Breaking News

Daily Archives: ಅಕ್ಟೋಬರ್ 3, 2024

ರಾಜಕಾರಣಿಗಳ ಸೆಕ್ಸ್‌ ವಿಡಿಯೋ & ಫೋಟೋಸ್ SITಗೆ ಕೊಟ್ಟ ಸಂತ್ರಸ್ತೆ

ಬೆಂಗಳೂರು, ಅಕ್ಟೋಬರ್ 03: ಬೆಂಗಳೂರಿನ ಆರ್‌.ಆರ್‌ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಬೆದರಿಕೆ, ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್ ಆರೋಪದ ಮೇಲೆ ದೂರು ದಾಖಲಾಗಿವೆ. ಶಾಸಕರು ಮಹಿಳೆಯನ್ನು ಹನಿಟ್ರ್ಯಾಪ್‌ಗೆ ಬಳಸಿದ್ದಾರೆಂಬ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕರ ಮೇಲೆ ದೂರು ನೀಡಿದ್ದ ದೂರುದಾರೆ ಸಂತ್ರಸ್ತೆಯೇ ಇದೀಗ ತನಿಖಾಧಿಕಾರಿಗಳ ಮುಂದೆ ಕೆಲವು ರಾಜಕಾರಣಿಗಳ ಬಂಡವಾಳ ಬಿಚ್ಚಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೌದು, ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ …

Read More »

ರಸ್ತೆಯಲ್ಲಿ ಉಗುಳುವುದನ್ನು ತಡೆಯಲು ಈ ಐಡಿಯಾ ಕೊಟ್ಟ ನಿತಿನ್ ಗಡ್ಕರಿ

ಪಾನ್ ಮಸಾಲ, ಗುಟ್ಕಾ ತಿಂದು ರಸ್ತೆಯಲ್ಲಿ ಉಗುಳುವವರನ್ನು ತಡೆಯಲು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ವಿಶಿಷ್ಟ ಉಪಾಯವೊಂದನ್ನು ನೀಡಿದ್ದಾರೆ. ಪಾನ್, ಮಸಾಲಾ, ಗುಟ್ಕಾ ಸೇವಿಸಿ ರಸ್ತೆಯಲ್ಲಿ ಉಗುಳುವವರ ಫೋಟೋ ತೆಗೆದು ಪತ್ರಿಕೆಯಲ್ಲಿ ಪ್ರಕಟಿಸಬೇಕು ಎಂದು ಅವರು ಹೇಳಿದ್ದಾರೆ.   ಗಾಂಧಿ ಜಯಂತಿಯಂದು ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್ ಸ್ವಚ್ಛ ಭಾರತ್ ಕುರಿತು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವವರ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ನಮ್ಮ …

Read More »

ಉದ್ಯೋಗ ವಾರ್ತೆ : ‘ಕೆನರಾ ಬ್ಯಾಂಕ್’ ನಲ್ಲಿ 3000 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ | Canara Bank Recruitment

ನವದೆಹಲಿ:ಕೆನಾರಾ ಬ್ಯಾಂಕ್ 3000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ನವೀಕರಣದ ಪ್ರಕಾರ, ನೋಂದಣಿ ಪ್ರಕ್ರಿಯೆಯು ಸೆಪ್ಟೆಂಬರ್ 21 ರಿಂದ ಪ್ರಾರಂಭವಾಗಿದೆ ಮತ್ತು ಅಕ್ಟೋಬರ್ 4, 2024 ರ ನಾಳೆಯೇ ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಅಧಿಕೃತ ವೆಬ್ಸೈಟ್ ಮೂಲಕ ( canarabank.com ) ಅರ್ಜಿಗಳನ್ನು ಸಲ್ಲಿಸಬಹುದು.   ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಗಳು www.nats.education.gov.in ನಲ್ಲಿ ರಾಷ್ಟ್ರೀಯ ಅಪ್ರೆಂಟಿಸ್ಶಿಪ್ ತರಬೇತಿ ಯೋಜನೆ (ಎನ್‌ಎಟಿಎಸ್) ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬೇಕು ಮತ್ತು …

Read More »

ಉದ್ಯಮಿಗೆ ಜೀವ ಬೆದರಿಕೆ ಆರೋಪ : ಕೇಂದ್ರ ಸಚಿವ `HDK’ ವಿರುದ್ಧ `FIR’ ದಾಖಲು!

ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ 50 ಕೋಟಿ ರೂ. ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಉದ್ಯಮಿ ವಿಜಯ್ ಟಾಟಾ ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅಮೃತ್ ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಉದ್ಯಮಿ ವಿಜಯ್ ಟಾಟಾ ಎಂಬುವರು ಬೆಂಗಳೂರಿನ ಅಮೃತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವ್ಯವಹಾರಿಕವಾಗಿ ತಾವು ಮುನ್ನಡೆ ಸಾಧಿಸಿದ್ದು, ತಮಗೆ ಕೇಂದ್ರ ಸಚಿವರು ಬೆದರಿಕೆ ಹಾಕಿದ್ದಾರೆ. ತಮಗೆ …

Read More »

ವಿಶ್ವವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ.ಹಂ.ಪ ನಾಗರಾಜಯ್ಯ

ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ದು, ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇಂದು ವಿಧ್ಯುಕ್ತ ಚಾಲನೆ ಸಿಕ್ಕಿದೆ. ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟಿಸಿದ್ದಾರೆ. ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಅವರು ದಸರಾಗೆ ಅದ್ದೂರಿ ಚಾಲನೆ ನೀಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತಿತರರು ಹಾಜರಿದ್ದರು. ಕಾರ್ಯಕ್ರಮದ ಮಾಹಿತಿ ಇಂದಿನಿಂದ 11ರವರೆಗೂ …

Read More »

ಬೆಳಗಾವಿ ಶಾಲೆಗಳಲ್ಲಿ ‘ಡೆಸ್ಕ್‌ ಅಭಿಯಾನ’: ಅಗತ್ಯ ಶಾಲೆಗಳಿಗೆ ವಿತರಣೆ

ಬೆಳಗಾವಿ: ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಬಳಕೆಯಾಗದೇ ಇರುವ ಹೆಚ್ಚುವರಿ ಡೆಸ್ಕ್‌ಗಳನ್ನು ಅಗತ್ಯವಿರುವ ಶಾಲೆಗಳಿಗೆ ನೀಡಿ, ಸದ್ಬಳಕೆ ಮಾಡುವ ‘ಡೆಸ್ಕ್ ಅಭಿಯಾನ’ ಆರಂಭಗೊಂಡಿದೆ. ಡೆಸ್ಕ್‌ಗಳ ಕೊರತೆ ನೀಗಿಸಲು ಜಿಲ್ಲಾ ಪಂಚಾಯಿತಿ ಮತ್ತು ಶಾಲಾ ಶಿಕ್ಷಣ ಇಲಾಖೆಯು ಆರಂಭಿಸಿರುವ ಈ ಅಭಿಯಾನವು ಕೆಲ ಶಾಲೆಗಳಲ್ಲಿ ಡೆಸ್ಕ್‌ಗಳ ಕೊರತೆ ನೀಗಿಸಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಸಮೀಕ್ಷೆ ನಡೆಸಿ, ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 1,407, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 6,080 …

Read More »

ಮೈಸೂರು ದಸರಾದಲ್ಲೂ ಧರ್ಮ ದಂಗಲ್: ಗುಂಬಜ್ ಮಾದರಿಯ ದೀಪಾಲಂಕಾರಕ್ಕೆ ಅಪಸ್ವರ

ಮೈಸೂರು, : ವಿಶ್ವವಿಖ್ಯಾತ ದಸರಾ(Dasara)ಬಂದರೆ ಸಾಕು ಮೈಸೂರಿನಲ್ಲಿ‌ ಒಂದಿಲ್ಲೊಂದು ವಿಚಾರಗಳು ಹುಟ್ಟಿಕೊಳ್ಳುತ್ತವೆ. ಇತ್ತೀಚೆಗಷ್ಟೇ ಮಹಿಷಾ ದಸರಾ ಸಂಘರ್ಷವಾಗಿತ್ತು. ಅದು ಮುಗಿಯಿತು ಎನ್ನುವಷ್ಟರಲ್ಲಿ ಇದೀಗ ಧರ್ಮ ದಂಗಲ್​ ಶುರುವಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಗುಂಬಜ್ ಮಾದರಿ ದೀಪಾಲಂಕಾರದ ಬಗ್ಗೆ ಮಾಜಿ ಸಂಸದ ಪ್ರತಾಪ್​ ಸಿಂಹ ಅಪಸ್ವರ ಎತ್ತಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರತಾಪ್​ ಸಿಂಹ, ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಅಳವಡಿಸಿರುವ ಹಸಿರು ಚಪ್ಪರದ ದೀಪಾಲಂಕಾರದ ಭಾವಚಿತ್ರ ಹಾಕಿ ಬದಲಾಯಿಸಲು ಹೇಳಿದ್ದೇನೆ ಎಂದು …

