Breaking News

Monthly Archives: ಸೆಪ್ಟೆಂಬರ್ 2024

ಎಂ.ಕೆ.ಹುಬ್ಬಳ್ಳಿ: ಕುಂಭಮೇಳದೊಂದಿಗೆ ಗಣೇಶೋತ್ಸವ ಮೆರವಣಿಗೆ

ಎಂ.ಕೆ.ಹುಬ್ಬಳ್ಳಿ: ಪಟ್ಟಣದಲ್ಲಿ ಶನಿವಾರ ಸಂಭ್ರಮದಿಂದ ಗಣೇಶೋತ್ಸವ ಪ್ರತಿಷ್ಠಾಪಣಾ ಮೆರವಣಿಗೆ ನಡೆಯಿತು. ಮನೆ ಮನೆಗಳಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿದ ಪಟ್ಟಣದ ಜನರು, ಸಂಜೆ ನಡೆದ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.   ಪಟ್ಟಣದಲ್ಲಿ ಸುಮಾರು 20ಕ್ಕೂ ಅಧಿಕ ಸ್ಥಳಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ಗಮನ ಸೆಳೆದ 50ನೇ ವರ್ಷದ ಗಣೇಶೋತ್ಸವ ಸಂಭ್ರಮ: ಪಟ್ಟಣದ ಪೇಟೆ ಓಣಿಯ ಗಣೇಶೋತ್ಸವಕ್ಕೆ 50ವರ್ಷ ತುಂಬಿದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನಾ ಮೆರವಣಿಗೆ …

Read More »

ಚಿಕ್ಕೋಡಿ: ಬೀದಿನಾಯಿಗಳ ಹಾವಳಿಗೆ ಜನರು ಹೈರಾಣ

ಚಿಕ್ಕೋಡಿ: ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಬೀದಿನಾಯಿಗಳ ಹಾವಳಿಯಿಂದ ಜನರು ಕಂಗಾಲಾಗಿದ್ದಾರೆ. ರಸ್ತೆ, ಮಾರುಕಟ್ಟೆ, ಕೃಷಿಭೂಮಿ, ಬೆಟ್ಟ-ಗುಡ್ಡ ಸೇರಿದಂತೆ ಎಲ್ಲೆಂದರಲ್ಲಿ ಬೀದಿನಾಯಿ ಓಡಾಡುತ್ತಿವೆ. ಇವುಗಳ ಉಪಟಳಕ್ಕೆ ಕಡಿವಾಣ ಬೀಳದ್ದರಿಂದ ಮಕ್ಕಳು, ಮಹಿಳೆಯರು, ವೃದ್ಧರು ಆತಂಕದಿಂದಲೇ ಓಡಾಡುವಂತಾಗಿದೆ. ನಾಯಿಗಳನ್ನು ತಪ್ಪಿಸಲು ಹೋಗಿ ವಾಹನಗಳು ಹಾಗೂ ಸೈಕಲ್‌ಗಳು ನಿಯಂತ್ರಣ ತಪ್ಪಿದ ಪರಿಣಾಮ, ಹಲವು ಸವಾರರು ಬಿದ್ದು ಪೆಟ್ಟು ತಿಂದಿದ್ದಾರೆ. ಚಿಕ್ಕೋಡಿಯ ಜನನಿಬಿಡ ಪ್ರದೇಶಗಳಾದ ಕೇಂದ್ರ ಬಸ್ ನಿಲ್ದಾಣ, ಗಾಂಧಿ ಮಾರುಕಟ್ಟೆ, ಅಂಕಲಿ ಖೂಟ, ಪುರಸಭೆ ಕಚೇರಿ …

Read More »

