Breaking News

Monthly Archives: ಸೆಪ್ಟೆಂಬರ್ 2024

ರಾಜ್ಯದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಗಣೇಶ ಚತುರ್ಥಿಯ ( Ganesha Chaturthi) ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ನಾಡಬಂಧುಗಳಿಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಸಂಕಷ್ಟಹರ ಗಣೇಶನು ಬದುಕಲ್ಲಿ ಎದುರಾಗುವ ಸಕಲ ವಿಘ್ನಗಳನ್ನು ಎದುರಿಸುವ ಆತ್ಮಬಲವನ್ನು ನಿಮ್ಮೆಲ್ಲರಲ್ಲೂ ತುಂಬಲಿ ಎಂದು ಹಾರೈಸುತ್ತೇನೆ. ಹಬ್ಬವನ್ನು ಸಡಗರ – ಸಂಭ್ರಮದಿಂದ ಆಚರಿಸೋಣ, ಇದರ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ” ಎಂದು ಟ್ವೀಟ್ ಮಾಡಿದ್ದಾರೆ.

Read More »

ದರ್ಶನ್ ವಿರುದ್ಧ ಪಟ್ಟಣಗೆರೆ ಶೆಡ್ ‘ಮಣ್ಣು’ ಸಹ ಸಾಕ್ಷಿ

ಬೆಂಗಳೂರು, ಸೆಪ್ಟಂಬರ್ 07: ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿರುವ ನಟ ದರ್ಶನ್ ವಿರುದ್ಧ ಒಂದೊಂದೇ ಸಾಕ್ಷ್ಯಗಳು ಬಯಲಾಗುತ್ತಿವೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇತ್ತೀಚೆಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅದರಲ್ಲಿ ನಟ ದರ್ಶನ್ ವಿರುದ್ಧ ಯಾವೆಲ್ಲ ಸಾಕ್ಷ್ಯಗಳು ಸಿಕ್ಕಿವೆ ಎಂಬುದು ಬಹಿರಂಗವಾಗಿದೆ. ಈ ಪೈಕಿ ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಶೇಡ್‌ ಮಣ್ಣು ಸಹ ಪ್ರಮುಖ ಸಾಕ್ಷಿಯಾಗಿದೆ. ಹೌದು, ಶೆಡ್‌ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ …

Read More »

ನೋಡುಗರನ್ನು ಆಕರ್ಷಿಸುತ್ತಿರುವ ವಡೇರಹಟ್ಟಿಯ ಸ್ಮಾರ್ಟ್ ಕ್ಲಾಸ್ ಅಂಗನವಾಡಿ ಕೇಂದ್ರ

ವಿನೂತನ ಪ್ರಯೋಗಕ್ಕೆ ಮುಂದಾದ ಸಿಡಿಪಿಓ ವಾಯ್ಕೆ ಗದಾಡಿಯವರನ್ನು ಅಭಿನಂದಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ವಡೇರಹಟ್ಟಿಯಲ್ಲಿ ನಿರ್ಮಾಣಗೊಂಡಿರುವ ಸ್ಮಾರ್ಟ್ ಕ್ಲಾಸ್ ಅಂಗನವಾಡಿಯು ಇಡೀ ಜಿಲ್ಲೆಯಲ್ಲಿಯೇ ಮಾದರಿಯಾಗಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಇದು ಅಂಗನವಾಡಿ ಕೇಂದ್ರನಾ? ಇಲ್ಲ ಬೇರೇ ಯಾವ ಕಾನ್ವೆಂಟ್ ಶಾಲೆಗೆ ಬಂದಿದ್ವಾ? ಎಂಬ ಪ್ರಶ್ನೆಯು ಸಾರ್ವಜನಿಕರನ್ನು ಸಹಜವಾಗಿ ಕಾಡುತ್ತಿದೆ. ಅಷ್ಟೊಂದು ಖಾಸಗಿ ಶಾಲೆಯ ಕಾನ್ವೆಂಟ್ ಮಾದರಿಯಲ್ಲಿ ಸರ್ಕಾರಿ ಅಂಗನವಾಡಿಯು ನಿರ್ಮಾಣವಾಗಿರುವುದು ಮನಸ್ಸಿಗೆ ಖುಷಿ ತರಿಸಿದೆ ಎಂದು ಶಾಸಕ ಮತ್ತು ಬೆಮ್ಯುಲ್ …

Read More »

ಸೆನ್ಸೆಕ್ಸ್ 1 ಸಾವಿರ ಅಂಕ ಕುಸಿತ, ಹೂಡಿಕೆದಾರರ 5 ಲಕ್ಷ ಕೋಟಿ ರೂ ನಷ್ಟ!

