ರಾಯಚೂರು : ಮುಡಾ ಹಗರಣದ ಮಧ್ಯೆಯು ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅದಾದ ಬಳಿಕ ಇಂದಿನಿಂದ ಎರಡು ದಿನಗಳ ಕಾಲ ಅವರು ರಾಯಚೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದಾರೆ. ಹೌದು ಇಂದಿನಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ರಾಯಚೂರು ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ರಾಯಚೂರು, ಸಿಂಧನೂರು, ಮಾನ್ವಿಯಲ್ಲಿ …
Read More »Daily Archives: ಅಕ್ಟೋಬರ್ 4, 2024
ಜೈಲಲ್ಲಿ ರಾಜಾತಿಥ್ಯ ಪ್ರಕರಣ : ರೌಡಿಗಳಿಗೆ ದುಬಾರಿ ಮದ್ಯ ಪೂರೈಕೆ : ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಹಿರಂಗ!
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಮೊದಲು ನಟ ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಈ ವೇಳೆ ಅವರಿಗೆ ರಾಜಾತಿಥ್ಯ ನೀಡಿರುವ ವಿಚಾರಕ್ಕೆ ಎರಡು FIR ದಾಖಲಾಗಿತ್ತು. ಈ ಒಂದು ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಅಲ್ಲಿನ ವ್ಯವಸ್ಥೆ ನೋಡಿ ದಂಗಾಗಿದ್ದಾರೆ. ಹೌದು ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು, ಜೈಲಿನಲ್ಲಿ ನಟ ದರ್ಶನ್ ಒಂದು ಕೈಯಲ್ಲಿ ಕಾಫಿ ಕುಡಿಯುತ್ತಾ, ಮತ್ತೊಂದು ಕೈಯಲ್ಲಿ …
Read More »ಡಿಸೆಂಬರ್‌ನಲ್ಲಿ ಬೆಳಗಾವಿಗೆ ಬರಾಕ್ ಒಬಾಮಾ?
ಬೆಂಗಳೂರು: ಬರುವ ಡಿಸೆಂಬರ್ 24ಕ್ಕೆ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಿಸಲಿದೆ. ಇದನ್ನು ಐತಿಹಾಸಿಕ ದಿನವನ್ನಾಗಿ ಆಚರಿಸಲು ಮುಂದಾಗಿರುವ ಕಾಂಗ್ರೆಸ್, ಅದೇ ದಿನ ಕುಂದಾನಗರಿಯಲ್ಲಿ ಪಕ್ಷದ ರಾಷ್ಟ್ರೀಯ ನಾಯಕರೆಲ್ಲರೂ ಆಗಮಿಸಿ ಕಾಂಗ್ರೆಸ್ ಸಭೆ ನಡೆಸಲಿದ್ದಾರೆ. ಈ ಕ್ಷಣಗಳಿಗೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರೂ ಸಾಕ್ಷಿಯಾಗಲಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಬುಧವಾರ ಗಾಂಧಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ “ಗಾಂಧಿ ಭಾರತ’ ಕಾರ್ಯಕ್ರಮದಲ್ಲಿ …
Read More »ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೋ ಬೇಡವೋ ಎಂಬುದು ಅವರಿಗೆ ಬಿಟ್ಟ ವಿಚಾರ.
ಬೆಳಗಾವಿ: ಭ್ರಷ್ಟಾಚಾರದ ಆರೋಪಗಳನ್ನು ಹೊತ್ತ ಜನಪ್ರತಿನಿಧಿಗಳು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆಯಾಗಿದೆ. ಯಾರೂ ಈ ರೀತಿ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡುತ್ತಿಲ್ಲ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ”ಈ ಹಿಂದೆ ಇದೇ ರೀತಿ ಆಪಾದನೆಗಳು ಬಂದಾಗ ಜನಪ್ರತಿನಿಧಿಗಳು ತತ್ ಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರು. ಈಗ ಅಂತಹ ನೈತಿಕತೆ ಕಾಣುತ್ತಿಲ್ಲ. …
Read More »2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ
ಬೆಳಗಾವಿ: ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ(ಅ 3)ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ”ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ …
Read More »ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ
ಬೆಳಗಾವಿ: ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ಪುಸಲಾಯಿಸಿ ಬಾಡಿಗೆ ಮನೆಯಲ್ಲಿ ಗಂಡ-ಹೆಂಡತಿ ಎಂದು ಹೇಳಿ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಜಿಲ್ಲಾ ಪೋಕ್ಸೋ ನ್ಯಾಯಾಲಯ ಗುರುವಾರ ಮಹತ್ವದ ತೀರ್ಪು ನೀಡಿದೆ. ಚಿಕ್ಕೋಡಿ ತಾಲೂಕಿನ ಕುರ್ಲಿ ಗ್ರಾಮದ ಶ್ರೀಸಂಗಮ ಕೃಷ್ಣಾತ್ ನಿಕಾಡೆ(24) ಎಂಬ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ …
Read More »