Breaking News

Monthly Archives: ಸೆಪ್ಟೆಂಬರ್ 2024

ರೈತ ಸಂಘಟನೆಯ ಪದಾಧಿಕಾರಿಗಳಿಂದ ದಿಢೀರ್‌ ಪ್ರತಿಭಟನೆ

ಯಮಕನಮರಡಿ: ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್ ಪ್ಲಾಜಾ ಬಳಿ ಸೆ.3ರ ಮಂಗಳವಾರ ರೈತ ಸಂಘಟನೆ ದಿಢೀರ್ ಪ್ರತಿಭಟನೆ‌ ನಡೆಸಿ ರಸ್ತೆ ಮಾಡುವ ಗುತ್ತಿಗೆದಾರ ಹಾಗೂ ಟೋಲ್ ಶುಲ್ಕ ಪಡೆಯುವ ಗುತ್ತಿದಾರರ ವಿರುದ್ದ ಟೋಲ್‌ನ 12 ಗೇಟ್‌ಗಳ ತಡೆದು ಸುಮಾರು ಅರ್ಧ ಗಂಟೆಗೆ ಪ್ರತಿಭಟನೆ ನಡೆಸಿದರು.   ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚುನ್ನಪ್ಪಾ ಪೂಜೇರಿ ಪತ್ರಕರ್ತರೊಂದಿಗೆ ಮಾತನಾಡಿ, ಕಳೆದ ಒಂದುವರೆ ವರ್ಷ ಕಳೆದರೂ …

Read More »

ಆರ್.ವಿ.ದೇಶಪಾಂಡೆ ಹಿರಿಯರು ಅವರು ಆಸೆ ಪಡುವುದರಲ್ಲಿ ತಪ್ಪಿಲ್ಲ

ಬೆಳಗಾವಿ: ಮುಖ್ಯಮಂತ್ರಿಯಾಗುವ ಆಸೆ ಎಲ್ಲರಲ್ಲಿಯೂ ಇದೆ. ಆದರೆ ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಆರ್.ವಿ.ದೇಶಪಾಂಡೆ ಅವರು ಹೈಕಮಾಂಡ್ ಒಪ್ಪಿದರೆ ನಾನು ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆ ಎಂದು ಹೇಳಿಕೆ ನೀಡಿದ್ದು ಅದು ಅವರ ವೈಯಕ್ತಿಕ ಹೇಳಿಕೆ. ಅಲ್ಲದೆ ಅವರು ಕಾಂಗ್ರೆಸ್ ನ ಹಿರಿಯ ಶಾಸಕರಿದ್ದಾರೆ. ಅವರು ಆಸೆ ಪಡುವುದರಲ್ಲಿ ತಪ್ಪಿಲ್ಲ. ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚಿಂತೆ ನಡೆದಿಲ್ಲ. ಹೈಕಮಾಂಡ್ …

Read More »

ಲೇಔಟ್ ಗಳಲ್ಲಿ ಮೂಲ ಸೌಕರ್ಯಗಳ ಕೊರತೆ: ಸೂಕ್ತ ಕ್ರಮಕ್ಕೆ ಆಗ್ರಹ

ರಬಕವಿ-ಬನಹಟ್ಟಿ: ರಬಕವಿ ಬನಹಟ್ಟಿ ನಗರಸಭೆಯ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಲೇಔಟ್ ಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದ್ದು ಲೇಔಟ್ ಗಳ ಮಾಲೀಕರು ನಗರಸಭೆಯ ಯಾವುದೇ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ ಮತ್ತು ಲೇಔಟ್ ಗಳಲ್ಲಿ ಕಳಪೆ ಕಾಮಗಾರಿ ಮತ್ತು ಸುಳ್ಳು ಮಾಹಿತಿಯನ್ನು ನಗರಸಭೆಗೆ ನೀಡುತ್ತಿದ್ದಾರೆ. ಅಂಥವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸದಸ್ಯರು ನಗರಸಭೆಯ ಅಧಿಕಾರಿಗಳನ್ನು ಆಗ್ರಹಿಸಿದರು. ಮುಂದಿನ ದಿನಗಳಲ್ಲಿ ಇಂಥ ಲೇಔಟ್ ಗಳನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ನಗರಸಭೆಯ ಸಾಮಾನ್ಯ ಸಭೆಯ ಅನುಮತಿಯನ್ನು …

Read More »