ಮುಂಬೈ: ಭಾರತೀಯ ಷೇರು ಮಾರುಕಟ್ಟೆ ವಾರದ ಕೊನೆಯ ದಿನವಾದ ಶುಕ್ರವಾರ ಒಂದೇ ದಿನ ಭಾರಿ ಕುಸಿತ ಕಂಡಿದ್ದು, ಸೆನ್ಸೆಕ್ಸ್ 1 ಸಾವಿರಕ್ಕೂ ಅಧಿಕ ಅಂಕಗಳ ನಷ್ಟ ಅನುಭವಸಿದ್ದು ಮಾತ್ರವಲ್ಲದೇ ಹೂಡಿಕೆದಾರರ 5 ಲಕ್ಷ ಕೋಟಿ ರೂ ನಷ್ಟವಾಗಿದೆ. ಇಂದು ದಿನದ ವಹಿವಾಟು ಅಂತ್ಯಕ್ಕೆ ಸೆನ್ಸೆಕ್ಸೆ ಬರೊಬ್ಬರಿ 1, 017 ಅಂಕಗಳ ಕುಸಿತ ಕಂಡಿದ್ದು ಆ ಮೂಲಕ ಬರೊಬ್ಬರಿ ಶೇ.1.24ರಷ್ಟು ಕುಸಿತದೊಂದಿಗೆ 81,183 ಅಂಕಗಳಿಗೆ ಕುಸಿದಿದೆ. ಅಂತೆಯೇ ನಿಫ್ಟಿ ಕೂಡ ಶೇ.1.17ರಷ್ಟು ಅಂದರೆ …

Read More »

ಬಿಜೆಪಿ ಸೇರಿದ ಕ್ರಿಕೆಟಿಗ ರವೀಂದ್ರ ಜಡೇಜಾ

ಜಾಮ್‌ನಗರ: ಕ್ರಿಕೆಟಿಗ ರವೀಂದ್ರ ಜಡೇಜಾ ಅವರು ಪ್ರಸ್ತುತ ನಡೆಯುತ್ತಿರುವ ಸದಸ್ಯತ್ವ ಅಭಿಯಾನದಲ್ಲಿ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಸೇರಿದ್ದಾರೆ ಎಂದು ಅವರ ಪತ್ನಿ ಮತ್ತು ಕೇಸರಿ ಪಕ್ಷದ ಶಾಸಕಿ ರಿವಾಬಾ ಜಡೇಜಾ ಅವರು ಗುರುವಾರ ಹೇಳಿದ್ದಾರೆ. ಇಂದು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ರಿವಾಬಾ ಜಡೇಜಾ, ರವೀಂದ್ರ ಜಡೇಜಾ ಬಿಜೆಪಿ ಸದಸ್ಯತ್ವ ಪಡೆದ ಕಾರ್ಡ್‌ನ ಫೋಟೋಗಳನ್ನು “ಸದಾಸ್ಯತ ಅಭಿಯಾನ 2024” ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ …

Read More »

ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಮೇಲೆ ಹರಿದ ಕಾಂಕ್ರಿಟ್ ಮಿಕ್ಸಿಂಗ್ ವಾಹನ; ಸ್ಥಳದಲ್ಲೇ ಸಾವು

ಗದಗ: ಕಾಂಕ್ರಿಟ್ ಮಿಕ್ಸಿಂಗ್ ವಾಹನ ಹರಿದು ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಗದಗ ನಗರದ ಭೂಮರೆಡ್ಡಿ ಸರ್ಕಲ್ ನಲ್ಲಿ ನಡೆದಿದೆ. ರಮೇಶ್ ಡಂಬಳ (42) ಮೃತ ಹೆಡ್ ಕಾನ್ಸ್ ಟೇಬಲ್. ಗಜೇಂದ್ರಗಢ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಮೇಶ್ ಅವರ ಮನೆಯಲ್ಲಿ ನಾಳೆ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಹೂವು-ಹಣ್ಣು, ಪೂಜೆ ಸಾಮಗ್ರಿಗಳೊಂದಿಗೆ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದರು.   ಈ ವೇಳೆ ಕಾಂಕ್ರಿಟ್ …

Read More »

ಯಾವುದೇ ಸಮಯದಲ್ಲೂ ಚುನಾವಣೆ ಬರಬಹುದು ಸಿದ್ಧರಾಗಿ : HD ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ!

ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ತೀವ್ರ ಸಂಕಷ್ಟ ಎದುರಾಗಿದ್ದು, ಕಾನೂನು ಹೋರಾಟ ನಡೆಸುತ್ತಿದ್ದಾರೆ. ಇದೀಗ ಕೇಂದ್ರ ಸಚಿವ HD ಕುಮಾರಸ್ವಾಮಿ ಹೇಳಿಕೆಯು ತೀವ್ರ ಕುತೂಹಲ ಮೂಡಿಸಿದ್ದು, ಯಾವ ಸಮಯದಲ್ಲಾದರೂ ಚುನಾವಣೆ ಬರಬಹುದು. ಎಲ್ಲದಕ್ಕೂ ಸಿದ್ಧರಾಗಿರಿ ಎಂದು ಕರೆ ನೀಡಿದ್ದಾರೆ. ಇಂದು ಶಿವಮೊಗ್ಗದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆ 2028ರಲ್ಲೇ …

Read More »

ಪರಿಶಿಷ್ಟ ವಿದ್ಯಾರ್ಥಿಗಳಿಗೆ ಸಿಗಬೇಕಾದ ಹಾಸಿಗೆ, ದಿಂಬಿನಲ್ಲೂ ಸರ್ಕಾರ ಲೂಟಿ ಹೊಡೆದಿದೆ : ಬಿಜೆಪಿ ಗಂಭೀರ ಆರೋಪ

ಬೆಂಗಳೂರು : ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲಿ ಮೂಲಭೂತ ಸೌಕರ್ಯಗಳಾದ ಹಾಸಿಗೆ, ದಿಂಬು ಕುರಿತಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ನಯಾಪೈಸೆ ಕೂಡ ಅನುದಾನ ನೀಡಿಲ್ಲ. ಹೀಗಾಗಿ ವಿದ್ಯಾರ್ಥಿಗಳಿಗೆ ನೀಡುವ ಹಾಸಿಗೆ ದಿಂಬಿನಲ್ಲೂ ಸರ್ಕಾರ ಲೂಟಿ ಮಾಡಿದೆ ಎಂದು ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಕುರಿದಂತೆ ಟ್ವೀಟ್ ನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿರುವ ಬಿಜೆಪಿ, ಶೋಷಿತ ಸಮುದಾಯವನ್ನು ಚುನಾವಣೆ …

Read More »

ಪ್ರಧಾನಿ ಮೋದಿಗೆ ಪತ್ರ ಬರೆದ ದಿನೇಶ್ ಗುಂಡೂರಾವ್

ಬೆಂಗಳೂರು, ಸೆಪ್ಟೆಂಬರ್‌ 06:ಆರೋಗ್ಯ ವಿಮೆಯ ಮೇಲಿನ ಶೇ 18 ರಷ್ಟು ಜಿ.ಎಸ್.ಟಿಯನ್ನ ಮರು ಪರಿಶೀಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಆರೋಗ್ಯ ಸಚಿವರು, ಸೆಪ್ಟೆಂಬರ್ 9 ರಂದು ಸಭೆ ಸೇರಲಿರುವ GST ಕೌನ್ಸಿಲ್‌ಗೆ ಮಧ್ಯಮ ಮತ್ತು ಕಡಿಮೆ ಆದಾಯದ ಪಾಲಿಸಿದಾರರಿಗೆ ಆರೋಗ್ಯ ವಿಮೆಯ ಮೇಲಿನ 18% ತೆರಿಗೆಯನ್ನು ಮರು ಪರಿಶೀಲಿಸುವಂತೆ ಶಿಫಾರಸು ಮಾಡಲು ಮನವಿ ಮಾಡಿದ್ದಾರೆ.   ಆರೋಗ್ಯ ವಿಮೆ ಮೇಲೂ ಶೇ …

Read More »

ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

ಬಾಗಲಕೋಟೆ: ಗಣೇಶ ಉತ್ಸವದ ರಜೆಗೆಂದು ಊರಿಗೆ ಬಂದಿದ್ದ ಬೆಂಗಳೂರಿನ ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಮೃತಪಟ್ಟ ಘಟನೆ ನಗರದ ಹೆಲಿಪ್ಯಾಡ್ ರಸ್ತೆಯಲ್ಲಿ ಸಂಭವಿಸಿದೆ. ಮೃತಪಟ್ಟರನ್ನು ಬೆಂಗಳೂರಿನ ಸಾಪ್ಟವೇರ್ ಎಂಜಿನಿಯರ್ ರಜನಿ ಒಂದಕುದರಿ (34), ಬಾಗಲಕೋಟೆಯ ಬಿವಿವಿ ಸಂಘದ ದಂತ ವೈದ್ಯಕೀಯ ಕಾಲೇಜಿನ ಉಪನ್ಯಾಸಕಿ ಶೃತಿ ಒಂದಕುದರಿ (32) ಹಾಗೂ ಅಭಿಷೇಕ ದೋತ್ರೆ (20) ಎಂದು ಗುರುತಿಸಲಾಗಿದೆ.   ಬೈಕ್ ನಲ್ಲಿದ್ದ ಇನ್ನೋರ್ವ ತೀವ್ರವಾಗಿ ಗಾಯಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.   …

Read More »