ಬೆಳಗಾವಿ: ಪ್ರಾಕೃತಿಕ, ಧಾರ್ಮಿಕ, ಐತಿಹಾಸಿಕ ಮತ್ತು ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಗಡಿಜಿಲ್ಲೆ ಬೆಳಗಾವಿಯಲ್ಲಿ ಇರುವ ಪ್ರವಾಸಿ ತಾಣಗಳು ಸಾಕಷ್ಟು. ಆದರೆ, ಪ್ರಚಾರದ ಕೊರತೆ, ಮೂಲಸೌಕರ್ಯ ಅಭಾವ, ಆಡಳಿತ ಯಂತ್ರದ ತಾತ್ಸಾರ ನಿಲುವಿನಿಂದ ಇಲ್ಲಿ ಪ್ರವಾಸೋದ್ಯಮ ಸೊರಗಿದೆ. ಸವದತ್ತಿಯ ಯಲ್ಲಮ್ಮನಗುಡ್ಡ, ಗೋಕಾಕ ಜಲಪಾತ, ಗೊಡಚಿನಮಲ್ಕಿ ಜಲಪಾತ, ಧೂಪದಾಳ ಪಕ್ಷಿಧಾಮ, ಚನ್ನಮ್ಮನ ಕಿತ್ತೂರು ಕೋಟೆ, ಖಾನಾಪುರ ತಾಲ್ಲೂಕಿನ ಹಲಸಿ ಸೇರಿದಂತೆ ಜಿಲ್ಲೆಯಲ್ಲಿ 98 ಪ್ರವಾಸಿ ತಾಣಗಳನ್ನು ಪ್ರವಾಸೋದ್ಯಮ ಇಲಾಖೆ ಗುರುತಿಸಿದೆ. 5.95 ಕೋಟಿ ಪ್ರವಾಸಿಗರ …
Read More »Monthly Archives: ಸೆಪ್ಟೆಂಬರ್ 2024
UPI’ ಬಳಕೆದಾರರಿಗೆ ಬಿಗ್ ಶಾಕ್ : ಉಚಿತ ಸೇವೆ ಬಂದ್, ಶೀಘ್ರವೇ ಹೆಚ್ಚುವರಿ ವಹಿವಾಟಿಗೆ `ಶುಲ್ಕ’!
ನವದೆಹಲಿ : UPI ಅನ್ನು ಪರಿಚಯಿಸಿದಾಗಿನಿಂದ, ದೇಶದಲ್ಲಿ ವಹಿವಾಟು ಪ್ರಕ್ರಿಯೆಯು ಸಂಪೂರ್ಣವಾಗಿ ಬದಲಾಗಿದೆ. ಹೆಚ್ಚಿನ ಜನರು ಈಗ ನಗದು ವಹಿವಾಟಿನ ಬದಲಿಗೆ ಆನ್‌ಲೈನ್ ಯುಪಿಐ ವಹಿವಾಟುಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಯುಪಿಐ ವಹಿವಾಟಿನ ಮೇಲೆ ಹೆಚ್ಚುವರಿ ಶುಲ್ಕ ವಿಧಿಸುವ ವಿಚಾರ ಚರ್ಚೆಯಲ್ಲಿದೆ ಎಂದು ಇತ್ತೀಚಿನ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಈ ಶುಲ್ಕವು ಯುಪಿಐ ಬಳಕೆಯಲ್ಲಿ ಇಳಿಕೆಗೆ ಕಾರಣವಾಗಬಹುದು ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ, ಜನರು ಸುರಕ್ಷಿತ ಮತ್ತು ವೇಗದ ವಹಿವಾಟುಗಳಿಗಾಗಿ …
Read More »ಧಾರವಾಡ, ವಿಜಯಪುರದಲ್ಲಿ ರಭಸದ ಮಳೆ
