ಜಮಖಂಡಿ: ಶಹರ ಠಾಣೆ ಪಿಎಸ್‌ಐ ಅನೀಲ ಕುಂಬಾರ ಹೆಸರಿನಲ್ಲಿ ಐದು ನಕಲಿ ಫೇಸ್‌ಬುಕ್ ಖಾತೆ ಮತ್ತು ಒಂದು ಇನ್‌ಸ್ಟಾಗ್ರಾಂ ಖಾತೆ ತೆರೆದ ಆರೋಪಿಯನ್ನು ಬಂಧಿಸಲಾಗಿದೆ. ಪಿಎಸ್‌ಐ ಸಮವಸ್ತ್ರದ ಮೇಲಿನ ಹಾಗೂ ಇನ್ನಿತರ ಚಿತ್ರಗಳನ್ನು ಬಳಸಿಕೊಂಡು ರಾಜಕೀಯ ಮುಖಂಡರಿಗೆ ಹಾಗೂ ಮಹಿಳೆಯರಿಗೆ ಸಂದೇಶ ಕಳುಹಿಸಿ ವಂಚನೆ ಮಾಡುತ್ತಿದ್ದು ಹಾಗೂ ಹಣ ಬೇಡಿಕೆ ಇಡುತ್ತಿರುವ ಬಗ್ಗೆ ಮಾಹಿತಿ ತಿಳಿದಾಗ ಪಿಎಸ್‌ಐ ಅನೀಲ ಕುಂಬಾರ ಬಾಗಲಕೋಟೆ ಸಿಇಎನ್ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. …
Read More »Monthly Archives: ಅಕ್ಟೋಬರ್ 2024
ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 50 ಸಾವಿರದಿಂದ 1 ಲಕ್ಷಕ್ಕೆ ಏರಿಕೆ: ಸಚಿವ ಶಿವರಾಜ ತಂಗಡಗಿ ಘೋಷಣೆ
ಬೆಂಗಳೂರು: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ ಐವತ್ತು ಸಾವಿರದಿಂದ ಒಂದು ಲಕ್ಷಕ್ಕೆ ಏರಿಕೆ ಮಾಡುವುದಾಗಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ. ಕರ್ನಾಟಕ ಸಂಭ್ರಮ 50 ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಐವತ್ತು ಮಹಿಳಾ ಸಾಧಕಿಯರು ಹಾಗೂ 50ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಿದ್ದು ಪ್ರಶಸ್ತಿ ಮೊತ್ತವನ್ನು 50,000 ಎಂದು ತಿಳಿಸಲಾಗಿತ್ತು ಎಂದಿದ್ದಾರೆ. ಇದೊಂದು ಐತಿಹಾಸಿಕ ಸಂದರ್ಭ ವಾಗಿರುವುದರಿಂದ ಈ …
Read More »ಪಟಾಕಿ ಸಾಗಿಸುತ್ತಿದ್ದ ವೇಳೆ Onion Bomb ಸ್ಫೋಟಗೊಂಡು ಓರ್ವ ಸಾವು, ಆರು ಮಂದಿಗೆ ಗಾಯ
ಅಮರಾವತಿ: ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದ್ದು, ಪಟಾಕಿ ಸಂಬಂಧಿತ ಅವಘಡಗಳು ವರ್ಷ ಕಳೆದಂತೆ ಹೆಚ್ಚಾಗುತ್ತಿವೆ. ಇದೀಗ ಆಂಧ್ರಪ್ರದೇಶ ಏಳೂರಿನಲ್ಲಿ ಈರುಳ್ಳಿ ಬಾಂಬ್ (Onion Bomb) ಪಟಾಕಿ ಸ್ಪೋಟಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋ ನೋಡುವುದಾದರೆ ಕಿರಿದಾದ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳು ಸ್ಕೂಟರ್ನಲ್ಲಿ ಪಟಾಕಿ ತುಂಬಿರುವ ಚೀಲವನ್ನು ಸಾಗಿಸುತ್ತಿರುವುದನ್ನು ನೋಡಬಹುದಾಗಿದೆ. ರಸ್ತೆ …
Read More »ಕರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ ಎರಡು ಪಟ್ಟು ಏರಿಕೆ
