Breaking News

Daily Archives: ಸೆಪ್ಟೆಂಬರ್ 30, 2024

ಸರಣಿ ಕಳ್ಳತನ ಪ್ರಕರಣ. ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

ದಾಂಡೇಲಿ: ನಗರದ ಲಿಂಕ್ ರಸ್ತೆಯಲ್ಲಿ ಸರಣಿ ಕಳ್ಳತನ ಮಾಡಿದ್ದ ಆರೋಪಿಗಳಾದ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಿದ ಘಟನೆ ಸೋಮವಾರ(ಸೆ. 30) ನಡೆದಿದೆ. ಇದೇ ಸೆ: 19 ರಂದು ನಗರದ ಲಿಂಕ್ ರಸ್ತೆಯಲ್ಲಿರುವ ಅಭಿಷೇಕ್ ಕಾಳೆ ಮಾಲಕತ್ವದ ಮೆಡಿಕಲ್ ಅಂಗಡಿಯೊಳಗಿದ್ದ ನಗದು 4 ಲಕ್ಷ ರೂಪಾಯಿ ಮತ್ತು ಚಿನ್ನದ ಆಭರಣಗಳು, ಇದೇ ಕಟ್ಟಡದಲ್ಲಿರುವ ಪಕ್ಕದ ಶರಣ್.ಸಿ.ಅರಳಿಯವರ ಕಿರಾಣಿ ಅಂಗಡಿಯಿಂದ 5 ರಿಂದ 50 ಸಾವಿರ ರೂಪಾಯಿ ನಗದು, ಅಲ್ಲೇ ಹತ್ತಿರದಲ್ಲಿರುವ ವಿಷ್ಣು …

Read More »

ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಶ್ರೀ ಡಿ.ಬಿ.ಹೆಬ್ಬಾಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಉದ್ಘಾಟಿಸಿದರು

ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಶ್ರೀ ಡಿ.ಬಿ.ಹೆಬ್ಬಾಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಉದ್ಘಾಟಿಸಿದರು ಈ ಸಂದರ್ಭದಲ್ಲಿ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಬ್ರಹನ್ಮಠ ಶ್ರೀ ಸಿದ್ಧೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಕಾರಿಮಠದ ಶ್ರೀ ಗುರುಸಿದ್ಧೇಶ್ವರ ಮಹಾಸ್ವಾಮಿಗಳು, ಪ್ರಾಂಶುಪಾಲರಾದ ಶ್ರೀ ಎಮ್.ಎಮ್. ಮಗದುಮ್ ಸೇರಿ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಈ …

Read More »

ನಿರ್ಮಲಾ, ನಡ್ಡಾ, ಬಿವೈವಿ, ನಳಿನ್‌ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ

ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ, ವಿಜಯೇಂದ್ರ, ನಳಿನ್ ಕುಮಾರ್ ಕಟೀಲ್, ಇ.ಡಿ. ಅಧಿಕಾರಿಗಳು ಸೇರಿ ಹಲವರ ವಿರುದ್ಧ ಬೆಂಗಳೂರಿನಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.   ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಆದರ್ಶ ಅಯ್ಯರ್ ಬೆಂಗಳೂರಿನ ತಿಲಕ್​ ನಗರ ಠಾಣೆಗೆ ದೂರು ದಾಖಲಿಸಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ …

Read More »

ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಕೂಡಲೇ ಪಾಲಿಕೆಯನ್ನು ರಾಜ್ಯ ಸರ್ಕಾರ ಸೂಪರ್ ಸೀಡ್ ಮಾಡಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ(ಸೆ30) ಪ್ರತಿಭಟನೆ ನಡೆಸಲಾಯಿತು. ನಗರದ ಸದಾರ‍್ಸ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶ್ರೀರಾಮ ಸೇನಾ ಹಿಂದೂಸ್ಥಾನ, ಮಹಾರಾಷ್ಟç ಏಕೀಕರಣ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಿ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.   ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಎಸ್‌ಪಿಎಂ …

Read More »

ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

ಬೆಳಗಾವಿ: ನಗರದ ಹೊಟೇಲ್‌ನಲ್ಲಿ ಬಿಲ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಯುವಕರ ನಡುವಿನ ಗಲಾಟೆಯಲ್ಲಿ ಬಿಎಸ್‌ಎಫ್ ಯೋಧನೋರ್ವ ಯುವಕನಿಗೆ ಚಾಕು ಇರಿದ ಘಟನೆ ನಗರದ ಎಪಿಎಂಸಿ ರಸ್ತೆಯ ಆಯಿ ಹೊಟೇಲ್‌ನಲ್ಲಿ ಸೋಮವಾರ(ಸೆ30) ನಡೆದಿದೆ. ಬಿಎಸ್‌ಎಫ್ ಯೋಧ ರುಕ್ಮಿಣಿ ನಗರದ ಪರುಶರಾಮ ರಾಮಗೊಂಡನವರ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಗ್ಯಾಂಗ್‌ವಾಡಿಯ ಅಲ್ತಾಫ್ ಚೌಗಲಾ ಎಂಬ ಯುವಕ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾನೆ. ಆಯಿ ಹೊಟೇಲ್‌ನಲ್ಲಿ ಊಟಕ್ಕೆಬಂದಿದ್ದ ನಾಲ್ವರು ಗ್ಯಾಂಗ್‌ವಾಡಿಯ ಯುವಕರು ಹೊಟೇಲ್ …

Read More »

ಕ್ಷುಲ್ಲಕ ಕಾರಣ; ಕೊಲೆಯಲ್ಲಿ ಅಂತ್ಯ; ಪ್ರಕರಣ ದಾಖಲು

ಬೈಲಹೊಂಗಲ: ಕ್ಷುಲ್ಲಕ ಕಾರಣಕ್ಕೆ ಸಹೋದರಿಯರಿಬ್ಬರ ನಡುವೆ ಮಾತಿನ ಚಕಮಕಿಗೊಂಡು, ಕೊಲೆಯಲ್ಲಿ ಅಂತ್ಯಗೊಂಡ ಘಟನೆ ತಾಲೂಕಿನ ಅಮಟೂರ ಬೇವಿನಕೊಪ್ಪ ರಸ್ತೆ ಮಧ್ಯೆದಲ್ಲಿ ಸೋಮವಾರ (ಸೆ.30) ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಅಮಟೂರ ಗ್ರಾಮದ ಕೇದಾರಿ ಯಲ್ಲಪ್ಪ ಅಂಗಡಿ (42) ಎಂದು ಗುರುತಿಸಲಾಗಿದೆ.   ತಮ್ಮ ಜಮೀನಿನಲ್ಲಿ ಬೇರೆಯವರಿಗೆ ದಾಟಲು ಅನುವು ಮಾಡಿಕೊಟ್ಟಿದ್ದಕ್ಕೆ ಚಾಕುವಿನಿಂದ ಇರಿದ ಪರಿಣಾಮವಾಗಿ ತೀವ್ರವಾಗಿ ರಕ್ತಸ್ರಾವಗೊಂಡಿದ್ದು, ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಆರೋಪಿಗಳಾದ ಬಾಳಪ್ಪ ಶಿವಾನಂದ ಅಂಗಡಿ …

Read More »

ಆರೋಗ್ಯ ವೃದ್ಧಿಗೆ ಪೌಷ್ಟಿಕ ಆಹಾರ ಅಗತ್ಯ; ಸಚಿವ ಸತೀಶ್ ಜಾರಕಿಹೊಳಿ

ಆರೋಗ್ಯ ವೃದ್ಧಿಗೆ ಪೌಷ್ಟಿಕ ಆಹಾರ ಅಗತ್ಯ; ಸಚಿವ ಸತೀಶ್ ಜಾರಕಿಹೊಳಿ ಚಿಕ್ಕೋಡಿ: ಮಕ್ಕಳ ಆರೋಗ್ಯ ವೃದ್ಧಿಗೆ ಹಾಗೂ ಅಪೌಷ್ಟಿಕತೆ ತಡೆಗೆ ಸರಕಾರ ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಶಿಕ್ಷಕರು ಅವುಗಳ ಕುರಿತು ಅರಿವು ಮೂಡಿಸಬೇಕು. ಆದಷ್ಟೂ ಮಕ್ಕಳಿಗೆ ಬಿಸಿಯೂಟ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸೂಚಿಸಿದರು. ತಾಲೂಕಿನ ನಣದಿ ಗ್ರಾಮದ ಕೆಎಚ್‌ ಪಿಎಸ್‌ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಸೋಮವಾರ ಜಿಲ್ಲಾ ಪಂಚಾಯತ್‌, …

