ಬೆಂಗಳೂರು: ನಗರದ ಮಲ್ಲೇಶ್ವರದ ಪೈಪ್‌ಲೈನ್‌ನ ಕೆ.ವಿ.ರಸ್ತೆಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮಹಿಳೆಯೊಬ್ಬರನ್ನು 30ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ, ಅವರ ಮೃತದೇಹವನ್ನು ಫ್ರಿಡ್ಜ್‌ನಲ್ಲಿ ಬಚ್ಚಿಟ್ಟಿದ್ದ ಪ್ರಕರಣ ತಡವಾಗಿ ಪತ್ತೆಯಾಗಿದೆ. ಮಹಾಲಕ್ಷ್ಮಿ(29) ಕೊಲೆಯಾದವರು. ಪ್ರಕರಣ ದಾಖಲಿಸಿಕೊಂಡಿರುವ ವೈಯಾಲಿಕಾವಲ್ ಠಾಣೆ ಪೊಲೀಸರು, ಪರಾರಿಯಾಗಿರುವ ಆರೋಪಿ ಪತ್ತೆಗೆ ಶೋಧ ಆರಂಭಿಸಿದ್ದಾರೆ. ಕೃತ್ಯದ ನಡೆದ ಸ್ಥಳಕ್ಕೆ ಬೆರಳಚ್ಚು, ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರು, ಶ್ವಾನದಳ ಹಾಗೂ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ದೆಹಲಿಯಲ್ಲಿ ನಡೆದಿದ್ದ ಶ್ರದ್ದಾ …
Read More »Monthly Archives: ಸೆಪ್ಟೆಂಬರ್ 2024
ಲೋಕಾಯುಕ್ತ ಹೆಸರಿನಲ್ಲಿ ಹಣ ಕೇಳಿದರೆ ದೂರು ನೀಡಿ: ಲೋಕಾಯುಕ್ತ
ಬೆಂಗಳೂರು: ‘ಲೋಕಾಯುಕ್ತದ ಹೆಸರಿನಲ್ಲಿ ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ನೌಕರರಿಗೆ ಕರೆ ಮಾಡಿ, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಅಂತಹ ಕರೆ ಬಂದರೆ ತಕ್ಷಣವೇ ಗಮನಕ್ಕೆ ತನ್ನಿ’ ಎಂದು ಲೋಕಾಯುಕ್ತವು ಹೇಳಿದೆ. ‘ಸರ್ಕಾರಿ ನೌಕರರಿಗೆ ಕರೆ ಮಾಡಿ, ನಿಮ್ಮ ವಿರುದ್ಧ ಪ್ರಕರಣ ದಾಖಲಿಸದೇ ಇರಲು ಅಥವಾ ಪ್ರಕರಣ ರದ್ದುಪಡಿಸಲು ಹಣ ನೀಡುವಂತೆ ಕೆಲವರು ಒತ್ತಾಯಿಸುತ್ತಿರುವ ಬಗ್ಗೆ ದೂರು ಬಂದಿದೆ. ಲೋಕಾಯುಕ್ತದಿಂದ ಯಾವುದೇ ವ್ಯಕ್ತಿಗಳು ಹಾಗೆ ಕರೆ ಮಾಡುವುದಿಲ್ಲ. ಅಂತಹ ಕರೆ ಬಂದರೆ, …
Read More »ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಪಿ.ಎಸ್.ಐ ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ನಡೆದಿದೆ.
ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಪಿ.ಎಸ್.ಐ ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ನಡೆದಿದೆ. ಸುರೇಶ ಬಾಬಾಸಾಬ ಖೋತ (59) ಅವರು ರಾಯಬಾಗ ಪೊಲೀಸ್ ಠಾಣೆಯಲ್ಲಿ ಹೆಚ್ಚುವರಿ ಪಿಎಸ್‌ಐಯಾಗಿ ಕರ್ತವ್ಯನಿರ್ವಹಿಸುತ್ತಿದ್ದರು. ಗಣೇಶೋತ್ಸವ ಹಿನ್ನೆಲೆಯಲ್ಲಿ ಬಂದೋಬಸ್ತ್ ಮುಗಿಸಿಕೊಂಡು ಮರಳಿ ಮನೆಗೆ ಬಂದಾಗ ಹೃದಯಾಘಾತವಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ನಿವಾಸದಲ್ಲಿ ಘಟನೆ ನಡೆದಿದ್ದು ತಕ್ಷಣವೇ ಮಹಾರಾಷ್ಟ್ರದ ಮೀರಜ್ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಪಿಎಸ್‌ಐ ಸಾವನ್ನಪ್ಪಿದ್ದರಿಂದ …
Read More »ಎಮ್ಮೆಗಳಿಗೂ ಇಲ್ಲೊಂದು ಬ್ಯೂಟಿ ಪಾರ್ಲರ್ ಇದೆ
ಇಲ್ಲೊಂದು ಬ್ಯೂಟಿ ಪಾರ್ಲರ್ ಇದೆ. ಒಳಗೆ ಹೋದ ತಕ್ಷಣ ಘಮಘಮ ಎನ್ನುವ ಸೋಪು ಹಾಕಿ ಸ್ನಾನ ಮಾಡಿಸುತ್ತಾರೆ. ಅನಗತ್ಯ ಮೈಗೂದಲು ತೆಗೆಯುತ್ತಾರೆ. ಮೈತುಂಬ ಎಣ್ಣೆ ಹಚ್ಚಿ ಮಾಲೀಶ್ ಮಾಡುತ್ತಾರೆ. ಕಾಲುಗಳಿಗೆ ಗೆಜ್ಜೆ ಕಟ್ಟಿ, ಕಿವಿಯೋಲೆ ಹಾಕಿ ಅಲಂಕಾರ ಮಾಡುತ್ತಾರೆ. ಇಷ್ಟಾದ ಮೇಲೆ ವಯ್ಯಾರಿ ಬಿಂಕ ಬಿನ್ನಾಣದಿಂದ ಹೊರಬರುತ್ತಾಳೆ. ಅರೆರೇ! ಇದೇನು ಮದುವಣಿಗಿತ್ತಿಯನ್ನು ತಯಾರು ಮಾಡುತ್ತಿದ್ದಾರೆಯೇ ಎಂದು ಕೇಳಬೇಡಿ. ಇಲ್ಲಿ ಸುಂದರಿಯಂತೆ ಅಲಂಕಾರಗೊಳ್ಳುತ್ತಿರುವುದು ಎಮ್ಮೆ! ಹೌದು, ಇದು ಎಮ್ಮೆಗಳ ಪಾರ್ಲರ್..! ಮಹಾರಾಷ್ಟ್ರದ …
Read More »ಹಾವೇರಿ | ನೀರಿಲ್ಲ, ವಿದ್ಯುತ್ತಿಲ್ಲ: ಸೊರಗಿದ ಹುರುಳಿಕುಪ್ಪಿ ಆಸ್ಪತ್ರೆ
ಹಾವೇರಿ: ಮಳೆ ಬಂದರೆ ಸೋರುವ ಕಟ್ಟಡ, ಆವರಣದಲ್ಲಿ ಹೆಚ್ಚಾಗಿರುವ ಕಸ-ಕಂಟಿ, ತುರ್ತು ಪರಿಸ್ಥಿತಿಯಲ್ಲಿ ಲಭ್ಯವಾಗದ ಚಿಕಿತ್ಸೆ, ನೀರಿನ ಸೌಲಭ್ಯ ಹಾಗೂ ವಿದ್ಯುತ್ ಸಂಪರ್ಕವಿಲ್ಲದೇ ದಿನದೂಡುತ್ತಿರುವ ಸಿಬ್ಬಂದಿ, ಅರ್ಧಕ್ಕೆ ನಿಂತ ಮೇಲ್ದರ್ಜೆಗೇರಿಸುವ ಪ್ರಕ್ರಿಯೆ… ಜಿಲ್ಲೆಯ ಸವಣೂರು ತಾಲ್ಲೂಕಿನ ಹುರುಳಿಕುಪ್ಪಿ ಗ್ರಾಮದಲ್ಲಿರುವ ಆರೋಗ್ಯ ವಿಸ್ತರಣಾ ಚಿಕಿತ್ಸಾಲಯ ಕೇಂದ್ರದ ದುಸ್ಥಿತಿ ಇದು. ಮೂಲಸೌಕರ್ಯಗಳ ಕೊರತೆಯಿಂದಾಗಿ ಕೇಂದ್ರ ಸೊರಗುತ್ತಿದೆ. ಗ್ರಾಮಸ್ಥರ ಹೋರಾಟದ ಫಲವಾಗಿ ಉದ್ಘಾಟನೆಗೊಂಡಿದ್ದ ಕೇಂದ್ರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗದಿದ್ದರಿಂದ, ಹುರುಳಿಕುಪ್ಪಿ ಹಾಗೂ …
