ಉಡುಪಿ: ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ವ್ಯಕ್ತಿಯೊಬ್ಬರನ್ನು ಬಂಧಿಸಿರುವ ಘಟನೆ ಕಾರ್ಕಳದ ಸಾಣೂರು ಗ್ರಾಮದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ. ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪ್ರಮೀಳಾ ವಿಜಯ್ ಕುಮಾರ್ ಎಂಬಾಕೆಯ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದು, ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ, ಭರತ್ ಎಂಬಾತನನ್ನು ಬಂಧಿಸಿರುವುದಾಗಿ ವರದಿ ವಿವರಿಸಿದೆ. ಈ ಸಂದರ್ಭದಲ್ಲಿ ಓರ್ವ ಸಂತ್ರಸ್ಥೆ ಮಹಿಳೆಯನ್ನು ರಕ್ಷಿಸಿದ್ದು, ಆಪಾದಿತರಾದ …
Read More »Monthly Archives: ಸೆಪ್ಟೆಂಬರ್ 2024
ಬೆಳಗಾವಿ ಜಿಲ್ಲೆಗೆ ಮುಖ್ಯಮಂತ್ರಿ ಸ್ಥಾನ ಒಲಿದು ಬಂದರೆ ಸ್ವಾಗತ: ದುರ್ಯೋಧನ ಐಹೊಳೆ
ಚಿಕ್ಕೋಡಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದೆ. ಆದರೆ ಮುಖ್ಯಮಂತ್ರಿ ಸ್ಥಾನ ಬೆಳಗಾವಿ ಜಿಲ್ಲೆಗೆ ಒಲಿದು ಬಂದರೆ ಸಂತೋಷವಾಗುತ್ತದೆ ಮತ್ತು ನಾನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ ಎಂದು ರಾಯಬಾಗ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಹೇಳಿದರು. ಈ ಕುರಿತು ಚಿಕ್ಕೋಡಿ ತಾಲೂಕಿನ ಕರಗಾಂವ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಅವರು ಉತ್ತರಿಸಿದರು. ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ವೇಳೆ ಬದಲಾವಣೆ ಆದರೆ …
Read More »ಭಾರತದ ಪ್ರಜಾಪ್ರಭುತ್ವಕ್ಕೆ ರಾಹುಲ್ ಗಾಂಧಿ ಕಪ್ಪು ಚುಕ್ಕೆ: ಬಿಜೆಪಿ
ನವದೆಹಲಿ: ‘ವಿದೇಶಗಳಲ್ಲಿ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದ್ದಾರೆ. ಭಾರತದ ಪ್ರಜಾಪ್ರಭುತ್ವಕ್ಕೆ ಅವರು ಕಪ್ಪು ಚುಕ್ಕೆಯಾಗಿದ್ದಾರೆ’ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಕಿಡಿಕಾರಿದರು. ಅಮೆರಿಕದ ಟೆಕ್ಸಾಸ್‌ನಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣವನ್ನು ಪ್ರಸ್ತಾಪಿಸಿ ಮಾತನಾಡಿರುವ ಅವರು, ‘ರಾಹುಲ್ ಗಾಂಧಿ ಒಬ್ಬ ಅಪ್ರಬುದ್ಧ, ಅರೆಕಾಲಿಕ ನಾಯಕ ಎಂಬುವುದು ಎಲ್ಲರಿಗೂ ತಿಳಿದಿದೆ. ಆದರೆ, ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾದ ಮೇಲೆ ಜನರು …
Read More »ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿಗಳ ಮೇಲೂ ‘ಲೈಂಗಿಕ ದೌರ್ಜನ್ಯ’ ಆರೋಪ!
ಚಿಕ್ಕಮಗಳೂರು : ಇತ್ತೀಚಿಗೆ ರಾಜ್ಯದ ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ, ಕಿರುಕುಳ ನೀಡಲಾಗುತ್ತಿದ್ದು, ಕೇರಳದ ಹೇಮಾ ಸಮಿತಿ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಸಮಿತಿ ರಚಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ 153ಕ್ಕೂ ಹೆಚ್ಚು ನಟ, ನಟಿಯರು ಮನವಿ ಮಾಡಿಕೊಂಡಿದ್ದಾರೆ. ಇದೀಗ, ಪೊಲೀಸ್ ಇಲಾಖೆಯಲ್ಲಿಯೇ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗಳಿಗೆ ರಕ್ಷಣೆ ಇಲ್ಲವೆಂದರೆ ಇದೊಂದು ನಾಚಿಕೆಗೇಡಿನ ಸಂಗತಿಯಾಗಿದೆ. ಹೌದು ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ನಟಿಯರು ಹಾಗೂ ಸಹ ನಟಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ …
Read More »ಸಿಎಂ ಸಿದ್ದರಾಮಯ್ಯಗೆ ಮತ್ತೆರಡು ದಿನ ರಿಲೀಫ್
