ಬೆಳಗಾವಿ, ಸೆಪ್ಟೆಂಬರ್ 28: ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದಸಚಿವೆ ಲಕ್ಷ್ಮೀ ಹೆಬ್ಬಾಳಕರ್ , ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದ್ದು, ಇದಕ್ಕಾಗಿ ರಾಜಭವನಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. 6 ಸಾವಿರ …
Read More »Monthly Archives: ಸೆಪ್ಟೆಂಬರ್ 2024
ನಾಗಮಂಗಲ ಗಲಭೆ ಪ್ರಕರಣ: ಎಲ್ಲಾ 55 ಆರೋಪಿಗಳಿಗೆ ಜಾಮೀನು ಮಂಜೂರು
ಮಂಡ್ಯ: ನಾಗಮಂಗಲ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಎಲ್ಲಾ 55 ಆರೋಪಿಗಳಿಗೆ ಜಾಮೀನು ಮಂಜೂರು ಮಡಿ ಮಂಡ್ಯ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಯಾಲಯ ಆದೇಶ ಹೊರಡಿಸಿದೆ. ನ್ಯಾಯಾಂಗ ಬಂಧನದಲ್ಲಿದ್ದ ಎರಡೂ ಕೋಮಿನ ಒಟ್ಟು 55 ಆರೋಪಿಗಳಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ತಲಾ ಒಂದು ಲಕ್ಷ ಮೌಲ್ಯದ ಬಾಂಡ್, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ಪ್ರತಿ ಭಾನುವರ ಠಾಣೆಗೆ ತೆರಳಿ ಸಹಿ, ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗದಂತೆ ಷರತ್ತು ವಿಧಿಸಿ, ಜಾಮೀನು …
Read More »ಬಿಜೆಪಿಗೆ ಈಶ್ವರಪ್ಪ ಕರೆತರಲು ಯತ್ನಿಸಿಲ್ಲ: ರಮೇಶ ಜಾರಕಿಹೊಳಿ
ಬೆಳಗಾವಿ: ‘ನಾನು ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿ ಕೆ.ಎಸ್.ಈಶ್ವರಪ್ಪ ಅವರನ್ನು ಮತ್ತೆ ಬಿಜೆಪಿಗೆ ಕರೆತರಲು ಯತ್ನಿಸುತ್ತಿದ್ದೇವೆ ಎಂಬುದು ಸುಳ್ಳು. ಈಶ್ವರಪ್ಪ ಅವರನ್ನು ಪಕ್ಷದಿಂದ ಹೊರಹಾಕಿದ್ದು ರಾಷ್ಟ್ರೀಯ ನಾಯಕರು. ಸೇರಿಸಿಕೊಳ್ಳಬೇಕಾದವರೂ ಅವರೇ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ‘ಈಶ್ವರಪ್ಪ ಅವರ ಬೆಂಗಳೂರು ನಿವಾಸದಲ್ಲಿ ನಾವೆಲ್ಲ ಸೇರಿದ್ದು ನಿಜ. ಆದರೆ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಮತ್ತು ಕುರುಬ ಸಮಾಜಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿಯ ಬೇಡಿಕೆ ಕುರಿತು …
Read More »ಸೈಬರ್ ಅಪರಾಧ ತಡೆಗೆ ಯುವಕರ ತಂಡ; ಜನರಿಗೂ ಡಿಜಿಟಲ್ ಸಾಕ್ಷರತೆ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಜಿಲ್ಲೆಯಲ್ಲಿ ಸೈಬರ್ ಅಪರಾಧಗಳನ್ನು ತಡೆಯಲು ಹಾಗೂ ಜನರನ್ನು ಜಾಗೃತಗೊಳಿಸಲು ಯುವಕರ ತಂಡವೊಂದು ನಾಲ್ಕು ವರ್ಷಗಳಿಂದ ಸದ್ದಿಲ್ಲದೇ ಕೆಲಸ ಮಾಡುತ್ತಿದೆ. ‘ಸೈಬರ್ ಕ್ರೈಂ ಅವೇರ್‌ನೆಸ್ ಟೀಮ್ ಚಿಕ್ಕೋಡಿ’ ಎಂಬ ಹೆಸರಿನಲ್ಲಿ ಎಂಟು ಯುವಕರು ತಂಡ ಉಚಿತವಾಗಿ ಡಿಜಿಟಲ್ ಸಾಕ್ಷರತೆ ನಡೆಸಿದೆ. 2020ರಲ್ಲಿ ರಚನೆಯಾದ ತಂಡವು ಈವರೆಗೆ 3,700ಕ್ಕೂ ಹೆಚ್ಚು ಸೈಬರ್ ವಂಚನೆ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸ್ ಇಲಾಖೆಗೆ ನೆರವಾಗಿದೆ. 2,500 ‘ಲೋನ್ ಆಯಪ್’ ವಂಚನೆ ಪ್ರಕರಣ, 1,000 ವಿಡಿಯೊ …
Read More »ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ದಾಸನಹಟ್ಟಿ ಗ್ರಾಮದ ಶ್ರೀ ಬಂಡೆಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …
Read More »ಭೂಮಿಯಿಂದ ‘ವಿಷಜಂತು’ ಹೊರಬಂದು ‘ಮನುಕುಲ’ ನಾಶ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!
