Breaking News

Monthly Archives: ಸೆಪ್ಟೆಂಬರ್ 2024

ಕೃಷಿ ಕ್ಷೇತ್ರದಲ್ಲಿ ಸಂಶೋಧನೆ, ಅಭಿವೃದ್ಧಿಗೆ ಒತ್ತು ನೀಡಬೇಕು: ಪ್ರಲ್ಹಾದ ಜೋಶಿ

ಧಾರವಾಡ: ಕೃಷಿ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಒತ್ತು ನೀಡಬೇಕು. ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕೃಷಿ ಮೇಳದಲ್ಲಿ ಬೀಜ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೃಷಿ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಹೆಚ್ಚು ಅನುದಾನ ಮೀಸಲಿಡಲಾಗಿದೆ ಎಂದರು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗಳಿಗೆ ₹3.05 ಲಕ್ಷ …

Read More »

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ | ವಕೀಲರ ಹೋರಾಟಕ್ಕೆ ಮಣಿದ ಸಿಎಂ: ಚರ್ಚೆಗೆ ಆಹ್ವಾನ

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ, ನಗರದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ವಕೀಲರ ಪರಿಷತ್‌ ಯಶಸ್ವಿಯಾಯಿತು. ವಕೀಲರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್‌ 15ರಂದು ಚರ್ಚೆಗೆ ಆಹ್ವಾನಿಸಿದರು. ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ, ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್ತು, ನ್ಯಾಯಪೀಠ- ಕೂಡಲಸಂಗಮ, ಜಿಲ್ಲಾ ವಕೀಲರ ಪರಿಷತ್ ಆಶ್ರಯದಲ್ಲಿ ರಾಜ್ಯದ ವಿವಿಧೆಡೆಯಿಂದ ಪಂಚಮಸಾಲಿ ಸಮಾಜದ ವಕೀಲರು ಸಮಾವೇಶಗೊಂಡರು. ಇಡೀ …

Read More »

ಮಳೆ ಮಧ್ಯೆಯೂ ನಗರದಲ್ಲಿ ಭಾನುವಾರ ಈದ್‌-ಮಿಲಾದ್‌ ಹಬ್ಬದ ಮೆರವಣಿಗೆ

ಬೆಳಗಾವಿ: ಮಳೆ ಮಧ್ಯೆಯೂ ನಗರದಲ್ಲಿ ಭಾನುವಾರ ಈದ್‌-ಮಿಲಾದ್‌ ಹಬ್ಬದ ಮೆರವಣಿಗೆ ಸಂಭ್ರಮದಿಂದ ನೆರವೇರಿತು. ಮುಸ್ಲಿಮರೊಂದಿಗೆ ಹಿಂದೂಗಳೂ ಭಾಗವಹಿಸಿ ಭಾವೈಕ್ಯತೆ ಮೆರೆದರು. ನಗರದಲ್ಲಿ ಸೆ.16ರಂದೇ ಈದ್‌-ಮಿಲಾದ್‌ ಹಬ್ಬವನ್ನು ಮುಸ್ಲಿಮರು ಆಚರಿಸಿದ್ದಾರೆ. ಅಂದೇ ಬೆಳಿಗ್ಗೆ ಈದ್‌-ಮಿಲಾದ್‌ ಮೆರವಣಿಗೆ ನಡೆಯಬೇಕಿತ್ತು. ಆದರೆ, ಅದರ ಮಾರನೇ ದಿನವೇ( ಸೆ.17) ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ಇತ್ತು. ಹಾಗಾಗಿ ಗಣೇಶನ ಮೆರವಣಿಗೆ ಮೊದಲು ಅದ್ದೂರಿಯಾಗಿ ನಡೆಯಲಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೂ ಅನುಕೂಲವಾಗಲೆಂದು ಮುಸ್ಲಿಮರು …

Read More »

ಸಿಡಿಲು ಬಡಿದು ರೈತ ಸಾವು

ಧಾರವಾಡ: ತಾಲ್ಲೂಕಿನ ಹನುಮನಾಳ ಗ್ರಾಮದಲ್ಲಿ ಭಾನುವಾರ ಸಿಡಿಲು ಬಡಿದು ರೈತ ಭೀಮನಗೌಡ ಮಲ್ಲನಗೌಡ ಪಾಟೀಲ (65) ಮೃತಪಟ್ಟಿದ್ಧಾರೆ. ಅವರು ಮಧ್ಯಾಹ್ನ ಹೊಲದಿಂದ ವಾಪಸ್ಸಾಗುವಾಗ ಸಿಡಿಲು ಬಡಿದಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ಧಾರೆ. ಧಾರವಾಡ ಜಿಲ್ಲೆಯ ವಿವಿಧೆಡೆ ಭಾನುವಾರ ಸಾಧಾರಣ ಮಳೆಯಾಗಿದೆ. ‌ಕುಂದಗೋಳ, ಧಾರವಾಡ, ಉಪ್ಪಿನಬೆಟಗೇರಿ ಹುಬ್ಬಳ್ಳಿ ಭಾಗದಲ್ಲಿಯೂ ಗುಡುಗಿನ ಆರ್ಭಟ ಸಹಿತ ಮಳೆಯಾಗಿದೆ. ಕಾರವಾರ ವರದಿ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗ ಸೇರಿ ಕೆಲವೆಡೆ ಆಗಾಗ ಬಿರುಸಿನ ಮಳೆಯಾಗಿದೆ. ಕರಾವಳಿ ಭಾಗದಲ್ಲಿ …

