Read More »ಹಿಂದೂ ಎಂದರೆ ಹಿಂದಕ್ಕೆ ಹೋಗುವ ಜನ. ಹಿಂದೂಗಳು ಮುಂದಕ್ಕೆ ಬಾರದ ಜನ ಹಾಗೂ ಬೇರೆಯವರನ್ನು ಮುಂದಕ್ಕೆ ಬಿಡುವುದಿಲ್ಲ ಎಂದ ಕೆ.ಎಸ್.ಭಗವಾನ್
ಮೈಸೂರು: ಹಿಂದೂ ಎಂದರೆ ಹಿಂದಕ್ಕೆ ಹೋಗುವ ಜನ. ಹಿಂದೂಗಳು ಮುಂದಕ್ಕೆ ಬಾರದ ಜನ ಹಾಗೂ ಬೇರೆಯವರನ್ನು ಮುಂದಕ್ಕೆ ಬಿಡುವುದಿಲ್ಲ ಎಂದು ಹಿರಿಯ ಸಾಹಿತಿ ಪ್ರೊ.ಕೆ.ಎಸ್.ಭಗವಾನ್(K. S. Bhagawan) ಮತ್ತೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಮೈಸೂರಿನ ಟೌನ್‌ಹಾಲ್‌ನಲ್ಲಿ ಭಾನುವಾರ ನಡೆದ ಮಹಿಷಾ ಮಂಡಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಹಿಂದೂ ಧರ್ಮ ಅಂದರೆ ಅದು ಹಿಂದೂಗಳ ಧರ್ಮ ಅಲ್ಲ. ಗಂಡಸರನ್ನು ಮಾತ್ರ ಬ್ರಾಹ್ಮಣರು ಅಂತಾರೆ ಹೊರತು ಹೆಂಗಸರನ್ನು ಬ್ರಾಹ್ಮಣರು ಎನ್ನುವುದಿಲ್ಲ ಅವರನ್ನೂ ಶೂದ್ರರು ಎನ್ನುತ್ತಾರೆ.ದೇವಸ್ಥಾನ ಕಟ್ಟುವುದು …
Read More »ಯುವ ದಸರಾ” ಕಾರ್ಯಕ್ರಮದ ಸ್ಥಳ ಪರಿಶೀಲಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು : ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ಹೊರವಲಯದ ಉತ್ತನಹಳ್ಳಿ ಸಮೀಪದಲ್ಲಿ ನಡೆಯುವ ಯುವ ದಸರಾ ಕಾರ್ಯಕ್ರಮ ಸ್ಥಳವನ್ನು ಇಂದು ಪರಿಶೀಲಿಸಿದರು. ಕಾರ್ಯಕ್ರಮದ ಆಯೋಜನೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ನಾಡಹಬ್ಬ ದಸರಾ ಮಹೋತ್ಸವದಲ್ಲಿ ನಡೆಯುವ ಆಕರ್ಷಕ ಕಾರ್ಯಕ್ರಮಗಳಲ್ಲಿ “ಯುವ ದಸರಾ” ಪ್ರಮುಖವಾಗಿದ್ದು, ಮೈಸೂರು ನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಜನರು ಕಾರ್ಯಕ್ರಮ ವೀಕ್ಷಣೆಗೆ ಆಗಮಿಸುವರು. ಹೀಗಾಗಿ ಅಗತ್ಯ ಸೌಲಭ್ಯವನ್ನು ಕಲ್ಪಿಸುವಂತೆ …
Read More »ಸ್ಟ್ಯಾಂಡ್ ಅಪ್ ಪೆಡಲಿಂಗ್ ಚಾಂಪಿಯನ್‌ಷಿಪ್: ಪುರುಷರ ರೇಸ್; ಆಕಾಶ್ ಪೂಜಾರ್ ಮಿಂಚು
ಮಂಗಳೂರು: ನಗರದ ಆಕಾಶ್ ಪೂಜಾರ್ ತಮಿಳುನಾಡಿನ ರಾಮೇಶ್ವರದಲ್ಲಿ ಭಾನುವಾರ ಕೊನೆಗೊಂಡ ರಾಷ್ಟ್ರೀಯ ಸ್ಟ್ಯಾಂಡ್ ಅಪ್ ಪೆಡಲಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಪದಕ ಗೆದ್ದು ಗಮನ ಸೆಳೆದರು. ಭಾರತ ಸರ್ಫಿಂಗ್ ಫೆಡರೇಷನ್ ಸಹಯೋಗದಲ್ಲಿ ತಮಿಳುನಾಡು ಸರ್ಫಿಂಗ್ ಸಂಸ್ಥೆ ಆಯೋಜಿಸಿದ್ದ ಚಾಂಪಿಯನ್‌ಷಿಪ್‌ನ ಪುರುಷರ 12 ಕಿಲೊಮೀಟರ್ ರೇಸ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅವರು ಈ ವಿಭಾಗದಲ್ಲಿ ಪದಕ ಗೆದ್ದ 16 ವರ್ಷದೊಳಗಿನ ಭಾರತದ ಮೊದಲ ಸರ್ಫರ್ ಎಂದೆನಿಸಿಕೊಂಡರು. ಕರ್ನಾಟಕ ಇಲ್ಲಿ ಒಟ್ಟು 8 ಪಕದಗಳನ್ನು ಗಳಿಸಿ …
Read More »ಲಿಂಬು, ಅಂಟವಾಳದಿಂದ ಪರಿಸರಸ್ನೇಹಿ ಮಾರ್ಜಕ
ಹುಬ್ಬಳ್ಳಿ: ಧಾರವಾಡದ ಕೃಷಿ ವಿಶ್ವವಿದ್ಯಾಲಯ ಕಳೆದ ವಾರ ಆಯೋಜಿಸಿದ್ದ ಕೃಷಿ ಮೇಳದಲ್ಲಿ ನವೋದ್ಯಮಿಗಳ ಉತ್ಸಾಹವೂ ಜನರನ್ನು ಸೆಳೆದವು. ಮೇಳದ ಫಲಪುಷ್ಪ ಪ್ರದರ್ಶನ ವಿಭಾಗದಲ್ಲಿ ಹತ್ತಾರು ನವೋದ್ಯಮಿಗಳು ತಮ್ಮ ಉದ್ಯಮವನ್ನು ಪರಿಚಯಿಸಿದರು. ಅವುಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪೂಜಾ ದೇಶಪಾಂಡೆ ಪರಿಸರಸ್ನೇಹಿ ಮಾರ್ಜಕಗಳನ್ನು (ಡಿಟೆರ್ಜೆಂಟ್), ಖಾನಾಪುರದ ಆರ್.ಐ.ಪಾಟೀಲರು ಕಬ್ಬಿನ ಹಾಲನ್ನು ವರ್ಷವಿಡೀ ಬಾಳುವಂತೆ ಮಾಡಿರುವುದರ ಜತೆಗೆ ಟೀ, ಕಾಫಿಗೆ ಸಕ್ಕರೆ ಬದಲು ಸಾವಯವ ಬೆಲ್ಲದ ಪುಡಿ ಬಳಸುವಂಥ ಕಬ್ಬಿನ ಉತ್ಪನ್ನ …
Read More »