ಬೆಂಗಳೂರು, ಅಕ್ಟೋಬರ್ 31: ಕರ್ನಾಟಕ 50ನೇ ವರ್ಷದ ಸಂಭ್ರಮಾಚದರಣೆಯಲ್ಲಿದೆ. ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ 50 ಮಹಿಳಾ ಸಾಧಕಿಯರು ಹಾಗೂ 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಿದೆ. ಇದೀಗ ಅದರ ಮೊತ್ತವನ್ನು ಹೆಚ್ಚಿಸಿದೆ. ನವೆಂಬರ್ 1ರಂದು ನಡೆಯಲಿರುವ ಕನ್ನಡೋತ್ಸವ ಸಂಭ್ರಮಾಚರಣೆಯಲ್ಲಿ ಈ ಸುವರ್ಣ ಮಹೋತ್ಸವ ಪ್ರಶಸ್ತಿ ನೀಡಿ ಸಾಧಕರನ್ನು ಗೌರವಿಸಲಾಗಿತ್ತು. ಈ ಪ್ರಶಸ್ತಿಯ ಮೊತ್ತವನ್ನು 50,000 ಎಂದು ಮೊದಲು …
Read More »ಎಚ್.ಕೆ. ಪಾಟೀಲ ಜಿಲ್ಲಾ ಪ್ರವಾಸ
ಗದಗ: ಸಚಿವ ಡಾ.ಎಚ್.ಕೆ. ಪಾಟೀಲ ಶುಕ್ರವಾರ ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಬೆಳಿಗ್ಗೆ 7.45ಕ್ಕೆ ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಕನ್ನಡ ತಾಯಿ ಭುವನೇಶ್ವರಿಯ ಪುತ್ಥಳಿಯ ಮೆರವಣಿಗೆಗೆ ಚಾಲನೆ ನೀಡುವರು. ಬೆಳಿಗ್ಗೆ 8.30ಕ್ಕೆ ಬೆಟಗೇರಿ ತೆಂಗಿನಕಾಯಿ ಬಜಾರ್‌ನಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 9ಕ್ಕೆ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ನಡೆಯುವ ಕರ್ನಾಟಕ ರಾಜ್ಯೋತ್ಸವದಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸುವರು. ಮಧ್ಯಾಹ್ನ 12ಕ್ಕೆ …
Read More »ಅಕ್ರಮ ಗಾಂಜಾ ಮಾರಾಟ: ಆರೋಪಿ ಬಂಧನ
ನರಗುಂದ: ತಾಲ್ಲೂಕಿನ ಹದಲಿ ಕ್ರಾಸ್ ಬಳಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಹದಲಿ ಗ್ರಾಮದ ದಾವಲಸಾಬ ನರಗುಂದ ಎಂಬ ಆರೋಪಿಯಿಂದ ₹ 5,400 ಮೌಲ್ಯದ 131 ಗ್ರಾಂ ಒಣ ಗಾಂಜಾ ಇರುವ ಸಣ್ಣ ಸಣ್ಣ ಪ್ಯಾಕೆಟ್‌ಗಳನ್ನು ಹಾಗೂ ₹ 20 ಸಾವಿರ ಮೌಲ್ಯದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ‘ಅಬಕಾರಿ ಡಿಸಿ ಲಕ್ಷ್ಮಿನಾಯಕ ಅವರ ಮಾರ್ಗದರ್ಶನ ಮತ್ತು ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಲಾಗಿದ್ದು, …
Read More »ನದಿಯಲ್ಲಿ ಮುಳುಗಿ ಇಬ್ಬರ ಸಾವು
ಹರಿಹರ: ದೀಪಾವಳಿ ಅಮಾವಾಸ್ಯೆ ಪೂಜೆಯ ಅಂಗವಾಗಿ ವಾಹನ ತೊಳೆಯಲು ತೆರಳಿದ್ದ ಇಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಗರದ ಹೊರವಲಯ ಗುತ್ತೂರು ಬಳಿ ಗುರುವಾರ ನಡೆದಿದೆ. ರೈತ ಅಣ್ಣಪ್ಪ ಪಿ. ಗಿಡ್ಡಬಸಪ್ಪರ್ (46) ಮತ್ತು ಇವರ ಅಣ್ಣನ ಮಗ ಪ್ರಶಾಂತ್ ಪಿ. ಗಿಡ್ಡಬಸಪ್ಪರ್ (15) ಮೃತಪಟ್ಟವರು. ಪ್ರಶಾಂತ್ ಸೇಂಟ್ ಮೇರಿಸ್ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದಾನೆ. ಅಣ್ಣಪ್ಪ ಅವರು ವಾಹನವನ್ನು ತೊಳೆಯಲು ಗ್ರಾಮಕ್ಕೆ ಸಮೀಪದ ನದಿಗೆ ಬೆಳಿಗ್ಗೆ ತೆರಳಿದ್ದರು. ತಮ್ಮ …