Read More »ಬೆಳಗಾವಿಯಲ್ಲಿ ಪ್ಯಾಲಿಸ್ಟೀನ್ ಧ್ವಜದ ಮಾದರಿಯ ಶಾಮಿಯಾನ
ಬೆಳಗಾವಿ: ನಗರದಲ್ಲಿ ಭಾನುವಾರ (ಸೆ.22) ನಡೆಯಲಿರುವ ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ, ಇಲ್ಲಿನ ದರ್ಬಾರ್ ಗಲ್ಲಿಯ ಬೀದಿಯೊಂದರಲ್ಲಿ ಪ್ಯಾಲಿಸ್ಟೀನ್ ಧ್ವಜ ಹೋಲುವ ದೊಡ್ಡ ಶಾಮಿಯಾನ ಹಾಕಿದ್ದು ವಿವಾದಕ್ಕೆ ಕಾರಣವಾಗಿದೆ. ಬೆಳಿಗ್ಗೆ ವೀರಭದ್ರ ನಗರದಲ್ಲಿ ಬೀದಿಯೊಂದರಲ್ಲಿ ಪ್ಯಾಲಿಸ್ಟೀನ್ ಧ್ವಜ ಹೋಲುವ ಬೀದಿ ಶಾಮಿಯಾನ ಹಾಕಲಾಗಿತ್ತು. ಮುಂದೆ ಎರಡು ಖಡ್ಗ ನೇತುಹಾಕಿ ಅವುಗಳಿಗೂ ಪ್ಯಾಲಿಸ್ಟೀನ್ ಧ್ವಜದ ಬಣ್ಣವನ್ನೇ ಬಳಿಯಲಾಗಿತ್ತು. ಇದನ್ನು ಗಮನಿಸಿದ ಪೊಲೀಸರು ಸ್ಥಳಕ್ಕೆ ಧಾವಿಸಿ ತೆರವುಗೊಳಿಸಿದರು. ದರ್ಬಾರ್ ಗಲ್ಲಿಯಲ್ಲೂ ಅರ್ಧ ಕಿಲೋಮೀಟರ್‌ವರೆಗೆ ಶಾಮಿಯಾನ …
Read More »ಒಂದೇ ದಿನ 2 ಪರೀಕ್ಷೆ : RCU ಬಿ.ಎ 4ನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳಲ್ಲಿ ಗೊಂದಲ
ಬೆಳಗಾವಿ: ಒಂದೇ ದಿನ ಎರಡು ಪರೀಕ್ಷೆ ನಿಗದಿಯಾದ ಕಾರಣ, ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ(ಆರ್‌ಸಿಯು) ಬಿ.ಎ 4ನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದಾರೆ. ಆರ್‌ಸಿಯು ವ್ಯಾಪ್ತಿಯಲ್ಲಿ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ 421 ಪದವಿ ಕಾಲೇಜುಗಳಿವೆ. ಬಿ.ಎ 4ನೇ ಸೆಮಿಸ್ಟರ್‌ನಲ್ಲಿ ಸುಮಾರು 25 ಸಾವಿರ ವಿದ್ಯಾರ್ಥಿಗಳು ಇದ್ದಾರೆ. ಅವರಿಗೆ ಸೆ.29, 30ರಂದು ಐಚ್ಛಿಕ ಕನ್ನಡ ವಿಷಯದ ಪರೀಕ್ಷೆ ನಿಗದಿಪಡಿಸಲಾಗಿದೆ. ಆದರೆ, ಗ್ರಾಮ ಲೆಕ್ಕಾಧಿಕಾರಿ ಹುದ್ದೆ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ …
Read More »ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ‘ಸ್ಥಾಯಿ ಸಮಿತಿ’ಗಳಿಗೆ ಚುನಾವಣೆಗೆ ಮಹೂರ್ತ ಫಿಕ್ಸ್
ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23 ನೇ ಅವಧಿಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗೆ ಚುನಾವಣೆಯನ್ನು ಆಯೋಜಿಸಲಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗೆ ಸ್ಪರ್ಧಿಸುವವರು ಅಕ್ಟೋಬರ್ 3, 2024 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಪಾಲಿಕೆಯ ಚುನಾವಣೆಯನ್ನು ಅಕ್ಟೋಬರ್ 3, 2024 ರಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿ ಮಹಾನಗರ …
Read More »ಯತ್ನಾಳ್-ಕಾಶಪ್ಪನವರ್ ನಡುವೆ ‘ಟಿಪ್ಪು-ಔರಂಗಜೇಬ’ ಗಲಾಟೆ! ನಾಲಿಗೆ ಹರಿಬಿಟ್ಟ ನಾಯಕರು!
ಬಾಗಲಕೋಟೆ: ಟಿಪ್ಪು ಸುಲ್ತಾನ್ (Tipu Sultan) ಹಾಗೂ ಔರಂಗಜೇಬ್ (Aurangzeb) ವಿಚಾರಕ್ಕೆ ವಿಜಯಪುರ ಶಾಸಕ (Vijayapura MLA) ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹಾಗೂ ಬಾಗಲಕೋಟೆಯ (Bagalkot) ಹುನಗುಂದ ಶಾಸಕ (Hungunda MLA) ವಿಜಯಾನಂದ ಕಾಶಪ್ಪನವರ್ (Vijayananda Kashappanaar) ಟಾಕ್ ಫೈಟ್ ಜೋರಾಗಿದೆ. ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬ್ ವಿರುದ್ಧ ಯತ್ನಾಳ್ ಏಕವಚನದಲ್ಲಿ ಟೀಕಿಸಿದ್ದರು. ಇದಕ್ಕೆ ವಿಜಯಾನಂದ ಕಾಶಪ್ಪನವರ್ ಏಕವಚನದಲ್ಲಿಯೇ ತಿರುಗೇಟು ನೀಡಿದ್ದಾರೆ. ಈ ದೇಶ ಕಂಡ ವೀರ …
Read More »ತಿರುಪತಿ ಲಾಡು ಪ್ರಸಾದದ ಬಗ್ಗೆ ಸಮಗ್ರ ತನಿಖೆಯಾಗಲಿ: ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ತಿರುಪತಿ ಪ್ರಸಾದ ಲಾಡುವಿನ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದೆ. ಆಂಧ್ರಪ್ರದೇಶದ ಹಿಂದಿನ ಸರ್ಕಾರ ಲಾಡು ತಯಾರಿಕೆಗೆ ರಾಜ್ಯದ ನಂದಿನಿ ತುಪ್ಪ ತರಿಸಿಕೊಳ್ಳಲಾಗುತ್ತಿತ್ತು. ಅದನ್ನು ನಿಲ್ಲಿಸಿ, ಬೇರೆ ಕಡೆಯಿಂದ ತುಪ್ಪ ತರಿಸಿಕೊಳ್ಳಲು ಆರಂಭಿಸಿದಾಗಿನಿಂದ ಈ ರೀತಿ ಘಟನೆಗಳು ನಡೆದಿವೆ ಎಂದು ಕೇಂದ್ರ ಸಚಿವ ಪಲ್ಹಾದ ಜೋಶಿ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಕ್ಕೆ ಸಂಬಂಧಿಸಿದ ಪ್ರಯೋಗಾಲಯದ ವರದಿಯನ್ನು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಿಡುಗಡೆ ಮಾಡಿದ್ದಾರೆ. …
Read More »