ಹುಬ್ಬಳ್ಳಿ: ಹಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಶನಿವಾರ ಧಾರವಾಡ, ವಿಜಯಪುರ, ಬಳ್ಳಾರಿ, ಬಾಗಲಕೋಟೆ ಜಿಲ್ಲೆಗಳ ಕೆಲವೆಡೆ ಸುರಿದಿದೆ. ಧಾರವಾಡ ಜಿಲ್ಲೆ ನವಲಗುಂದ ಪಟ್ಟಣವೂ ಸೇರಿದಂತೆ ತಾಲ್ಲೂಕಿನ ವಿವಿಧಡೆ ಶನಿವಾರ ಸಂಜೆ ನಾಲ್ಕು ತಾಸು ನಿರಂತರ ಮಳೆಯಾಗಿದೆ. ಹಲವೆಡೆ ಮನೆಯೊಳಗೆ ಮಳೆ ನೀರು ನುಗ್ಗಿ ದಿನಸಿ ಹಾಗೂ ಕಾಳು ಕಡಿಗೆ ಹಾನಿಯಾಗಿದೆ. ವಿಜಯಪುರ ನಗರ ಸೇರಿದಂತೆ ಮುದ್ದೇಬಿಹಾಳ, ತಿಕೋಟಾ, ಇಂಡಿ, ಸಿಂದಗಿ, ಬಸವನ ಬಾಗೇವಾಡಿಗಳಲ್ಲಿ ಶುಕ್ರವಾರ ಮತ್ತು ಶನಿವಾರ ಧಾರಾಕಾರ …
Read More »ಸಿಂಗಾರ ಸಿರಿ… ಚೆಂದದ ಹೋರಿ…
ಹುಬ್ಬಳ್ಳಿ: ಮೈತುಂಬಾ ಚೆಂದದ ವಸ್ತ್ರ… ಮುಖದ ಮೇಲೆ ಚಿತ್ತಾರ…ಕೋಡಿನ ಮೇಲೆ ಉದ್ದದ ಕಿರೀಟ… ಸರ್ವಾಲಂಕಾರಭೂಷಿತರಾದ ಈ ‘ಸುಂದರ’ರನ್ನು ನೀವು ನೋಡಲು ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿಮೇಳಕ್ಕೆ ಬರಬೇಕು. ನೂರಾರು ಸ್ಪರ್ಧೆಗಳಲ್ಲಿ ಭಾಗವಹಿಸಿ, ಬಹುಮಾನ ಗೆದ್ದ ಹೋರಿಗಳು, ಅವುಗಳಿಗೆ ಮಾಡಿದ ಸಿಂಗಾರ ಈ ಬಾರಿಯ ಮೇಳದ ವಿಶೇಷತೆಗಳಲ್ಲೊಂದು. ರೈತರು, ಸಾರ್ವಜನಿಕರು ಆಸಕ್ತಿಯಿಂದ ಇವುಗಳನ್ನೇ ನೋಡಲು ಮುಗಿಬಿದ್ದಾಗ, ಒಮ್ಮೆ ದುರುಗುಟ್ಟಿ ನೋಡಿ, ಇನ್ನೊಮ್ಮೆ ನಾಚಿ ಹಿಂದೆ ಸರಿಯುವ ಹೋರಿಗಳ ಸೊಬಗು ಕಣ್ಣಿಗೆ …
Read More »ಕುಂದಗೋಳ | ಕೃಷಿ ಇಲಾಖೆ ಹುದ್ದೆ ಖಾಲಿ: ದೊರೆಯದ ಮಾಹಿತಿ
ಗುಡಗೇರಿ: ಕುಂದಗೋಳ ತಾಲ್ಲೂಕಿನಲ್ಲಿ ಬಹುತೇಕರು ಕೃಷಿಯನ್ನೆ ನಂಬಿಕೊಂಡು ಜೀವನ ಕಟ್ಟಿಕೊಂಡಿದ್ದು, ಸಮರ್ಪಕವಾಗಿ ಮಾಹಿತಿ ನೀಡಬೇಕಾದ ಕೃಷಿ ಇಲಾಖೆಯಲ್ಲಿ ಅಧಿಕಾರಿ ಹುದ್ದೆ ಖಾಲಿ ಇರುವುದರಿಂದ ಈ ಇಲಾಖೆ ಇದ್ದುಇಲ್ಲದಂತೆ ಆಗಿದೆ. ತಾಲ್ಲೂಕಿನಲ್ಲಿ ಒಟ್ಟು 58 ಸಾವಿರ ಹೆಕ್ಟೇರ್ ಸಾಗುವಳಿ ಕ್ಷೇತ್ರವಿದೆ. ಆದರೆ ಕೃಷಿಗೆ ಪೂರಕವಾದ ಮಾಹಿತಿ ಕೂರತೆಯಿಂದಾಗಿ ರೈತರು ಲಾಭದಾಯಕ ಬೆಳೆ ಬೆಳೆಯಲು ವಿಫಲರಾಗುತ್ತಿದ್ದಾರೆ, ಮೆಣಸಿನಕಾಯಿ ಈ ಭಾಗದಲ್ಲಿ ಪ್ರಸಿದ್ದಿ ಬೆಳೆ. ಆದರೆ ಇಳುವರಿ ಕುಂಠಿತದಿಂದ ರೈತರು ಬೆಳೆ ಬೆಳೆಯದೇ ಕೈಬಿಟ್ಟಿದ್ದಾರೆ …
Read More »ಹೇಳುವುದನ್ನು ಕೇಳಿಸಿಕೊಳ್ಳುತ್ತಿದ್ದಿರಾ ಮಿಸ್ಟರ್ ಸಾಬ್: ಕುಲಪತಿಗೆ ಸಚಿವ ಲಾಡ್