ಹಾರೋಹಳ್ಳಿ: ರಸ್ತೆಗಳಿಗೆ ಕಂಟಕ ಜಲ ಜೀವನ್‌ ಮಿಷನ್‌

ಹಾರೋಹಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಲಜೀವನ್‌ ಮಿಷನ್‌ ಯೋಜನೆ ಗ್ರಾಮೀಣ ಭಾಗದ ರಸ್ತೆಗಳಿಗೆ ಕಂಟಕವಾಗಿದೆ. ತಾಲ್ಲೂಕಿನ ಹಲವು ಗ್ರಾಮ ಪಂಚಾಯಿತಿಗಳಲ್ಲಿ ಕೆಲವು ದಿನಗಳ ಹಿಂದೆ ಜಲ ಜೀವನ್ ಮಿಷನ್ ಯೋಜನೆ ಜಾರಿಗೊಳಿಸಲು ಗ್ರಾಮದ ಕಾಂಕ್ರೀಟ್ ರಸ್ತೆ ಅಗೆದು ತಿಂಗಳಾನುಗಟ್ಟಲೇ ಹಾಗೆಯೇ ಬಿಡಲಾಗಿದೆ.ಇದರಿಂದಾಗಿ ವೃದ್ಧರು, ಕುರಿ-ಮೇಕೆ, ದನ-ಕರು ಸಂಚಾರಕ್ಕೆ ತೊಂದರೆ ಆಗಿದೆ.   ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷೆ ಯೋಜನೆ ಇದಾಗಿದೆ. ಕೊಟ್ಯಂತರ ರೂಪಾಯಿ ವೆಚ್ಚದಲ್ಲಿ …

Read More »

ಮಹಿಳೆಯರು ಆರ್ಥಿಕವಾಗಿ ಮುಂದೆ ಬರಬೇಕಾದರೆ ಸರ್ಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು.

ಮೂಡಲಗಿ- ಮಹಿಳೆಯರು ಆರ್ಥಿಕವಾಗಿ ಮುಂದೆ ಬರಬೇಕಾದರೆ ಸರ್ಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಅಂದಾಗ ಮಾತ್ರ ಮಹಿಳೆಯರ ಸ್ವಾವಲಂಬಿ ಬದುಕಿಗೆ ಪೂರಕವಾಗುತ್ತದೆ. ಎಲ್ಲ ಕ್ಷೇತ್ರಗಳಲ್ಲೂ ಆರ್ಥಿಕ ಪ್ರಗತಿ ಸಾಧಿಸಲು ಸಮಾಜದಲ್ಲಿ ಮುಖ್ಯವಾಹಿನಿಗೆ ಬರಬೇಕಾದ ಅಗತ್ಯವಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ಹುಣಶ್ಯಾಳ ಪಿವೈ ಗ್ರಾಮದಲ್ಲಿ ಜರುಗಿದ ಗ್ರಾಮ ಪಂಚಾಯತಿ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಿದ ಎನ್‌ಆರ್‌ಎಂ ಒಕ್ಕೂಟದ ಕೊಠಡಿ ಮತ್ತು ಬಲಭೀಮ ದೇವಸ್ಥಾನದ ಆವರಣದಲ್ಲಿನಿರ್ಮಿಸಿದ ಸಮುದಾಯ ಭವನವನ್ನು ಉದ್ಘಾಟಿಸಿ …

Read More »

ಕುಡಿದ ಮತ್ತಿನಲ್ಲಿ ಬಾರ್ ಮ್ಯಾನೇಜರ್ ಮೇಲೆ ಹಲ್ಲೆ

ಕುಡಿದ ಮತ್ತಿನಲ್ಲಿ ಬಾರ್ ಮ್ಯಾನೇಜರ್ ಮೇಲೆ ಹಲ್ಲೆ ಗಣೇಶೋತ್ಸವದ ಹಿನ್ನೆಲೆಯಲ್ಲಿ ಶನಿವಾರ ಮದ್ಯ ಮಾರಾಟ ನಿಷೇಧ ಇತ್ತು. ಭಾನುವಾರ ಬೆಳಗ್ಗೆಯಿಂದಲೇ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಯೋರ್ವ ಬಾರ್ ಮ್ಯಾನೇಜರ್ ಗೆ ಭೀಕರವಾಗಿ ಹಲ್ಲೆ ಮಾಡಿದ ಪರಿಣಾಮ ಬಾರ್ ಮಾಲೀಕ ಗಂಭೀರವಾಗಿ ಗಾಯಗೊಂಡ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ಕುಡುಕ ಸುನೀಲ್ ಕರಿಕಟ್ಟಿ …