CM ಕುರ್ಚಿ ಅಲ್ಲಾಡುತ್ತಿದೆ ಎನ್ನುವ ಭಾವನೆ ಕಾಂಗ್ರೆಸ್ ನಲ್ಲಿ ಸೃಷ್ಟಿಯಾಗಿದೆ: ಬೊಮ್ಮಾಯಿ

ಗದಗ: ಕಾಂಗ್ರೆಸ್ ನಲ್ಲಿ ಆಂತರಿಕವಾಗಿ ಗೊಂದಲ ಸೃಷ್ಟಿಯಾಗಿದೆ. ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡುತ್ತಿದೆ ಅನ್ನುವ ಭಾವನೆ ಸೃಷ್ಟಿಯಾಗಿದೆ. ಸಿಎಂ ಕುರ್ಚಿ ಮೇಲೆ ಕೂರಬೇಕೆಂಬ ಆಸೆ ಈಗ ಹೊರ ಹೊಮ್ಮುತ್ತಿದೆ. ಇದು ಸಹಜ ಪ್ರಕ್ರಿಯೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.   ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಸರಿ ಇದೆ ಅಂತ ಹೇಳುತ್ತಲೇ ಒಳಗಡೆಯಿಂದ ದೋಣಿಗೆ ತೂತು ಕೊರೆಯುವುದು ರಾಜಕಾರಣ. ಕರ್ನಾಟಕದ ಇತಿಹಾಸ ನೋಡಿದಾಗ ಕಾಂಗ್ರೆಸ್ …

Read More »

ಚೇರ್‌ ಆಯಿತು, ಈಗ ತಮ್ಮ ಸೆಲ್ ನಲ್ಲಿ ಟಿವಿ ಬೇಕೆಂದು ಡಿಮ್ಯಾಂಡ್‌ ಮಾಡಿದ ದಾಸ

ಚೇರ್‌ ಆಯಿತು, ಈಗ ತಮ್ಮ ಸೆಲ್ ನಲ್ಲಿ ಟಿವಿ ಬೇಕೆಂದು ಡಿಮ್ಯಾಂಡ್‌ ಮಾಡಿದ ದಾಸ   ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ಜೈಲುಪಾಲಾಗಿರುವ ದರ್ಶನ್‌ (Darshan) ಬಳ್ಳಾರಿ ಜೈಲಿಗೆ (Ballari jail) ಸೇರಿದ ಬಳಿಕ ಅಲ್ಲೂ ಕೂಡ ಜೈಲು ಅಧಿಕಾರಿಗಳ ಬಳಿ ಕೆಲ ಬೇಡಿಕೆಗಳನ್ನಿಟ್ಟಿದ್ದಾರೆ ಎಂದು ವರದಿಯಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದ(Parappana Agrahara Prison) ಸಮಯದಲ್ಲಿ ಬಹುತೇಕ ಎಲ್ಲದಕ್ಕೂ ಹೊಂದಿಕೊಂಡಿದ್ದ ದರ್ಶನ್‌ ಬಳ್ಳಾರಿ ಜೈಲಿಗೆ ಶಿಫ್ಟ್‌ ಆದ ಬಳಿಕ ಬೆನ್ನುನೋವು …

Read More »

ರಾಜ್ಯ ಸರ್ಕಾರದಿಂದ ಹಾಲು ಉತ್ಪಾದಕರಿಗೆ ಬೆಲೆ ಕಡಿತದ ಗಿಫ್ಟ್:‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶ ಹಬ್ಬದ ವೇಳೆ ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಬೆಂಬಲ ಬೆಲೆಯ ಗಿಫ್ಟ್ ಕೊಟ್ಟರೆ, ರಾಜ್ಯ ಸರ್ಕಾರ ಹಾಲಿನ ಬೆಲೆ ಕಡಿತದ ಕೊಡುಗೆ ಕೊಟ್ಟಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ಬೆಲೆ ಕುಸಿತದ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯ ಖರೀದಿಸುತ್ತಿದೆ. ಆದರೆ, ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಈಗಿರುವ ಬೆಲೆಯನ್ನೂ ಕಡಿತಗೊಳಿಸಿ ಹಾಲು ಖರೀದಿಸುತ್ತಿದೆ ಎಂದು ಆಕ್ರೋಶ ಹೊರ …

Read More »

ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ಮಹಿಳೆಯ ಮೇಲೆ ದೌರ್ಜನ್ಯಕ್ಕೆ ಮುಂದಾದ ನೌಕರ; ಬಂಧನ