ಧಾರವಾಡ: ‘ಏನು ಹೇಳುತ್ತಿದ್ದೆನೆ ಕೇಳಿಸಿಕೊಳ್ಳುತ್ತಿದ್ದಿರಾ ಮಿಸ್ಟರ್ ಪಾಟೀಲ್ ಸಾಬ್? ವಿಶ್ವವಿದ್ಯಾಲಯದ ಸಂಶೋಧನೆಗಳು, ಉತ್ಪನ್ನಗಳನ್ನು ‘ಮಾರ್ಕೆಟಿಂಗ್’ ಹೇಗೆ ಮಾಡಲಾಗುತ್ತಿದೆ?’ ಎಂದು ಕೃಷಿ ವಿವಿ ಕುಲಪತಿ ಪಿ.ಎಲ್.ಪಾಟೀಲ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ಪ್ರಶ್ನಿಸಿದರು. ಕೃಷಿ ವಿಶ್ವವಿದ್ಯಾಲಯದಲ್ಲಿ ಭಾನುವಾರ ಕೃಷಿ ಮೇಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ‘ವಿಶ್ವವಿದ್ಯಾಲಯದ ಅನ್ವೇಷಣೆಗಳು ಮತ್ತು ಉತ್ಪನ್ನಗಳನ್ನು ರೈತ ಸಂಪರ್ಕ ಕೇಂದ್ರ, ತಾಲ್ಲೂಕು ಕಚೇರಿ, ಸಹಕಾರಿ ಸೊಸೈಟಿ ಬ್ಯಾಂಕ್‌ಗಳ ಮೂಲಕ ಔಟ್ ರೀಚ್ ಪ್ರೋಗ್ರಾಂ …
Read More »ಹುಬ್ಬಳ್ಳಿ, ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸಿ: ವೀರೇಶ ಧೂಪದಮಠ
ಹುಬ್ಬಳ್ಳಿ: ಸಾರ್ವಜನಿಕರ ಅನುಕೂಲ ಹಾಗೂ ಸುಗಮ ಆಡಳಿತದ ಹಿತದೃಷ್ಟಿಯಿಂದ ಹುಬ್ಬಳ್ಳಿ- ಧಾರವಾಡ ನಗರಗಳಿಗೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ವೀರೇಶ ಧೂಪದಮಠ ಮನವಿ ಮಾಡಿದ್ದಾರೆ. ಸದ್ಯ ಎರಡೂ ನಗರಗಳನ್ನು ಒಳಗೊಂಡಂತೆ ಒಂದೇ ಮಹಾನಗರ ಪಾಲಿಕೆ ಇದೆ. ಆದರೆ ಹುಬ್ಬಳ್ಳಿ ಹಾಗೂ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಮಾಡಿದರೆ ಸಾರ್ವಜನಿಕರು ತಮ್ಮ ಪ್ರದೇಶದ ವ್ಯಾಪ್ತಿಯಲ್ಲಿ ಕಚೇರಿಗೆ ತೆರಳಿ ಕೆಲಸ, ಕಾರ್ಯಗಳನ್ನು ಬೇಗ ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದಿದ್ದಾರೆ. ಸರ್ಕಾರದ …
Read More »ತಿರುಪತಿ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು: ಕಠಿಣ ಶಿಕ್ಷೆಯಾಗಲಿ-ಗುಣಧರನಂದಿ ಮಹಾರಾಜ
