ಮುಂಬಯಿ: ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರ ತಂದೆ ಸಲೀಂ ಖಾನ್ (Salim Khan) ಅವರಿಗೆ ಬುರ್ಖಾಧಾರಿ ಮಹಿಳೆ ಹಾಗೂ ವ್ಯಕ್ತಿಯೊಬ್ಬನಿಂದ ಜೀವ ಬೆದರಿಕೆ ಬಂದಿರುವ ಘಟನೆ ನಡೆದಿರುವುದು ವರದಿಯಾಗಿದೆ. ಇತ್ತೀಚೆಗಷ್ಟೇ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿದ್ದರು. ಈ ಘಟನೆ ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್‍ಗೆ (Lawrence Bishnoi) ಅವರ ಸೂಚನೆಯ ಮೇರೆಗೆ ನಡೆದಿತ್ತು. ಸಲ್ಮಾನ್ ಖಾನ್ ಅವರ ತಂದೆ …
Read More »Monthly Archives: ಸೆಪ್ಟೆಂಬರ್ 2024
ಧರ್ಮಸ್ಥಳ ಸಂಘದಿಂದ ಕಿರುಕುಳ ಆರೋಪ: ಸಾಲದ ಕಂತು ಕಟ್ಟಲಾಗದೇ ರೈತ ಮಹಿಳೆ ಸಾವು
ಮಂಡ್ಯ, ಸೆಪ್ಟೆಂಬರ್ 19: ಸಂಘದ ಸಾಲದ ಕಂತು ಕಟ್ಟಲಾಗದೇ ರೈತ ಮಹಿಳೆ ಸಾವಿಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮಲಿಯೂರು ಗ್ರಾಮದಲ್ಲಿ ನಡೆದಿದೆ. ಮಲಿಯೂರು ಗ್ರಾಮದ ಮಹಾಲಕ್ಷ್ಮೀ (38) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಧರ್ಮಸ್ಥಳ ಸಂಘದ ಸಾಲದ ಕಂತು ಕಟ್ಟಲಾಗದೇ ಕಿರುಕುಳ ತಾಳಲಾರದೇ ಮಹಿಳೆ ಸಾವಿಗೆ ಶರಣಾದ ಆರೋಪ ಕೇಳಿಬಂದಿದೆ. ಮಲಿಯೂರು ಗ್ರಾಮದ ಮಹಾಲಕ್ಷ್ಮೀ ಕೆಲವು ಸಮಯದ ಹಿಂದೆ ಧರ್ಮಸ್ಥಳ ಸಂಘದಲ್ಲಿ …
Read More »ಒಂದು ದೇಶ, ಒಂದು ಚುನಾವಣೆ’ ವ್ಯವಸ್ಥೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ : ಸಿಎಂ
ಬೆಂಗಳೂರು : ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಆಡಳಿತಾರೂಢ ಪಕ್ಷದ ಗುಪ್ತ ಅಜೆಂಡಾವನ್ನು ಒಳಗೊಂಡಿರುವ ‘ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವವನ್ನು ಸಂಸತ್ ನ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಎದುರಿಸಲಿದೆ. ದೇಶದ ಜನಾಭಿಪ್ರಾಯವೂ ”ಒಂದು ದೇಶ ಒಂದು ಚುನಾವಣೆ” ಯ ವ್ಯವಸ್ಥೆಗೆ ವಿರುದ್ಧವಾಗಿದೆ. ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಲೋಕಸಭೆ ಇಲ್ಲವೆ …
Read More »ನಾಡಹಬ್ಬದಲ್ಲಿ ಈ ಬಾರಿಯೂ ಅಧಿಕಾರಿಗಳದ್ದೇ ‘ದರ್ಬಾರ್’