Read More »ನರಕ ಚತುರ್ದಶಿ; ಲಕ್ಷ್ಮಿ ಪೂಜೆ ಸಂಭ್ರಮ
ಹುಬ್ಬಳ್ಳಿ: ನಗರದೆಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಕಳೆಗಟ್ಟಿದ್ದು, ಗುರುವಾರ ನಗರದ ವಿವಿಧೆಡೆ ನರಕ ಚತುರ್ದಶಿ ಹಾಗೂ ಲಕ್ಷ್ಮಿ ಪೂಜೆಯನ್ನು ಸಂಭ್ರಮದಿಂದ ನೆರವೇರಿಸಲಾಯಿತು. ಹಬ್ಬದ ಪ್ರಯುಕ್ತ ಬೆಳಿಗ್ಗೆಯೇ ಮನೆ ಎದುರು ಶುಚಿಗೊಳಿಸಿ ರಂಗೋಲಿ ಹಾಕಿ, ಬಾಗಿಲಿಗೆ ತಳಿರು ತೋರಣ ಕಟ್ಟಿದ್ದರು. ಸಂಜೆ ಮನೆ ಮುಂದೆ, ತುಳಸಿಕಟ್ಟೆ ಎದುರು ದೀಪ ಹಚ್ಚಿ ಜನರು ಸಂಭ್ರಮಿಸಿದರು. ಲಕ್ಷ್ಮಿ ಪೂಜೆ ಅಂಗವಾಗಿ ಕೆಲವು ವ್ಯಾಪಾರಿಗಳು ಅಂಗಡಿಗಳನ್ನು ಬಗೆಬಗೆಯ ವಿದ್ಯುತ್ ದೀಪಗಳಿಂದ ಅಲಂಕರಿಸಿ, ಸಂಜೆ ವೇಳೆಗೆ ಪೂಜೆ …
Read More »ಸುವರ್ಣ ರಾಜ್ಯ ಪ್ರಶಸ್ತಿಗೆ ಚಲವಾದಿ ಆಯ್ಕೆ
ಖಾನಾಪುರ: ಕರ್ನಾಟಕ ಸಂಭ್ರಮ ಸುವರ್ಣ ಮಹೋತ್ಸವ ಅಭಿಯಾನದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಘೋಷಿಸಿದ ರಾಜ್ಯ ಪ್ರಶಸ್ತಿಗೆ ತಾಲ್ಲೂಕಿನ ಮಂಗೇನಕೊಪ್ಪ ಗ್ರಾಮದ ನಿವಾಸಿ, ನಿವೃತ್ತ ಅರಣ್ಯ ಅಧಿಕಾರಿ ಎಸ್.ಎಂ ಚಲವಾದಿ ಆಯ್ಕೆಯಾಗಿದ್ದಾರೆ. ಚಲವಾದಿಯವರು ಮೂರೂವರೆ ದಶಕ ಅರಣ್ಯ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಹೆಚ್ಚುವರಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಯಿಂದ ನಿವೃತ್ತಿ ಹೊಂದಿದ್ದಾರೆ. ನಿವೃತ್ತಿಯ ಬಳಿಕ ಅರಣ್ಯ ಸಂರಕ್ಷಣೆ, ಪರಿಸರ ರಕ್ಷಣೆಯ ಕುರಿತು ಕಾಳಜಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. …
Read More »ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ
ಉಡುಪಿ: 2023ರ ರಾಜ್ಯ ವಿಧಾನಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷ (Congress Party) ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆ (Shakti Scheme) ಕೂಡ ಒಂದಾಗಿದ್ದು, ರಾಜ್ಯಾದ್ಯಂತ ಈ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ದೊರೆಯುತ್ತಿದೆ. ಯೋಜನೆ ಜಾರಿಯಾಗಿ ಒಂದು ವರ್ಷಕ್ಕೂ ಅಧಿಕ ಕಾಲಗಳಾಗಿದ್ದು, ಮಹಿಳೆಯರು ಉಚಿತ ಪ್ರಯಾಣದ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ನಿಲ್ಲಿಸುವುದಾಗಿ ಪರೋಕ್ಷ ಹೇಳಿಕೆ ನೀಡಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ (Dk Shivakumar) …
Read More »