Read More »

ತರಬೇತಿ ವೇಳೆ ಬೋಟ್ ಮುಗುಚಿ ಇಬ್ಬರು ಜೂನಿಯರ್ ಕಮಾಂಡೊಗಳ ಸಾವು‌.

ತರಬೇತಿ ವೇಳೆ ಬೋಟ್ ಮುಗುಚಿ ಇಬ್ಬರು ಜೂನಿಯರ್ ಕಮಾಂಡೊಗಳ ಸಾವು‌. ಚಂದಘಡ ತಾಲೂಕಿನ ಹಾಜಗೋಳಿ ಬಳಿ ನಡೆದ ದುರ್ಘಟನೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಚಂದಘಡ ತಾಲೂಕು. ರಾಜಸ್ಥಾನದ ವಿಜಯಕುಮಾರ್(28)ಪಶ್ಚಿಮ ಬಂಗಾಳದ ದಿವಾಕರ್ ರಾಯ್(26) ಮೃತ ಜೂನಿಯರ್ ಕಮಾಂಡೋಗಳು. ನದಿ ದಾಟುವ ತರಬೇತಿ ನೀಡುತ್ತಿದ್ದ ವೇಳೆ ಬೋಟ್ ಮುಗಿಚಿ ಸಾವು. ಒಟ್ಟು ಆರು ಜನರಿದ್ದ ಬೋಟ್ ನಿಂದ ಈಜಿ ನಾಲ್ವರು ಪ್ರಾಣಾಪಾಯದಿಂದ ಪಾರು. ತಿಲಾರಿ ಡ್ಯಾಂ ಹಿನ್ನೀರಿನಲ್ಲಿ ತರಬೇತಿ ನೀಡುತ್ತಿದ್ದಾಗ ನಡೆದ …

Read More »

ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಬಸ್

ಬೆಳಗಾವಿ: ರಸ್ತೆಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆಯೇ ಸರ್ಕಾರಿ ಬಸ್ ಹರಿದಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಲಗಲಿಯಲ್ಲಿ ನಡೆದಿದೆ. 10 ವರ್ಷದ ಸುನೀಲ್ ಮೃತ ಬಾಲಕ. ಶಾಲೆಗೆ ರಜೆಯಿದ್ದರೂ ವಿದ್ಯಾರ್ಥಿಗಳು ಟ್ಯೂಷನ್ ಕ್ಲಾಸ್ ಗೆ ಬಂದಿದ್ದರು. ಟ್ಯೂಷನ್ ಮುಗಿಸಿಕೊಂಡು ವಿದ್ಯಾರ್ಥಿಗಳು ರಸ್ತೆ ದಾಟಿ ರಸ್ತೆ ಪಕ್ಕದಲ್ಲಿ ನಿಂತಿದ್ದರು. ಈ ವೇಳೆ ಜವರಾಯನಂತೆ ಬಂದ ಬಸ್ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದಿದೆ. ಓರ್ವ ಬಾಲಕ ಸ್ಥಳದಲ್ಲೇ …

Read More »

ರಾಜ್ಯದಲ್ಲಿ ಸತೀಶ್ ಜಾರಕಿಹೊಳಿ ಸಿಎಂ ಆಗಲಿ’

