ಮಂಗಳೂರು: ನಗರದ ಆಕಾಶ್ ಪೂಜಾರ್ ತಮಿಳುನಾಡಿನ ರಾಮೇಶ್ವರದಲ್ಲಿ ಭಾನುವಾರ ಕೊನೆಗೊಂಡ ರಾಷ್ಟ್ರೀಯ ಸ್ಟ್ಯಾಂಡ್ ಅಪ್ ಪೆಡಲಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಪದಕ ಗೆದ್ದು ಗಮನ ಸೆಳೆದರು. ಭಾರತ ಸರ್ಫಿಂಗ್ ಫೆಡರೇಷನ್ ಸಹಯೋಗದಲ್ಲಿ ತಮಿಳುನಾಡು ಸರ್ಫಿಂಗ್ ಸಂಸ್ಥೆ ಆಯೋಜಿಸಿದ್ದ ಚಾಂಪಿಯನ್‌ಷಿಪ್‌ನ ಪುರುಷರ 12 ಕಿಲೊಮೀಟರ್ ರೇಸ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅವರು ಈ ವಿಭಾಗದಲ್ಲಿ ಪದಕ ಗೆದ್ದ 16 ವರ್ಷದೊಳಗಿನ ಭಾರತದ ಮೊದಲ ಸರ್ಫರ್ ಎಂದೆನಿಸಿಕೊಂಡರು. ಕರ್ನಾಟಕ ಇಲ್ಲಿ ಒಟ್ಟು 8 ಪಕದಗಳನ್ನು ಗಳಿಸಿ …
Read More »Monthly Archives: ಸೆಪ್ಟೆಂಬರ್ 2024
ಲಿಂಬು, ಅಂಟವಾಳದಿಂದ ಪರಿಸರಸ್ನೇಹಿ ಮಾರ್ಜಕ
ಹುಬ್ಬಳ್ಳಿ: ಧಾರವಾಡದ ಕೃಷಿ ವಿಶ್ವವಿದ್ಯಾಲಯ ಕಳೆದ ವಾರ ಆಯೋಜಿಸಿದ್ದ ಕೃಷಿ ಮೇಳದಲ್ಲಿ ನವೋದ್ಯಮಿಗಳ ಉತ್ಸಾಹವೂ ಜನರನ್ನು ಸೆಳೆದವು. ಮೇಳದ ಫಲಪುಷ್ಪ ಪ್ರದರ್ಶನ ವಿಭಾಗದಲ್ಲಿ ಹತ್ತಾರು ನವೋದ್ಯಮಿಗಳು ತಮ್ಮ ಉದ್ಯಮವನ್ನು ಪರಿಚಯಿಸಿದರು. ಅವುಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪೂಜಾ ದೇಶಪಾಂಡೆ ಪರಿಸರಸ್ನೇಹಿ ಮಾರ್ಜಕಗಳನ್ನು (ಡಿಟೆರ್ಜೆಂಟ್), ಖಾನಾಪುರದ ಆರ್.ಐ.ಪಾಟೀಲರು ಕಬ್ಬಿನ ಹಾಲನ್ನು ವರ್ಷವಿಡೀ ಬಾಳುವಂತೆ ಮಾಡಿರುವುದರ ಜತೆಗೆ ಟೀ, ಕಾಫಿಗೆ ಸಕ್ಕರೆ ಬದಲು ಸಾವಯವ ಬೆಲ್ಲದ ಪುಡಿ ಬಳಸುವಂಥ ಕಬ್ಬಿನ ಉತ್ಪನ್ನ …
Read More »ಸರ್ಕಾರಿ ಭೂಮಿ ದುರ್ಬಳಕೆ: ಕುರಿಗಾಯಿಗಳ ಆಕ್ರೋಶ
ಲಿಂಗಸುಗೂರು: ತಾಲ್ಲೂಕಿನ ಚಿಕ್ಕ ಉಪ್ಪೇರಿ ಗ್ರಾಮದ ಸರ್ವೆ ನಂಬರ್ 62 ಸೇರಿ ಕಂದಾಯ ಮತ್ತು ಅರಣ್ಯ ಇಲಾಖೆಗಳಿಗೆ ಸೇ ರಿದ ಭೂಮಿಯಲ್ಲಿ ಅತಿಕ್ರಮಣ ಪ್ರವೇಶ ಮಾಡಿ ದುರ್ಬಳಕೆ ಮಾಡಿಕೊಂಡ ಕಾರಣ ಜಾನುವಾರು ಮೇಯಿಸಲು ಭೂಮಿ ಇಲ್ಲದಂಥ ಸ್ಥಿತಿ ನಿರ್ಮಾಣವಾಗಿದೆ ಎಂದು ಕುರಿಗಾಯಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್.