ಧಾರವಾಡ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದ ಕೋಡಿಮಠ ಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಇಂದು ಕೂಡ ಮತ್ತೊಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಭೂಮಿಯಿಂದ ಹೊರಬುರುವ ವಿಷಜಂತುಗಳು ಮನುಕುಲ ನಾಶ ಮಾಡಲಿವೆ ಎಂದು ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭಯಾನಕ ಭವಿಷ್ಯವನ್ನು ನುಡಿದಿದ್ದಾರೆ. ಧಾರವಾಡದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಭೂಮಿಯಿಂದ ವಿಷ …
Read More »ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಂಕಷ್ಟ: FIR ದಾಖಲಿಸುವಂತೆ ಕೋರ್ಟ್ ಸೂಚನೆ
ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ. ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲು ಮಾಡುವಂತೆ ತಿಲಕನಗರ ಪೊಲೀಸರಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಈ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ಮುಂದೂಡಿದೆ. ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ …
Read More »ನಾನು ಸಿಎಂ ಆದರೆ ಪೊಲೀಸರಿಗೆ AK47 ಗನ್ ಬಳಕೆಗೆ ಅನುಮತಿ ಕೊಡುತ್ತೇನೆ: ಯತ್ನಾಳ್ ಹೇಳಿಕೆ
ಬೆಳಗಾವಿ: ನಾನು ಮುಖ್ಯಮಂತ್ರಿಯಾದರೆ ಪೊಲೀಸರಿಗೆ AK47 ಗನ್ ಬಳಕೆಗೆ ಅನುಮತಿ ಕೊಡುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ನಾನು ಸಿಎಂ ಆದ್ರೆ ಪೊಲಿಸರಿಗೆ AK47 ಗನ್ ಗೆ ಅನುಮತಿ ಕೊಡುತ್ತೇನೆ. ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವ ಮೊದಲೇ ಫೈರಿಂಗ್ ಮಾಡುತ್ತೇವೆ ಎಂದು ಹೇಳಿದ್ದಾರೆ. ನಮ್ಮ ಕೈಗೆ ಅಧಿಕಾರ ಕೊಟ್ಟು ನೋಡಿ. ಅಲ್ಲಿ ಯೋಗಿ, ಇಲ್ಲಿ ನಾವು. ಮುಂದಿನ ಬಾರಿ …
Read More »ಸಿಎಂ ತಪ್ಪು ಮಾಡಿಲ್ಲ, ಇದೊಂದು ಷಡ್ಯಂತ್ರ: ಸಿದ್ದು ಬೆನ್ನಿಗೆ ನಿಂತ ‘ಕೈ’ ಪಡೆ
ಬೆಂಗಳೂರು: ಮುಡಾ ಹಗರಣ ಪ್ರಕರಣದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಹೊರತಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಆದರೆ, ತನಿಖೆಯ ಭಾಗವಾಗಿ ಎಫ್‌ಐಆರ್ ದಾಖಲಾಗಿದ್ದೇ ಆದರೆ, ಈ ಬೆಂಬಲ ಇದೇ ರೀತಿ ಮುಂದುವರೆಯುತ್ತದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಹಂತದಲ್ಲಿ ಯಾವುದೇ ಬದಲಾವಣೆಗೆ ಹೈಕಮಾಂಡ್ ಸಿದ್ಧವಾಗಿಲ್ಲ. ಬದಲಾವಣೆಗೆ ಮುಂದಾದರೆ ಇದು ಪಕ್ಷದ ವರ್ಚಸ್ಸಿನ ಮೇಲೆ ಪರಿಣಾಮ ಬೀರುತ್ತದೆ ಎಂದು …
Read More »ದ್ರಾಮಯ್ಯ ಚಿಲ್ಲರೆ ರಾಜಕಾರಣಿಯಲ್ಲ, ಗೌರವದಿಂದ ರಾಜೀನಾಮೆ ಕೊಡಲಿ-ಯತ್ನಾಳ್
ಬೆಳಗಾವಿ : ಚಿಲ್ಲರೆ ರಾಜಕಾರಣಿಗಳ ರೀತಿ ನೀವು ಮಾಡದೇ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂದು ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದರು. ಮುಡಾ ಹಗರಣ ಸಂಬಂಧ ನ್ಯಾಯಾಲಯದ ಆದೇಶದಂತೆ ಇಂದು ಸಿಎಂ ವಿರುದ್ಧ FIR ದಾಖಲಾಗಿದ್ದು, ಈ ಬಗ್ಗೆ ಬೈಲಹೊಂಗಲದಲ್ಲಿ ಪ್ರತಿಕ್ರಿಯೆ ನೀಡಿರುವ ಯತ್ನಾಳ್, ಸಿದ್ದರಾಮಯ್ಯ ಅವರೇ.. ನಿಮ್ಮ ಸುತ್ತಮುತ್ತಲಿನ ಪಟಾಲಂನಿಂದ ನಿಮಗೆ ತಪ್ಪು ಸಲಹೆ ನೀಡಲಾಗಿದೆ. ನಿಮ್ಮ ಹೆಸರು ಉಳಿಯಬೇಕು …
Read More »