ಬೆಳಗಾವಿ, ಸೆಪ್ಟೆಂಬರ್‌ 08: ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮ ಹಗರಣ ಇಡೀ ಕಾಂಗ್ರೆಸ್‌ ಪಕ್ಷಕ್ಕೆ ತೀವ್ರ ಮುಜುಗರವನ್ನುಂಟು ಮಾಡಿದೆ. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಇರುವಾಗಲೇ ಸಿಎಂ ಸ್ಥಾನಕ್ಕಾಗಿ ಕೈ ನಾಯಕರು ತೀವ್ರ ಪೈಪೋಟಿಯನ್ನ ನಡೆಸಿದ್ದು, ಸತೀಶ್‌ ಜಾರಕಿಹೊಳಿ ಸಿಎಂ ಆಗಲಿ ಎಂದು ಅಭಿಮಾನ ಆರಂಭಿಸಿದ್ದಾರೆ.   ಬೆಳಗಾವಿಯಲ್ಲಿ ಸತೀಶ್ ಜಾರಕಿಹೋಳಿ ಅವರ ಅಭಿಮಾನಿಗಳಿಂದ ಅಭಿಯಾನ ಶುರುವಾಗಿದ್ದು, ಸೋಶಿಯಲ್ ಮೀಡಿಯಾದ ಮಾತ್ರ ಅಲ್ಲ. ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಸ್ಥಾನ …

Read More »

ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸೀನಿಯರ್ ಇದ್ದೀನಿ; ಎಂಬಿ ಪಾಟೀಲ್

ವಿಜಯಪುರ: ರಾಜ್ಯದಲ್ಲಿ ಸಿದ್ದರಾಮಯ್ಯ (Siddaramaiah) ಸಿಎಂ ಆಗಿದ್ದಾರೆ, ಸಿಎಂ ಆಗಿಯೇ ಮುಂದುವರೆಯುತ್ತಾರೆ ಎಂದು ಸಚಿವ ಎಂಬಿ ಪಾಟೀಲ್ (MB Patil) ಹೇಳಿದ್ದಾರೆ. ವಿಜಯಪುರ ಜಿಲ್ಲೆ ‌ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಎಂ ಬಿ ಪಾಟೀಲ್, ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಪಾತ್ರದ ಕುರಿತು ಯಾವುದೇ ಹುರಳಿಲ್ಲ, ಪಾತ್ರವಿಲ್ಲ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರಿಗೆ ಹಾಗಾಗುತ್ತೆ ಹೀಗಾಗುತ್ತೆ ಎಂದು ಯಾರಾದ್ರೂ ತಿಳಿದುಕೊಂಡಿದ್ದರೆ ಅದು ಆಗಲ್ಲ ಎಂದು ಹೇಳಿದರು. ಕಾಂಗ್ರೆಸ್‌ನ …

Read More »

2028ಕ್ಕೆ ಸಿಎಂ ಆಗುವ ತಯಾರಿ ಇದೆ ನಮ್ಮದು. ಅಲ್ಲಿಯವರೆಗೆ ಅಭಿಮಾನಿಗಳು ಕಾಯಬೇಕು ಎಂದು ಸತೀಶ್ ಜಾರಕಿಹೊಳಿ‌

ಬೆಳಗಾವಿ: ಯಾವತ್ತೂ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ಹಕ್ಕು ಸ್ಥಾಪನೆ ಮಾಡಿಲ್ಲ. ಈಗಾಗಲೇ ಅನೇಕರು ಸಿಎಂ ಸ್ಥಾನ ಖಾಲಿ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಇದರಲ್ಲಿ ಗುದ್ದಾಟ, ಕುಸ್ತಿ ಮಾಡುವ ಅವಶ್ಯಕತೆಯಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಹೇಳಿದರು.   ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಎಂ.ಬಿ ಪಾಟೀಲ ಶಿವಾನಂದ ಪಾಟೀಲ, ಆರ್ ವಿ ದೇಶಪಾಂಡೆ ಸೇರಿದಂತೆ ಅನೇಕರು ಈಗಾಗಲೇ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದರು. ಮುಂದಿನ …

Read More »