ಬೆಂಗಳೂರು : ಮುಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ರಿಟ್ ಅರ್ಜಿಯ ವಿಚಾರಣೆ ನಡೆದಿದ್ದು, ಇದೀಗ ಸೆಪ್ಟೆಂಬರ್ 12ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ನ್ಯಾ.ಎಂ. ನಾಗಪ್ರಸನ್ನ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕೇಂದ್ರ ಸರ್ಕಾರದ 17 ಮಾರ್ಗಸೂಚಿ ಆಧರಿಸಿ ವಾದಿಸಿದರು.17 …
Read More »ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಬೆಂಗಳೂರು,ಸೆ.9- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶಿಸಿದೆ. ನಟ ದರ್ಶನ್, ಪವಿತ್ರಗೌಡ ಸೇರಿದಂತೆ 17 ಆರೋಪಿಗಳನ್ನು ಪ್ರತ್ಯೇಕ ಜೈಲಿನಿಂದ ವಿಡಿಯೋ ಕಾನ್ಫರೆನ್‌್ಸ ಮೂಲಕ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ ಅವಧಿಯನ್ನು 3 ದಿನಗಳ ಕಾಲ (ಸೆ.12) ವಿಸ್ತರಿಸಿದೆ. ಇಂದಿನ ವಿಚಾರಣೆ ಸಂದರ್ಭದಲ್ಲಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು …
Read More »ಬೆಳ್ಳಂಬೆಳಗ್ಗೆ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ
ಇಂದು ಬೆಳ್ಳಂಬೆಳಗ್ಗೆ ಆಘಾತಕಾರಿ ಘಟನೆಯಲ್ಲಿ, ಬಿಹಾರದ ಪಾಟ್ನಾದ ಕಮಾಲಿಯಾ ಗೇಟ್ ಬಳಿ ಬಿಜೆಪಿ ಮುಖಂಡ ಶ್ಯಾಮ್ ಸುಂದರ್ ಮನೋಜ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ದಾಳಿಯು ಮುಂಜಾನೆ 4 ಗಂಟೆಯ ಸುಮಾರಿಗೆ ಸಂಭವಿಸಿತು, ಶ್ಯಾಮ್ ಸುಂದರ್ ಮನೋಜ್ ಅವರು ಕಮಲಿಯ ಗೇಟ್ ಬಳಿ ಬಂದರು, ಆಗ ಮೋಟಾರ್ ಸೈಕಲ್ ನಲ್ಲಿ ಹೋಗುತ್ತಿದ್ದ ದುಷ್ಕರ್ಮಿಗಳು ಅವರನ್ನು ಗುರಿಯಾಗಿಸಿಕೊಂಡಿದ್ದಾರೆ. ಈ ಪ್ರದೇಶದ ಕಣ್ಗಾವಲು ಕ್ಯಾಮೆರಾ ದೃಶ್ಯಾವಳಿಗಳು ಹೊರಬಂದಿದ್ದು, ಅಪರಾಧದ ಬಗ್ಗೆ ನಿರ್ಣಾಯಕ ವಿವರಗಳನ್ನು …
Read More »ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್.!
ಬೆಂಗಳೂರು : ಮಾಧ್ಯಮಗಳಿಗೆ ನಿರ್ಬಂಧ ಹೇರಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾದ ಮಾಹಿತಿಗಳನ್ನು ಮಾಧ್ಯಮಗಳು ಬಯಲು ಮಾಡುತ್ತಿರುವ ಹಿನ್ನೆಲೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಭಾಗಿಯಾಗಿರುವುದು ಧೃಡವಾಗಿದ್ದು, ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಮಾಹಿತಿ …
Read More »ಹಾಲಿನ ಪ್ಯಾಕೇಟ್ ಕದ್ದೊಯ್ದ ಹೆಡ್ ಕಾನ್ಸ್ ಟೇಬಲ್
ಹಾಲಿನ ಪ್ಯಾಕೇಟ್ ಕದ್ದೊಯ್ದ ಹೆಡ್ ಕಾನ್ಸ್ ಟೇಬಲ್; ಪೊಲೀಸಪ್ಪನ ಕಳ್ಳಾಟ ಸಿಸಿಟಿವಿಯಲ್ಲಿ ಸೆರೆ ಕೊಪ್ಪಳ: ಬೇಲಿಯೇ ಎದ್ದು ಹೊಲ ಮೇಯ್ದ ಕಥೆಯಿದು. ಕಳ್ಳರನ್ನು ಹಿಡಿದು ಶಿಕ್ಷಿಸಬೇಕಾದ ಪೊಲೀಸರೇ ಡ್ಯೂಟಿ ವೇಳೆ ಕಳ್ಳತನ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಓರ್ವ ನೈಟ್ ಡ್ಯೂಟಿ ವೇಳೆ ಹಾಲಿನ ಪ್ಯಾಕೆಟ್ ಕದ್ದೊಯ್ದ ಘಟನೆ ಕೊಪ್ಪಳದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬಳಿಯ ಹಾಲಿನ ಡೈರಿ ಬಳಿ ನಡೆದಿದೆ. ಹಾಲಿನ …
Read More »ಹಿರಿಯ ಪತ್ರಕರ್ತ ವಸಂತ ನಾಡಿಗೇರ ಹೃದಯಾಘಾತದಿಂದ ನಿಧನ
ಹಿರಿಯ ಪತ್ರಕರ್ತ ವಸಂತ ನಾಡಿಗೇರ ಹೃದಯಾಘಾತದಿಂದ ನಿಧನ ಬೆಂಗಳೂರು,ಸೆ.9- ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಸೋಮವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೂಲತಃ ಹಾವೇರಿ ಜಿಲ್ಲೆ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯ ಕರ್ನಾಟಕದಲ್ಲಿ ಅವರು ಶೀರ್ಷಿಕೆಗಳನ್ನು ಕೊಡುವುದರಲ್ಲಿ ಹಲವು ವಿನೂತನ …
Read More »