ಮೈಸೂರು: ದಸರಾ ಮಹೋತ್ಸವದ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಈ ಬಾರಿಯೂ ಅಧಿಕಾರಿಗಳದ್ದೇ ‘ದರ್ಬಾರ್’ ನಡೆಯುತ್ತಿದೆ. ಉಪ ಸಮಿತಿಗಳಿಗೆ ಅಧಿಕಾರೇತರರ ನೇಮಕ, ಭಾಗಿದಾರರು ಅಥವಾ ಸಾರ್ವಜನಿಕರ ಸಲಹೆಗಳನ್ನು ಆಲಿಸಿ ಸಹಭಾಗಿತ್ವ ಪಡೆದುಕೊಳ್ಳುವ ಕಾರ್ಯ ಈವರೆಗೂ ನಡೆದಿಲ್ಲ. ಮಹೋತ್ಸವಕ್ಕೆ ಅ.3ರಂದು ಚಾಲನೆ ದೊರೆಯಲಿದ್ದು, ಬಹಳ ದಿನಗಳೇನೂ ಉಳಿದಿಲ್ಲ. ಅದಕ್ಕೆ ಪೂರ್ವಭಾವಿಯಾಗಿ ಎಲ್ಲ ಕಾರ್ಯಕ್ರಮಗಳ ರೂಪರೇಷೆಯ ಸ್ಪಷ್ಟ ಚಿತ್ರಣ ದೊರೆಯಬೇಕು. ಹೊರ ಜಿಲ್ಲೆ, ಹೊರ ರಾಜ್ಯ ಮತ್ತು ವಿದೇಶಗಳ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ನಡೆಯುವ ಉತ್ಸವವನ್ನು ರೂಪಿಸುವಲ್ಲಿ …
Read More »ಸಿಎಂ ಗದ್ದುಗೆ ಗುದ್ದಾಟ: ʼಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ನಾಯಕʼ
ಬೆಂಗಳೂರು, ಸೆಪ್ಟೆಂಬರ್ 19: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂದ ಗದ್ದುಗೆ ಗುದ್ದಾಟ ಶುರುವಾಗಿದದ್ದು, ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಅಲ್ಲಾಡುತ್ತಿರುವ ಸಂದರ್ಭದಲ್ಲಿ ಕುರ್ಚಿ ಉಳಿಸಿಕೊಳ್ಳಲು ಮತ್ತು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎಐಸಿಸಿ) ಅಧ್ಯಕ್ಷರನ್ನು ಓಲೈಸಲು ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಚಿವ ಸಂಪುಟ ಸಭೆಯ ನಾಟಕ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ. ಸಚಿವ ಸಂಪುಟ ಸಭೆಯಿಂದ ಕಲಬುರ್ಗಿ ಭಾಗದ ಅಭಿವೃದ್ಧಿ ಆಗಲು ಸಾಧ್ಯವಿಲ್ಲ. ಈ …
Read More »ಗರ್ಭಿಣಿ ಪತ್ನಿಯನ್ನು ಕೊಂದು ಬಾವಿಗೆ ಎಸೆದ ಪಾಪಿ ಪತಿ.!
ಕೊಪ್ಪಳ : ಪಾಪಿ ಪತಿಯೋರ್ವ ಗರ್ಭಿಣಿ ಪತ್ನಿಯನ್ನು ಕೊಂದು ಬಾವಿಗೆ ಎಸೆದ ಘಟನೆ ಕೊಪ್ಪಳದ ತಾಳಕನಪೂರದಲ್ಲಿ ನಡೆದಿದೆ. ಸಂಗೀತಾ ಎಂಬ ಮಹಿಳೆ ಕೊಲೆಯಾಗಿದ್ದು, ಪತಿ ಬಾಬು ಎಂಬಾತ ಈ ಕೃತ್ಯ ಎಸಗಿದ್ದಾನೆ. 4 ತಿಂಗಳ ಗರ್ಭಿಣಿಯಾಗಿದ್ದ ಪತ್ನಿ ಸಂಗೀತಾಳನ್ನು ಬಾಬು ಜಮೀನಿಗೆ ಕರೆದೊಯ್ದು ಕೊಲೆ ಮಾಡಿ ನಂತರ ಬಾವಿಗೆ ಎಸೆದಿದ್ದಾನೆ. ಕೊಳೆದ ಸ್ಥಿತಿಯಲ್ಲಿ ಸಂಗೀತಾಳ ಮೃತದೇಹ ಪತ್ತೆಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
Read More »ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಯುವಕನೊಬ್ಬ ತನಗೆ ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದಿರುವ ಘಟನೆ ಹುಬ್ಬಳ್ಳಿಯ ಇಂಗಳಗಿ ಗ್ರಾಮದಲ್ಲಿ ನಡೆದಿದೆ. ಶೇಂಗಾ ಕೀಳಲೆಂದು ತಂದೆ-ಮಗ ಹೊಲಕ್ಕೆ ಹೋಗಿದ್ದ ವೇಳೆ ಹಸಿರು ಹಾವೊಂದು ಯುವಕನಿಗೆ ಕಚ್ಚಿದೆ. ಹವಿನ ತಲೆ ಜಜ್ಜಿ, ಅದನ್ನು ಕೊಂದು ಒಂದು ಚೀಲದಲ್ಲಿ ತುಂಬಿಕೊಂಡು ಯುವಕ ಹಾಗೂ ಆತನ ತಂದೆ ಆಸ್ಪತ್ರೆಗೆ ಬಂದಿದ್ದಾರೆ. ಗಾಯಾಳು ಯುವಕ ಫಕಿರಪ್ಪ ಅಣ್ಣಿಗೇರಿಗೆ ಚಿಕಿತ್ಸೆ ನೀಡಲಾಗಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