Read More »

ಚಿಕ್ಕೋಡಿ: ಹೆಚ್ಚುವರಿ ಜಿಲ್ಲಾಧಿಕಾರಿ ನೇಮಕಕ್ಕೆ ವಿರೋಧ

ಚಿಕ್ಕೋಡಿ: ಸರ್ಕಾರ ಚಿಕ್ಕೋಡಿಗೆ ಪ್ರತ್ಯೇಕವಾಗಿ ಅಪರ ಜಿಲ್ಲಾಧಿಕಾರಿ ನೇಮಿಸುವ ಬದಲಾಗಿ ಬೆಳಗಾವಿಯನ್ನು ವಿಭಜಿಸಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸಿ ಜಿಲ್ಲಾಧಿಕಾರಿ ನೇಮಕ ಮಾಡುವಂತೆ ಒತ್ತಾಯಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ತಹಶೀಲ್ದಾರ್‌ ಚಿದಂಬರ ಕುಲಕರ್ಣಿ ಅವರಿಗೆ ಶನಿವಾರ ಮನವಿ ಸಲ್ಲಿಸಿತು.   ಕಳೆದ ಕೆಲವು ದಿನಗಳ ಹಿಂದೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಬೆಳಗಾವಿಗೆ ಭೇಟಿ ನೀಡಿ ಸಭೆ ನಡೆಸಿ, ಚಿಕ್ಕೋಡಿಗೆ ಅಪರ ಜಿಲ್ಲಾಧಿಕಾರಿಯೊಬ್ಬರನ್ನು ನೇಮಕ ಮಾಡುವಂತೆ ಈ …

Read More »

ಬೆಂಗಳೂರಿನಲ್ಲಿ ಮಹಿಳೆಯ ಹತ್ಯೆ ಕೇಸ್ : ಮಹಾಲಕ್ಷ್ಮಿ ಸ್ನೇಹಿತ ಅಶ್ರಫ್ ಮೇಲೆ ಅನುಮಾನ ಇದೆ ಎಂದ ಪತಿ!

ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಹಾಲಕ್ಷ್ಮೀಯ ಸ್ನೇಹಿತ ಅಶ್ರಫ್ ಮೇಲೆ ನನಗೆ ಅನುಮಾನ ಇದೆ ಎಂದು ಮಹಾಲಕ್ಷ್ಮಿ ಪತಿ ಹೇಮಂತ್ ದಾಸ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೊಲೆಯಾದ ಮಹಾಲಕ್ಷ್ಮಿ ಪತಿ ಹೇಮಂತ್ ದಾಸ್, ನನಗೆ ಮಹಾಲಕ್ಷ್ಮೀ ಸ್ನೇಹಿತ ಅಶ್ರಫ್ ಮೇಲೆ ಅನುಮಾನ ಇದೆ. ಅಶ್ರಫ್ ಉತ್ತರಾಖಂಡ ಮೂಲದವನು. ಈ ಹಿಂದೆ ನಾನು ನೆಲಮಂಗಲದಲ್ಲಿ ಅಶ್ರಫ್ ವಿರುದ್ಧ ದೂರು ಕೊಟ್ಟಿದ್ದೆ ಎಂದು ಸ್ಪೋಟಕ …

Read More »

ನಿಪ್ಪಾಣಿ ಕ್ಷೇತ್ರದಲ್ಲಿ ರಾಜಕೀಯ ಭವಿಷ್ಯವಿದೆ: ಪ್ರಕಾಶ ಹುಕ್ಕೇರಿ

ಚಿಕ್ಕೋಡಿ: ‘ಸಹಕಾರಿ ಕ್ಷೇತ್ರ, ಶಿಕ್ಷಣ ರಂಗ ಹಾಗೂ ಸಮಾಜ ಸೇವೆಯಲ್ಲಿ ಮುಖಂಡ ಅಣ್ಣಾಸಾಹೇಬ ಹಲವೆ ಅವರು ಸಾಕಷ್ಟು ಹೆಸರು ಮಾಡಿದ್ದಾರೆ. ರಾಜಕೀಯ ಕ್ಷೇತ್ರದಲ್ಲೂ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಬೋರಗಾಂವ ಭಾಗದಲ್ಲಿ ಕಾರ್ಯನಿರ್ವಹಿಸಿದ್ದು, ನಿಪ್ಪಾಣಿ ಕ್ಷೇತ್ರದಲ್ಲಿ ಅವರಿಗೆ ರಾಜಕೀಯ ಭವಿಷ್ಯವಿದೆ’ ಎಂದು ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ ಹೇಳಿದರು.   ನಿಪ್ಪಾಣಿ ತಾಲ್ಲೂಕಿನ ಬೋರಗಾಂವದ ವಿದ್ಯಾಸಾಗರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮುಖಂಡ ಅಣ್ಣಾಸಾಹೇಬ ಹವಲೆ …