ಬಿ.ಶುಗರ್ಸ್ ಕಂಪನಿಯು ಸಕ್ಕರೆ ಕಾರ್ಖಾನೆ ಸ್ಥಾಪನೆ ಹೆಸರಲ್ಲಿ ಖರೀದಿ ಮಾಡಿಕೊಂಡ ಜಮೀನಲ್ಲದೆ ಹೆಚ್ಚುವರಿ ಜಮೀನಿನಲ್ಲಿ ಕಲ್ಲು ಗುಡ್ಡ, ಗಿಡ-ಮರ ಕಿತ್ತು ಸಮತಟ್ಟುಗೊಳಿಸುತ್ತಿದೆ. ತನ್ನ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಶೈಕ್ಷಣಿಕ ಕ್ಷೇತ್ರದ ಪ್ರಗತಿಗೆ ದೂರದೃಷ್ಟಿ ಚಿಂತನೆ, ಸಹಾಯ, ಸಹಕಾರದ ಪ್ರತಿಫಲವೇ ಈ ಸಾಧನೆ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ
ಗೋಕಾಕ- ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ವಲಯದಲ್ಲಿ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿದ್ದರಿಂದಲೇ ಈ ಭಾಗದಲ್ಲಿ ದಾಖಲೆಯ ಮಟ್ಟದಲ್ಲಿ ವಿವಿಧ ವೃತ್ತಿಪರ ಕೋರ್ಸಗಳಿಗೆ ಆಯ್ಕೆಯಾಗುವ ಮೂಲಕ ವಿದ್ಯಾರ್ಥಿಗಳು ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ರವಿವಾರದಂದು ನಗರದ ಎನ್‌ಎಸ್‌ಎಫ್ ಕಚೇರಿಯಲ್ಲಿ ೨೦೨೩-೨೪ ನೇ ಸಾಲಿನ ವ್ಯಾಸಂಗ ಮಾಡಿ ಉನ್ನತ ವೃತ್ತಿಪರ ಕೋರ್ಸಗಳಿಗೆ ಆಯ್ಕೆಗೊಂಡ ೫೫ ಸಾಧಕ ವಿದ್ಯಾರ್ಥಿಗಳನ್ನು ಸತ್ಕರಿಸಿ ಮಾತನಾಡಿದ ಅವರು, ಈ …
Read More »ಯಾದಗಿರಿ | ಮಾರುಕಟ್ಟೆಗೆ ಲಗ್ಗೆ ಇಟ್ಟ ‘ಸೀತಾಫಲ’
ಯಾದಗಿರಿ: ಜಿಲ್ಲೆಯ ಗುಡ್ಡಗಳಲ್ಲಿ ಯಥೇಚ್ಛವಾಗಿ ಬೆಳೆದ ಸೀತಾಫಲ ಹಣ್ಣುಗಳನ್ನು ವ್ಯಾಪಾರಿಗಳು ಅರಣ್ಯಕ್ಕೆ ತೆರಳಿ ಕಿತ್ತು ತಂದು ನಗರ ಪ್ರದೇಶಗಳಲ್ಲಿ ಮಾರುತ್ತಿದ್ದಾರೆ. ಯಾದಗಿರಿ ತಾಲ್ಲೂಕಿನ ಬಂದಳ್ಳಿ, ಯಡ್ಡಳ್ಳಿ, ಯರಗೋಳ, ಹತ್ತಿಕುಣಿ, ಆಶನಾಳ, ಬೆಳಗೇರಾ, ಅರಕೇರಾ (ಕೆ), ಕಟಗಿ, ಶಹಾಪುರ, ಗುರಮಠಕಲ್ ತಾಲ್ಲೂಕಿನ ಚಿಂತನಹಳ್ಳಿ, ಕಂದಕೂರ, ತಾತಳಗೇರಾ, ಬೋರಾಬಂಡ, ಧರ್ಮಪುರ, ಮಿನಸಾಪುರ ಸೇರಿದಂತೆ ವಿವಿಧ ಗುಡ್ಡಗಾಡು ಪ್ರದೇಶದಲ್ಲಿ ನೈಸರ್ಗಿಕವಾಗಿ ಸೀತಾಫಲ ಬೆಳೆದು ನಿಂತಿದೆ. ಲಂಬಾಣಿ ಸಮಾಜದ ಮಹಿಳೆಯರು ನಗರದ ಹಳೆ ಬಸ್ …
Read More »ಜೆರಾಕ್ಸ್ ಅಂಗಡಿಗಳಲ್ಲಿ ಪ್ರಶ್ನೆಪತ್ರಿಕೆ ಬಿಕರಿ?