Read More »

ದಸರಾಕ್ಕೆ ಸಕ್ರೆಬೈಲಿನ ಮೂರು ಆನೆಗಳಿಗೆ ವಿಶೇಷ ಆಹ್ವಾನ

ಮೈಸೂರು ಬಿಟ್ಟರೇ ಅದ್ದೂರಿ ದಸರಾ ನೋಡಲು ಸಿಗುವುದು ಶಿವಮೊಗ್ಗ ನಗರದಲ್ಲಿ. ದಶಕಗಳಿಂದ ಶಿವಮೊಗ್ಗದಲ್ಲಿ ದಸರಾ ಜಂಬೂ ಸವಾರಿಯು ಅದ್ಧೂರಿಯಾಗಿ ನಡೆಯುತ್ತಿದೆ. ಹೀಗಾಗಿ ಶಿವಮೊಗ್ಗ ದಸರಾ ಹಬ್ಬಕ್ಕಾಗಿ ಮೂರು ಆನೆಗಳಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಶಿವಮೊಗ್ಗದ ಜಂಬೂ ಸವಾರಿಗಾಗಿ ಸಕ್ರೆಬೈಲು ಆನೆ ಬಿಡಾರದಿಂದ ಆನೆಗಳು ಬರಲಿವೆ. ಶಿವಮೊಗ್ಗ, : ವಿಶ್ವವಿಖ್ಯಾತ ಮೈಸೂರು ದಸರಾ(Dasara)ಬಿಟ್ಟರೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಅದ್ಧೂರಿ ದಸರಾ ನಡೆಯಲಿದೆ. ದಸರಾ ಅಂದರೆ ಅಲ್ಲಿ ಆನೆಗಳು ಇರಲೇಬೇಕು. ಶಿವಮೊಗ್ಗ ದಸರಾಕ್ಕೆ ಈ …

Read More »

ಬೆಂಗಳೂರಿನ ಯಾವುದೇ ಪ್ರದೇಶದಿಂದ 699 ರೂ.ಗೆ ಏರ್​ಪೋರ್ಟ್​ಗೆ ಪ್ರಯಾಣಿಸಿ! ಇ ಟ್ಯಾಕ್ಸಿ ಸೇವೆಗೆ ಡಿಕೆ ಶಿವಕುಮಾರ್ ಚಾಲನೆ

ಬೆಂಗಳೂರು, ಅಕ್ಟೋಬರ್ 3: ಖಾಸಗಿ ಕಂಪನಿಯಾದ ‘ರೆಫೆಕ್ಸ್ ಇವೀಲ್ಜ್’ ನಿರ್ವಹಿಸುತ್ತಿರುವ ಹೊಸ ಎಲೆಕ್ಟ್ರಿಕ್ ಏರ್‌ಪೋರ್ಟ್ ಟ್ಯಾಕ್ಸಿ ಸೇವೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಚಾಲನೆ ನೀಡಿದರು. ಏರ್‌ಪೋರ್ಟ್ ಆಪರೇಟರ್‌ನ ಸಹಯೋಗದೊಂದಿಗೆ ‘ರೆಫೆಕ್ಸ್ ಇವೀಲ್ಜ್’ ಕಂಪನಿಯು ‘ಏರ್‌ಪೋರ್ಟ್ ಟ್ಯಾಕ್ಸಿ’ ಸೇವೆ ಒದಗಿಸುತ್ತಿದ್ದು, ಈಗಾಗಲೇ 200 ಎಲೆಕ್ಟ್ರಿಕ್ ಕಾರುಗಳು ಕಾರ್ಯಾಚರಿಸುತ್ತಿವೆ. ಇದೀಗ ಇನ್ನೂ 170 ಎಲೆಕ್ಟ್ರಿಕ್ ಕಾರುಗಳು ಸೇವೆಗೆ ಸೇರ್ಪಡೆಯಾದಂತಾಗಿದೆ. ಇ ಟ್ಯಾಕ್ಸಿ ಸೇವೆಗೆ ಚಾಲನೆ ನೀಡಿರುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ …

Read More »