Read More »

ಜಮೀನು ವಿವಾದ: ಗ್ರಾಮದ ಹಿರಿಯನ ಕೊಲೆ

ಯಮಕನಮರಡಿ: ಹುಕ್ಕೇರಿ ತಾಲ್ಲೂಕಿನ ಹೊಸೂರು ಗ್ರಾಮದ ಹದ್ದಿಯಲ್ಲಿ ಶುಕ್ರವಾರ ತಡರಾತ್ರಿ, ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಅಪಘಾತ ಎಂಬಂತೆ ಬಿಂಬಿಸಲಾಗಿದೆ. ತಡರಾತ್ರಿಯೇ ಕಾರ್ಯಪ್ರವೃತ್ತರಾದ ಇಲ್ಲಿನ ಪೊಲೀಸರು ನಾಲ್ಕೇ ತಾಸಿನಲ್ಲಿ ಪ್ರಕರಣ ಭೇದಿಸಿ ಮೂವರನ್ನು ಬಂಧಿಸಿದ್ದಾರೆ.   ಬೈಕ್ ಮೇಲೆ ತೆರಳುತ್ತಿದ್ದ, ಗ್ರಾಮದ ಹಿರಿಯ ವಿಠ್ಠಲ ಜೋತಪ್ಪ ರಾಮಗೋನಟ್ಟಿ (60) ಕೊಲೆಯಾದವರು. ಬೈಕ್‌ ಓಡಿಸುತ್ತಿದ್ದ ಭೀಮಪ್ಪ ಅವರ ಹಿಂದಿದ್ದ ಬಾಬು ಗಾಯಗೊಂಡಿದ್ದಾರೆ. ಭೀಮಪ್ಪ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಬೈಕಿಗೆ ಕಾರು ಡಿಕ್ಕಿ …

Read More »

ಸರ್ಕಾರಿ ಜಾಗ ಅತಿಕ್ರಮಣ; ತೆರವಿಗೆ ಕ್ರಮವಹಿಸಿ

ಧಾರವಾಡ: ‘ಒತ್ತುವರಿ ನಿರಂತರವಾಗಿ ನಡೆಯುತ್ತಿದೆ. ಒತ್ತುವರಿ ತೆರವುಗೊಳಿಸಿ ಸರ್ಕಾರದ ಆಸ್ತಿ ಸಂರಕ್ಷಣೆಗೆ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ಕೋರ್ಟ್ ಅಧ್ಯಕ್ಷ ನ್ಯಾಯಮೂರ್ತಿ ಬಿ.ಎ.ಪಾಟೀಲ ಹೇಳಿದರು. ಕರ್ನಾಟಕ ಭೂ ಕಬಳಿಕೆ ವಿಶೇಷ ಕೋರ್ಟ್, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ …

Read More »

ಕಲ್ಯಾಣ ಕರ್ನಾಟಕದ ಭಾಗದ ವಿವಿಧೆಡೆ ಮಳೆ

ಕಲಬುರಗಿ: ಹಲವು ದಿನಗಳ ಬಿಡುವಿನ ಬಳಿಕ ಕಲ್ಯಾಣ ಕರ್ನಾಟಕದ ಹಲವೆಡೆ ಶನಿವಾರ ಮಳೆಯಾಗಿದೆ. ಕಲಬುರಗಿ, ಬೀದರ್ ನಗರ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಶನಿವಾರ ಬೆಳಿಗ್ಗೆ ಹಾಗೂ ಸಂಜೆ ಉತ್ತಮ ಮಳೆಯಾಗಿದೆ. ಗುಡುಗು ಸಹಿತ ಜೋರು ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ. ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲೂ ಜೋರು ಮಳೆ ಸುರಿದಿದೆ. ಕಲಬುರಗಿ ಜಿಲ್ಲೆಯ ಶಹಾಬಾದ್‌ನಲ್ಲಿ ಬೆಳಿಗ್ಗೆ ವರುಣ ಅಬ್ಬರಿಸಿದ್ದಾನೆ. ಕಲಬುರಗಿ ನಗರದಲ್ಲಿ ಮಧ್ಯಾಹ್ನದ ವೇಳೆಗೆ ಧಾರಾಕಾರ ಮಳೆ ಸುರಿಯಿತು. ಕಲಬುರಗಿಯಲ್ಲಿ ಬೆಳಿಗ್ಗೆ ತೀಕ್ಷ್ಣ …

Read More »