ಹುಬ್ಬಳ್ಳಿ: ‘ತಿರುಪತಿ ಸರ್ವಧರ್ಮಗಳ ಶಕ್ತಿ ಕೇಂದ್ರ. ಅಲ್ಲಿ ನೀಡುವ ಪ್ರಸಾದವಾದ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಇರುವ ತುಪ್ಪ ಬಳಕೆ ಮಾಡಿರುವುದು ಸರಿಯಲ್ಲ’ ಎಂದು ಹುಬ್ಬಳ್ಳಿ ತಾಲ್ಲೂಕು ವರೂರಿನ ನವಗ್ರಹತೀರ್ಥ ಕ್ಷೇತ್ರದ ಗುಣಧರನಂದಿ ಮಹಾರಾಜರು ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರಾದರೂ ಪ್ರಸಾದದ ಮೂಲಕ ಮಾಂಸಾಹಾರ ಸೇವನೆ ಮಾಡಿಸುವ ದುಷ್ಟ ಪ್ರಯತ್ನ ಮಾಡಿದ್ದರೆ ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಅವರನ್ನು ದೇಶದಿಂದ ಗಡಿಪಾರು ಮಾಡಬೇಕು. ಇಲ್ಲದಿದ್ದರೆ ಮುಂದಿನ …
Read More »2ಎ ಮೀಸಲಾತಿ ಹೋರಾಟ: ಪಂಚಮಸಾಲಿ ವಕೀಲರ ರಾಜ್ಯಮಟ್ಟದ ಸಮಾವೇಶ ಯಶಸ್ವಿ
ಬೆಳಗಾವಿ: ‘ಪಂಚಮಸಾಲಿ ಸಮಾಜವನ್ನು ಎಲ್ಲರೂ ಬಳಸಿಕೊಂಡರು, ಬೆಳೆದರು. ಆದರೆ, ಸಮಾಜವನ್ನು ಹಿಂದಕ್ಕೆ ತಳ್ಳಿದರು. ಸಮಾಜಕ್ಕೆ 2ಎ ಮೀಸಲಾತಿ ಕೊಡಿಸುವವರೆಗೂ ನಾವು ವಿಶ್ರಮಿಸಬಾರದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊನೆಯ ಅವಕಾಶ ಕೊಡುತ್ತಿದ್ದೇವೆ’ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ, ಲಿಂಗಾಯತ ಒಳಪಂಗಡಗಳಿಗೆ ಒಬಿಸಿ ನೀಡಬೇಕು ಎಂದು ಆಗ್ರಹಿಸಿ, ಇಲ್ಲಿನ ಗಾಂಧಿ ಭವನದಲ್ಲಿ ಭಾನುವಾರ ನಡೆದ ಪಂಚಮಸಾಲಿ ಸಮಾಜದ ವಕೀಲರ ರಾಜ್ಯಮಟ್ಟದ ಪರಿಷತ್‌ನಲ್ಲಿ ಮಾತನಾಡಿದ …
Read More »ರಾಯಣ್ಣ-ಚೆನ್ನಮ್ಮ’ ಬ್ರಿಗೇಡ್ ಸ್ಥಾಪನೆಗೆ ಮುನ್ನುಡಿ ಬರೆದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ!
ವಿಜಯಪುರ : ಕುಟುಂಬ ರಾಜಕಾರಣದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಸದಾ ದ್ವೇಷ ಸಾಧಿಸುತ್ತಲೇ ಬಂದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಹಿಂದೆ ರಾಯಣ್ಣ ಬ್ರಿಗೆಡ್ ಎಂಬ ಸಂಘಟನೆಯ ಸ್ಥಾಪನೆ ಮಾಡಿದ್ದರು. ಆದರೆ ಅದು ಕೇವಲ ಹೆಸರಿಗೆ ಅಷ್ಟೇ ಸೀಮಿತವಾಯಿತು. ಇದೀಗ ಕೆ.ಎಸ್ ಈಶ್ವರಪ್ಪ ಮತ್ತೊಂದು ಸಂಘಟನೆ ಸ್ಥಾಪಿಸಲು ಮುಂದಾಗಿದ್ದು ‘ರಾಯಣ್ಣ ಚೆನ್ನಮ್ಮ’ ಬ್ರಿಗೇಡ್ ಸಂಘಟನೆ ಸ್ಥಾಪಿಸಲು ಮುನ್ನುಡಿ ಬರೆದಿದ್ದಾರೆ. ಹೌದು ಈ ವಿಚಾರವಾಗಿ …
Read More »