ಕುಷ್ಟಗಿ: ಎಸ್‌ಎಸ್‌ಎಲ್‌ಸಿ ಮಧ್ಯವಾರ್ಷಿಕ ಪರೀಕ್ಷೆಯನ್ನು ಮುಖ್ಯಪರೀಕ್ಷೆ ಮಾದರಿಯಲ್ಲಿಯೇ ಏಕರೂಪದ ಪ್ರಶ್ನೆಪತ್ರಿಕೆಗಳ ಮೂಲಕ ನಡೆಸಿ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ನಿವಾರಿಸುವ ಮತ್ತು ಪರೀಕ್ಷೆ ಪಾವಿತ್ರ್ಯ ಕುರಿತು ಮಕ್ಕಳು, ಪಾಲಕರಿಗೆ ಜಾಗೃತಿ ಮೂಡಿಸಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಧ್ಯವಾರ್ಷಿಕ ಪರೀಕ್ಷೆ ನಡೆಸುತ್ತಿದೆ. ಆದರೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮತ್ತು ಸುರಕ್ಷತೆಯೇ ಇಲ್ಲದೆ ಅವ್ಯವಸ್ಥೆಯಿಂದಾಗಿ ಪ್ರಶ್ನೆಪತ್ರಿಕೆಗಳು ಹಣಕ್ಕೆ ಬಿಕರಿಯಾಗುತ್ತಿರುವ ಆರೋಪಗಳು ಕೇಳಿ ಬಂದಿವೆ. …
Read More »ಅದ್ದೂರಿ ದಸರೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮ
ಮೈಸೂರು: ನಾಡಿನ ಸಾಂಸ್ಕೃತಿಕ ಪರಂಪರೆ ಬಿಂಬಿಸಲಿರುವ ದಸರಾ ಮಹೋತ್ಸವಕ್ಕೆ ಭರದ ಸಿದ್ಧತೆ ನಡೆದಿದ್ದು, ಕಾರ್ಯಕ್ರಮಗಳ ಪಟ್ಟಿಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ. ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ಅ.3ರಂದು ಬೆಳಿಗ್ಗೆ 9.15ರಿಂದ 9.45ರ ನಡುವೆ ಉದ್ಘಾಟನೆಯನ್ನು ಸಾಹಿತಿ ಹಂ.ಪ. ನಾಗರಾಜಯ್ಯ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಶಾಸಕ ಜಿ.ಟಿ. ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ವೇದಿಕೆಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಂದು ಸಂಜೆ 6ಕ್ಕೆ …
Read More »HDK ವಿರುದ್ಧ ಅವಹೇಳನಕಾರಿ ಪದ ಬಳಕೆ: ಕ್ಷಮೆ ಕೇಳಲು ಕೇಂದ್ರ ಸಚಿವ ಜೋಶಿ ಆಗ್ರಹ
ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಸಿರುವ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಒಬ್ಬ ಜನಪ್ರತಿನಿಧಿ, ಕೇಂದ್ರ ಸಚಿವರ ಬಗ್ಗೆ ಅಸಭ್ಯ ಭಾಷೆ ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಲೋಕಾಯುಕ್ತ ಎಡಿಜಿಪಿಗೆ ಸರ್ವೀಸ್ ಕಂಡಕ್ಟ್ ನಿಯಮದ …
Read More »ಸಿದ್ದರಾಮಯ್ಯ ನೈತಿಕತೆ ಈಗ ಎಲ್ಲಿಗೆ ಹೋಗಿದೆ?: ಶಾಸಕ ಅಭಯ ಪಾಟೀಲ
ಬೆಳಗಾವಿ: ‘ಈ ಹಿಂದೆ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆರೋಪ ಕೇಳಿಬಂದಾಗ, ನೈತಿಕತೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದರು. ಈಗ ಅವರ ನೈತಿಕತೆ ಎಲ್ಲಿಗೆ ಹೋಗಿದೆ’ ಎಂದು ಶಾಸಕ ಅಭಯ ಪಾಟೀಲ ಪ್ರಶ್ನಿಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಾದರೂ ಸಿದ್ದರಾಮಯ್ಯ ರಾಜೀನಾಮೆ ಕೊಡದ ವಿಚಾರವಾಗಿ, ಇಲ್ಲಿ ಭಾನುವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು. ‘ರಾಜ್ಯದಲ್ಲಿ ಅಧಿಕಾರಕ್ಕೆ ಅಂಟಿಕೊಳ್ಳದೆ ಕೆಲಸ ಮಾಡಿದ ಕೆಲವೇ ರಾಜಕಾರಣಿಗಳ ಪೈಕಿ ಸಿದ್ದರಾಮಯ್ಯ …
Read More »ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ಸರ್ಕಾರಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ: ಯತ್ನಾಳ
ದಾವಣಗೆರೆ: ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ರಾಜ್ಯ ಸರ್ಕಾರವನ್ನು ಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ. ಶಾಸಕರ ಖರೀದಿ, ಆಪರೇಷನ್‌ಗೆ ಬಿಜೆಪಿ ವರಿಷ್ಠರು ಅವಕಾಶ ನೀಡುವುದಿಲ್ಲ, ನಾವೂ ಒಪ್ಪುವುದಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಆರೋಪ ಮಾಡಿದರು. ‘ರಾಜ್ಯ ಸರ್ಕಾರ ತಾನಾಗಿಯೇ ಪತನವಾಗುವ ಕಾಲ ಸನ್ನಿಹಿತವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಉರುಳಿಸಲು ಬಿಜೆಪಿ ಪ್ರಯತ್ನ ಮಾಡುವುದಿಲ್ಲ. ಸರ್ಕಾರ ಬೀಳಿಸಲು ಕೆಲವರ ಬಳಿ ಹಣ ಇರಬಹುದು. ಏಕೆಂದರೆ …
Read More »