Read More »

ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್

ಲಕ್ನೋ: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಪ್ರತಿನಿಧಿಸುತ್ತಿರುವ ವಾರಾಣಸಿಯ ರಸ್ತೆಯೊಂದರ ಚಿತ್ರವನ್ನು ಹಂಚಿಕೊಂಡಿರುವ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್(Akhilesh Yadav) ಅವರು ನಗರದಲ್ಲಿ ಸ್ವಚ್ಛತೆಯ ಕೊರತೆಯ ಬಗ್ಗೆ ಬಿಜೆಪಿ(BJP) ಸರಕಾರದ ವಿರುದ್ಧ ಸೋಮವಾರ(ಸೆ30) ಟೀಕಾ ಪ್ರಹಾರ ನಡೆಸಿದ್ದಾರೆ.   ಎಕ್ಸ್ ನಲ್ಲಿ ಕಸದ ರಾಶಿಯ ಫೋಟೋವೊಂದನ್ನು ಪೋಸ್ಟ್ ಮಾಡಿರುವ ಅಖಿಲೇಶ್ ”ಇದು ದೇಶದ ಪ್ರಮುಖ ಸಂಸದೀಯ ಕ್ಷೇತ್ರದ ಸ್ಥಿತಿ, ಕಸದ ರಾಶಿಯೇ ರಸ್ತೆ ಎಂದರೆ ತಪ್ಪಾಗದು. ಇದೇನಾ ‘ಸ್ವಚ್ಛ …

Read More »

ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ. ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

ಗದಗ: ಪ್ರೊ.ಕೆ. ಎಸ್ ಭಗವಾನ್ ತಾಯಿ ಚಾಮುಂಡೇಶ್ವರಿ ವಿಚಾರದಲ್ಲಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಮಾತಿಗೆ ಯಾರೂ ಮಹತ್ವ ಕೊಟ್ಟಿಲ್ಲ, ಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.   ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರೊ. ಭಗವಾನ್ ಅವರು ಹೆಸರಿಗೆ ತಕ್ಕಂಗೆ ಭಗವಂತನ ಮೇಲೆ ನಂಬಿಕೆ ಇಟ್ಟಿದ್ದಾರೆ ಇಲ್ಲಾ ನೋಡಿ, ಭಗವಂತನ ಮೇಲೆ ನಂಬಿಕೆ ಇಲ್ಲಾ ಅಂದರೆ, ಭಗವಾನ್ ಅಂತ ಹೆಸರು ಇಟ್ಟಿಕೊಂಡಿದ್ದೆ …

Read More »

ಬಿಪಿಎಲ್ ಪಡಿತರ ಚೀಟಿ ಮಾನದಂಡ ಪರಿಶೀಲನೆಗೆ ಸಮಿತಿ: ಆರ್.ವಿ.ದೇಶಪಾಂಡೆ

ಬೆಂಗಳೂರು: ಬಡತನದ ರೇಖೆಗಿಂತ ಕೆಳಗೆ (ಬಿಪಿಎಲ್) ಇರುವ ಕುಟುಂಬಗಳಿಗೆ ಪಡಿತರ ಚೀಟಿ ವಿತರಣಾ ಮಾನದಂಡ ಪರಿಶೀಲನೆಗೆ ಅಪರ ಮುಖ್ಯ ಕಾರ್ಯದರ್ಶಿಯೂ ಆದ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚಿಸಲಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಮಾಹಿತಿ ನೀಡಿದರು.   ವಿಕಾಸಸೌಧದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಬಿಪಿಎಲ್ ಪಡಿತರ ಚೀಟಿ ದುರ್ಬಳಕೆಗೆ ಕಡಿವಾಣ, ಸರ್ಕಾರದ ಬೊಕಸಕ್ಕೆ ಅನಗತ್ಯ ವೆಚ್ಚ ತಗ್ಗಿಸುವುದು, ಅರ್ಹರಿಗೆ ಈ ಸೌಲಭ್ಯ ಒದಗಿಸುವ ಉದ್ದೇಶದಿಂದ …

Read More »