Read More »ಕೊಳ್ಳೇಗಾಲ: ನಕ್ಷತ್ರ ಆಮೆ ಸಾಗಾಟ ಮಾಡುತ್ತಿದ್ದ ಮೂವರ ಬಂಧನ
ಚಾಮರಾಜನಗರ, ಸೆಪ್ಟೆಂಬರ್, 19: ಇತ್ತೀಚೆಗಷ್ಟೇ ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಬಂಧಿಸಿತ್ತು. ಇದೀಗ ಮತ್ತೆ ಮುಡಿಗುಂಡದ ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ ಜೀವಂತ ನಕ್ಷತ್ರ ಆಮೆಗಳನ್ನು ಸಾಗಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ತಾಲ್ಲೂಕು ಕುಳ್ಳೂರು ಗ್ರಾಮದ ಮಾದೇಶ್, ತಮಿಳುನಾಡಿನ ಸತ್ತಿ ತಾಲ್ಲೂಕಿನ ಕಾನಗೆರೆ …
Read More »ಕನ್ನಡ ಸಾಹಿತ್ಯ ಪರಿಷತ್ತಿನ ಎಡವಟ್ಟು: ಅಧ್ಯಕ್ಷ ಸ್ಥಾನಕ್ಕೆ ಕೊಲೆ ಆರೋಪಿ ಆಯ್ಕೆ
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಗರಿ ಮಂಡ್ಯ ಜಿಲ್ಲೆ ಸಿದ್ಧವಾಗುತ್ತಿರುವ ಹೊತ್ತಲ್ಲೇ ಕನ್ನಡ ಸಾಹಿತ್ಯ ಪರಿಷತ್ತು ಎಡವಟ್ಟೊಂದನ್ನು ಮಾಡಿದೆ. ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಕೊಲೆ ಆರೋಪಿಯನ್ನು ಆಯ್ಕೆ ಮಾಡಿದ್ದು, ವಿವಾದಕ್ಕೆ ಕಾರಣವಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನಾಗಿ ಎಂ.ಬಿ.ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಎಂ.ಬಿ.ಕುಮಾರ್ ವಿರುದ್ಧ ಕೊಲೆ ಆರೋಪವಿದೆ. ರೌಡಿಶೀಟರ್ ದೀಪು ಎಂಬಾತನ ಕೊಲೆ ಕೇಸ್ …
Read More »ಆನ್‌ಲೈನ್ ವಂಚಕನ ಸೆರೆ: ₹1.21 ಕೋಟಿ ವಶ
ಬಳ್ಳಾರಿ: ನಗರದ ‘ಹಿಂದೂಸ್ತಾನ್ ಕ್ಯಾಲ್ಸಿನ್ಡ್ ಮೆಟಲ್ಸ್ ಪ್ರೈವೆಟ್ ಲಿಮಿಟೆಡ್’ಗೆ ₹2.11 ಕೋಟಿ ವಂಚಿಸಿದ್ದ ಆನ್‌ಲೈನ್ ವಂಚಕರ ತಂಡದ ದುಷ್ಕರ್ಮಿಯೊಬ್ಬನನ್ನು ಬಂಧಿಸುವಲ್ಲಿ ಬಳ್ಳಾರಿಯ ಸೈಬರ್, ಆರ್ಥಿಕ, ಮಾದಕ ವಸ್ತು (ಸಿಇಎನ್) ಅಪರಾಧ ಪೊಲೀಸರು ಯಶಸ್ವಿಯಾಗಿದ್ದಾರೆ. ವಂಚನೆಯ ಜಾಲ ಬೆನ್ನುಹತ್ತಿದ್ದ ಸಿಇಎನ್ ವಿಭಾಗದ ಡಿಎಸ್‌ಪಿ ಸಂತೋಷ್ ಚೌವ್ಹಾಣ್ ಅವರ ತಂಡ, ಮಧ್ಯಪ್ರದೇಶಕ್ಕೆ ತೆರಳಿ ಸಿದಿ ಜಿಲ್ಲೆಯ ಅಜಯ್ ಕುಮಾರ್ ಜೈಸ್ವಾಲ್ ಎಂಬಾತನನ್ನು ಬಂಧಿಸಿ ರಾಜ್ಯಕ್ಕೆ ಕರೆತಂದಿದ್ದಾರೆ. ‘ಅಜಯ್ ಕುಮಾರ್ ಬಂಧನದಿಂದಾಗಿ ₹1.21 ಕೋಟಿ …
Read More »