ಹುಬ್ಬಳ್ಳಿ: ರೈಲ್ವೆ ಇಲಾಖೆಯಲ್ಲಿ ಕೆಲಸ ‌ಕೊಡಿಸುವುದಾಗಿ ನಂಬಿಸಿ ಇಲಾಖೆಯ ನೌಕರನೊಬ್ಬ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಮುಂದಾಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ನದೀಂ ಎಂಬಾತನನ್ನು ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನದೀಂ ನೈಋತ್ಯ ರೈಲ್ವೆಯ ಮುಖ್ಯ ಕಚೇರಿಯ ಆರ್ಥಿಕ ವಿಭಾಗದಲ್ಲಿ ಕ್ಲರ್ಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾನೆ. ತನಗೆ ರೈಲ್ವೆ ನೇಮಕಾತಿ ವಿಭಾಗದಲ್ಲಿ ಪರಿಚಿತರಿದ್ದಾರೆ. ಕೆಲಸ ಕೊಡಿಸುವೆ, ಅದಕ್ಕಾಗಿ ಹಣ ಕೊಡುವಂತೆ ಹೇಳಿದ್ದಾನೆ. ಕೊಡಲು ಆಗದಿದ್ದರೆ ನಮ್ಮ ಹಿರಿಯ ಅಧಿಕಾರಿಗಳನ್ನು …

Read More »

ಪ.ಪಂ ಸದಸ್ಯ ನಾಗರಾಜ ಅಪಹರಣ: ತಾಯಿ ಆಸ್ಪತ್ರೆಗೆ ದಾಖಲು

ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಇಲ್ಲಿನ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ, ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅಪಹರಣ ಪ್ರಕರಣದಿಂದ, ತೀವ್ರ ನೊಂದು ಅನಾರೋಗ್ಯಕ್ಕೆ ಈಡಾಗಿರುವ ಅವರ ತಾಯಿಯನ್ನು ಧಾರವಾಡ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.   ಹೃದಯ ಸಂಬಂಧಿ ಕಾಯಿಲೆಯಿಂದ ಅವರು ಬಳಲುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸಾರ್ವಜನಿಕ ವೇದಿಕೆಯಲ್ಲಿ ಪುತ್ರನ ಅಪಹರಣ ಪ್ರಕರಣದಿಂದ ನೊಂದು ತಂದೆ ದುಃಖಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು …

Read More »

ದರ್ಶನ್‌ ವಿಚಾರದಲ್ಲಿ ಸರ್ಕಾರದ ಮಧ್ಯಸ್ಥಿಕೆ ಇಲ್ಲ-ಗೃಹ ಸಚಿವ

ತುಮಕೂರು, ಸೆಪ್ಟೆಂಬರ್‌ 03: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ನನ್ನು ಇತ್ತೀಚಿಗೆ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಕೇಂದ್ರ ಕಾರಾಗ್ರಹಕ್ಕೆ ಸ್ಥಳಾಂತರ ಮಾಡಲಾಗಿದೆ. ಇದೀಗ ಬಳ್ಳಾರಿ ಜೈಲಿನಲ್ಲಿ ದರ್ಶನ್‌ಗೆ ಅಧಿಕಾರಿಗಳು ಸರ್ಜಿಕಲ್ ಚೇರ್ ನೀಡಿರುವ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾತನಾಡಿದ್ದು, ಅದು ನಮ್ಮ ಕಾರಾಗೃಹ ಇಲಾಖೆಗೆ ಬಿಟ್ಟಿರುವ ವಿಚಾರ. ನಾವ್ಯಾರು ಹಾಗೂ ರಾಜ್ಯ ಸರ್ಕಾರ ಇದರಲ್ಲಿ ಮಧ್ಯಸ್ಥಿಕೆ ವಹಿಸಲ್ಲ ಎಂದು ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ …

Read More »

ದರ್ಶನ್‌ ತಪ್ಪು ಮಾಡಿ ಜೈಲಿಗೆ ಹೋಗಿದ್ದಾರೆ : ಜಮೀರ್

ಹಾವೇರಿ,ಸೆ.3- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ತಪ್ಪು ಮಾಡಿದ ಕಾರಣಕ್ಕಾಗಿ ಜೈಲಿಗೆ ಹೋಗಿದ್ದಾರೆ. ಇದರಲ್ಲಿ ನನ್ನ ಹೆಸರನ್ನು ಏಕೆ ಥಳಕು ಹಾಕಲಾಗುತ್ತಿದೆ ಎಂದು ವಸತಿ ಸಚಿವ ಜಮೀರ್‌ ಅಹಮದ್‌ಖಾನ್‌ ಆಕ್ಷೇಪ ವ್ಯಕ್ತಪಡಿಸಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್‌ ನನ್ನ ಆತೀಯ ಸ್ನೇಹಿತರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಕಾನೂನು ಪ್ರಕಾರ, ಏನು ನಡೆಯಬೇಕೋ ಅದೇ ನಡೆಯುತ್ತದೆ. ಮಾಧ್ಯಮಗಳು ಉದ್ದೇಶಪೂರಕವಾಗಿ ನನ್ನ ಹೆಸರನ್ನು ಪ್ರಸ್ತಾಪ ಮಾಡುತ್ತಿದೆ. ಇದಕ್ಕೂ, ನನಗೂ …

Read More »